< 民数记 21 >

1 住南地的迦南人亚拉得王,听说以色列人从亚他林路来,就和以色列人争战,掳了他们几个人。
ಕಾನಾನ್ ದೇಶದ ದಕ್ಷಿಣ ಪ್ರಾಂತ್ಯದಲ್ಲಿದ್ದ ಕಾನಾನ್ಯನಾದ ಅರಾದ್ ಪಟ್ಟಣದ ಅರಸನು, ಅತಾರೀಮ್ ಮಾರ್ಗವಾಗಿ ಇಸ್ರಾಯೇಲರು ಬರುತ್ತಾರೆಂಬ ವರ್ತಮಾನವನ್ನು ಕೇಳಿದಾಗ, ಅವನು ಅವರ ಮೇಲೆ ಯುದ್ಧಮಾಡಿ ಕೆಲವರನ್ನು ಸೆರೆಹಿಡಿದನು.
2 以色列人向耶和华发愿说:“你若将这民交付我手,我就把他们的城邑尽行毁灭。”
ಇಸ್ರಾಯೇಲರು ಯೆಹೋವನಿಗೆ ಪ್ರಮಾಣಮಾಡಿ, “ನಾವು ಈ ಜನರನ್ನು ಜಯಿಸುವಂತೆ ನೀನು ಅನುಗ್ರಹಿಸಿದರೆ ನಾವು ಅವರ ಗ್ರಾಮಗಳನ್ನು ಸಂಪೂರ್ಣವಾಗಿ ನಾಶಮಾಡುತ್ತೇವೆ” ಎಂದು ಹೇಳಿದರು.
3 耶和华应允了以色列人,把迦南人交付他们,他们就把迦南人和迦南人的城邑尽行毁灭。那地方的名便叫何珥玛。
ಯೆಹೋವನು ಇಸ್ರಾಯೇಲರ ಪ್ರಾರ್ಥನೆಯನ್ನು ಕೇಳಿ ಕಾನಾನ್ಯರನ್ನು ಜಯಿಸುವಂತೆ ಮಾಡಿದನು. ಅವರನ್ನು ಮತ್ತು ಅವರ ಪಟ್ಟಣಗಳನ್ನು ಇಸ್ರಾಯೇಲರು ಸಂಪೂರ್ಣವಾಗಿ ನಾಶಮಾಡಿದರು. ಆ ಸ್ಥಳಕ್ಕೆ ಹೊರ್ಮಾ ಎಂದು ಹೆಸರಾಯಿತು.
4 他们从何珥山起行,往红海那条路走,要绕过以东地。百姓因这路难行,心中甚是烦躁,
ಇಸ್ರಾಯೇಲರು ಹೋರ್ ಬೆಟ್ಟದಿಂದ ಹೊರಟು ಎದೋಮ್ಯರ ದೇಶವನ್ನು ಸುತ್ತಿಕೊಂಡು ಹೋಗುವುದಕ್ಕೆ ಕೆಂಪು ಸಮುದ್ರದ ಮಾರ್ಗವಾಗಿ ಪ್ರಯಾಣಮಾಡುವಾಗ, ದಾರಿಯಲ್ಲಿ ಆಯಾಸದಿಂದ ಅವರಿಗೆ ಬೇಸರವಾಯಿತು.
5 就怨 神和摩西说:“你们为什么把我们从埃及领出来、使我们死在旷野呢?这里没有粮,没有水,我们的心厌恶这淡薄的食物。”
ಆಗ ಅವರು ದೇವರಿಗೂ ಮತ್ತು ಮೋಶೆಗೂ ವಿರುದ್ಧವಾಗಿ ಮಾತನಾಡಿ, “ನೀವು ನಮ್ಮನ್ನು ಈ ಮರಳುಗಾಡಿನಲ್ಲಿ ಕೊಲ್ಲಬೇಕೆಂದು ಐಗುಪ್ತ ದೇಶದಿಂದ ಕರೆದುಕೊಂಡು ಬಂದಿರೋ? ಇಲ್ಲಿ ಆಹಾರವೂ ಇಲ್ಲ, ನೀರೂ ಇಲ್ಲ. ಈ ರುಚಿ ಇಲ್ಲದ ಆಹಾರವನ್ನು ತಿಂದು ನಮಗೆ ಬೇಸರವಾಯಿತು” ಎಂದು ಹೇಳಿದರು.
