< 诗篇 56 >
1 非利士人在迦特拿住大卫。那时,他作这金诗,交与伶长。调用远方无声鸽。 神啊,求你怜悯我,因为人要把我吞了, 终日攻击欺压我。
೧ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ಯೋನತ್ ಎಲೆಮ್ ರೆಹೋಕೀಮ್ ಎಂಬ ರಾಗ; ದಾವೀದನು ಗತ್ ಎಂಬ ಊರಲ್ಲಿ ಫಿಲಿಷ್ಟಿಯರ ಕೈವಶವಾದಾಗ ರಚಿಸಿದ ಕಾವ್ಯ. ದೇವರೇ, ಕರುಣಿಸು; ನರರು ನನ್ನನ್ನು ತುಳಿದುಬಿಡಬೇಕೆಂದು ಎದ್ದಿದ್ದಾರೆ. ನನ್ನ ಎದುರಾಳಿಗಳು ಹಗಲೆಲ್ಲಾ ಯುದ್ಧಕ್ಕೆ ನಿಂತು ಬಾಧಿಸುತ್ತಾರೆ.
2 我的仇敌终日要把我吞了, 因逞骄傲攻击我的人甚多。
೨ಹೊಂಚುಹಾಕಿ ನನ್ನನ್ನು ನುಂಗಿಬಿಡಬೇಕೆಂದು ಯಾವಾಗಲೂ ಬಾಯ್ದೆರೆದಿದ್ದಾರೆ; ಸೊಕ್ಕಿನಿಂದ ನನ್ನ ಮೇಲೆ ಯುದ್ಧಕ್ಕೆ ನಿಂತವರು ಎಷ್ಟೋ ಜನರು.
೩ನನಗೆ ಹೆದರಿಕೆಯುಂಟಾದಾಗ ನಿನ್ನನ್ನೇ ಆಶ್ರಯಿಸಿಕೊಳ್ಳುವೆನು.
4 我倚靠 神,我要赞美他的话; 我倚靠 神,必不惧怕。 血气之辈能把我怎么样呢?
೪ದೇವರ ವಾಗ್ದಾನಕ್ಕೋಸ್ಕರ ಆತನಲ್ಲಿಯೇ ಹೆಚ್ಚಳಪಡುವೆನು; ದೇವರನ್ನು ನಂಬಿ ನಿರ್ಭಯದಿಂದಿರುವೆನು. ನರಪ್ರಾಣಿಗಳು ನನಗೆ ಏನು ಮಾಡಾರು?
5 他们终日颠倒我的话; 他们一切的心思都是要害我。
೫ಹಗಲೆಲ್ಲಾ ನನ್ನ ಮಾತುಗಳನ್ನು ಅಪಾರ್ಥಮಾಡುತ್ತಾರೆ; ಅವರು ಬಗೆಯುವುದೆಲ್ಲ ನನಗೆ ಕೇಡೇ.
6 他们聚集,埋伏窥探我的脚踪, 等候要害我的命。
೬ಅವರು ಒಟ್ಟುಗೂಡಿ ನನ್ನ ಜೀವ ತೆಗೆಯಬೇಕೆಂದು ಹೊಂಚುಹಾಕಿ, ನನ್ನ ಹೆಜ್ಜೆಜಾಡು ಹಿಡಿದು ಬರುತ್ತಾರೆ.
7 他们岂能因罪孽逃脱吗? 神啊,求你在怒中使众民堕落!
೭ಇಂಥ ಅನ್ಯಾಯಗಾರರು ತಪ್ಪಿಸಿಕೊಳ್ಳಬಹುದೋ? ದೇವರೇ, ರೌದ್ರದಿಂದ ಆ ಜನಾಂಗಗಳನ್ನು ಉರುಳಿಸಿಬಿಡು.
8 我几次流离,你都记数; 求你把我眼泪装在你的皮袋里。 这不都记在你册子上吗?
೮ನಾನು ದೇಶಭ್ರಷ್ಟನಾಗಿ ಅಲೆದಾಡಿದ್ದನ್ನು ನೀನೇ ಬಲ್ಲೆ. ನನ್ನ ಕಣ್ಣೀರು ನಿನ್ನ ಬುದ್ದಲಿಯಲ್ಲಿ ತುಂಬಿದೆಯಲ್ಲಾ; ಅದರ ವಿಷಯವಾಗಿ ನಿನ್ನ ಪುಸ್ತಕದಲ್ಲಿ ಬರೆದದೆಯಲ್ಲಾ.
9 我呼求的日子,我的仇敌都要转身退后。 神帮助我,这是我所知道的。
೯ನಾನು ಆತನಿಗೆ ಮೊರೆಯಿಡುವಾಗಲೇ ನನ್ನ ಶತ್ರುಗಳು ಫಕ್ಕನೆ ಹಿಂದಿರುಗಿ ಓಡುವರು; ದೇವರು ನನ್ನ ಸಂಗಡ ಇರುವುದು ನಿಶ್ಚಯ.
10 我倚靠 神,我要赞美他的话; 我倚靠耶和华,我要赞美他的话。
೧೦ದೇವರ ವಾಗ್ದಾನಗಳಲ್ಲಿ ಹಾಡಿ ಹರಸುತ್ತೇನೆ. ಯೆಹೋವನ ವಾಗ್ದಾನಗಳಲ್ಲಿ ಹಾಡಿ ಹರಸುತ್ತೇನೆ.
೧೧ದೇವರನ್ನು ನಂಬಿ ನಿರ್ಭಯದಿಂದಿರುವೆನು; ನರಪ್ರಾಣಿಗಳು ನನಗೆ ಏನು ಮಾಡಾರು?
12 神啊,我向你所许的愿在我身上; 我要将感谢祭献给你。
೧೨ದೇವರೇ, ನಿನಗೆ ಹೊತ್ತ ಹರಕೆಗಳನ್ನು ನಾನು ಸಲ್ಲಿಸುವೆನು; ಕೃತಜ್ಞತಾ ಯಜ್ಞಗಳನ್ನು ನಿನಗೆ ಸಮರ್ಪಿಸುವೆನು.
13 因为你救我的命脱离死亡。 你岂不是救护我的脚不跌倒、 使我在生命光中行在 神面前吗?
೧೩ಏಕೆಂದರೆ, ನಾನು ಜೀವದಿಂದ ಬೆಳಕಿನಲ್ಲಿದ್ದು ನಿನಗೆ ನಡೆದುಕೊಳ್ಳಬೇಕೆಂದು ನೀನು ನನ್ನ ಪ್ರಾಣವನ್ನು ಮರಣಕ್ಕೆ ತಪ್ಪಿಸಿ, ನನ್ನ ಪಾದಗಳನ್ನು ಎಡವಿಬೀಳದಂತೆ ಕಾಪಾಡಿದ್ದಿ.