< 弥迦书 6 >
1 以色列人哪,当听耶和华的话! 要起来向山岭争辩, 使冈陵听你的话。
೧ಯೆಹೋವನು ಹೇಳುವುದನ್ನು ಕೇಳಿರಿ, “ನೀನೆದ್ದು ಬೆಟ್ಟಗಳ ಮುಂದೆ ವ್ಯಾಜ್ಯ ಮಾಡು. ನಿನ್ನ ಧ್ವನಿಯು ಗುಡ್ಡಗಳಿಗೆ ಕೇಳಿಸಲಿ
2 山岭和地永久的根基啊, 要听耶和华争辩的话! 因为耶和华要与他的百姓争辩, 与以色列争论。
೨ಬೆಟ್ಟಗಳೇ ಯೆಹೋವನ ವ್ಯಾಜ್ಯವನ್ನು ಕೇಳಿರಿ. ಭೂಮಿಯ ಶಾಶ್ವತವಾದ ಅಸ್ತಿವಾರಗಳೇ, ಕಿವಿಗೊಡಿರಿ. ಯೆಹೋವನಿಗೆ ಆತನ ಪ್ರಜೆಯ ಮೇಲೆ ವ್ಯಾಜ್ಯವಿದೆ. ಆತನು ಇಸ್ರಾಯೇಲಿನೊಂದಿಗೆ ವಿವಾದಿಸುತ್ತಾನೆ.”
3 我的百姓啊,我向你做了什么呢? 我在什么事上使你厌烦? 你可以对我证明。
೩“ನನ್ನ ಪ್ರಜೆಯೇ, ನಾನು ನಿನಗೇನು ಮಾಡಿದೆನು? ನಿನ್ನನ್ನು ಯಾವ ವಿಷಯದಲ್ಲಿ ಬೇಸರಗೊಳಿಸಿದೆನು? ನನ್ನ ಮೇಲೆ ಸಾಕ್ಷಿಹೇಳು.
4 我曾将你从埃及地领出来, 从作奴仆之家救赎你; 我也差遣摩西、亚伦,和米利暗在你前面行。
೪ನಾನು ನಿನ್ನನ್ನು ಐಗುಪ್ತದೇಶದೊಳಗಿಂದ ಪಾರುಮಾಡಿ ದಾಸತ್ವದಿಂದ ಬಿಡಿಸಿದೆನು. ಮೋಶೆಯನ್ನೂ, ಆರೋನನನ್ನೂ ಮತ್ತು ಮಿರ್ಯಾಮಳನ್ನೂ ನಿನಗೆ ನಾಯಕರನ್ನಾಗಿ ಕಳುಹಿಸಿದೆನು.
5 我的百姓啊,你们当追念摩押王巴勒所设的谋 和比珥的儿子巴兰回答他的话, 并你们从什亭到吉甲所遇见的事, 好使你们知道耶和华公义的作为。
೫ನನ್ನ ಜನರೇ, ಮೋವಾಬಿನ ಅರಸನಾದ ಬಾಲಾಕನು ಕೊಟ್ಟ ಸಲಹೆಯನ್ನೂ ಮತ್ತು ಬೆಯೋರನ ಮಗನಾದ ಬಿಳಾಮನು ಹೇಳಿದ ಉತ್ತರವನ್ನೂ ಜ್ಞಾಪಕಮಾಡಿಕೊಳ್ಳಿರಿ. ಯೆಹೋವನ ಧರ್ಮಕಾರ್ಯಗಳು ನಿಮ್ಮ ಗ್ರಹಿಕೆಗೆ ಬರುವ ಹಾಗೆ ನೀವು ಶಿಟ್ಟೀಮನ್ನು ಬಿಟ್ಟಂದಿನಿಂದ ಗಿಲ್ಗಾಲನ್ನು ಸೇರುವ ತನಕ ನಡೆದದ್ದನ್ನೆಲ್ಲಾ ಸ್ಮರಿಸಿಕೊಳ್ಳಿರಿ.
6 我朝见耶和华, 在至高 神面前跪拜,当献上什么呢? 岂可献一岁的牛犊为燔祭吗?
