< 民数记 35 >

1 耶和华在摩押平原—约旦河边、耶利哥对面晓谕摩西说:
ಯೊರ್ದನ್ ನದಿಯ ತೀರದಲ್ಲಿ ಯೆರಿಕೋ ಪಟ್ಟಣದ ಹತ್ತಿರವಿರುವ ಮೋವಾಬ್ಯರ ಮೈದಾನದಲ್ಲಿ ಯೆಹೋವನು ಮೋಶೆಯ ಸಂಗಡ ಮಾತನಾಡಿ ಹೇಳಿದ್ದೇನೆಂದರೆ,
2 “你吩咐以色列人,要从所得为业的地中把些城给利未人居住,也要把这城四围的郊野给利未人。
“ಇಸ್ರಾಯೇಲರು ತಾವು ಹೊಂದುವ ಸ್ವತ್ತಿನಲ್ಲಿ ಕೆಲವು ಪಟ್ಟಣಗಳನ್ನೂ, ಆ ಪಟ್ಟಣಗಳ ಸುತ್ತಲಿನ ಭೂಮಿಯನ್ನೂ ಲೇವಿಯರಿಗೆ ವಾಸಕ್ಕಾಗಿ ಕೊಡಬೇಕೆಂದು ಅವರಿಗೆ ಆಜ್ಞಾಪಿಸು.
3 这城邑要归他们居住,城邑的郊野可以牧养他们的牛羊和各样的牲畜,又可以安置他们的财物。
ಆ ಪಟ್ಟಣಗಳು ಲೇವಿಯರ ವಾಸ ಸ್ಥಳವಾಗುವುದು. ಸುತ್ತಲಿರುವ ಭೂಮಿಗಳು ಅವರ ದನಕುರಿಗಳಿಗಾಗಿಯೂ ಮತ್ತು ಪಶುಗಳಿಗಾಗಿಯೂ ಇರುವವು.
4 你们给利未人的郊野,要从城根起,四围往外量一千肘。
ನೀವು ಲೇವಿಯರಿಗೆ ಕೊಡುವ ಪಟ್ಟಣಗಳು ಸುತ್ತಲಿನ ಭೂಮಿಯ ಪ್ರತಿಯೊಂದು ಪಟ್ಟಣಗಳ ಗೋಡೆಯಿಂದ ನಾಲ್ಕು ಕಡೆಯಲ್ಲಿಯೂ ಸಾವಿರ ಮೊಳದಷ್ಟು ವಿಸ್ತರಿಸಿಕೊಂಡಿರಬೇಕು.
5 另外东量二千肘,南量二千肘,西量二千肘,北量二千肘,为边界,城在当中;这要归他们作城邑的郊野。
ನೀವು ಪಟ್ಟಣದ ಹೊರಗಡೆ ಪೂರ್ವ ದಿಕ್ಕಿನಲ್ಲಿ ಎರಡು ಸಾವಿರ ಮೊಳ, ದಕ್ಷಿಣದಲ್ಲಿ ಎರಡು ಸಾವಿರ ಮೊಳ, ಪಶ್ಚಿಮದಲ್ಲಿ ಎರಡು ಸಾವಿರ ಮೊಳ, ಉತ್ತರದಲ್ಲಿ ಎರಡು ಸಾವಿರ ಮೊಳ, ಅಳೆಯಬೇಕು. ಮಧ್ಯದಲ್ಲಿ ಪಟ್ಟಣಗಳಿರಬೇಕು. ಹೀಗೆ ಅವರ ಪಟ್ಟಣಗಳ ಉಪನಗರಗಳು ಇರಬೇಕು.
6 你们给利未人的城邑,其中当有六座逃城,使误杀人的可以逃到那里。此外还要给他们四十二座城。
ಮನುಷ್ಯನನ್ನು ಹತ್ಯೆಮಾಡಿದವರು ಆಶ್ರಯಕ್ಕಾಗಿ ಓಡಿ ಹೋಗುವುದಕ್ಕೋಸ್ಕರ ನೀವು ನೇಮಿಸುವ ಆರು ಆಶ್ರಯನಗರಗಳನ್ನೂ, ಬೇರೆ ನಲ್ವತ್ತೆರಡು ಪಟ್ಟಣಗಳನ್ನೂ ಅಂತು ನಲ್ವತ್ತೆಂಟು ಪಟ್ಟಣಗಳನ್ನು ಲೇವಿಯರಿಗೆ ಕೊಡಬೇಕು.
