< 诗篇 137 >

1 我们曾在巴比伦的河边坐下, 一追想锡安就哭了。
ಬಾಬಿಲೋನಿನ ನದಿಗಳ ಹತ್ತಿರ ನಾವು ಕುಳಿತುಕೊಂಡು, ಚೀಯೋನನ್ನು ಜ್ಞಾಪಕ ಮಾಡಿಕೊಂಡಾಗ ಅತ್ತೆವು.
2 我们把琴挂在那里的柳树上;
ಅದರ ನಡುವೆ ಇರುವ ನೀರವಂಜಿ ಮರಗಳ ಮೇಲೆ ನಮ್ಮ ಕಿನ್ನರಿಗಳನ್ನು ತೂಗು ಹಾಕಿದೆವು.
3 因为在那里,掳掠我们的要我们唱歌, 抢夺我们的要我们作乐,说: 给我们唱一首锡安歌吧!
ಏಕೆಂದರೆ ಅಲ್ಲಿ ನಮ್ಮನ್ನು ಸೆರೆಹಿಡಿದು ಬಂಧಿಸಿದವರು, ನಮಗೆ ಹಾಡನ್ನು ಹಾಡಲು ಹೇಳಿದ್ದರು; ನಮ್ಮನ್ನು ಪೀಡಿಸುವವರು ವಿನೋದಕ್ಕಾಗಿ ಹಾಡನ್ನು ಕೇಳಲು ಬಯಸಿದ್ದರು; “ಚೀಯೋನಿನ ಹಾಡುಗಳಲ್ಲಿ ಒಂದು ನಮಗೆ ಹಾಡಿರಿ,” ಎಂದರು.
4 我们怎能在外邦唱耶和华的歌呢?
ಅನ್ಯದೇಶದಲ್ಲಿ ನಾವು ಯೆಹೋವ ದೇವರ ಹಾಡುಗಳನ್ನು ಹಾಡುವುದು ಹೇಗೆ?
5 耶路撒冷啊,我若忘记你, 情愿我的右手忘记技巧!
ಯೆರೂಸಲೇಮೇ, ನಾನು ನಿನ್ನನ್ನು ಮರೆತುಬಿಟ್ಟರೆ, ನನ್ನ ಬಲಗೈಯ ಕೌಶಲ್ಯ ಮರೆತು ಹೋಗಲಿ.
6 我若不记念你, 若不看耶路撒冷过于我所最喜乐的, 情愿我的舌头贴于上膛!
ನಾನು ನಿನ್ನನ್ನು ಜ್ಞಾಪಕಮಾಡಿಕೊಳ್ಳದಿದ್ದರೆ, ಯೆರೂಸಲೇಮನ್ನು ನನ್ನ ಎಲ್ಲಾ ಸಂತೋಷಕ್ಕಿಂತಲೂ ಹೆಚ್ಚಾಗಿಡದಿದ್ದರೆ, ನನ್ನ ನಾಲಿಗೆಯು ಸೇದಿಹೋಗಲಿ.
7 耶路撒冷遭难的日子, 以东人说:拆毁!拆毁! 直拆到根基! 耶和华啊,求你记念这仇!
ಯೆರೂಸಲೇಮು ಬಿದ್ದುಹೋದ ದಿವಸದಲ್ಲಿ, “ಹಾಳುಮಾಡಿರಿ, ಅದರ ಅಸ್ತಿವಾರದವರೆಗೆ ಹಾಳುಮಾಡಿರಿ,” ಎಂದು ಹೇಳಿದ ಎದೋಮಿನವರನ್ನು ಯೆಹೋವ ದೇವರೇ ಜ್ಞಾಪಕಮಾಡಿಕೊಳ್ಳಿರಿ.
8 将要被灭的巴比伦城啊, 报复你像你待我们的,那人便为有福!
ಹಾಳಾಗಲಿಕ್ಕಿರುವ ಬಾಬಿಲೋನ್ ನಗರವೇ, ನೀನು ನಮಗೆ ಮಾಡಿದ್ದಕ್ಕೆ ಪ್ರತೀಕಾರವನ್ನು ನಿನಗೆ ಸಲ್ಲಿಸುವವನು ಧನ್ಯನು.
9 拿你的婴孩摔在磐石上的, 那人便为有福!
ನಿಮ್ಮ ಚಿಕ್ಕ ಕೂಸುಗಳನ್ನು ಹಿಡಿದು, ಬಂಡೆಗಳ ಮೇಲೆ ಅಪ್ಪಳಿಸಿ ಬಿಡುವವನು ಧನ್ಯನು.

< 诗篇 137 >