< 民数记 25 >

1 以色列人住在什亭,百姓与摩押女子行起淫乱。
ಆಗ ಇಸ್ರಾಯೇಲರು ಶಿಟ್ಟೀಮಿನಲ್ಲಿ ವಾಸವಾಗಿದ್ದಾಗ, ಅವರು ಮೋವಾಬಿನ ಪುತ್ರಿಯರ ಸಂಗಡ ಜಾರತ್ವ ಮಾಡಲಾರಂಭಿಸಿದರು.
2 因为这女子叫百姓来,一同给她们的神献祭,百姓就吃她们的祭物,跪拜她们的神。
ಆ ಮಹಿಳೆಯರು ಇಸ್ರಾಯೇಲರನ್ನು ತಮ್ಮ ದೇವರುಗಳ ಬಲಿಗಳಿಗೆ ಕರೆದರು. ಇವರು ತಿಂದು ಅವರ ದೇವರುಗಳಿಗೆ ಅಡ್ಡಬಿದ್ದರು.
3 以色列人与巴力·毗珥连合,耶和华的怒气就向以色列人发作。
ಹೀಗೆ ಇಸ್ರಾಯೇಲರು ಬಾಳ್ ಪೆಯೋರಿನೊಂದಿಗೆ ತಾವೇ ಕೂಡಿ ಪೂಜಿಸಿದ್ದರಿಂದ ಯೆಹೋವ ದೇವರು ಇಸ್ರಾಯೇಲಿನ ಮೇಲೆ ಕೋಪಗೊಂಡರು.
4 耶和华吩咐摩西说:“将百姓中所有的族长在我面前对着日头悬挂,使我向以色列人所发的怒气可以消了。”
ಆಗ ಯೆಹೋವ ದೇವರು ಮೋಶೆಗೆ, “ಯೆಹೋವ ದೇವರ ಕೋಪಾಗ್ನಿಯು ಇಸ್ರಾಯೇಲಿನಿಂದ ತಿರುಗಿಕೊಳ್ಳುವ ಹಾಗೆ ನೀನು ಜನರ ಮುಖ್ಯಸ್ಥರೆಲ್ಲರನ್ನು ತೆಗೆದುಕೊಂಡು, ಅವರನ್ನು ಹಗಲು ಹೊತ್ತಿನಲ್ಲಿ ಯೆಹೋವ ದೇವರ ಮುಂದೆ ಕೊಂದುಹಾಕು.”
5 于是摩西吩咐以色列的审判官说:“凡属你们的人,有与巴力·毗珥连合的,你们各人要把他们杀了。”
ಆದ್ದರಿಂದ ಮೋಶೆ ಇಸ್ರಾಯೇಲಿನ ನ್ಯಾಯಾಧಿಪತಿಗಳಿಗೆ, “ನಿಮ್ಮಲ್ಲಿ ಒಬ್ಬೊಬ್ಬನೂ ಬಾಳ್ ಪೆಯೋರಿನೊಂದಿಗೆ ಕೂಡಿ ಪೂಜಿಸಿರುವ ನಿನ್ನ ಜನರನ್ನು ಕೊಲ್ಲಬೇಕು,” ಎಂದನು.
6 摩西和以色列全会众正在会幕门前哭泣的时候,谁知,有以色列中的一个人,当他们眼前,带着一个米甸女人到他弟兄那里去。
ಆಗ ಇಸ್ರಾಯೇಲರಲ್ಲಿ ಒಬ್ಬನು ಮೋಶೆಗೆ ಹಾಗೂ ದೇವದರ್ಶನ ಗುಡಾರದ ಮುಂದೆ ಅಳುತ್ತಿರುವ ಇಸ್ರಾಯೇಲರ ಸಮಸ್ತ ಸಮೂಹಕ್ಕೂ ಕಾಣುವ ಹಾಗೆ ಒಬ್ಬ ಮಿದ್ಯಾನ್ ಮಹಿಳೆಯನ್ನು ಕರೆತಂದನು.
7 祭司亚伦的孙子,以利亚撒的儿子非尼哈看见了,就从会中起来,手里拿着枪,
ಕೂಡಲೆ ಮಾಹಾಯಾಜಕ ಆರೋನನ ಮಗನಾಗಿದ್ದ ಎಲಿಯಾಜರನ ಮಗ ಫೀನೆಹಾಸನು ಅದನ್ನು ನೋಡಿ, ಜನರ ಮಧ್ಯದಿಂದ ಎದ್ದು, ತನ್ನ ಕೈಯಲ್ಲಿ ಈಟಿಯನ್ನು ಹಿಡಿದುಕೊಂಡು,
8 跟随那以色列人进亭子里去,便将以色列人和那女人由腹中刺透。这样,在以色列人中瘟疫就止息了。
ಇಸ್ರಾಯೇಲಿನವನಾದ ಆ ಮನುಷ್ಯನ ಹಿಂದೆ ಡೇರೆಯೊಳಗೆ ಪ್ರವೇಶಿಸಿ, ಇಸ್ರಾಯೇಲಿನವನನ್ನೂ ಆ ಮಹಿಳೆಯನ್ನೂ ಒಂದೇ ಬಾರಿಗೆ ಇಬ್ಬರ ಹೊಟ್ಟೆಯನ್ನು ತಿವಿದನು. ಹೀಗೆ ಇಸ್ರಾಯೇಲರಿಗೆ ಉಂಟಾಗಿದ್ದ ವ್ಯಾಧಿಯು ನಿಂತುಹೋಯಿತು.
