< 民数记 26 >
1 瘟疫之后,耶和华晓谕摩西和祭司亚伦的儿子以利亚撒说:
೧ಆ ಘೋರವಾದ ವ್ಯಾಧಿ ನಿಂತ ಮೇಲೆ ಯೆಹೋವನು ಮೋಶೆಗೂ ಮತ್ತು ಆರೋನನ ಮಗನೂ, ಯಾಜಕನೂ ಆಗಿರುವ ಎಲ್ಲಾಜಾರನ ಸಂಗಡ ಮಾತನಾಡಿ,
2 “你们要将以色列全会众,按他们的宗族,凡以色列中从二十岁以外、能出去打仗的,计算总数。”
೨“ನೀವು ಇಸ್ರಾಯೇಲರ ಸರ್ವಸಮೂಹದವರಲ್ಲಿ ಇಪ್ಪತ್ತು ವರ್ಷ ಮೊದಲುಗೊಂಡು ಹೆಚ್ಚಿನ ವಯಸ್ಸುಳ್ಳವರನ್ನು ಅಂದರೆ ಯುದ್ಧಕ್ಕೆ ಹೊರಡತಕ್ಕವರನ್ನು ಗೋತ್ರಗೋತ್ರಗಳ ಪ್ರಕಾರ ಲೆಕ್ಕಿಸಬೇಕು” ಎಂದು ಆಜ್ಞಾಪಿಸಿದನು.
3 摩西和祭司以利亚撒在摩押平原与耶利哥相对的约旦河边向以色列人说:
೩ಆಗ ಮೋಶೆಯೂ ಯಾಜಕನಾದ ಎಲ್ಲಾಜಾರನೂ ಮೋವಾಬ್ಯರ ಬಯಲುಗಳಲ್ಲಿ ಯೆರಿಕೋ ಪಟ್ಟಣಕ್ಕೆ ಎದುರಾಗಿ ಯೊರ್ದನ್ ನದಿಯ ಹತ್ತಿರ ಅವರ ಸಂಗಡ ಮಾತನಾಡಿ,
4 “将你们中间从二十岁以外的计算总数”;是照耶和华吩咐出埃及地的摩西和以色列人的话。
೪“ಯೆಹೋವನು ಮೋಶೆಗೆ ಅಜ್ಞಾಪಿಸಿದಂತೆ ಐಗುಪ್ತ ದೇಶದಿಂದ ಹೊರಟ್ಟಿದ್ದ ಮತ್ತು ಮಹಾಯಾಜಕನಾದ ಎಲ್ಲಾಜಾರನೂ ಯೊರ್ದನ್ ನದಿಯ ತೀರದಲ್ಲಿ ಮೋವಾಬ್ಯರ ಮೈದಾನದಲ್ಲಿ ಇಸ್ರಾಯೇಲರಲ್ಲಿ ಇಪ್ಪತ್ತು ವರ್ಷ ಮೊದಲುಗೊಂಡು ಹೆಚ್ಚಿನ ವಯಸ್ಸುಳ್ಳವರನ್ನು ಲೆಕ್ಕಿಸಿರಿ” ಎಂದನು.
5 以色列的长子是吕便。吕便的众子:属哈诺的,有哈诺族;属法路的,有法路族;
೫ಇಸ್ರಾಯೇಲನ ಚೊಚ್ಚಲು ಮಗನಾದ ರೂಬೇನನಿಂದುಂಟಾದ ಕುಟುಂಬಗಳು ಯಾವುವೆಂದರೆ: ಹನೋಕನ ವಂಶಸ್ಥರಾದ ಹನೋಕ್ಯರು, ಪಲ್ಲೂವಿನ ವಂಶಸ್ಥರಾದ ಪಲ್ಲೂವಿನವರು,
೬ಹೆಚ್ರೋನನ ವಂಶಸ್ಥರಾದ ಹೆಚ್ರೋನ್ಯರು, ಕರ್ಮೀಯ ವಂಶಸ್ಥರಾದ ಕರ್ಮೀಯರು ಇವರೇ.