6 于是耶和华使火蛇进入百姓中间,蛇就咬他们。以色列人中死了许多。
ಅದಕ್ಕೆ ಯೆಹೋವನು ವಿಷಸರ್ಪಗಳನ್ನು ಇಸ್ರಾಯೇಲ್ ಜನರೊಳಗೆ ಬರಮಾಡಿದನು. ಅವು ಜನರನ್ನು ಕಚ್ಚಿದ್ದರಿಂದ ಬಹಳಜನರು ಸತ್ತುಹೋದರು.
7 百姓到摩西那里,说:“我们怨 耶和华和你,有罪了。求你祷告耶和华,叫这些蛇离开我们。”于是摩西为百姓祷告。
ಆದುದರಿಂದ ಜನರು ಮೋಶೆಯ ಬಳಿಗೆ ಬಂದು, “ನಾವು ನಿನಗೂ ಮತ್ತು ಯೆಹೋವನಿಗೂ ವಿರುದ್ಧವಾಗಿ ಮಾತನಾಡಿ ದ್ರೋಹಿಗಳಾದೆವು. ಈ ಸರ್ಪಗಳು ನಮ್ಮ ಬಳಿಯಿಂದ ತೊಲಗಿಹೋಗುವಂತೆ ನೀನು ಯೆಹೋವನಿಗೆ ಪ್ರಾರ್ಥನೆಮಾಡಬೇಕು” ಎಂದು ಬೇಡಿಕೊಂಡರು.
8 耶和华对摩西说:“你制造一条火蛇,挂在杆子上;凡被咬的,一望这蛇,就必得活。”
ಮೋಶೆ ಜನರಿಗೋಸ್ಕರ ಪ್ರಾರ್ಥಿಸಲಾಗಿ ಯೆಹೋವನು ಅವನಿಗೆ, “ನೀನು ತಾಮ್ರದಿಂದ ವಿಷಸರ್ಪದ ಆಕಾರವನ್ನು ಮಾಡಿಸಿ ಧ್ವಜಸ್ತಂಭದ ಮೇಲೆ ಎತ್ತಿ ನಿಲ್ಲಿಸಬೇಕು. ಸರ್ಪಗಳಿಂದ ಗಾಯಪಟ್ಟವರು ಅದನ್ನು ನೋಡಿ ಬದುಕಿಕೊಳ್ಳುವರು” ಎಂದು ಆಜ್ಞಾಪಿಸಿದನು.
9 摩西便制造一条铜蛇,挂在杆子上;凡被蛇咬的,一望这铜蛇就活了。
ಆದಕಾರಣ ಮೋಶೆ ತಾಮ್ರದಿಂದ ಸರ್ಪವನ್ನು ಮಾಡಿಸಿ ಧ್ವಜಸ್ತಂಭದ ಮೇಲೆ ಇಟ್ಟನು. ಸರ್ಪದಿಂದ ಗಾಯಪಟ್ಟವರಲ್ಲಿ ಯಾರು ಆ ತಾಮ್ರದ ಸರ್ಪವನ್ನು ಲಕ್ಷ್ಯವಿಟ್ಟು ನೋಡಿದರೋ ಅವರೆಲ್ಲರೂ ಬದುಕಿಕೊಂಡರು.
10 以色列人起行,安营在阿伯。
೧೦ತರುವಾಯ ಇಸ್ರಾಯೇಲರು ಅಲ್ಲಿಂದ ಹೊರಟು ಓಬೋತಿನಲ್ಲಿ ಇಳಿದುಕೊಂಡರು.
11 又从阿伯起行,安营在以耶·亚巴琳,与摩押相对的旷野,向日出之地。
೧೧ಓಬೋತಿನಿಂದ ಹೊರಟು ಮೋವಾಬ್ ದೇಶದ ಮೂಡಲ ದಿಕ್ಕಿನ ಅರಣ್ಯದಲ್ಲಿರುವ ಇಯ್ಯೇ ಅಬಾರೀಮಿನಲ್ಲಿ ಇಳಿದುಕೊಂಡರು.