೬ನಾನು ಯೆಹೋವನ ಸನ್ನಿಧಿಯಲ್ಲಿ ಯಾವ ಕಾಣಿಕೆಯೊಡನೆ ಕಾಣಿಸಿಕೊಳ್ಳಲಿ? ಯಾವುದನ್ನರ್ಪಿಸಿ ಮಹೋನ್ನತ ದೇವರ ಸಮ್ಮುಖದಲ್ಲಿ ಅಡ್ಡಬೀಳಲಿ? ಹೋಮದ ಪಶುಗಳನ್ನು ಅಥವಾ ಒಂದು ವರ್ಷದ ಕರುಗಳನ್ನು ತೆಗೆದುಕೊಂಡು ಬಂದು ಆತನ ಮುಂದೆ ಕಾಣಿಸಿಕೊಳ್ಳಲೋ?
7 耶和华岂喜悦千千的公羊, 或是万万的油河吗? 我岂可为自己的罪过献我的长子吗? 为心中的罪恶献我身所生的吗?
೭ಸಾವಿರಾರು ಟಗರುಗಳನ್ನೂ, ಲಕ್ಷೋಪಲಕ್ಷ ತೈಲ ಪ್ರವಾಹಗಳನ್ನೂ ನೋಡಿ ಯೆಹೋವನು ಮೆಚ್ಚುತ್ತಾನೆಯೇ? ನನ್ನ ದ್ರೋಹದ ನಿಮಿತ್ತ ನನ್ನ ಚೊಚ್ಚಲ ಮಗನನ್ನು ಅರ್ಪಿಸಲೋ? ನನ್ನ ಆತ್ಮದ ಪಾಪಕ್ಕಾಗಿ ನನ್ನ ಗರ್ಭದ ಫಲವನ್ನು ಸಲ್ಲಿಸಲೋ?
8 世人哪,耶和华已指示你何为善。 他向你所要的是什么呢? 只要你行公义,好怜悯, 存谦卑的心,与你的 神同行。
೮ಮನುಷ್ಯನೇ, ಒಳ್ಳೆಯದು ಇಂಥದ್ದೇ ಎಂದು ಯೆಹೋವನು ನಿನಗೆ ತೋರಿಸಿದ್ದಾನಲ್ಲವೇ. ನ್ಯಾಯವನ್ನು ಆಚರಿಸುವುದು, ಕರುಣೆಯಲ್ಲಿ ಆಸಕ್ತನಾಗಿರುವುದು, ನಿನ್ನ ದೇವರಿಗೆ ನಮ್ರವಾಗಿ ನಡೆದುಕೊಳ್ಳುವುದು ಇಷ್ಟನ್ನೇ ಹೊರತು ಯೆಹೋವನು ನಿನ್ನಿಂದ ಇನ್ನೇನು ಅಪೇಕ್ಷಿಸುವನು?
9 耶和华向这城呼叫, 智慧人必敬畏他的名。 你们当听是谁派定刑杖的惩罚。
೯ಯೆಹೋವನ ನಾಮದಲ್ಲಿ ಭಯಭಕ್ತಿಯಿಡುವುದು ಸುಜ್ಞಾನವೇ, ಎಂದು ಯೆರೂಸಲೇಮಿನ ಪಟ್ಟಣಕ್ಕೆ ಎಚ್ಚರಿಕೆ ನೀಡುವ ಯೆಹೋವನ ನುಡಿ. ಬೀಸಿ ಬರುವ ಶಿಕ್ಷೆಯ ದಂಡಕ್ಕೆ ಎಚ್ಚರವಾಗಿರಿ. ಅದನ್ನು ನೇಮಿಸಿದವನು ಯಾರೆಂದು ತಿಳಿದುಕೊಳ್ಳಿರಿ.
೧೦ದುಷ್ಟನ ಮನೆಯಲ್ಲಿ ದುಷ್ಟತನದಿಂದ ಗಳಿಸಿದ ನಿಧಿ ಮತ್ತು ಅಸಹ್ಯಕರವಾದ ಕಿರಿಯಳತೆ ಇವು ಇನ್ನೂ ಸಿಕ್ಕುತ್ತವೆಯೋ?
11 我若用不公道的天平和囊中诡诈的法码, 岂可算为清洁呢?