7 这就是吕便的各族;其中被数的,共有四万三千七百三十名。
೭ಇವರೇ ರೂಬೇನ್ಯರ ಕುಟುಂಬದವರು, ಇವರಲ್ಲಿ ಲೆಕ್ಕಿಸಲ್ಪಟ್ಟವರ ಒಟ್ಟು ಸಂಖ್ಯೆ - 43,730 ಮಂದಿ.
9 以利押的众子是尼母利、大坍、亚比兰。这大坍、亚比兰,就是从会中选召的,与可拉一党同向耶和华争闹的时候也向摩西、亚伦争闹;
೯ಎಲೀಯಾಬನ ಮಕ್ಕಳು: ನೆಮೂವೇಲ್, ದಾತಾನ್, ಅಬೀರಾಮ್ ಎಂಬುವವರೇ. ಕೋರಹನ ಗುಂಪಿನವರು ಯೆಹೋವನಿಗೆ ವಿರುದ್ಧವಾಗಿ ವಿವಾದಿಸಿದ ಕಾಲದಲ್ಲಿ ಅವರೊಳಗೆ ಸೇರಿಕೊಂಡು ಮೋಶೆ ಮತ್ತು ಆರೋನರಿಗೆ ವಿರುದ್ಧವಾಗಿ ವಿವಾದಿಸಿದ ಆಲೋಚನಾಕರ್ತರಾದ ದಾತಾನ್ ಮತ್ತು ಅಬೀರಾಮರು ಇವರೇ.
10 地便开口吞了他们,和可拉、可拉的党类一同死亡。那时火烧灭了二百五十个人;他们就作了警戒。
೧೦ಭೂಮಿಯು ಬಾಯ್ದೆರೆದು ಅವರನ್ನೂ ಮತ್ತು ಕೋರಹನನ್ನೂ ನುಂಗಿಬಿಟ್ಟಿತು ಮತ್ತು ಬೆಂಕಿಯು ಆ ಗುಂಪಿನವರಲ್ಲಿ ಬೇರೆ ಇನ್ನೂರೈವತ್ತು ಮಂದಿಯನ್ನು ದಹಿಸಿ ಇಸ್ರಾಯೇಲರಿಗೆ ಎಚ್ಚರಿಕೆಯನ್ನು ಉಂಟುಮಾಡಿತು.
೧೧ಆ ಗುಂಪಿನವರೆಲ್ಲರು ಸತ್ತರೂ ಕೋರಹನ ಮಕ್ಕಳು ಆ ಕಾಲದಲ್ಲಿ ಸಾಯಲಿಲ್ಲ.
12 按着家族,西缅的众子:属尼母利的,有尼母利族;属雅悯的,有雅悯族;属雅斤的,有雅斤族;
೧೨ಸಿಮೆಯೋನ್ ಕುಲದ ಕುಟುಂಬಗಳು ಯಾವುವೆಂದರೆ: ನೆಮೂವೇಲನ ವಂಶಸ್ಥರಾದ ನೆಮೂವೇಲ್ಯರು, ಯಾಮೀನನ ವಂಶಸ್ಥರಾದ ಯಾಮೀನ್ಯರು, ಯಾಕೀನನ ವಂಶಸ್ಥರಾದ ಯಾಕೀನ್ಯರು,
೧೩ಜೆರಹನ ವಂಶಸ್ಥರಾದ ಜೆರಹಿಯರು, ಸೌಲನ ವಂಶಸ್ಥರಾದ ಸೌಲ್ಯರು ಇವರೇ.
೧೪ಸಿಮೆಯೋನ್ ಕುಲದವರಲ್ಲಿ ಲೆಕ್ಕಿಸಲ್ಪಟ್ಟವರ ಒಟ್ಟು ಸಂಖ್ಯೆ - 22,200 ಮಂದಿ.
