< 诗篇 11 >

1 大卫的诗,交与伶长。 我是投靠耶和华; 你们怎么对我说:你当像鸟飞往你的山去。
ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ದಾವೀದನದು. ನಾನು ಯೆಹೋವನನ್ನು ಆಶ್ರಯಿಸಿಕೊಂಡಿದ್ದೇನೆ. ನೀವು, “ಪಕ್ಷಿಗಳಂತೆ ನಿಮ್ಮ ಬೆಟ್ಟಗಳಿಗೆ ಓಡಿಹೋಗಿರಿ” ಎಂದು ಹೇಳುವುದೇಕೆ?
2 看哪,恶人弯弓,把箭搭在弦上, 要在暗中射那心里正直的人。
ದುಷ್ಟರು ಕತ್ತಲಲ್ಲಿ ಯಥಾರ್ಥ ಹೃದಯವುಳ್ಳವರನ್ನು ಕೊಲ್ಲಬೇಕೆಂದು ಬಿಲ್ಲುಬೊಗ್ಗಿಸಿ, ಹೆದೆಗೆ ಬಾಣವನ್ನು ಹೂಡಿದ್ದಾರೆ ನೋಡಿರಿ.
3 根基若毁坏, 义人还能做什么呢?
ಆಧಾರಗಳೇ ಕೆಡವಲ್ಪಟ್ಟ ಮೇಲೆ ನೀತಿವಂತನ ಗತಿ ಏನಾದೀತು?
4 耶和华在他的圣殿里; 耶和华的宝座在天上; 他的慧眼察看世人。
ಯೆಹೋವನು ತನ್ನ ಪರಿಶುದ್ಧಮಂದಿರದಲ್ಲಿದ್ದಾನೆ; ಆತನು ತನ್ನ ಸಿಂಹಾಸನವನ್ನು ಪರಲೋಕದಲ್ಲಿ ಸ್ಥಾಪಿಸಿದ್ದಾನೆ. ಆತನ ಕಣ್ಣುಗಳು ಮಾನವರನ್ನು ನೋಡುತ್ತವೆ; ಆತನು ಅವರನ್ನು ಬಹು ಸೂಕ್ಷ್ಮವಾಗಿ ಪರಿಶೋಧಿಸುತ್ತಾನೆ.
5 耶和华试验义人; 惟有恶人和喜爱强暴的人,他心里恨恶。
ಯೆಹೋವನು ನೀತಿವಂತರನ್ನು ಮತ್ತು ಅನೀತಿವಂತರನ್ನು ಪರೀಕ್ಷಿಸುತ್ತಾನೆ; ಬಲಾತ್ಕಾರವನ್ನು ಪ್ರೀತಿಸುವವರನ್ನು ಆತನು ದ್ವೇಷಿಸುತ್ತಾನೆ.
6 他要向恶人密布网罗; 有烈火、硫磺、热风,作他们杯中的分。
ಆತನು ದುಷ್ಟರ ಮೇಲೆ ಬೆಂಕಿ ಗಂಧಕಗಳನ್ನು ಸುರಿಸಲಿ. ಉರಿಗಾಳಿಗಳನ್ನು ಅವರಿಗೆ ಪಾನವಾಗಮಾಡಲಿ.
7 因为耶和华是公义的,他喜爱公义; 正直人必得见他的面。
ಏಕೆಂದರೆ ನೀತಿಸ್ವರೂಪನಾದ ಯೆಹೋವನು ನೀತಿಯನ್ನು ಮೆಚ್ಚುವವನಾಗಿದ್ದಾನೆ. ಸಜ್ಜನರು ಆತನ ಸಾನ್ನಿಧ್ಯವನ್ನು ಸೇರುವರು.

< 诗篇 11 >