< 诗篇 27 >

1 大卫的诗。 耶和华是我的亮光,是我的拯救, 我还怕谁呢? 耶和华是我性命的保障, 我还惧谁呢?
ದಾವೀದನ ಕೀರ್ತನೆ. ಯೆಹೋವ ದೇವರು ನನ್ನ ಬೆಳಕೂ ನನ್ನ ರಕ್ಷಣೆಯೂ ಆಗಿದ್ದಾರೆ. ನಾನು ಯಾರಿಗೂ ಭಯಪಡೆನು? ಯೆಹೋವ ದೇವರು ನನ್ನ ಜೀವದ ಭದ್ರಾಶ್ರಯವಾಗಿದ್ದಾರೆ. ನಾನು ಯಾರಿಗೂ ಹೆದರೆನು?
2 那作恶的就是我的仇敌, 前来吃我肉的时候就绊跌仆倒。
ದುಷ್ಟರು ನನ್ನನ್ನು ಬೀಳಿಸಬೇಕೆಂದು ನನಗೆ ವಿರೋಧವಾಗಿ ಸಮೀಪಿಸುವಾಗ, ನನ್ನ ವೈರಿಗಳು ತಾವೇ ಎಡವಿಬಿದ್ದರು.
3 虽有军兵安营攻击我,我的心也不害怕; 虽然兴起刀兵攻击我,我必仍旧安稳。
ನನಗೆ ವಿರೋಧವಾಗಿ ಇಳಿದರೂ ನನ್ನ ಹೃದಯವು ಭಯಪಡದು; ನನ್ನ ಮೇಲೆ ಯುದ್ಧ ಸೈನ್ಯವು ನಡೆದರೂ ನಾನು ಭರವಸೆಯಿಂದಿರುವೆನು.
4 有一件事,我曾求耶和华,我仍要寻求: 就是一生一世住在耶和华的殿中, 瞻仰他的荣美,在他的殿里求问。
ಯೆಹೋವ ದೇವರ ಮನೆಯಲ್ಲಿ ನಾನು ಜೀವಮಾನವೆಲ್ಲಾ ವಾಸಮಾಡುತ್ತಾ, ಅದರ ದಯೆಯನ್ನು ನೋಡುತ್ತಾ ಅವರ ಮಂದಿರದಲ್ಲಿ ಅವರನ್ನೇ ಧ್ಯಾನಿಸುತ್ತಾ ಇರಬೇಕೆಂಬ ಒಂದೇ ವರವನ್ನು ಯೆಹೋವ ದೇವರಿಂದ ಕೇಳಿಕೊಂಡು ಅದನ್ನೇ ಹುಡುಕುತ್ತಿರುವೆನು.
5 因为我遭遇患难,他必暗暗地保守我; 在他亭子里,把我藏在他帐幕的隐密处, 将我高举在磐石上。
ಕೇಡಿನ ಸಮಯದಲ್ಲಿ ಯೆಹೋವ ದೇವರು ನನ್ನನ್ನು ತಮ್ಮ ಗುಡಾರದಲ್ಲಿ ಬಚ್ಚಿಡುವರು. ತಮ್ಮ ಪರಿಶುದ್ಧ ಗುಡಾರದಲ್ಲಿ ನನ್ನನ್ನು ಮರೆಮಾಡುವರು. ಎತ್ತರವಾದ ಬಂಡೆಯ ಮೇಲೆ ನನ್ನನ್ನು ನಿಲ್ಲಿಸುವರು.
6 现在我得以昂首,高过四面的仇敌。 我要在他的帐幕里欢然献祭; 我要唱诗歌颂耶和华。
ಈಗ ನನ್ನ ತಲೆಯು ನನ್ನ ಸುತ್ತಲಿರುವ ನನ್ನ ಶತ್ರುಗಳ ಮೇಲೆ ಎತ್ತಲಾಗಿರುವುದು, ಆದ್ದರಿಂದ ದೇವರ ಗುಡಾರದಲ್ಲಿ ಉತ್ಸಾಹದಿಂದ ಬಲಿಗಳನ್ನು ಅರ್ಪಿಸುವೆನು; ಯೆಹೋವ ದೇವರಿಗೆ ಹಾಡಿ ಕೊಂಡಾಡುವೆನು.