7 你们要给利未人的城,共有四十八座,连城带郊野都要给他们。
ನೀವು ಲೇವಿಯರಿಗೆ ಹುಲ್ಲುಗಾವಲುಗಳ ಸಂಗಡ ಕೊಡಬೇಕಾದ ಸಮಸ್ತ ಪಟ್ಟಣಗಳು ನಲ್ವತ್ತೆಂಟಾಗಿರಬೇಕು.
8 以色列人所得的地业从中要把些城邑给利未 人;人多的就多给,人少的就少给;各支派要按所承受为业之地把城邑给利未人。”
ಇಸ್ರಾಯೇಲರ ಸ್ವತ್ತಿನಲ್ಲಿ ಆಯಾ ಕುಲದ ಸ್ವತ್ತಿನ ಪ್ರಮಾಣಕ್ಕೆ ತಕ್ಕ ಹಾಗೆ ಹೆಚ್ಚಾದ ಜನರುಳ್ಳವರಿಂದ ಹೆಚ್ಚಾಗಿಯೂ, ಕಡಿಮೆಯಾದ ಜನರಿಂದ ಕಡಿಮೆಯಾಗಿಯೂ ಲೇವಿಯರಿಗೋಸ್ಕರ ಊರುಗಳನ್ನು ಕೊಡಿಸಬೇಕು.”
9 耶和华晓谕摩西说:
ಯೆಹೋವನು ಮೋಶೆಯ ಸಂಗಡ ಮಾತನಾಡಿ ಹೇಳಿದ್ದೇನೆಂದರೆ,
10 “你吩咐以色列人说:你们过约旦河,进了迦南地,
೧೦“ನೀನು ಇಸ್ರಾಯೇಲರಿಗೆ ಹೀಗೆ ಆಜ್ಞಾಪಿಸಬೇಕು, ‘ನೀವು ಯೊರ್ದನ್ ನದಿಯನ್ನು ದಾಟಿ ಕಾನಾನ್ ದೇಶವನ್ನು ಸೇರಿದ ನಂತರ,
11 就要分出几座城,为你们作逃城,使误杀人的可以逃到那里。
೧೧ಆಶ್ರಯ ಸ್ಥಾನಗಳಾಗುವುದಕ್ಕೆ ಪಟ್ಟಣಗಳನ್ನು ನೇಮಿಸಬೇಕು. ಕೈತಪ್ಪಿ ಮತ್ತೊಬ್ಬನನ್ನು ಕೊಂದವನು ಅವುಗಳಲ್ಲಿ ಒಂದಕ್ಕೆ ಓಡಿಹೋಗಿ ಸುರಕ್ಷಿತನಾಗಿರಬಹುದು.
12 这些城可以作逃避报仇人的城,使误杀人的不至于死,等他站在会众面前听审判。
೧೨ಅವನು ಸಭೆಯವರಿಂದ ತೀರ್ಪು ಹೊಂದುವುದಕ್ಕಿಂತ ಮೊದಲೇ ಹತವಾದವನ ಸಮೀಪಬಂಧುವಿನಿಂದ ಸಾಯದಂತೆ ಆ ಆಶ್ರಯ ಪಟ್ಟಣಗಳು ನಿಮ್ಮೊಳಗೆ ಇರಬೇಕು.
13 你们所分出来的城,要作六座逃城。
೧೩ಹೀಗೆ ಆರು ಪಟ್ಟಣಗಳನ್ನು ಆಶ್ರಯದ ಪಟ್ಟಣಗಳಾಗಿ ನೇಮಿಸಬೇಕು.
14 在约旦河东要分出三座城,在迦南地也要分出三座城,都作逃城。
೧೪ನೀವು ಯೊರ್ದನ್ ನದಿಯ ಆಚೆಯಲ್ಲಿ ಮೂರು ಮತ್ತು ಕಾನಾನ್ ದೇಶದಲ್ಲಿ ಮೂರು ಪಟ್ಟಣಗಳನ್ನು ನೇಮಿಸಬೇಕು. ಅವು ಆಶ್ರಯದ ಪಟ್ಟಣಗಳಾಗಿ ಇರಬೇಕು.