15 按着家族,迦得的众子:属洗分的,有洗分族;属哈基的,有哈基族;属书尼的,有书尼族;
೧೫ಗಾದ್ ಕುಲದ ಕುಟುಂಬಗಳು ಯಾವುವೆಂದರೆ: ಚೆಫೋನನ ವಂಶಸ್ಥರಾದ ಚೆಫೋನ್ಯರು, ಹಗ್ಗೀಯ ವಂಶಸ್ಥರಾದ ಹಗ್ಗೀಯರು, ಶೂನೀಯ ವಂಶಸ್ಥರಾದ ಶೂನೀಯರು,
16 属阿斯尼的,有阿斯尼族;属以利的,有以利族;
೧೬ಒಜ್ನೀಯ ವಂಶಸ್ಥರಾದ ಒಜ್ನೀಯರು, ಏರೀಯ ವಂಶಸ್ಥರಾದ ಏರೀಯರು,
17 属亚律的,有亚律族;属亚列利的,有亚列利族。
೧೭ಅರೋದನ ವಂಶಸ್ಥರಾದ ಅರೋದ್ಯರು, ಅರೇಲೀಯ ವಂಶಸ್ಥರಾದ ಅರೇಲೀಯರು ಇವರೇ.
18 这就是迦得子孙的各族,照他们中间被数的,共有四万零五百名。
೧೮ಗಾದ್ ಕುಲದವರಲ್ಲಿ ಲೆಕ್ಕಿಸಲ್ಪಟ್ಟವರ ಒಟ್ಟು ಸಂಖ್ಯೆ - 40,500 ಮಂದಿ.
19 犹大的儿子是珥和俄南。这珥和俄南死在迦南地。
೧೯ಯೆಹೂದನ ಮಕ್ಕಳಲ್ಲಿ ಏರ್ ಮತ್ತು ಓನಾನರು ಕಾನಾನ್ ದೇಶದಲ್ಲೇ ಸತ್ತರು.
20 按着家族,犹大其余的众子:属示拉的,有示拉族;属法勒斯的,有法勒斯族;属谢拉的有谢拉族。
೨೦ಯೆಹೂದನ ಕುಲದಲ್ಲಿ ಉಳಿದ ಕುಟುಂಬಗಳು ಯಾವುವೆಂದರೆ: ಶೇಲಹನ ವಂಶಸ್ಥರಾದ ಶೇಲಾನ್ಯರು, ಪೆರೆಹನ ವಂಶಸ್ಥರಾದ ಪೆರೆಚ್ಯರು, ಜೆರಹನ ವಂಶಸ್ಥರಾದ ಜೆರಹಿಯರು ಇವರೇ.
21 法勒斯的儿子:属希斯 的,有希斯 族;属哈母勒的,有哈母勒族。
೨೧ಪೆರೆಚನಿಂದುಂಟಾದ ಕುಟುಂಬಗಳು: ಹೆಚ್ರೋನನ ವಂಶಸ್ಥರಾದ ಹೆಚ್ರೋನ್ಯರೂ ಹಾಮೂಲನ ವಂಶಸ್ಥರಾದ ಹಾಮೂಲ್ಯರೂ.
22 这就是犹大的各族,照他们中间被数的,共有七万六千五百名。
೨೨ಯೆಹೂದ ಕುಲದವರಲ್ಲಿ ಲೆಕ್ಕಿಸಲ್ಪಟ್ಟವರ ಒಟ್ಟು ಸಂಖ್ಯೆ - 76,500 ಮಂದಿ.
23 按着家族,以萨迦的众子:属陀拉的,有陀拉族;属普瓦的,有普瓦族;
೨೩ಇಸ್ಸಾಕಾರ್ ಕುಲದ ಕುಟುಂಬಗಳು ಯಾವುವೆಂದರೆ: ತೋಲನ ವಂಶಸ್ಥರಾದ ತೋಲಾಯರು, ಪುವ್ವನ ವಂಶಸ್ಥರಾದ ಪೂನ್ಯರು,
೨೪ಯಾಶೂಬನ ವಂಶಸ್ಥರಾದ ಯಾಶೂಬ್ಯರು, ಶಿಮ್ರೋನನ ವಂಶಸ್ಥರಾದ ಶಿಮ್ರೋನ್ಯರು ಇವರೇ.
