< 箴言 3 >
1 我儿,不要忘记我的法则; 你心要谨守我的诫命;
೧ಕಂದಾ, ನನ್ನ ಉಪದೇಶವನ್ನು ಮರೆಯಬೇಡ, ನನ್ನ ಆಜ್ಞೆಗಳನ್ನು ಮನಃಪೂರ್ವಕವಾಗಿ ಕೈಗೊಳ್ಳು.
2 因为它必将长久的日子, 生命的年数与平安,加给你。
೨ಅವು ನಿನ್ನ ದಿನಗಳನ್ನು ಹೆಚ್ಚಿಸಿ, ನಿನ್ನ ಆಯುಷ್ಯವನ್ನು ವೃದ್ಧಿಗೊಳಿಸಿ, ನಿನಗೆ ಸುಕ್ಷೇಮವನ್ನು ಉಂಟುಮಾಡುವವು.
3 不可使慈爱、诚实离开你, 要系在你颈项上,刻在你心版上。
೩ಪ್ರೀತಿ, ಸತ್ಯತೆಗಳು ನಿನ್ನನ್ನು ಬಿಡದಿರಲಿ, ಅವುಗಳನ್ನು ನಿನ್ನ ಕೊರಳಿಗೆ ಕಟ್ಟು, ನಿನ್ನ ಹೃದಯದ ಹಲಗೆಯ ಮೇಲೆ ಅವುಗಳನ್ನು ಬರೆ.
೪ಇದರಿಂದ ನೀನು ದೇವರ ಮತ್ತು ಮನುಷ್ಯರ ದಯೆಯನ್ನೂ, ಸಮ್ಮತಿಯನ್ನೂ ಪಡೆದುಕೊಳ್ಳುವಿ.
೫ಸ್ವಬುದ್ಧಿಯನ್ನೇ ಆಧಾರಮಾಡಿಕೊಳ್ಳದೆ ಪೂರ್ಣಮನಸ್ಸಿನಿಂದ ಯೆಹೋವನಲ್ಲಿ ಭರವಸವಿಡು.
6 在你一切所行的事上都要认定他, 他必指引你的路。
೬ನಿನ್ನ ಎಲ್ಲಾ ನಡವಳಿಕೆಯಲ್ಲಿ ಆತನ ಚಿತ್ತಕ್ಕೆ ವಿಧೇಯನಾಗಿರು; ಆತನೇ ನಿನ್ನ ಮಾರ್ಗಗಳನ್ನು ಸರಾಗಮಾಡುವನು.
೭ನೀನೇ ಬುದ್ಧಿವಂತನು ಎಂದೆಣಿಸದೆ, ಯೆಹೋವನಿಗೆ ಭಯಪಟ್ಟು ಕೆಟ್ಟದ್ದನ್ನು ತೊರೆದುಬಿಡು.
೮ಇದರಿಂದ ನಿನ್ನ ದೇಹಕ್ಕೆ ಆರೋಗ್ಯವೂ, ಎಲುಬುಗಳಿಗೆ ಸಾರವೂ ಉಂಟಾಗುವವು.
೯ನಿನ್ನ ಆದಾಯದಿಂದಲೂ, ಬೆಳೆಯ ಪ್ರಥಮಫಲದಿಂದಲೂ ಯೆಹೋವನನ್ನು ಸನ್ಮಾನಿಸು.
10 这样,你的仓房必充满有余; 你的酒榨有新酒盈溢。
೧೦ಹೀಗೆ ಮಾಡಿದರೆ ನಿನ್ನ ಕಣಜಗಳು ಸಮೃದ್ಧಿಯಿಂದ ತುಂಬುವವು, ತೊಟ್ಟಿಗಳಲ್ಲಿ ದ್ರಾಕ್ಷಾರಸವು ತುಂಬಿ ತುಳುಕುವುದು.
11 我儿,你不可轻看耶和华的管教, 也不可厌烦他的责备;
೧೧ಮಗನೇ, ಯೆಹೋವನ ಶಿಕ್ಷೆಯನ್ನು ತಾತ್ಸಾರ ಮಾಡಬೇಡ. ಆತನು ನಿನ್ನನ್ನು ಗದರಿಸುವಾಗ ಬೇಸರಗೊಳ್ಳಬೇಡ.