12 从那里起行,安营在撒烈谷。
೧೨ಅಲ್ಲಿಂದ ಹೊರಟು ಜೆರೆದ್ ತಗ್ಗಿನಲ್ಲಿ ಇಳಿದುಕೊಂಡರು.
13 从那里起行,安营在亚嫩河那边。这亚嫩河是在旷野,从亚摩利的境界流出来的;原来亚嫩河是摩押的边界,在摩押和亚摩利人搭界的地方。
೧೩ಅಲ್ಲಿಂದ ಹೊರಟು ಅರ್ನೋನ್ ನದಿಯ ಆಚೆ ಕಡೆಯಲ್ಲಿ ಇಳಿದುಕೊಂಡರು. ಅರ್ನೋನ್ ನದಿಯು ಅಮೋರಿಯರ ಪ್ರದೇಶದಿಂದಾಚೆ ಇರುವ ಅರಣ್ಯದಲ್ಲಿ ಮೋವಾಬ್ಯರಿಗೂ, ಅಮೋರಿಯರಿಗೂ ನಡುವೆ ಇದ್ದು ಮೋವಾಬ್ಯರ ಗಡಿಯಾಗಿದೆ.
14 所以耶和华的战记上说:“苏法的哇哈伯与亚嫩河的谷,
೧೪ಅದಕ್ಕೆ ಅನುಗುಣವಾಗಿ ಯೆಹೋವವಿಜಯ ಎಂಬ ಗ್ರಂಥದಲ್ಲಿ, “ಸೂಫಕ್ಕೆ ಸೇರಿದ ವಾಹೇಬನ್ನೂ, ಮತ್ತು ಅರ್ನೋನ್ ನದಿಗೆ ಕೂಡುವ ಹಳ್ಳಗಳನ್ನೂ,
15 并向亚珥城众谷的下坡,是靠近摩押的境界。”
೧೫ಆರ್ ಪಟ್ಟಣದ ತನಕ ಮೋವಾಬಿನ ಮೇರೆಯಾಗಿರುವ ಕೊರಕಲನ್ನೂ ದಾಟಿದ್ದಾಯಿತು” ಎಂದು ಬರೆದದೆ.
16 以色列人从那里起行,到了比珥。从前耶和华吩咐摩西说:“招聚百姓,我好给他们水喝”,说的就是这井。
೧೬ಅಲ್ಲಿಂದ ಅವರು ಬೇರ್ ಸ್ಥಳಕ್ಕೆ ಬಂದರು. ಯೆಹೋವನು ಮೋಶೆಗೆ ಹೇಳಿದ ಮಾತು ಇಲ್ಲಿನ ಬಾವಿಯ ವಿಷಯವೇ. ಯೆಹೋವನು ಮೋಶೆಗೆ, “ಜನರನ್ನು ಸೇರಿಸು. ನಾನು ಅವರಿಗೆ ನೀರನ್ನು ಕೊಡುವೆನು” ಅಂದನು.
17 当时,以色列人唱歌说: 井啊,涌上水来! 你们要向这井歌唱。
೧೭ಆಗ ಇಸ್ರಾಯೇಲರು ಈ ಹಾಡನ್ನು ಗಾನಮಾಡಿದರು; “ಬಾವಿಯೇ, ಉಕ್ಕುತ್ತಾ ಬಾ! ಜನರೇ, ಉಲ್ಲಾಸದಿಂದ ಗಾನಮಾಡಿರಿ
18 这井是首领和民中的尊贵人 用圭用杖所挖所掘的。 以色列人从旷野往玛他拿去,
೧೮ಇದು ಪ್ರಧಾನರು ಕೋಲುಗಳಿಂದ ತೋಡಿದ ಬಾವಿ, ಇದು ಜನಾಧಿಪತಿಗಳು ಕೋಲುಗಳಿಂದ ಅಗೆದ ಬಾವಿ” ಎಂಬುವುದೇ. ಅವರು ಅರಣ್ಯವನ್ನು ಬಿಟ್ಟು ಮತ್ತಾನಕ್ಕೂ,
19 从玛他拿到拿哈列,从拿哈列到巴末,
೧೯ಮತ್ತಾನದಿಂದ ನಹಲೀಯೇಲಿಗೂ, ನಹಲೀಯೇಲಿನಿಂದ ಬಾಮೋತಿಗೂ ಬಂದರು.