25 这就是以萨迦的各族,照他们中间被数的,共有六万四千三百名。
೨೫ಇಸ್ಸಾಕಾರ್ ಕುಲದವರಲ್ಲಿ ಲೆಕ್ಕಿಸಲ್ಪಟ್ಟವರ ಒಟ್ಟು ಸಂಖ್ಯೆ - 64,300 ಮಂದಿ.
26 按着家族,西布伦的众子:属西烈的,有西烈族;属以伦的,有以伦族;属雅利的,有雅利族。
೨೬ಜೆಬುಲೂನ್ ಕುಲದ ಕುಟುಂಬಗಳು ಯಾವುವೆಂದರೆ: ಸೆರೆದನ ವಂಶಸ್ಥರಾದ ಸೆರೆದ್ಯರು, ಏಲೋನನ ವಂಶಸ್ಥರಾದ ಏಲೋನ್ಯರು, ಯಹಲೇಲನ ವಂಶಸ್ಥರಾದ ಯಹಲೇಲ್ಯರು.
27 这就是西布伦的各族,照他们中间被数的,共有六万零五百名。
೨೭ಜೆಬುಲೂನ್ ಕುಲದವರಲ್ಲಿ ಲೆಕ್ಕಿಸಲ್ಪಟ್ಟವರ ಒಟ್ಟು ಸಂಖ್ಯೆ - 60,500 ಮಂದಿ.
೨೮ಕುಟುಂಬಗಳ ಪ್ರಕಾರ ಯೋಸೇಫನ ಮಕ್ಕಳು ಮನಸ್ಸೆ ಮತ್ತು ಎಫ್ರಾಯೀಮ್.
29 玛拿西的众子:属玛吉的,有玛吉族;玛吉生基列;属基列的,有基列族。
೨೯ಮನಸ್ಸೆ ಕುಲದ ಕುಟುಂಬಗಳು ಯಾವುವೆಂದರೆ: ಮಾಕೀರನ ವಂಶಸ್ಥರಾದ ಮಾಕೀರ್ಯರು, ಮಾಕೀರನ ಮಗನಾದ ಗಿಲ್ಯಾದನ ವಂಶಸ್ಥರಾದ ಗಿಲ್ಯಾದ್ಯರು ಇವರೇ.
30 基列的众子:属伊以谢的,有伊以谢族;属希勒的,有希勒族;
೩೦ಗಿಲ್ಯಾದನ ವಂಶದವರು ಯಾರೆಂದರೆ: ಈಯೆಜೆರನ ವಂಶಸ್ಥರಾದ ಈಯೆಜೆರ್ಯರು, ಹೇಲೆಕನ ವಂಶಸ್ಥರಾದ ಹೇಲೆಕ್ಯರು,
31 属亚斯烈的,有亚斯烈族;属示剑的,有示剑族;
೩೧ಅಸ್ರೀಯೇಲನ ವಂಶಸ್ಥರಾದ ಅಸ್ರೀಯೇಲ್ಯರು, ಶೆಕೆಮನ ವಂಶಸ್ಥರಾದ ಶೆಕೆಮ್ಯರು,
32 属示米大的,有示米大族;属希弗的,有希弗族。
೩೨ಶೆಮೀದಾಯನ ವಂಶಸ್ಥರಾದ ಶೆಮೀದಾಯರು, ಹೇಫೆರನ ವಂಶಸ್ಥರಾದ ಹೇಫೆರ್ಯರು ಇವರೇ.
33 希弗的儿子:西罗非哈没儿子,只有女儿。西罗非哈女儿的名字就是玛拉、挪阿、曷拉、密迦、得撒。
೩೩ಹೇಫೆರನ ಮಗನಾದ ಚಲ್ಪಹಾದನಿಗೆ ಹೆಣ್ಣು ಮಕ್ಕಳು ಹುಟ್ಟಿದರೇ ಹೊರತು ಗಂಡುಮಕ್ಕಳು ಹುಟ್ಟಲಿಲ್ಲ. ಅವನ ಹೆಣ್ಣುಮಕ್ಕಳು: ಮಹ್ಲಾ, ನೋವಾ, ಹೊಗ್ಲಾ, ಮಿಲ್ಕಾ, ತಿರ್ಚಾ ಎಂಬುವವರೇ.
