< 箴言 10 >

1 所罗门的箴言: 智慧之子使父亲欢乐; 愚昧之子叫母亲担忧。
ಜ್ಞಾನಿಯಾದ ಮಗನಿಂದ ತಂದೆಗೆ ಆನಂದ, ಅಜ್ಞಾನಿಯಾದ ಮಗನಿಂದ ತಾಯಿಗೆ ದುಃಖ.
2 不义之财毫无益处; 惟有公义能救人脱离死亡。
ಅನ್ಯಾಯದ ಸಂಪತ್ತು ವ್ಯರ್ಥ, ಧರ್ಮವು ಮೃತ್ಯುವಿನಿಂದ ರಕ್ಷಿಸುವಂತದ್ದು.
3 耶和华不使义人受饥饿; 恶人所欲的,他必推开。
ಯೆಹೋವನು ನೀತಿವಂತರನ್ನು ಹಸಿವೆಗೊಳಿಸನು, ದುಷ್ಟನ ಆಶೆಯನ್ನು ಭಂಗಪಡಿಸುತ್ತಾನೆ.
4 手懒的,要受贫穷; 手勤的,却要富足。
ಜೋಲುಗೈ ದಾರಿದ್ರ್ಯ, ಚುರುಕು ಕೈ ತರುವುದು ಐಶ್ವರ್ಯ.
5 夏天聚敛的,是智慧之子; 收割时沉睡的,是贻羞之子。
ಸುಗ್ಗಿಯಲ್ಲಿ ಕೂಡಿಸುವವನು ಬುದ್ಧಿವಂತನು, ಕೊಯ್ಲಿನಲ್ಲಿ ತೂಕಡಿಸುವವನು ನಾಚಿಕೆಗೆಟ್ಟವನು.
6 福祉临到义人的头; 强暴蒙蔽恶人的口。
ಶಿಷ್ಟನ ತಲೆ ಆಶೀರ್ವಾದದ ನೆಲೆ, ದುಷ್ಟನ ಬಾಯಿಗೆ ಬಲಾತ್ಕಾರವೇ ಮುಚ್ಚಳ.
7 义人的纪念被称赞; 恶人的名字必朽烂。
ಶಿಷ್ಟರ ಸ್ಮರಣೆಯು ಆಶೀರ್ವಾದಕ್ಕಾಸ್ಪದ, ದುಷ್ಟರ ನಾಮವು ನಿರ್ನಾಮಕಾಸ್ಪದ.
8 心中智慧的,必受命令; 口里愚妄的,必致倾倒。
ಜ್ಞಾನಹೃದಯನು ಆಜ್ಞೆಗಳನ್ನು ಪಾಲಿಸುವನು, ಹರಟೆಯ ಮೂರ್ಖನು ಕೆಡವಲ್ಪಡುವನು.
9 行正直路的,步步安稳; 走弯曲道的,必致败露。
ನಿರ್ದೋಷದ ನಡತೆಯವನು ನಿರ್ಭಯವಾಗಿ ನಡೆಯುವನು, ವಕ್ರಮಾರ್ಗಿಯು ಬೈಲಿಗೆ ಬೀಳುವನು.
10 以眼传神的,使人忧患; 口里愚妄的,必致倾倒。
೧೦ಕಣ್ಣು ಮಿಟಕಿಸುವವನು ಕಷ್ಟಕ್ಕೆ ಕಾರಣನು, ಧೈರ್ಯದಿಂದ ಗದರಿಸುವವನು ಸಮಾಧಾನಕರನು.
11 义人的口是生命的泉源; 强暴蒙蔽恶人的口。
೧೧ಶಿಷ್ಟನ ಬಾಯಿ ಜೀವದ ಬುಗ್ಗೆ, ದುಷ್ಟನ ಬಾಯಲ್ಲಿ ಬಲಾತ್ಕಾರವು ತುಂಬಿ ತುಳುಕುತ್ತದೆ.
12 恨能挑启争端; 爱能遮掩一切过错。
೧೨ದ್ವೇಷವು ಜಗಳಗಳನ್ನೆಬ್ಬಿಸುತ್ತದೆ, ಪ್ರೀತಿಯು ಪಾಪಗಳನ್ನೆಲ್ಲಾ ಮುಚ್ಚುತ್ತದೆ.
13 明哲人嘴里有智慧; 无知人背上受刑杖。
೧೩ವಿವೇಕಿಯ ತುಟಿಗಳಿಂದ ಜ್ಞಾನ, ಬುದ್ಧಿಹೀನನ ಬೆನ್ನಿಗೆ ಬೆತ್ತ.
14 智慧人积存知识; 愚妄人的口速致败坏。
೧೪ಜ್ಞಾನಿಗಳು ತಿಳಿದ ಸಂಗತಿಯನ್ನು ಹೊರಪಡಿಸುವುದಿಲ್ಲ, ಮೂರ್ಖನ ಭಾಷಣ ನಾಶನಕ್ಕೆ ಸಮೀಪ.
15 富户的财物是他的坚城; 穷人的贫乏是他的败坏。
೧೫ಐಶ್ವರ್ಯವಂತನಿಗೆ ಐಶ್ವರ್ಯವು ಬಲವಾದ ಕೋಟೆ, ಬಡವನಿಗೆ ಅವನ ಬಡತನವೇ ನಾಶನ.
16 义人的勤劳致生; 恶人的进项致死。
೧೬ಶಿಷ್ಟನ ದುಡಿತ ಜೀವಾಸ್ಪದ, ದುಷ್ಟನ ಆದಾಯ ಪಾಪಾಸ್ಪದ.
