< 诗篇 32 >
1 大卫的训诲诗。 得赦免其过、遮盖其罪的, 这人是有福的!
೧ದಾವೀದನ ಪದ್ಯ. ಯಾರ ದ್ರೋಹವು ಪರಿಹಾರವಾಗಿದೆಯೋ, ಯಾರ ಪಾಪವು ಕ್ಷಮಿಸಲ್ಪಟ್ಟಿದೆಯೋ ಅವನೇ ಧನ್ಯನು.
2 凡心里没有诡诈、耶和华不算为有罪的, 这人是有福的!
೨ಯೆಹೋವನು ಯಾರ ಲೆಕ್ಕಕ್ಕೆ ಅಪರಾಧವನ್ನು ಎಣಿಸುವುದಿಲ್ಲವೋ? ಯಾರ ಹೃದಯದಲ್ಲಿ ಕಪಟವಿರುವುದಿಲ್ಲವೋ ಅವನು ಧನ್ಯನು.
೩ನಾನು ನನ್ನ ಪಾಪವನ್ನು ಅರಿಕೆಮಾಡದೆ ಇದ್ದಾಗ, ದಿನವೆಲ್ಲಾ ನರಳುವುದರಿಂದ ನನ್ನ ಎಲುಬುಗಳು ಸವೆದುಹೋಗುತ್ತಿದ್ದವು.
4 黑夜白日,你的手在我身上沉重; 我的精液耗尽,如同夏天的干旱。 (细拉)
೪ಹಗಲಿರುಳು ನಿನ್ನ ಶಿಕ್ಷಾಹಸ್ತವು ನನ್ನ ಮೇಲೆ ಭಾರವಾಗಿತ್ತು; ನನ್ನ ಶರೀರದ ಸಾರವೆಲ್ಲಾ ಬೇಸಿಗೆಯ ನೀರಿನಂತೆ ಬತ್ತಿಹೋಯಿತು. (ಸೆಲಾ)
5 我向你陈明我的罪, 不隐瞒我的恶。 我说:我要向耶和华承认我的过犯, 你就赦免我的罪恶。 (细拉)
೫ಹೀಗಿರುವಲ್ಲಿ ಯೆಹೋವನ ಸನ್ನಿಧಿಯಲ್ಲಿ ನನ್ನ ದ್ರೋಹವನ್ನು ಒಪ್ಪಿಕೊಳ್ಳುವೆನು ಅಂದುಕೊಂಡು ನನ್ನ ಪಾಪವನ್ನು ಮರೆಮಾಡದೆ ನಿನಗೆ ನನ್ನ ದೋಷವನ್ನು ತಿಳಿಸಿದೆನು. ನೀನು ನನ್ನ ಪಾಪಗಳ ಅಪರಾಧವನ್ನು ಪರಿಹರಿಸಿಬಿಟ್ಟಿ. (ಸೆಲಾ)
6 为此,凡虔诚人都当趁你可寻找的时候祷告你; 大水泛溢的时候,必不能到他那里。
೬ಆದುದರಿಂದ ಭಕ್ತರೆಲ್ಲರು ಅಗತ್ಯಕಾಲದಲ್ಲಿ ನಿನ್ನನ್ನು ಪ್ರಾರ್ಥಿಸಲಿ; ಆಗ ಮಹಾಪ್ರವಾಹವು ಅಂಥವರನ್ನು ಮುಟ್ಟುವುದೇ ಇಲ್ಲ.
7 你是我藏身之处; 你必保佑我脱离苦难, 以得救的乐歌四面环绕我。 (细拉)
೭ನೀನೇ ನನಗೆ ಮರೆಯು; ನಿರಪಾಯವಾಗಿ ನನ್ನನ್ನು ಕಾಯುವಿ; ವಿಮೋಚನಧ್ವನಿಯಿಂದ ನನ್ನನ್ನು ಆವರಿಸಿಕೊಳ್ಳುತ್ತೀ. (ಸೆಲಾ)
8 我要教导你,指示你当行的路; 我要定睛在你身上劝戒你。
೮ಯೆಹೋವನು, “ನಿನ್ನನ್ನು ಉಪದೇಶಿಸಿ ನಡೆಯಬೇಕಾದ ಮಾರ್ಗವನ್ನು ತಿಳಿಸುವೆನು; ನಿನ್ನನ್ನು ಕಟಾಕ್ಷಿಸಿ ಆಲೋಚನೆ ಹೇಳುವೆನು” ಎಂದು ಅನ್ನುತ್ತಾನಲ್ಲಾ.
9 你不可像那无知的骡马, 必用嚼环辔头勒住它; 不然,就不能驯服。
೯ಆದುದರಿಂದ ನೀವು ವಿವೇಕಹೀನರಾಗಿ ಕುದುರೆಯಂತಾಗಲಿ ಅಥವಾ ಹೇಸರಗತ್ತೆಯಂತಾಗಲಿ ಇರಬೇಡಿರಿ; ಅವುಗಳು ಬಾರು ಕಡಿವಾಣಗಳಿಲ್ಲದೆ ಸ್ವಾಧೀನವಾಗುವುದಿಲ್ಲ.
10 恶人必多受苦楚; 惟独倚靠耶和华的必有慈爱四面环绕他。
೧೦ದುಷ್ಟರಿಗೆ ಅನೇಕ ಕಷ್ಟನಷ್ಟಗಳು ಉಂಟಾಗುವವು; ಆದರೆ ಯೆಹೋವನಲ್ಲಿ ಭರವಸವಿಟ್ಟವರನ್ನು ಆತನ ಕೃಪೆಯು ಆವರಿಸಿಕೊಳ್ಳುವುದು.
11 你们义人应当靠耶和华欢喜快乐; 你们心里正直的人都当欢呼。
೧೧ನೀತಿವಂತರೇ, ಯೆಹೋವನಲ್ಲಿ ಸಂತೋಷಿಸುತ್ತಾ ಉಲ್ಲಾಸವಾಗಿರಿ; ಯಥಾರ್ಥಚಿತ್ತರೇ, ಆತನ ವಿಷಯದಲ್ಲಿ ಉತ್ಸಾಹ ಧ್ವನಿಮಾಡಿರಿ.