< 诗篇 53 >
1 大卫的训诲诗,交与伶长。调用麻哈拉。 愚顽人心里说:没有 神。 他们都是邪恶,行了可憎恶的罪孽; 没有一个人行善。
ಸಂಗೀತ ನಿರ್ದೇಶಕನಿಗಾಗಿರುವ ಕೀರ್ತನೆ. ಮಹಲಾತ್ ಎಂಬ ರಾಗದ ಪ್ರಕಾರ ಹಾಡತಕ್ಕದ್ದು. ಮಸ್ಕೀಲ್ ರಾಗದಲ್ಲಿ ರಚಿಸಿದ ದಾವೀದನ ಕೀರ್ತನೆ. “ದೇವರು ಇಲ್ಲಾ,” ಎಂದು ಮೂರ್ಖರು ತಮ್ಮ ಹೃದಯದಲ್ಲಿ ಹೇಳಿಕೊಳ್ಳುತ್ತಾರೆ. ಅವರು ಕೆಟ್ಟು ಹೋದವರು ಅವರ ಮಾರ್ಗಗಳು ಅಸಹ್ಯಕರ. ಅವರಲ್ಲಿ ಒಳ್ಳೆಯದನ್ನು ಮಾಡುವವರು ಒಬ್ಬರೂ ಇಲ್ಲ.
2 神从天上垂看世人,要看有明白的没有? 有寻求他的没有?
ದೇವರನ್ನು ಹುಡುಕುವ ಜ್ಞಾನಿಗಳು ಇದ್ದಾರೋ ಎಂದು ನೋಡುವುದಕ್ಕೆ ದೇವರು ಸ್ವರ್ಗದಿಂದ ಮನುಷ್ಯರ ಮೇಲೆ ದೃಷ್ಟಿಸಿದರು.
3 他们各人都退后,一同变为污秽; 并没有行善的,连一个也没有。
ಒಳ್ಳೆಯದನ್ನು ಮಾಡುವವರು ಯಾರೂ ಇಲ್ಲ, ಒಬ್ಬರಾದರೂ ಇಲ್ಲ. ಎಲ್ಲರೂ ದಾರಿತಪ್ಪಿ ಹೋಗಿದ್ದಾರೆ, ಎಲ್ಲರೂ ಕೆಟ್ಟು ಹೋಗಿದ್ದರು.
4 作孽的没有知识吗? 他们吞吃我的百姓如同吃饭一样,并不求告 神。
ದುಷ್ಟತ್ವವನ್ನು ನಡೆಸುವವರಿಗೆ ಏನೂ ತಿಳಿಯುವುದಿಲ್ಲವೋ? ಅವರು ನನ್ನ ಜನರನ್ನು ರೊಟ್ಟಿಯಂತೆ ತಿಂದು ಬಿಡುತ್ತಾರೆಯೋ? ಅವರು ದೇವರನ್ನು ಸ್ಮರಿಸುವುದೇ ಇಲ್ಲ.
5 他们在无可惧怕之处就大大害怕, 因为 神把那安营攻击你之人的骨头散开了。 你使他们蒙羞,因为 神弃绝了他们。
ಭಯವಿಲ್ಲದಿರುವಲ್ಲಿ ಅವರು ಭಯಭ್ರಾಂತರಾದರು; ಏಕೆಂದರೆ ನಿಮಗೆ ವಿರೋಧವಾಗಿ ದಂಡು ಇಳಿಸುವವರನ್ನು ದೇವರು ಚದರಿಸಿಬಿಟ್ಟಿದ್ದಾರೆ. ನೀವು ಅವರನ್ನು ನಾಚಿಕೆಪಡಿಸಿದ್ದೀರಿ. ಏಕೆಂದರೆ ದೇವರು ಅವರನ್ನು ತಿರಸ್ಕರಿಸಿದ್ದಾರೆ.
6 但愿以色列的救恩从锡安而出。 神救回他被掳的子民那时, 雅各要快乐,以色列要欢喜。
ಓ, ಚೀಯೋನಿನಿಂದ ಇಸ್ರಾಯೇಲರಿಗೆ ರಕ್ಷಣೆಯು ಬಂದರೆ ಎಷ್ಟೋ ಒಳ್ಳೆಯದು! ದೇವರು ತಮ್ಮ ಜನರನ್ನು ಸೆರೆಯಿಂದ ತಿರುಗಿ ಬರಮಾಡುವಾಗ ಯಾಕೋಬ್ಯರು ಉಲ್ಲಾಸಗೊಳ್ಳುವರು. ಇಸ್ರಾಯೇಲರು ಸಂತೋಷಿಸುವರು.