15 这六座城要给以色列人和他们中间的外人,并寄居的,作为逃城,使误杀人的都可以逃到那里。
೧೫ಕೈತಪ್ಪಿ ಮತ್ತೊಬ್ಬನನ್ನು ಕೊಂದವನು ಇಸ್ರಾಯೇಲನಾಗಲಿ, ಪರದೇಶದವನಾಗಲಿ ಮತ್ತು ನಿಮ್ಮಲ್ಲಿ ಇಳಿದುಕೊಂಡವನಾಗಲಿ ಆ ಆರು ಪಟ್ಟಣಗಳೊಳಗೆ ಒಂದಕ್ಕೆ ಓಡಿಹೋಗಿ ಆಶ್ರಯಹೊಂದಬಹುದು.
16 “倘若人用铁器打人,以致打死,他就是故杀人的;故杀人的必被治死。
೧೬“‘ಯಾವನಾದರೂ ಕಬ್ಬಿಣದ ಆಯುಧದಿಂದ ಮತ್ತೊಬ್ಬನನ್ನು ಹೊಡೆದು ಕೊಂದರೆ ಅವನು ನರಹತ್ಯೆ ಮಾಡಿದವನೆಂದು ನೀವು ನಿರ್ಣಯಿಸಬೇಕು. ಅಂಥವನಿಗೆ ಮರಣಶಿಕ್ಷೆಯಾಗಬೇಕು.
17 若用可以打死人的石头打死了人,他就是故杀人的;故杀人的必被治死。
೧೭ಯಾವನಾದರೂ ಮನುಷ್ಯನನ್ನು ಕೊಲ್ಲುವಷ್ಟು ದೊಡ್ಡ ಕಲ್ಲನ್ನು ಕೈಯಲ್ಲಿ ಹಿಡಿದು ಮತ್ತೊಬ್ಬನನ್ನು ಹೊಡೆದು ಕೊಂದರೆ ಅವನು ನರಹತ್ಯೆ ಮಾಡಿದವನೇ. ಅವನಿಗೆ ಮರಣಶಿಕ್ಷೆಯಾಗಬೇಕು.
18 若用可以打死人的木器打死了人,他就是故杀人的;故杀人的必被治死。
೧೮ಯಾವನಾದರೂ ಮನುಷ್ಯನನ್ನು ಕೊಲ್ಲುವಷ್ಟು ದೊಡ್ಡ ಮರದ ಆಯುಧವನ್ನು ಕೈಯಲ್ಲಿ ಹಿಡಿದು ಮತ್ತೊಬ್ಬನನ್ನು ಹೊಡೆದು ಕೊಂದರೆ ಅವನು ನರಹತ್ಯೆಮಾಡಿದವನೇ. ಅವನಿಗೆ ಮರಣಶಿಕ್ಷೆಯಾಗಬೇಕು.
19 报血仇的必亲自杀那故杀人的,一遇见就杀他。
೧೯ನರಹತ್ಯೆಮಾಡಿದವನು ಎಲ್ಲಿ ಸಿಕ್ಕಿದರೂ ಅವನನ್ನು ಕೊಲ್ಲಬೇಕಾದವನು ಯಾರೆಂದರೆ ಹತವಾದವನ ಸಮೀಪಬಂಧುವೇ.
20 人若因怨恨把人推倒,或是埋伏往人身上扔物,以致于死,
೨೦ಯಾವನಾದರೂ ಮತ್ತೊಬ್ಬನನ್ನು ಹಗೆಮಾಡಿ ನೂಕುವುದರಿಂದಾಗಲಿ, ಸಮಯ ನೋಡಿಕೊಂಡು ಅವನ ಮೇಲೆ ಏನಾದರೂ ಎಸೆಯುವುದರಿಂದಾಗಲಿ,
21 或是因仇恨用手打人,以致于死,那打人的必被治死。他是故杀人的;报血仇的一遇见就杀他。
೨೧ಇಲ್ಲವೆ ದ್ವೇಷದಿಂದ ಕೈಯಾರೆ ಹೊಡೆಯುವುದರಿಂದಾಗಲಿ ಕೊಂದರೆ ಅವನು ನರಹತ್ಯೆಮಾಡಿದವನೇ. ಅವನಿಗೆ ಮರಣಶಿಕ್ಷೆಯಾಗಬೇಕು. ಹತವಾದವನ ಸಮೀಪಬಂಧುವು ಅವನನ್ನು ಎಲ್ಲಿ ಕಂಡರೂ ಕೊಲ್ಲಬೇಕು.