34 这就是玛拿西的各族;他们中间被数的,共有五万二千七百名。
೩೪ಮನಸ್ಸೆ ಕುಲದವರಲ್ಲಿ ಲೆಕ್ಕಿಸಲ್ಪಟ್ಟವರ ಒಟ್ಟು ಸಂಖ್ಯೆ - 52,700 ಮಂದಿ.
35 按着家族,以法莲的众子:属书提拉的,有书提拉族;属比结的,有比结族;属他罕的,有他罕族。
೩೫ಎಫ್ರಾಯೀಮ್ ಕುಲದ ಕುಟುಂಬಗಳು ಯಾವುವೆಂದರೆ: ಶೂತೆಲಹನ ವಂಶಸ್ಥರಾದ ಶೂತೆಲಹ್ಯರು, ಬೆಕೆರನ ವಂಶಸ್ಥರಾದ ಬೆಕೆರ್ಯರು, ತಹನನ ವಂಶಸ್ಥರಾದ ತಹನಿಯರು,
೩೬ಶೂತೆಲಹನ ಮಗನಾದ ಏರಾನನ ವಂಶಸ್ಥರಾದ ಏರಾನ್ಯರು ಇವರೇ.
37 这就是以法莲子孙的各族,照他们中间被数的,共有三万二千五百名。按着家族,这都是约瑟的子孙。
೩೭ಎಫ್ರಾಯೀಮ್ ಕುಲದವರಲ್ಲಿ ಲೆಕ್ಕಿಸಲ್ಪಟ್ಟವರ ಒಟ್ಟು ಸಂಖ್ಯೆ - 32,500 ಮಂದಿ. ಇದೇ ಯೋಸೇಫ್ ವಂಶದ ಕುಟುಂಬಗಳ ವಿವರ.
38 按着家族,便雅悯的众子:属比拉的,有比拉族;属亚实别的,有亚实别族;属亚希兰的,有亚希兰族;
೩೮ಬೆನ್ಯಾಮೀನ್ ಕುಲದ ಕುಟುಂಬಗಳು ಯಾವುವೆಂದರೆ: ಬೆಲಗನ ವಂಶಸ್ಥರಾದ ಬೆಲಗ್ಯರು, ಅಷ್ಬೇಲನ ವಂಶಸ್ಥರಾದ ಅಷ್ಬೇಲ್ಯರು, ಅಹೀರಾಮನ ವಂಶಸ್ಥರಾದ ಅಹೀರಾಮ್ಯರು,
೩೯ಶೂಫಾಮನ ವಂಶಸ್ಥರಾದ ಶೂಫಾಮ್ಯರು, ಹೊಫಾಮನ ವಂಶಸ್ಥರಾದ ಹೊಫಾಮ್ಯರು ಇವರೇ.
40 比拉的众子是亚勒、乃幔。属 亚勒 的,有亚勒族;属乃幔的,有乃幔族。
೪೦ಬೆಲಗನಿಗೆ ಅರ್ದ್, ನಾಮಾನ್ ಎಂಬ ಇಬ್ಬರು ಮಕ್ಕಳಿದ್ದರು. ಅರ್ದನ ವಂಶದವರು ಅರ್ದ್ಯರು, ನಾಮಾನನ ವಂಶದವರು ನಾಮಾನ್ಯರು.
41 按着家族,这就是便雅悯的子孙,其中被数的,共有四万五千六百名。
೪೧ಬೆನ್ಯಾಮೀನ್ ಕುಲದವರಲ್ಲಿ ಲೆಕ್ಕಿಸಲ್ಪಟ್ಟವರ ಒಟ್ಟು ಸಂಖ್ಯೆ - 45,600 ಮಂದಿ.
42 按着家族,但的众子:属书含的,有书含族。按着家族,这就是但的各族。
೪೨ದಾನ್ ಕುಲದ ಕುಟುಂಬಗಳು ಯಾವುವೆಂದರೆ: ಶೂಹಾಮನ ವಂಶಸ್ಥರಾದ ಶೂಹಾಮ್ಯರು.
