< 诗篇 115 >

1 耶和华啊,荣耀不要归与我们, 不要归与我们; 要因你的慈爱和诚实归在你的名下!
ದಾವೀದನ ಕೀರ್ತನೆ. ನಮ್ಮನ್ನಲ್ಲ, ಯೆಹೋವನೇ, ನಮ್ಮನ್ನಲ್ಲ, ನಿನ್ನ ಪ್ರೀತಿ, ಸತ್ಯತೆಗಳ ನಿಮಿತ್ತವಾಗಿ ನಿನ್ನ ಹೆಸರನ್ನೇ ಘನಪಡಿಸು.
2 为何容外邦人说: 他们的 神在哪里呢?
“ಅವರ ದೇವರು ಎಲ್ಲಿದ್ದಾನೆ?” ಎಂದು ಅನ್ಯರು ಏಕೆ ಹೇಳಬೇಕು?
3 然而,我们的 神在天上, 都随自己的意旨行事。
ನಮ್ಮ ದೇವರು ಪರಲೋಕದಲ್ಲಿದ್ದಾನೆ; ಆತನು ತನಗೆ ಬೇಕಾದುದನ್ನೆಲ್ಲಾ ಮಾಡುತ್ತಾನೆ.
4 他们的偶像是金的,银的, 是人手所造的,
ಅವರ ವಿಗ್ರಹಗಳೋ ಬೆಳ್ಳಿ ಬಂಗಾರದವುಗಳೇ; ಅವು ಮನುಷ್ಯರ ಕೈಕೆಲಸವಷ್ಟೇ.
5 有口却不能言, 有眼却不能看,
ಅವು ಬಾಯಿದ್ದರೂ ಮಾತನಾಡುವುದಿಲ್ಲ; ಕಣ್ಣಿದ್ದರೂ ನೋಡುವುದಿಲ್ಲ.
6 有耳却不能听, 有鼻却不能闻,
ಕಿವಿಯಿದ್ದರೂ ಕೇಳುವುದಿಲ್ಲ; ಮೂಗಿದ್ದರೂ ಮೂಸುವುದಿಲ್ಲ.
7 有手却不能摸, 有脚却不能走, 有喉咙也不能出声。
ಕೈಯುಂಟು ಮುಟ್ಟುವುದಿಲ್ಲ; ಕಾಲುಂಟು ನಡೆಯುವುದಿಲ್ಲ; ಅವುಗಳ ಗಂಟಲಲ್ಲಿ ಶಬ್ದವೇ ಇಲ್ಲ.
8 造他的要和他一样; 凡靠他的也要如此。
ಅವುಗಳನ್ನು ಮಾಡುವವರೂ, ಅವುಗಳಲ್ಲಿ ಭರವಸವಿಡುವವರೂ ಅವುಗಳಂತೆಯೇ.
9 以色列啊,你要倚靠耶和华! 他是你的帮助和你的盾牌。
ಇಸ್ರಾಯೇಲರೇ, ಯೆಹೋವನಲ್ಲಿ ಭರವಸವಿಡಿರಿ. ಅವರ ಸಹಾಯಕನು, ಗುರಾಣಿಯು ಆತನೇ.
10 亚伦家啊,你们要倚靠耶和华! 他是你们的帮助和你们的盾牌。
೧೦ಆರೋನನ ಮನೆತನದವರೇ, ಯೆಹೋವನಲ್ಲಿ ಭರವಸವಿಡಿರಿ. ಅವರ ಸಹಾಯಕನು, ಗುರಾಣಿಯು ಆತನೇ.
11 你们敬畏耶和华的,要倚靠耶和华! 他是你们的帮助和你们的盾牌。
೧೧ಯೆಹೋವನ ಭಕ್ತರೇ, ಯೆಹೋವನಲ್ಲಿ ಭರವಸವಿಡಿರಿ. ಅವರ ಸಹಾಯಕನು, ಗುರಾಣಿಯು ಆತನೇ.
12 耶和华向来眷念我们; 他还要赐福给我们: 要赐福给以色列的家, 赐福给亚伦的家。
೧೨ಯೆಹೋವನು ನಮ್ಮನ್ನು ನೆನಪುಮಾಡಿಕೊಂಡಿದ್ದಾನೆ; ಸಣ್ಣವರು ಮೊದಲುಗೊಂಡು ದೊಡ್ಡವರ ವರೆಗೆ ಎಲ್ಲರನ್ನೂ ಆಶೀರ್ವದಿಸುವನು.
13 凡敬畏耶和华的,无论大小, 主必赐福给他。
೧೩ಇಸ್ರಾಯೇಲನ ಮನೆತನದವರನ್ನು ಆಶೀರ್ವದಿಸುವನು; ಆರೋನನ ಮನೆತನದವರನ್ನು ಆಶೀರ್ವದಿಸುವನು. ತನ್ನ ಭಕ್ತರನ್ನು ಆಶೀರ್ವದಿಸುವನು.
14 愿耶和华叫你们 和你们的子孙日见加增。
೧೪ಯೆಹೋವನು ನಿಮ್ಮನ್ನೂ, ನಿಮ್ಮ ಮಕ್ಕಳನ್ನೂ ಅಭಿವೃದ್ಧಿಪಡಿಸಲಿ;
15 你们蒙了造天地之耶和华的福!
೧೫ಯೆಹೋವನಿಂದ ನಿಮಗೆ ಆಶೀರ್ವಾದವಾಗಲಿ. ಆತನು ಭೂಪರಲೋಕಗಳನ್ನು ಉಂಟುಮಾಡಿದ್ದಾನೆ.
16 天,是耶和华的天; 地,他却给了世人。
೧೬ಪರಲೋಕವು ಯೆಹೋವನದು; ಭೂಲೋಕವನ್ನು ಮಾನವ ಸಂತಾನಕ್ಕೆ ಕೊಟ್ಟಿದ್ದಾನೆ.
17 死人不能赞美耶和华; 下到寂静中的也都不能。
೧೭ಸತ್ತವರು ಯೆಹೋವನನ್ನು ಸ್ತುತಿಸುವುದಿಲ್ಲ; ಮೌನಲೋಕವನ್ನು ಸೇರಿದವರಲ್ಲಿ ಯಾರೂ ಆತನನ್ನು ಕೀರ್ತಿಸುವುದಿಲ್ಲ.
18 但我们要称颂耶和华, 从今时直到永远。 你们要赞美耶和华!
೧೮ನಾವೋ ಇಂದಿನಿಂದ ಸದಾಕಾಲವೂ ಯೆಹೋವನನ್ನು ಕೊಂಡಾಡುವೆವು. ಯೆಹೋವನಿಗೆ ಸ್ತೋತ್ರ!

< 诗篇 115 >