20 从巴末到摩押地的谷,又到那下望旷野之毗斯迦的山顶。
೨೦ಬಾಮೋತಿನಿಂದ ಮೋವಾಬ್ಯರ ಬಯಲಿನಲ್ಲಿರುವ ತಗ್ಗಿನಿಂದ ಪಿಸ್ಗಾ ಎಂಬ ಬೆಟ್ಟದ ತುದಿಗೆ ಬಂದರು. ಅಲ್ಲಿಂದ ಯೆಷೀಮೋನ್ ಮರಳುಗಾಡು ಕಾಣಿಸುತ್ತದೆ.
21 以色列人差遣使者去见亚摩利人的王西宏,说:
೨೧ಇಸ್ರಾಯೇಲರು ಅಮೋರಿಯರ ಅರಸನಾದ ಸೀಹೋನನ ಬಳಿಗೆ ದೂತರನ್ನು ಕಳುಹಿಸಿ,
22 “求你容我们从你的地经过;我们不偏入田间和葡萄园,也不喝井里的水,只走大道,直到过了你的境界。”
೨೨“ನಿನ್ನ ದೇಶವನ್ನು ದಾಟಿಹೋಗುವುದಕ್ಕೆ ನಮಗೆ ಅಪ್ಪಣೆಯಾಗಬೇಕು. ನಾವು ಹೊಲಗಳಲ್ಲಿಯಾಗಲಿ, ದ್ರಾಕ್ಷಿತೋಟಗಳಲ್ಲಿಯಾಗಲಿ ಹೋಗುವುದಿಲ್ಲ. ಬಾವಿಗಳ ನೀರನ್ನು ಕುಡಿಯುವುದಿಲ್ಲ. ನಿನ್ನ ದೇಶವನ್ನು ದಾಟುವವರೆಗೂ ರಾಜಮಾರ್ಗದಲ್ಲಿಯೇ ನಡೆದು ಹೋಗುವೆವು” ಎಂದು ಹೇಳಿದರು.
23 西宏不容以色列人从他的境界经过,就招聚他的众民出到旷野,要攻击以色列人,到了雅杂与以色列人争战。
೨೩ಆದರೆ ತನ್ನ ಸೀಮೆಯನ್ನು ದಾಟಿಹೋಗುವುದಕ್ಕೆ ಸೀಹೋನನು ಇಸ್ರಾಯೇಲರಿಗೆ ಅಪ್ಪಣೆಕೊಡದೆ ತನ್ನ ಜನರೆಲ್ಲರನ್ನೂ ಕೂಡಿಸಿಕೊಂಡು ಅವರನ್ನು ಎದುರಿಸುವುದಕ್ಕೆ ಮರುಭೂಮಿಗೆ ಹೊರಟರು. ಅವನು ಯಹಚಕ್ಕೆ ಬಂದು ಅವರೊಡನೆ ಯುದ್ಧಮಾಡಿದನು.
24 以色列人用刀杀了他,得了他的地,从亚嫩河到雅博河,直到亚扪人的境界,因为亚扪人的境界多有坚垒。
೨೪ಇಸ್ರಾಯೇಲರು ಅವನ ಜನರನ್ನು ಸೋಲಿಸಿ, ಕತ್ತಿಯಿಂದ ಸಂಹರಿಸಿ ಅರ್ನೋನ್ ನದಿ ಮೊದಲುಗೊಂಡು ಯಬ್ಬೋಕ್ ನದಿಯವರೆಗೂ, ಅಮ್ಮೋನಿಯರ ಗಡಿಯವರೆಗೂ ಸೀಹೋನನ ದೇಶವನ್ನೆಲ್ಲಾ ಸ್ವಾಧೀನಮಾಡಿಕೊಂಡರು. ಏಕೆಂದರೆ ಅಮ್ಮೋನಿಯರ ಮಕ್ಕಳ ಗಡಿಯು ಬಲವುಳ್ಳದ್ದಾಗಿತ್ತು.