43 照其中被数的,书含所有的各族,共有六万四千四百名。
೪೩ಶೂಹಾಮ್ಯರ ಕುಲದವರಲ್ಲಿ ಲೆಕ್ಕಿಸಲ್ಪಟ್ಟವರ ಒಟ್ಟು ಸಂಖ್ಯೆ - 64,400 ಮಂದಿ.
44 按着家族,亚设的众子:属音拿的,有音拿族;属亦施韦的,有亦施韦族;属比利亚的,有比利亚族。
೪೪ಆಶೇರ್ ಕುಲದ ಕುಟುಂಬಗಳು: ಇಮ್ನಾಹನ ವಂಶಸ್ಥರಾದ ಇಮ್ನಾಹ್ಯರು, ಇಷ್ವೀಯ ವಂಶಸ್ಥರಾದ ಇಷ್ವೀಯರು, ಬೆರೀಯನ ವಂಶಸ್ಥರಾದ ಬೆರೀಯರು.
45 比利亚的众子:属希别的,有希别族;属玛结的,有玛结族。
೪೫ಬೆರೀಯನ ಮಕ್ಕಳಿಂದುಂಟಾದ ಕುಟುಂಬಗಳು: ಹೇಬೆರನ ವಂಶಸ್ಥರಾದ ಹೇಬೆರ್ಯರು, ಮಲ್ಕೀಯೇಲನ ವಂಶಸ್ಥರಾದ ಮಲ್ಕೀಯೇಲ್ಯರು.
೪೬ಆಶೇರನಿಗೆ ಸೆರಹಳೆಂಬ ಮಗಳು ಸಹ ಇದ್ದಳು.
47 这就是亚设子孙的各族,照他们中间被数的,共有五万三千四百名。
೪೭ಆಶೇರ್ ಕುಲದವರಾದ ಇವರಲ್ಲಿ ಲೆಕ್ಕಿಸಲ್ಪಟ್ಟವರು 53,400 ಮಂದಿ.
48 按着家族,拿弗他利的众子:属雅薛的,有雅薛族;属沽尼的,有沽尼族;
೪೮ನಫ್ತಾಲಿ ಕುಲದ ಕುಟುಂಬಗಳು: ಯಹಚೇಲನ ವಂಶಸ್ಥರಾದ ಯಹಚೇಲ್ಯರು, ಗೂನೀಯ ವಂಶಸ್ಥರಾದ ಗೂನೀಯರು,
೪೯ಯೇಚೆರನ ವಂಶಸ್ಥರಾದ ಯೇಚೆರ್ಯರು, ಶಿಲ್ಲೇಮನ ವಂಶಸ್ಥರಾದ ಶಿಲ್ಲೇಮ್ಯರು.
50 按着家族,这就是拿弗他利的各族;他们中间被数的,共有四万五千四百名。
೫೦ನಫ್ತಾಲಿ ಕುಲದವರಲ್ಲಿ ಲೆಕ್ಕಿಸಲ್ಪಟ್ಟವರ ಒಟ್ಟು ಸಂಖ್ಯೆ - 45,400 ಮಂದಿ.
51 以色列人中被数的,共有六十万零一千七百三十名。
೫೧ಇಸ್ರಾಯೇಲರಲ್ಲಿ ಲೆಕ್ಕಿಸಲ್ಪಟ್ಟವರ ಒಟ್ಟು ಸಂಖ್ಯೆ - 6,01,730.
೫೨ಯೆಹೋವನು ಮೋಶೆಗೆ ಆಜ್ಞಾಪಿಸಿದ್ದೇನೆಂದರೆ,
೫೩“ನೀವು ಈ ಕುಲಗಳಿಗೆ ಅವರವರ ಸಂಖ್ಯೆಯ ಪ್ರಕಾರ ಆ ದೇಶವನ್ನು ಸ್ವದೇಶವಾಗುವಂತೆ ಹಂಚಿಕೊಡಬೇಕು.