17 谨守训诲的,乃在生命的道上; 违弃责备的,便失迷了路。
೧೭ಶಿಕ್ಷೆಯನ್ನು ಕೈಕೊಳ್ಳುವವನು ಜೀವದ ಮಾರ್ಗವನ್ನು ತೋರಿಸುವನು, ಗದರಿಕೆಯನ್ನು ಕೈಕೊಳ್ಳದವನು ಸನ್ಮಾರ್ಗದಿಂದ ತಪ್ಪಿಸುವನು.
18 隐藏怨恨的,有说谎的嘴; 口出谗谤的,是愚妄的人。
೧೮ಹೊಟ್ಟೆಯಲ್ಲಿ ಹಗೆಯನ್ನಿಟ್ಟುಕೊಂಡವನು ಸುಳ್ಳುಗಾರ, ಚಾಡಿಗಾರನು ಜ್ಞಾನಹೀನ.
19 多言多语难免有过; 禁止嘴唇是有智慧。
೧೯ಮಾತಾಳಿಗೆ ಪಾಪ ತಪ್ಪದು, ಮೌನಿಯು ವಿವೇಕಿ.
20 义人的舌乃似高银; 恶人的心所值无几。
೨೦ಶಿಷ್ಟರ ನಾಲಿಗೆ ಚೊಕ್ಕ ಬೆಳ್ಳಿ, ದುಷ್ಟನ ಹೃದಯ ಮೌಲ್ಯವಿಲ್ಲದ್ದು.
21 义人的口教养多人; 愚昧人因无知而死亡。
೨೧ಶಿಷ್ಟರ ಭಾಷಣ ಬಹುಜನ ಪೋಷಣ, ಬುದ್ಧಿಯ ಕೊರತೆ ಮೂರ್ಖರ ನಾಶನ.
22 耶和华所赐的福使人富足, 并不加上忧虑。
೨೨ಯೆಹೋವನ ಆಶೀರ್ವಾದವು ಭಾಗ್ಯದಾಯಕವು, ಅದು ವ್ಯಸನವನ್ನು ಸೇರಿಸದು.
23 愚妄人以行恶为戏耍; 明哲人却以智慧为乐。
೨೩ಅವಿವೇಕಿಗೆ ಕುಯುಕ್ತಿ ವಿನೋದ ವಿವೇಕಿಗೆ ಜ್ಞಾನ ವಿನೋದ.
24 恶人所怕的,必临到他; 义人所愿的,必蒙应允。
೨೪ದುಷ್ಟನಿಗೆ ಶಂಕಿಸಿದ್ದೇ ಸಂಭವಿಸುವುದು, ಶಿಷ್ಟನಿಗೆ ಇಷ್ಟವು ಲಭಿಸುವುದು.
25 暴风一过,恶人归于无有; 义人的根基却是永久。
೨೫ಬಿರುಗಾಳಿ ಬೀಸಿದರೆ ದುಷ್ಟನು ಎಲ್ಲೋ! ಶಿಷ್ಟನು ಶಾಶ್ವತವಾದ ಕಟ್ಟಡ.
26 懒惰人叫差他的人 如醋倒牙,如烟薰目。
೨೬ಹಲ್ಲುಗಳಿಗೆ ಹುಳಿಯೂ, ಕಣ್ಣುಗಳಿಗೆ ಹೊಗೆಯೂ ಹೇಗೋ, ಯಜಮಾನನಿಗೆ ಸೋಮಾರಿಯು ಹಾಗೆ.
27 敬畏耶和华使人日子加多; 但恶人的年岁必被减少。
೨೭ಯೆಹೋವನಿಗೆ ಭಯಪಡುವವರ ದಿನಗಳಿಗೆ ವೃದ್ಧಿ, ದುಷ್ಟರ ವರ್ಷಗಳು ಅಲ್ಪ.
28 义人的盼望必得喜乐; 恶人的指望必致灭没。
೨೮ಶಿಷ್ಟನ ನಂಬಿಕೆಗೆ ಆನಂದವು ಫಲ, ದುಷ್ಟನ ನಿರೀಕ್ಷೆ ನಿಷ್ಫಲ.
29 耶和华的道是正直人的保障, 却成了作孽人的败坏。
೨೯ಯೆಹೋವನು ಸನ್ಮಾರ್ಗಿಗೆ ಆಶ್ರಯ, ಕೆಡುಕನಿಗೆ ನಾಶನ.
30 义人永不挪移; 恶人不得住在地上。
೩೦ಶಿಷ್ಟರು ಎಂದಿಗೂ ಕದಲರು, ದುಷ್ಟರು ದೇಶದಲ್ಲಿ ನಿಲ್ಲರು.
31 义人的口滋生智慧; 乖谬的舌必被割断。
೩೧ಶಿಷ್ಟನ ಬಾಯಲ್ಲಿ ಜ್ಞಾನವು ಮೊಳೆಯುವುದು, ನೀಚನ ನಾಲಿಗೆ ಕತ್ತರಿಸಲ್ಪಡುವುದು.
32 义人的嘴能令人喜悦; 恶人的口说乖谬的话。
೩೨ಶಿಷ್ಟನ ತುಟಿಯಲ್ಲಿ ಹಿತವಚನ, ದುಷ್ಟನ ಬಾಯಲ್ಲಿ ನೀಚವಚನ.

< 箴言 10 >