< 诗篇 29 >
1 大卫的诗。 神的众子啊,你们要将荣耀、能力归给耶和华, 归给耶和华!
೧ದಾವೀದನ ಕೀರ್ತನೆ. ದೇವದೂತರುಗಳಿರಾ, ಪರಮಪ್ರಭಾವವು, ಯೆಹೋವನದೇ, ಯೆಹೋವನದೇ ಎಂದು ಹೇಳಿ ಕೊಂಡಾಡಿರಿ.
2 要将耶和华的名所当得的荣耀归给他, 以圣洁的妆饰敬拜耶和华。
೨ಯೆಹೋವನ ನಾಮಕ್ಕೆ ಯೋಗ್ಯವಾದ ಘನತೆಯನ್ನು ಸಲ್ಲಿಸಿರಿ; ಪರಿಶುದ್ಧತ್ವವೆಂಬ ಭೂಷಣದೊಡನೆ ಯೆಹೋವನಿಗೆ ಅಡ್ಡಬೀಳಿರಿ.
3 耶和华的声音发在水上; 荣耀的 神打雷, 耶和华打雷在大水之上。
೩ಯೆಹೋವನ ಮಹಾಧ್ವನಿಯು ಮೇಘಮಂಡಲದಲ್ಲಿ ಕೇಳಿಸುತ್ತದೆ; ಪ್ರಭಾವಸ್ವರೂಪನಾದ ದೇವರು ಗುಡುಗುತ್ತಾನೆ; ಯೆಹೋವನು ಆಕಾಶದ ಜಲರಾಶಿಗಳ ಮೇಲೆ ಇದ್ದಾನೆ.
4 耶和华的声音大有能力; 耶和华的声音满有威严。
೪ಯೆಹೋವನ ಧ್ವನಿಯು ಎಷ್ಟೋ ಬಲವುಳ್ಳದ್ದು, ಎಷ್ಟೋ ಗಂಭೀರವಾದದ್ದು.
5 耶和华的声音震破香柏树; 耶和华震碎黎巴嫩的香柏树。
೫ಯೆಹೋವನ ಗರ್ಜನೆಗೆ ದೇವದಾರು ವೃಕ್ಷಗಳು ದಡಲ್ ಎಂದು ಮುರಿದು ಬೀಳುತ್ತವೆ; ಯೆಹೋವನು ಲೆಬನೋನ್ ಪರ್ವತದಲ್ಲಿನ ಮಹಾದೇವದಾರುಗಳನ್ನೂ ಮುರಿದುಬಿಡುತ್ತಾನೆ.
6 他也使之跳跃如牛犊, 使黎巴嫩和西连跳跃如野牛犊。
೬ಲೆಬನೋನ್ ಪರ್ವತವು ಕರುವಿನೋಪಾದಿಯಲ್ಲಿಯೂ, ಸಿರ್ಯೋನ್ ಬೆಟ್ಟವು ಕಾಡುಕೋಣದ ಮರಿಯಂತೆಯೂ ಹಾರಾಡುವ ಹಾಗೆ ಮಾಡುತ್ತಾನೆ.
೭ಯೆಹೋವನ ಗರ್ಜನೆಗೆ ಮಿಂಚುಗಳು ಥಳಥಳನೆ ಹೊಳೆಯುತ್ತವೆ.
8 耶和华的声音震动旷野; 耶和华震动加低斯的旷野。
೮ಯೆಹೋವನ ಗರ್ಜನೆಗೆ ಕಾಡು ಹೊರಳಾಡುತ್ತದೆ; ಕಾದೇಶ್ ಅರಣ್ಯವು ಕಂಪಿಸುತ್ತದೆ.
9 耶和华的声音惊动母鹿落胎, 树木也脱落净光。 凡在他殿中的,都称说他的荣耀。
೯ಯೆಹೋವನ ಗರ್ಜನೆಯು ದೇವದಾರು ಮರಗಳನ್ನು ಕದಲಿಸುತ್ತದೆ; ಕಾಡಿನ ಮರಗಳು ಬರಿದಾಗುತ್ತವೆ. ಆಗ ಆತನ ಮಂದಿರದಲ್ಲಿರುವವರೆಲ್ಲರು, “ಎಷ್ಟೋ ಪ್ರಭಾವ!” ಎನ್ನುತ್ತಾರೆ.
10 洪水泛滥之时,耶和华坐着为王; 耶和华坐着为王,直到永远。
೧೦ಯೆಹೋವನು ಜಲಪ್ರಳಯದಲ್ಲಿ ಆಸೀನನಾಗಿರುವನು; ಆತನು ಸದಾಕಾಲವೂ ಅರಸನಾಗಿ ಕುಳಿತಿರುವನು.
11 耶和华必赐力量给他的百姓; 耶和华必赐平安的福给他的百姓。
೧೧ಯೆಹೋವನು ತನ್ನ ಜನರಿಗೆ ಬಲವನ್ನು ಅನುಗ್ರಹಿಸುವನು; ಆತನು ತನ್ನ ಪ್ರಜೆಗೆ ಸುಕ್ಷೇಮವನ್ನು ದಯಪಾಲಿಸುವನು.