7 耶和华啊,我用声音呼吁的时候,求你垂听; 并求你怜恤我,应允我。
ಯೆಹೋವ ದೇವರೇ, ನಾನು ಕೂಗುವ ಸ್ವರವನ್ನು ಕೇಳಿರಿ; ನನ್ನನ್ನು ಕರುಣಿಸಿ ಉತ್ತರವನ್ನು ಕೊಡಿರಿ.
8 你说:你们当寻求我的面。 那时我心向你说:耶和华啊, 你的面我正要寻求。
ನಿಮ್ಮ ಬಗ್ಗೆ ನನ್ನ ಹೃದಯವು ಹೀಗೆ ಹೇಳುತ್ತದೆ: “ದೇವರ ಮುಖವನ್ನು ಹುಡುಕು,” ಆದ್ದರಿಂದ ಯೆಹೋವ ದೇವರೇ, ನಿಮ್ಮ ಮುಖವನ್ನೇ ಹುಡುಕುತ್ತಿರುವೆನು.
9 不要向我掩面。 不要发怒赶逐仆人, 你向来是帮助我的。 救我的 神啊,不要丢掉我, 也不要离弃我。
ನಿಮ್ಮ ಮುಖವನ್ನು ನನಗೆ ಮರೆಮಾಡಬೇಡಿರಿ; ನಿಮ್ಮ ಸೇವಕನಾದ ನನ್ನನ್ನು ತಳ್ಳಬೇಡಿರಿ; ನೀವೇ ನನಗೆ ಸಹಾಯಕರಾಗಿದ್ದೀರಿ; ನನ್ನ ರಕ್ಷಕ ಆಗಿರುವ ದೇವರೇ, ನನ್ನನ್ನು ತ್ಯಜಿಸಬೇಡಿರಿ. ನನ್ನನ್ನು ಬಿಟ್ಟುಬಿಡಬೇಡಿರಿ.
10 我父母离弃我, 耶和华必收留我。
ನನ್ನ ತಂದೆತಾಯಂದಿರು ನನ್ನನ್ನು ಬಿಟ್ಟುಬಿಟ್ಟರೂ, ಯೆಹೋವ ದೇವರು ನನ್ನನ್ನು ಸೇರಿಸಿಕೊಳ್ಳುವರು.
11 耶和华啊,求你将你的道指教我, 因我仇敌的缘故引导我走平坦的路。
ಯೆಹೋವ ದೇವರೇ, ನಿಮ್ಮ ಮಾರ್ಗವನ್ನು ನನಗೆ ಬೋಧಿಸಿರಿ; ನನ್ನ ವಿರೋಧಿಗಳ ನಿಮಿತ್ತ ಸಮಹಾದಿಯಲ್ಲಿ ನನ್ನನ್ನು ನಡೆಸಿರಿ.
12 求你不要把我交给敌人,遂其所愿; 因为妄作见证的和口吐凶言的,起来攻击我。
ನನ್ನ ವೈರಿಗಳ ವಶಕ್ಕೆ ನನ್ನನ್ನು ಕೊಡಬೇಡಿರಿ; ಸುಳ್ಳುಸಾಕ್ಷಿಗಳೂ ಕ್ರೂರ ನಿಂದಕರೂ ನನಗೆ ವಿರೋಧವಾಗಿ ಎದ್ದಿದ್ದಾರೆ.
13 我若不信在活人之地得见耶和华的恩惠, 就早已丧胆了。
ಇದೊಂದು ನನ್ನ ಭರವಸೆಯಾಗಿರುವುದು: ನಾನಂತೂ ಯೆಹೋವ ದೇವರ ಒಳಿತನ್ನು ಜೀವಿತರ ದೇಶದಲ್ಲಿ ಕಾಣುವೆನು.
14 要等候耶和华! 当壮胆,坚固你的心! 我再说,要等候耶和华!
ಯೆಹೋವ ದೇವರಿಗಾಗಿ ಕಾದಿರು, ಧೈರ್ಯವಾಗಿರು; ಅವರು ನಿನ್ನ ಹೃದಯವನ್ನು ದೃಢಪಡಿಸುವರು; ಯೆಹೋವ ದೇವರಿಗಾಗಿ ಕಾದಿರು.

< 诗篇 27 >