< 诗篇 6 >

1 大卫的诗,交与伶长。用丝弦的乐器,调用第八。 耶和华啊,求你不要在怒中责备我, 也不要在烈怒中惩罚我!
ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ತಂತಿವಾದ್ಯದ ಮಂದರಸ್ಥಾಯಿಯೊಡನೆ ಹಾಡತಕ್ಕದ್ದು; ದಾವೀದನು ರಚಿಸಿದ ಕೀರ್ತನೆ. ಯೆಹೋವನೇ, ಕೋಪದಿಂದ ನನ್ನನ್ನು ಗದರಿಸಬೇಡ; ರೋಷದಿಂದ ನನ್ನನ್ನು ದಂಡಿಸಬೇಡ.
2 耶和华啊,求你可怜我,因为我软弱。 耶和华啊,求你医治我,因为我的骨头发战。
ಯೆಹೋವನೇ, ಕನಿಕರಿಸು; ನಾನು ನಿಶ್ಶಕ್ತನಾಗಿ ಹೋಗಿದ್ದೇನೆ. ಯೆಹೋವನೇ, ವಾಸಿಮಾಡು; ನನ್ನ ಎಲುಬುಗಳೆಲ್ಲಾ ಅದುರುತ್ತವೆ.
3 我心也大大地惊惶。 耶和华啊,你要到几时才救我呢?
ನನ್ನ ಪ್ರಾಣವು ಸಹ ಬಹಳವಾಗಿ ತತ್ತರಿಸುತ್ತದೆ. ಯೆಹೋವನೇ, ಎಷ್ಟರ ವರೆಗೆ ನನ್ನನ್ನು ಕೈಬಿಟ್ಟಿರುವಿ?
4 耶和华啊,求你转回搭救我! 因你的慈爱拯救我。
ಯೆಹೋವನೇ, ಹಿಂತಿರುಗು, ನನ್ನನ್ನು ಬಿಡಿಸು; ನಿನ್ನ ಕೃಪೆಯ ನಿಮಿತ್ತ ನನ್ನನ್ನು ರಕ್ಷಿಸು.
5 因为,在死地无人记念你, 在阴间有谁称谢你? (Sheol h7585)
ಮೃತರಿಗೆ ನಿನ್ನ ಜ್ಞಾಪಕವಿರುವುದಿಲ್ಲವಲ್ಲಾ; ಪಾತಾಳದಲ್ಲಿ ನಿನ್ನನ್ನು ಸ್ತುತಿಸುವವರು ಯಾರು? (Sheol h7585)
6 我因唉哼而困乏; 我每夜流泪,把床榻漂起, 把褥子湿透。
ನಾನು ನರಳಿ ನರಳಿ ದಣಿದಿದ್ದೇನೆ; ಪ್ರತಿರಾತ್ರಿಯೂ ನನ್ನ ಮಂಚವು ಕಣ್ಣೀರಿನಿಂದ ತೇಲಾಡುತ್ತದೆ. ಹಾಸಿಗೆಯು ಕಣ್ಣೀರಿನಿಂದ ನೆನದುಹೋಗುತ್ತದೆ.
7 我因忧愁眼睛干瘪, 又因我一切的敌人眼睛昏花。
ದುಃಖದಿಂದ ನನ್ನ ಕಣ್ಣು ಬತ್ತಿ ಹೋಯಿತು; ವಿರೋಧಿಗಳ ಬಾಧೆಯ ದೆಸೆಯಿಂದಲೇ ಅವು ಮೊಬ್ಬಾಯಿತು.
8 你们一切作孽的人,离开我吧! 因为耶和华听了我哀哭的声音。
ಧರ್ಮವನ್ನು ಮೀರಿ ನಡೆಯುವವರೇ, ನೀವೆಲ್ಲರೂ ನನ್ನಿಂದ ತೊಲಗಿಹೋಗಿರಿ; ಯೆಹೋವನು ನನ್ನ ಗೋಳಾಟಕ್ಕೆ ಕಿವಿಗೊಟ್ಟಿದ್ದಾನೆ.
9 耶和华听了我的恳求; 耶和华必收纳我的祷告。
ಆತನು ನನ್ನ ವಿಜ್ಞಾಪನೆಯನ್ನು ಕೇಳಿದ್ದಾನಲ್ಲಾ; ನನ್ನ ಪ್ರಾರ್ಥನೆಯನ್ನು ಅಂಗೀಕರಿಸುವನು.
10 我的一切仇敌都必羞愧,大大惊惶; 他们必要退后,忽然羞愧。
೧೦ನನ್ನ ವಿರೋಧಿಗಳೆಲ್ಲರು ನಾಚಿಕೆಯಿಂದ ಕಳವಳಗೊಳ್ಳುವರು; ಅವರು ಪಕ್ಕನೆ ಲಜ್ಜೆಗೊಂಡು ಹಿಂದಿರುಗುವರು.

< 诗篇 6 >