12 因为耶和华所爱的,他必责备, 正如父亲责备所喜爱的儿子。
೧೨ತಂದೆಯು ತನ್ನ ಮುದ್ದುಮಗನನ್ನು ಗದರಿಸುವಂತೆ ಯೆಹೋವನು ತಾನು ಪ್ರೀತಿಸುವವನನ್ನೇ ಗದರಿಸುತ್ತಾನೆ.
೧೩ಜ್ಞಾನವನ್ನು ಪಡೆಯುವವನು ಧನ್ಯನು, ವಿವೇಕವನ್ನು ಸಂಪಾದಿಸುವವನು ಭಾಗ್ಯವಂತನು.
೧೪ಅದರ ಲಾಭವು ಬೆಳ್ಳಿಯ ಲಾಭಕ್ಕಿಂತಲೂ, ಅದರಿಂದಾಗುವ ಆದಾಯವು ಬಂಗಾರಕ್ಕಿಂತಲೂ ಅಮೂಲ್ಯವೇ ಸರಿ.
15 比珍珠宝贵; 你一切所喜爱的,都不足与比较。
೧೫ಅದರ ಬೆಲೆಯು ಹವಳಕ್ಕಿಂತಲೂ ಹೆಚ್ಚು, ನಿನ್ನ ಇಷ್ಟವಸ್ತುಗಳೆಲ್ಲವೂ ಅದಕ್ಕೆ ಸಮವಲ್ಲ.
೧೬ಜ್ಞಾನವೆಂಬಾಕೆಯ ಬಲಗೈಯಲ್ಲಿ ದೀರ್ಘಾಯುಷ್ಯವೂ, ಎಡಗೈಯಲ್ಲಿ ಧನವೂ, ಘನತೆಯೂ ಉಂಟು.
೧೭ಆಕೆಯ ದಾರಿಗಳು ಸುಖಕರವಾಗಿವೆ, ಆಕೆಯ ಮಾರ್ಗಗಳೆಲ್ಲಾ ಸಮಾಧಾನವೇ.
18 她与持守她的作生命树; 持定她的,俱各有福。
೧೮ಜ್ಞಾನವು ತನ್ನನ್ನು ಹಿಡಿದುಕೊಳ್ಳುವವರಿಗೆ ಜೀವವೃಕ್ಷವಾಗಿದೆ. ಅದನ್ನು ಅವಲಂಬಿಸುವ ಪ್ರತಿಯೊಬ್ಬನೂ ಧನ್ಯನು.
೧೯ಯೆಹೋವನು ಜ್ಞಾನದ ಮೂಲಕ ಭೂಮಿಯನ್ನು ಸ್ಥಾಪಿಸಿ, ವಿವೇಕದ ಮುಖಾಂತರ ಆಕಾಶಮಂಡಲವನ್ನು ಸ್ಥಿರಪಡಿಸಿದನು.
೨೦ಭೂಮಿಯ ಕೆಳಗಿನ ಸಾಗರವು ಒಡೆದದ್ದಕ್ಕೂ, ಆಕಾಶವು ಇಬ್ಬನಿಯನ್ನು ಸುರಿಸುವುದಕ್ಕೂ ಆತನ ತಿಳಿವಳಿಕೆಯೇ ಸಾಧನ.
21 我儿,要谨守真智慧和谋略, 不可使她离开你的眼目。
೨೧ನನ್ನ ಮಗನೇ, ಸುಜ್ಞಾನವನ್ನೂ ಮತ್ತು ಬುದ್ಧಿಯನ್ನೂ ಭದ್ರವಾಗಿಟ್ಟುಕೋ, ನಿನ್ನ ದೃಷ್ಟಿಯು ಅವುಗಳ ಮೇಲೆ ತಪ್ಪದೇ ಇರಲಿ.
೨೨ಅವು ನಿನಗೆ ಜೀವವೂ, ನಿನ್ನ ಕೊರಳಿಗೆ ಭೂಷಣವೂ ಆಗಿರುವವು.
೨೩ಆಗ ನೀನು ಎಡವದೆ ನಿನ್ನ ಮಾರ್ಗದಲ್ಲಿ ನಿರ್ಭಯವಾಗಿ ನಡೆಯುವಿ.