54 人多的,你要把产业多分给他们;人少的,你要把产业少分给他们;要照被数的人数,把产业分给各人。
೫೪ಹೆಚ್ಚು ಮಂದಿಯುಳ್ಳ ಕುಲಕ್ಕೆ ಹೆಚ್ಚಾಗಿಯೂ, ಕಡಿಮೆ ಮಂದಿಯುಳ್ಳ ಕುಲಕ್ಕೆ ಕಡಿಮೆಯಾಗಿಯೂ ಕೊಡಬೇಕು. ಲೆಕ್ಕಿಸಿದ ಸಂಖ್ಯೆಯ ಪ್ರಕಾರವೇ ಪ್ರತಿಯೊಂದು ಕುಲಕ್ಕೆ ಭೂಮಿಯನ್ನು ಸ್ವತ್ತಾಗಿ ಕೊಡಬೇಕು.
55 虽是这样,还要拈阄分地。他们要按着祖宗各支派的名字承受为业。
೫೫ಪ್ರತಿಯೊಂದು ಕುಲದ ಪಿತೃವಿನ ಹೆಸರನ್ನು ಬರೆದು ಚೀಟುಹಾಕಿ ಆಯಾ ಕುಲಕ್ಕೆ ಸ್ವತ್ತನ್ನು ಗೊತ್ತು ಮಾಡಬೇಕು.
56 要按着所拈的阄,看人数多,人数少,把产业分给他们。”
೫೬ಹೆಚ್ಚು ಮಂದಿಯುಳ್ಳ ಕುಲಕ್ಕಾಗಲಿ, ಕಡಿಮೆಯಾದ ಕುಲಕ್ಕಾಗಲಿ ಚೀಟು ಬಂದ ಪ್ರಕಾರವೇ ಸ್ವತ್ತನ್ನು ಗೊತ್ತುಮಾಡಬೇಕು.”
57 利未人,按着他们的各族被数的:属革顺的,有革顺族;属哥辖的,有哥辖族;属米拉利的,有米拉利族。
೫೭ಲೇವಿಯರೊಳಗೆ ಲೆಕ್ಕಿಸಲ್ಪಟ್ಟ ಕುಟುಂಬಗಳು: ಗೇರ್ಷೋನನ ವಂಶದವರಾದ ಗೇರ್ಷೋನ್ಯರು, ಕೆಹಾತನ ವಂಶದವರಾದ ಕೆಹಾತ್ಯರು, ಮೆರಾರೀಯ ವಂಶದವರಾದ ಮೆರಾರೀಯರು.
58 利未的各族有立尼族、希伯伦族、玛利族、母示族、可拉族。哥辖生暗兰。
೫೮ಲೇವಿ ಕುಲದವರ ಕುಟುಂಬಗಳು: ಲಿಬ್ನೀಯರ ಕುಟುಂಬ, ಹೆಬ್ರೋನ್ಯರ ಕುಟುಂಬ, ಮಹ್ಲೀಯರ ಕುಟುಂಬ, ಮೂಷೀಯರ ಕುಟುಂಬ, ಕೋರಹಿಯರ ಕುಟುಂಬ ಇವುಗಳೇ. ಕೆಹಾತನು ಅಮ್ರಾಮನನ್ನು ಪಡೆದನು.
59 暗兰的妻名叫约基别,是利未女子,生在埃及。她给暗兰生了亚伦、摩西,并他们的姊姊米利暗。
೫೯ಅಮ್ರಾಮನ ಹೆಂಡತಿ ಯಾರೆಂದರೆ: ಐಗುಪ್ತ ದೇಶದಲ್ಲಿ ಲೇವಿಯಿಂದ ಹುಟ್ಟಿದ ಯೋಕೆಬೆದಳು. ಈಕೆಯಲ್ಲಿ ಅಮ್ರಾಮನಿಂದ ಆರೋನನೂ, ಮೋಶೆಯೂ ಮತ್ತು ಇವರ ಅಕ್ಕ ಮಿರ್ಯಾಮಳೂ ಹುಟ್ಟಿದರು.
೬೦ಆರೋನನಿಂದ ನಾದಾಬ್, ಅಬೀಹೂ, ಎಲ್ಲಾಜಾರ್, ಈತಾಮಾರ್ ಎಂಬುವವರು ಹುಟ್ಟಿದರು.