22 “倘若人没有仇恨,忽然将人推倒,或是没有埋伏把物扔在人身上,
೨೨“‘ಆದರೆ ಒಬ್ಬನು ಯಾವ ದ್ವೇಷವೂ ಇಲ್ಲದೆ ಆಕಸ್ಮಾತ್ತಾಗಿ ನೂಕುವುದರಿಂದಾಗಲಿ, ಹಾನಿಮಾಡುವ ಸಮಯವನ್ನು ನೋಡಿಕೊಳ್ಳದೆ ಏನಾದರೂ ಎಸೆಯುವುದರಿಂದಾಗಲಿ,
23 或是没有看见的时候用可以打死人的石头扔在人身上,以致于死,本来与他无仇,也无意害他。
೨೩ಕೊಲ್ಲುವಷ್ಟು ದೊಡ್ಡ ಕಲ್ಲನ್ನು ತಿಳಿಯದೆ ಬೀಳಿಸುವುದರಿಂದಾಗಲಿ ಮತ್ತೊಬ್ಬನು ಸತ್ತರೆ ಅವನು ಆ ಮನುಷ್ಯನಿಗೆ ವೈರಿಯಾಗಿರದೆಯೂ ಹಾನಿಯನ್ನು ಮಾಡಬೇಕೆಂಬ ಅಭಿಪ್ರಾಯವಿಲ್ಲದೆಯೂ ಇದ್ದ ಪಕ್ಷಕ್ಕೆ,
24 会众就要照典章,在打死人的和报血仇的中间审判。
೨೪ಸಭೆಯವರು ಹತ್ಯೆಮಾಡಿದವನಿಗೂ, ಹತವಾದವನ ಸಮೀಪಬಂಧುವಿಗೂ ಈ ಸಂಗತಿಗಳಿಗೆ ಅನುಸಾರವಾಗಿ ನ್ಯಾಯತೀರಿಸಬೇಕು.
25 会众要救这误杀人的脱离报血仇人的手,也要使他归入逃城。他要住在其中,直等到受圣膏的大祭司死了。
೨೫ಸಭೆಯು ಹತ್ಯಮಾಡಿದವನನ್ನು ಆ ಸಮೀಪ ಬಂಧುವಿನ ಕೈಯಿಂದ ತಪ್ಪಿಸಿ ಅವನು ಓಡಿಹೋಗಿದ್ದ ಆಶ್ರಯನಗರಕ್ಕೆ ತಿರುಗಿ ಸೇರಿಸಬೇಕು. ಪಟ್ಟಾಭಿಷೇಕ ಹೊಂದಿದ ಮಹಾಯಾಜಕನು ಜೀವದಿಂದಿರುವ ತನಕ ಅವನು ಆ ಪಟ್ಟಣದಲ್ಲೇ ವಾಸಿಸಬೇಕು.
26 但误杀人的,无论什么时候,若出了逃城的境外,
೨೬“‘ಆ ಹತ್ಯೆಮಾಡಿದವನು ಯಾವಾಗಲಾದರೂ ತಾನು ಓಡಿಹೋಗಿದ್ದು ಆಶ್ರಯಪಟ್ಟಣದ ಮೇರೆಯ ಹೊರಗೆ ಹೋಗಿರುವಾಗ,
27 报血仇的在逃城境外遇见他,将他杀了,报血仇的就没有流血之罪。
೨೭ಹತವಾದವನ ಸಮೀಪಬಂಧುವು ಅವನನ್ನು ಆಶ್ರಯಪಟ್ಟಣದ ಹೊರಗೆ ಕಂಡು ಕೊಂದುಹಾಕಿದರೆ ಅವನು ಕೊಲೆಪಾತಕನಾಗುವುದಿಲ್ಲ.