25 以色列人夺取这一切的城邑,也住亚摩利人的城邑,就是希实本与希实本的一切乡村。
೨೫ಇಸ್ರಾಯೇಲರು ಈ ಪಟ್ಟಣಗಳನ್ನೆಲ್ಲಾ ವಶಮಾಡಿಕೊಂಡರು. ಅವರು ಹೆಷ್ಬೋನಿನಲ್ಲಿಯೂ, ಅದಕ್ಕೆ ಸೇರಿದ ಗ್ರಾಮಗಳಲ್ಲಿಯೂ, ಅಮೋರಿಯರ ಬೇರೆ ಎಲ್ಲಾ ಊರುಗಳಲ್ಲಿಯೂ ವಾಸಿಸಿದರು.
26 这希实本是亚摩利王西宏的京城;西宏曾与摩押的先王争战,从他手中夺取了全地,直到亚嫩河。
೨೬ಹೆಷ್ಬೋನ್ ಪಟ್ಟಣವು ಅಮೋರಿಯರ ಅರಸನಾದ ಸೀಹೋನನ ರಾಜಧಾನಿ. ಅವನು ಮೋವಾಬ್ಯರ ಪೂರ್ವದ ಅರಸನ ಮೇಲೆ ಯುದ್ಧಮಾಡಿ ಅರ್ನೋನ್ ನದಿಯ ವರೆಗೂ ಅವನ ದೇಶವನ್ನೆಲ್ಲಾ ಸ್ವಾಧೀನ ಮಾಡಿಕೊಂಡಿದ್ದನು.
27 所以那些作诗歌的说: 你们来到希实本; 愿西宏的城被修造,被建立。
೨೭ಕವಿಗಳು ಹೇಳಿದ ಪದ್ಯವು ಇದರ ವಿಷಯವಾಗಿಯೇ; “ಹೆಷ್ಬೋನಿಗೆ ಬನ್ನಿರಿ. ಅದನ್ನು ಹೊಸದಾಗಿ ಕಟ್ಟಬೇಕು, ಸೀಹೋನನ ಪಟ್ಟಣವನ್ನು ಪುನಃಸ್ಥಾಪನೆಮಾಡಬೇಕು.
28 因为有火从希实本发出, 有火焰出于西宏的城, 烧尽摩押的亚珥和亚嫩河邱坛的祭司 。
೨೮ಸೀಹೋನನ ಪಟ್ಟಣವಾದ ಹೆಷ್ಬೋನಿನಿಂದ ಅಗ್ನಿ ಜ್ವಾಲೆಹೊರಟು, ಮೋವಾಬ್ಯರ ರಾಜಧಾನಿಯಾದ ಆರ್ ಎಂಬ ಪಟ್ಟಣವನ್ನೂ ಅರ್ನೋನ್ ಬೆಟ್ಟದ ಮೇಲಿರುವ ಪ್ರಭುಗಳನ್ನು ದಹಿಸಿಬಿಟ್ಟಿತು.
29 摩押啊,你有祸了! 基抹的民哪,你们灭亡了! 基抹的男子逃奔, 女子被掳,交付亚摩利的王西宏。
೨೯ಮೋವಾಬ್ಯರೇ, ನಿಮ್ಮ ಗತಿಯೇನೆಂದು ಹೇಳಲಿ! ಕೆಮೋಷಿನ ಭಕ್ತರೇ, ನಿಮಗೆ ದುರ್ಗತಿಯುಂಟಾಯಿತು. ಆತನು ತನ್ನ ಗಂಡುಮಕ್ಕಳನ್ನು ದೇಶಭ್ರಷ್ಟರನ್ನಾಗಿ ಮಾಡಿದನು. ನಿನ್ನ ಹೆಣ್ಣುಮಕ್ಕಳನ್ನು ಸೆರೆಯವರನ್ನಾಗಿಯೂ ಮಾಡಿದ್ದಾನಲ್ಲಾ. ಅಮೋರಿಯರ ಅರಸನಾದ ಸೀಹೋನನಿಗೆ ಸೆರೆಯವರಾದರು.