೧೧ಕಳ್ಳ ತಕ್ಕಡಿಯೂ ಹಾಗು ಮೋಸದ ಕಲ್ಲಿನ ಚೀಲವೂ ಒಬ್ಬನಲ್ಲಿದ್ದರೆ ಅವನು ನಿರ್ದೋಷಿಯಲ್ಲವೆಂದು ತಿಳಿಯಲೋ?
12 城里的富户满行强暴; 其中的居民也说谎言, 口中的舌头是诡诈的。
೧೨ಪಟ್ಟಣದ ಧನಿಕರು ತುಂಬಾ ಬಲಾತ್ಕಾರಿಗಳು. ಅದರ ನಿವಾಸಿಗಳು ಸುಳ್ಳುಗಾರರು. ಅವರ ಬಾಯನಾಲಿಗೆಯು ಮೋಸಕರ.
13 因此,我击打你, 使你的伤痕甚重, 使你因你的罪恶荒凉。
೧೩ಆದಕಾರಣ ಯೆರೂಸಲೇಮೇ, ನಿನಗೆ ಕ್ರೂರವಾದ ಪೆಟ್ಟು ಹಾಕುವೆನು. ನಿನ್ನ ಪಾಪಗಳ ನಿಮಿತ್ತ ನಿನ್ನನ್ನು ಹಾಳುಮಾಡುವೆನು.
14 你要吃,却吃不饱; 你的虚弱必显在你中间。 你必挪去,却不得救护; 所救护的,我必交给刀剑。
೧೪ನೀನು ತಿಂದರೂ ನಿನಗೆ ತೃಪ್ತಿಯಾಗದು. ಹಸಿವೆಯು ನಿನ್ನೊಳಗೆ ಇದ್ದೇ ಇರುವುದು. ನೀನು ನಿನ್ನವರನ್ನು ಕಳುಹಿಸಿಬಿಟ್ಟರೂ ಅವರನ್ನು ಪಾರುಮಾಡಲಾರಿ. ಪಾರುಮಾಡಿದವರನ್ನೂ ಕತ್ತಿಗೆ ತುತ್ತನ್ನಾಗಿ ಮಾಡುವೆನು.
15 你必撒种,却不得收割; 踹橄榄,却不得油抹身; 踹葡萄,却不得酒喝。
೧೫ನೀನು ಬಿತ್ತಿದರೂ ಕೊಯ್ಯುವುದಿಲ್ಲ. ಎಣ್ಣೆಯ ಕಾಯಿಯನ್ನು ಜಜ್ಜಿದರೂ ಮೈಗೆ ಎಣ್ಣೆ ಹತ್ತಿಕೊಳ್ಳುವುದಿಲ್ಲ. ದ್ರಾಕ್ಷಿಯ ಹಣ್ಣನ್ನು ತುಳಿದರೂ ದ್ರಾಕ್ಷಾರಸವನ್ನು ಕುಡಿಯುವುದಿಲ್ಲ.
16 因为你守暗利的恶规, 行亚哈家一切所行的, 顺从他们的计谋; 因此,我必使你荒凉, 使你的居民令人嗤笑, 你们也必担当我民的羞辱。
೧೬ಒಮ್ರಿ ರಾಜನ ನಿಯಮಗಳೂ ಮತ್ತು ಅಹಾಬನ ಮನೆತನದ ಸಕಲ ಆಚಾರಗಳೂ ನಿನ್ನಲ್ಲಿ ಸಲ್ಲುತ್ತಿವೆ. ನಿನ್ನವರು ಅವರ ದುರ್ನೀತಿಗೆ ಅನುಸಾರವಾಗಿ ನಡೆಯುತ್ತಾರೆ. ಆದಕಾರಣ ನಾನು ನಿನ್ನನ್ನು ಬೆರಗಿಗೂ, ನಿನ್ನ ನಿವಾಸಿಗಳನ್ನು ಅಪಹಾಸ್ಯಕ್ಕೂ ಗುರಿಮಾಡುವೆನು. ನನ್ನ ಜನರಿಗೆ ಸಂಭವಿಸಬೇಕಾದ ಅವಮಾನವನ್ನು ಅನುಭವಿಸುವಿರಿ.”