28 因为误杀人的该住在逃城里,等到大祭司死了。大祭司死了以后,误杀人的才可以回到他所得为业之地。
೨೮ಮಹಾಯಾಜಕನು ಜೀವದಿಂದಿರುವ ತನಕ ಅವನು ಆಶ್ರಯ ಪಟ್ಟಣದೊಳಗೆ ಇರಬೇಕಾಗಿತ್ತು. ಮಹಾಯಾಜಕನು ತೀರಿಹೋದ ನಂತರ ಅವನು ತನ್ನ ಸ್ವಾಸ್ತ್ಯವಿರುವ ಸ್ಥಳಕ್ಕೆ ಹೋಗಬಹುದು.
29 这在你们一切的住处,要作你们世世代代的律例典章。
೨೯“‘ನೀವೂ, ನಿಮ್ಮ ಸಂತತಿಯವರೂ ನಿಮ್ಮ ಎಲ್ಲಾ ವಾಸಸ್ಥಳಗಳಲ್ಲಿ ಈ ಮಾತುಗಳಿಗೆ ಅನುಸಾರವಾಗಿ ನ್ಯಾಯತೀರಿಸಬೇಕು.
30 “无论谁故杀人,要凭几个见证人的口把那故杀人的杀了,只是不可凭一个见证的口叫人死。
೩೦ಯಾವನಾದರೂ ಮತ್ತೊಬ್ಬನನ್ನು ಕೊಂದಾಗ ನೀವು ಸಾಕ್ಷಿಗಳನ್ನು ವಿಚಾರಿಸಿಕೊಂಡು ಅವನಿಗೆ ಮರಣಶಿಕ್ಷೆಯನ್ನು ವಿಧಿಸಬಾರದು.
31 故杀人、犯死罪的,你们不可收赎价代替他的命;他必被治死。
೩೧“‘ಮರಣಶಿಕ್ಷೆಗೆ ಪಾತ್ರನಾದ ಕೊಲೆಪಾತಕನನ್ನು ಉಳಿಸುವುದಕ್ಕೆ ಈಡನ್ನು ತೆಗೆದುಕೊಳ್ಳಬಾರದು. ಅವನಿಗೆ ಮರಣಶಿಕ್ಷೆಯೇ ಆಗಬೇಕು.
32 那逃到逃城的人,你们不可为他收赎价,使他在大祭司未死以先再来住在本地。
೩೨ನೀವು ಆಶ್ರಯಪಟ್ಟಣಕ್ಕೆ ಓಡಿಹೋದವನಿಂದ ಧನವನ್ನು ತೆಗೆದುಕೊಂಡು ಮಹಾಯಾಜಕನು ಜೀವದಿಂದಿರುವಾಗಲೇ ಸ್ವಸ್ಥಳಕ್ಕೆ ಹೋಗಗೊಡಿಸಬಾರದು. ಅವನಿಗೆ ಮರಣಶಿಕ್ಷೆಯೇ ಆಗಬೇಕು.
33 这样,你们就不污秽所住之地,因为血是污秽地的;若有在地上流人血的,非流那杀人者的血,那地就不得洁净。
೩೩“‘ನೀವು ಹೀಗೆ ನಡೆದುಕೊಂಡರೆ ನಿಮ್ಮ ದೇಶವು ಅಪವಿತ್ರವಾಗುವುದಿಲ್ಲ. ರಕ್ತವು ದೇಶವನ್ನು ಅಪವಿತ್ರ ಮಾಡುವುದು. ಕೊಲ್ಲಲ್ಪಟ್ಟವನ ರಕ್ತಕ್ಕಾಗಿ ಕೊಂದವನ ರಕ್ತದಿಂದಲೇ ಹೊರತು ಬೇರೆ ಪ್ರಾಯಶ್ಚಿತ್ತವಿಲ್ಲ.
34 你们不可玷污所住之地,就是我住在其中之地,因为我—耶和华住在以色列人中间。”
೩೪ನೀವು ವಾಸಿಸುವ ದೇಶವನ್ನು ಅಪವಿತ್ರಮಾಡಬಾರದು. ಯೆಹೋವನೆಂಬ ನಾನೇ ಇಸ್ರಾಯೇಲರ ಮಧ್ಯದಲ್ಲಿ ವಾಸಿಸುತ್ತೇನೆ.’”

< 民数记 35 >