61 拿答、亚比户在耶和华面前献凡火的时候就死了。
೬೧ನಾದಾಬ್ ಮತ್ತು ಅಬೀಹೂ ಎಂಬಿಬ್ಬರು ಯೆಹೋವನ ಸನ್ನಿಧಿಯಲ್ಲಿ ಆತನು ಆಜ್ಞಾಪಿಸದೆ ಇದ್ದ ಬೇರೆ ಬೆಂಕಿಯಿಂದ ಧೂಪವನ್ನು ಸಮರ್ಪಿಸಿದ್ದರಿಂದ ಸತ್ತುಹೋದರು.
62 利未人中,凡一个月以外、被数的男丁,共有二万三千。他们本来没有数在以色列人中;因为在以色列人中,没有分给他们产业。
೬೨ಬೇರೆ ಇಸ್ರಾಯೇಲರಿಗೆ ಸ್ವತ್ತು ದೊರಕಿದಂತೆ ಲೇವಿಯರಿಗೆ ಸ್ವತ್ತು ದೊರೆಯದೆ ಹೋದುದರಿಂದ ಅವರು ಇಸ್ರಾಯೇಲರೊಡನೆ ಲೆಕ್ಕಿಸಲ್ಪಡಲಿಲ್ಲ ಲೇವಿಯರೊಳಗೆ ಒಂದು ತಿಂಗಳು ಮೊದಲುಗೊಂಡು ಹೆಚ್ಚು ವಯಸ್ಸುಳ್ಳ ಗಂಡಸರನ್ನು ಲೆಕ್ಕಿಸಲಾಗಿ ಅವರ ಸಂಖ್ಯೆ - 23,000 ಮಂದಿ.
63 这些就是被摩西和祭司以利亚撒所数的;他们在摩押平原与耶利哥相对的约旦河边数点以色列人。
೬೩ಯೊರ್ದನ್ ನದಿಯ ತೀರದಲ್ಲಿ ಯೆರಿಕೋ ಪಟ್ಟಣದ ಹತ್ತಿರ ಮೋವಾಬ್ಯರ ಮೈದಾನದಲ್ಲಿ ಮೋಶೆಯೂ ಮತ್ತು ಯಾಜಕನಾದ ಎಲ್ಲಾಜಾರನೂ ಇಸ್ರಾಯೇಲರ ಜನಸಂಖ್ಯೆಯನ್ನು ಲೆಕ್ಕಿಸಿದರು.
64 但被数的人中,没有一个是摩西和祭司亚伦从前在西奈的旷野所数的以色列人,
೬೪ಮೋಶೆಯೂ ಮತ್ತು ಯಾಜಕನಾದ ಆರೋನನೂ ಸೀನಾಯಿ ಅರಣ್ಯದಲ್ಲಿ ಇಸ್ರಾಯೇಲರ ಸಂಖ್ಯೆಯಲ್ಲಿ ಲೆಕ್ಕಿಸಲ್ಪಟ್ಟವರೊಳಗೆ ಒಬ್ಬರಾದರೂ ಇವರಲ್ಲಿ ಇರಲಿಲ್ಲ.
65 因为耶和华论到他们说:“他们必要死在旷野。”所以,除了耶孚尼的儿子迦勒和嫩的儿子约书亚以外,连一个人也没有存留。
೬೫ಅವರೆಲ್ಲರೂ ಅರಣ್ಯದಲ್ಲಿಯೇ ಸಾಯುವರೆಂದು ಯೆಹೋವನು ಅವರ ವಿಷಯದಲ್ಲಿ ಹೇಳಿದ್ದನು. ಆದುದರಿಂದ ಯೆಫುನ್ನೆಯ ಮಗನಾದ ಕಾಲೇಬ್ ಮತ್ತು ನೂನನ ಮಗನಾದ ಯೆಹೋಶುವ ಇವರಿಬ್ಬರ ಹೊರತಾಗಿ ಅವರಲ್ಲಿ ಯಾರೂ ಉಳಿಯಲಿಲ್ಲ.