೨೪ನೀನು ಮಲಗುವಾಗ ಹೆದರಿಕೆ ಇರುವುದಿಲ್ಲ, ಮಲಗಿದ ಮೇಲೆ ಸುಖವಾಗಿ ನಿದ್ರೆಮಾಡುವಿ.
25 忽然来的惊恐,不要害怕; 恶人遭毁灭,也不要恐惧。
೨೫ಪಕ್ಕನೆ ಬರುವ ಅಪಾಯಕ್ಕಾಗಲಿ ಅಥವಾ ದುಷ್ಟರಿಗೆ ಸಂಭವಿಸುವ ನಾಶನಕ್ಕಾಗಲಿ ನೀನು ಅಂಜುವುದೇ ಇಲ್ಲ.
26 因为耶和华是你所倚靠的; 他必保守你的脚不陷入网罗。
೨೬ಯೆಹೋವನು ನಿನ್ನ ಭರವಸಕ್ಕೆ ಆಧಾರನಾಗಿದ್ದು, ನಿನ್ನ ಕಾಲು ಮೋಸದ ಬಲೆಗೆ ಸಿಕ್ಕದಂತೆ ನಿನ್ನನ್ನು ಕಾಪಾಡುವನು.
27 你手若有行善的力量,不可推辞, 就当向那应得的人施行。
೨೭ಉಪಕಾರಮಾಡುವುದಕ್ಕೆ ನಿನ್ನಿಂದ ಸಾಧ್ಯವಾಗುವಾಗ ಹೊಂದತಕ್ಕವರಿಗೆ ಅದನ್ನು ತಪ್ಪಿಸಬೇಡ.
28 你那里若有现成的,不可对邻舍说: 去吧,明天再来,我必给你。
೨೮ಕೊಡತಕ್ಕದ್ದು ನಿನ್ನಲ್ಲಿದ್ದರೆ ನೆರೆಯವನಿಗೆ, “ಹೋಗಿ ಬಾ, ನಾಳೆ ಕೊಡುತ್ತೇನೆ” ಎಂದು ಹೇಳಬೇಡ.
೨೯ನೆರೆಯವನಿಗೆ ಕೇಡನ್ನು ಕಲ್ಪಿಸಬಾರದು, ಅವನು ನಿನ್ನ ಪಕ್ಕದಲ್ಲಿ ನಂಬಿಕೆಯಿಂದ ವಾಸಮಾಡುತ್ತಾನಲ್ಲವೇ?
೩೦ನಿನಗೆ ಅಪಕಾರ ಮಾಡದವನ ಸಂಗಡ ಸುಮ್ಮನೆ ಜಗಳವಾಡಬೇಡ.
೩೧ಬಲಾತ್ಕಾರಿಯನ್ನು ನೋಡಿ ಹೊಟ್ಟೆಕಿಚ್ಚುಪಡದಿರು, ಅವನ ನಡತೆಯನ್ನು ಎಷ್ಟು ಮಾತ್ರಕ್ಕೂ ಅನುಸರಿಸಬೇಡ.
32 因为,乖僻人为耶和华所憎恶; 正直人为他所亲密。
೩೨ವಕ್ರಬುದ್ಧಿಯವನು ಯೆಹೋವನಿಗೆ ಅಸಹ್ಯನು, ಯಥಾರ್ಥರಿಗೆ ಆತನ ಸ್ನೇಹವು ದೊರೆಯುವುದು.
೩೩ಯೆಹೋವನು ದುಷ್ಟನ ಮನೆಯನ್ನು ಶಪಿಸುವನು, ನೀತಿವಂತರ ನಿವಾಸವನ್ನೋ ಆಶೀರ್ವದಿಸುವನು.
೩೪ಯಾರು ಧರ್ಮವನ್ನು ತಿರಸ್ಕರಿಸುವರೋ ಅವರನ್ನು ಆತನು ತಿರಸ್ಕರಿಸುವನು. ದೀನರಿಗಾದರೋ ತನ್ನ ಕೃಪೆಯನ್ನು ಅನುಗ್ರಹಿಸುವನು.
೩೫ಜ್ಞಾನವಂತರು ಸನ್ಮಾನಕ್ಕೆ ಬಾಧ್ಯರಾಗುವರು, ಜ್ಞಾನಹೀನರಿಗಾಗುವ ಬಹುಮಾನವು ಅವಮಾನವೇ.