30 我们射了他们; 希实本直到底本尽皆毁灭。 我们使地变成荒场,直到挪法; 这挪法直延到米底巴。
೩೦ನಾವು ಅವರನ್ನು ಬಾಣದಿಂದ ಹೊಡೆದೆವು; ಹೆಷ್ಬೋನಿನಿಂದ ದೀಬೋನಿವರೆಗೂ ಎಲ್ಲಾ ನಾಶವಾಯಿತು. ಮೇದೆಬಾ ಊರಿನ ನೆರೆಯಲ್ಲಿರುವ ನೋಫಹದ ತನಕ ಹಾಳುಮಾಡಿ ಬಿಟ್ಟೆವು.”
31 这样,以色列人就住在亚摩利人之地。
೩೧ಹೀಗೆ ಇಸ್ರಾಯೇಲರು ಅಮ್ಮೋರಿಯರ ದೇಶದಲ್ಲಿ ವಾಸಮಾಡುವಂತಾಯಿತು.
32 摩西打发人去窥探雅谢,以色列人就占了雅谢的镇市,赶出那里的亚摩利人。
೩೨ಅದಲ್ಲದೆ ಮೋಶೆ ಗೂಢಚಾರರ ಮೂಲಕ ಯಗ್ಜೇರನ್ನು ಪರೀಕ್ಷಿಸಿದ ಮೇಲೆ ಇಸ್ರಾಯೇಲರು ಅದರ ಗ್ರಾಮಗಳನ್ನು ವಶಪಡಿಸಿಕೊಂಡು, ಅಲ್ಲಿದ್ದ ಅಮೋರಿಯರನ್ನು ಹೊರಡಿಸಿಬಿಟ್ಟರು.
33 以色列人转回,向巴珊去。巴珊王噩和他的众民都出来,在以得来与他们交战。
೩೩ಇಸ್ರಾಯೇಲರು ಹಿಂದಿರುಗಿ ಬಾಷಾನಿನ ಮಾರ್ಗವಾಗಿ ಹತ್ತಿಹೋಗಲಾಗಿ ಬಾಷಾನಿನ ಅರಸನಾದ ಓಗನು ತನ್ನ ಜನರೆಲ್ಲರೊಡನೆ ಅವರಿಗೆ ವಿರುದ್ಧವಾಗಿ ಯುದ್ಧಮಾಡುವುದಕ್ಕೆ ಎದ್ರೈವೂರಿಗೆ ಹೊರಟುಬಂದನು.
34 耶和华对摩西说:“不要怕他!因我已将他和他的众民,并他的地,都交在你手中;你要待他像从前待住希实本的亚摩利王西宏一般。”
೩೪ಯೆಹೋವನು ಮೋಶೆಗೆ, “ಅವನಿಗೆ ಭಯಪಡಬೇಡ, ನಾನು ಅವನನ್ನು ಮತ್ತು ಅವನ ಸಮಸ್ತ ಜನರನ್ನೂ ಅವನ ದೇಶವನ್ನೂ ನಿನ್ನ ಕೈಗೆ ಕೊಟ್ಟಿದ್ದೇನೆ. ನೀನು ಹೆಷ್ಬೋನಿನಲ್ಲಿದ್ದ ಅಮೋರಿಯರ ಅರಸನಾದ ಸೀಹೋನನಿಗೆ ಮಾಡಿದ ಪ್ರಕಾರವೇ ಇವರಿಗೂ ಮಾಡಬೇಕು” ಎಂದು ಹೇಳಿದನು.
35 于是他们杀了他和他的众子,并他的众民,没有留下一个,就得了他的地。
೩೫ಆದಕಾರಣ ಇಸ್ರಾಯೇಲರು, ಅವರಲ್ಲಿ ಒಬ್ಬನೂ ಉಳಿಯದಂತೆ ಅವನನ್ನೂ, ಅವನ ಮಕ್ಕಳನ್ನೂ, ಅವನ ಜನರನ್ನೆಲ್ಲಾ ನಾಶಮಾಡಿ ಅವನ ದೇಶವನ್ನು ಸ್ವಾಧೀನಪಡಿಸಿಕೊಂಡರು.

< 民数记 21 >