9 那时遭瘟疫死的,有二万四千人。
ಆದರೂ, ವ್ಯಾಧಿಯಿಂದ ಸತ್ತವರು 24,000 ಮಂದಿಯಾಗಿದ್ದರು.
10 耶和华晓谕摩西说:
ಯೆಹೋವ ದೇವರು ಮೋಶೆಗೆ,
11 “祭司亚伦的孙子,以利亚撒的儿子非尼哈,使我向以色列人所发的怒消了;因他在他们中间,以我的忌邪为心,使我不在忌邪中把他们除灭。
“ಯಾಜಕನಾದ ಆರೋನನ ಮೊಮ್ಮಗನೂ, ಎಲಿಯಾಜರನ ಮಗ ಫೀನೆಹಾಸನು ಇಸ್ರಾಯೇಲರಲ್ಲಿ ನನಗೋಸ್ಕರ ಆಸಕ್ತನಾಗಿದ್ದು, ನಾನು ನನ್ನ ರೋಷದಿಂದ ಅವರನ್ನು ನಾಶಮಾಡದ ಹಾಗೆ, ನನ್ನ ಕೋಪವನ್ನು ಅವರ ಮೇಲಿನಿಂದ ತಿರುಗಿಸಿಬಿಟ್ಟಿದ್ದಾನೆ.
12 因此,你要说:‘我将我平安的约赐给他。
ಆದಕಾರಣ, ನಾನು ಅವನೊಂದಿಗೆ ನನ್ನ ಸಮಾಧಾನದ ಒಡಂಬಡಿಕೆಯನ್ನು ಮಾಡುತ್ತೇನೆ ಎಂದು ಹೇಳು.
13 这约要给他和他的后裔,作为永远当祭司职任的约;因他为 神有忌邪的心,为以色列人赎罪。’”
ಅವನು ತನ್ನ ದೇವರ ಗೌರವವನ್ನು ಕಾಪಾಡಲು ಆಸಕ್ತನಾಗಿದ್ದು, ಇಸ್ರಾಯೇಲರಿಗೋಸ್ಕರ ಪಾಪ ಪ್ರಾಯಶ್ಚಿತ್ತ ಮಾಡಿದ್ದರಿಂದ, ಅವನಿಗೂ ಅವನ ಹಿಂದೆ ಬರುವ ಅವನ ಸಂತತಿಗೂ ನಿತ್ಯ ಯಾಜಕತ್ವದ ಒಡಂಬಡಿಕೆ ಮಾಡಿದ್ದೇನೆ,” ಎಂದರು.
14 那与米甸女人一同被杀的以色列人,名叫心利,是撒路的儿子,是西缅一个宗族的首领。
ಮಿದ್ಯಾನ್ ಸ್ತ್ರೀಯ ಸಂಗಡ ಹತನಾದ ಆ ಇಸ್ರಾಯೇಲಿನವನ ಹೆಸರು ಜಿಮ್ರಿ, ಅವನು ಸಿಮೆಯೋನ್ ಕುಲದವರಲ್ಲಿ ಗೋತ್ರದ ಮುಖ್ಯಸ್ಥನಾಗಿದ್ದ ಸಾಲೂ ಎಂಬುವನ ಮಗನು.
15 那被杀的米甸女人,名叫哥斯比,是苏珥的女儿;这苏珥是米甸一个宗族的首领。
ಹತಳಾದ ಆ ಮಿದ್ಯಾನ್ ಸ್ತ್ರೀಯ ಹೆಸರು ಕೊಜ್ಬೀ, ಅವಳು ಮಿದ್ಯಾನ್ಯರ ಪ್ರಜೆಯ ಮುಖ್ಯಸ್ಥನೂ ಮನೆಗೆ ಯಜಮಾನನೂ ಆಗಿರುವ ಚೂರ್ ಎಂಬವನ ಮಗಳಾಗಿದ್ದಳು.
16 耶和华晓谕摩西说:
ಯೆಹೋವ ದೇವರು ಮೋಶೆಗೆ,
17 “你要扰害米甸人,击杀他们;
“ಮಿದ್ಯಾನ್ಯರನ್ನು ವೈರಿ ಎಂದು ತಿಳಿದು ಹೊಡೆಯಬೇಕು.
18 因为他们用诡计扰害你们,在毗珥的事上和他们的姊妹、米甸首领的女儿哥斯比的事上,用这诡计诱惑了你们;这哥斯比,当瘟疫流行的日子,因毗珥的事被杀了。”
ಅವರು ಪೆಯೋರಿನ ವಿಷಯದಲ್ಲಿಯೂ, ಪೆಯೋರಿಗೋಸ್ಕರ ವ್ಯಾಧಿಯ ದಿವಸದಲ್ಲಿ ಹತಳಾದ ತಮ್ಮ ಸಹೋದರಿಯಾಗಿಯೂ, ಮಿದ್ಯಾನ್ಯರ ಪ್ರಧಾನನ ಮಗಳಾಗಿಯೂ, ಇದ್ದ ಕೊಜ್ಬೀಯ ವಿಷಯದಲ್ಲಿಯೂ ನಿಮಗೆ ಮಾಡಿದ ಮೋಸಗಳಿಂದ ನಿಮಗೆ ಉಪದ್ರವ ಕೊಡುತ್ತಾರೆ,” ಎಂದರು.

< 民数记 25 >