< 诗篇 129 >
1 上行之诗。 以色列当说:从我幼年以来, 敌人屡次苦害我,
ಯಾತ್ರಾ ಗೀತೆ. “ನನ್ನ ಯೌವನದಿಂದ ನನ್ನನ್ನು ಶತ್ರುಗಳು ಬಹಳ ಬಾಧಿಸಿದ್ದಾರೆ,” ಎಂದು ಇಸ್ರಾಯೇಲು ಹೇಳಲಿ.
2 从我幼年以来,敌人屡次苦害我, 却没有胜了我。
“ನನ್ನ ಯೌವನದಿಂದ ವೈರಿಗಳು ನನ್ನ ಮೇಲೆ ದಬ್ಬಾಳಿಕೆ ಮಾಡಿದರು; ಆದರೆ ಅವರು ನನ್ನ ಮೇಲೆ ವಿಜಯ ಸಾಧಿಸಲಿಲ್ಲ.
ಊಳುವವರು ನನ್ನ ಬೆನ್ನಿನ ಮೇಲೆ ಉತ್ತಿದರು, ಉದ್ದವಾದ ಗಾಯಗೆರೆಗಳನ್ನು ಮಾಡಿದರು
ಆದರೆ ಯೆಹೋವ ದೇವರು ನೀತಿವಂತರು; ದುಷ್ಟರು ಹಾಕಿದ ಬಂಧಗಳನ್ನು ದೇವರು ಕಡಿದು, ನಮ್ಮನ್ನು ಬಿಡುಗಡೆ ಮಾಡಿದ್ದಾರೆ.”
ಚೀಯೋನನ್ನು ದ್ವೇಷಿಸುವವರೆಲ್ಲರು ನಾಚಿಕೆಪಟ್ಟು ಹಿಂದಿರುಗಲಿ.
ಅವರು ಮಾಳಿಗೆ ಮೇಲಿನ ಹುಲ್ಲಿನಂತೆ ಆಗಲಿ. ಅವು ಬೆಳೆಯುವುದಕ್ಕೆ ಮುಂಚೆ ಒಣಗಿ ಹೋಗುತ್ತದೆ.
ಅದರಿಂದ ಕೊಯ್ಯುವವನು ತನ್ನ ಕೈ ತುಂಬಿಸಿಕೊಳ್ಳನು, ಸಿವುಡು ಕಟ್ಟುವವನು ತನ್ನ ಉಡಿಯನ್ನೂ ತುಂಬಿಸಿಕೊಳ್ಳಲಾರನು.
8 过路的也不说: 愿耶和华所赐的福归与你们! 我们奉耶和华的名给你们祝福!
“ಯೆಹೋವ ದೇವರ ಆಶೀರ್ವಾದವು ನಿಮ್ಮ ಮೇಲೆ ಇರಲಿ; ಯೆಹೋವ ದೇವರು ಹೆಸರಿನಲ್ಲಿ ನಿಮ್ಮನ್ನು ಆಶೀರ್ವದಿಸುತ್ತೇವೆ,” ಎಂದು ಹಾದುಹೋಗುವವರು ಹೇಳದಿರಲಿ.