< 诗篇 66 >
೧ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ಹಾಡು; ಕೀರ್ತನೆ. ಸರ್ವಭೂನಿವಾಸಿಗಳೇ, ದೇವರಿಗೆ ಜಯಧ್ವನಿ ಮಾಡಿರಿ.
2 歌颂他名的荣耀! 用赞美的言语将他的荣耀发明!
೨ಆತನ ನಾಮದ ಮಹತ್ತನ್ನು ಕೀರ್ತಿಸಿರಿ; ಆತನ ಪ್ರಭಾವವನ್ನು ವರ್ಣಿಸುತ್ತಾ ಕೊಂಡಾಡಿರಿ.
3 当对 神说:你的作为何等可畏! 因你的大能,仇敌要投降你。
೩ನೀವು ದೇವರಿಗೆ, “ನಿನ್ನ ಕೃತ್ಯಗಳು ಎಷ್ಟೋ ಭಯಂಕರವಾಗಿವೆ; ನಿನ್ನ ಪರಾಕ್ರಮದ ಮಹತ್ತಿನ ದೆಸೆಯಿಂದ ನಿನ್ನ ಶತ್ರುಗಳು ನಿನ್ನ ಮುಂದೆ ಮುದುರಿಕೊಳ್ಳುವರು;
4 全地要敬拜你,歌颂你, 要歌颂你的名。 (细拉)
೪ಸರ್ವಭೂನಿವಾಸಿಗಳು ನಿನಗೆ ಅಡ್ಡಬಿದ್ದು ಭಜಿಸುತ್ತಾ, ನಿನ್ನ ನಾಮವನ್ನು ಕೀರ್ತಿಸುವರು” ಎಂದು ಹೇಳಿರಿ. (ಸೆಲಾ)
5 你们来看 神所行的, 他向世人所做之事是可畏的。
೫ಬನ್ನಿರಿ, ದೇವರ ಕಾರ್ಯಗಳನ್ನು ನೋಡಿರಿ; ಆತನ ಆಳ್ವಿಕೆ ನರರಲ್ಲಿ ಭಯ ಹುಟ್ಟಿಸತಕ್ಕದ್ದಾಗಿದೆ.
6 他将海变成干地,众民步行过河; 我们在那里因他欢喜。
೬ಸಮುದ್ರವನ್ನು ಒಣನೆಲವಾಗುವಂತೆ ಮಾಡಿದನು; ಜನರು ನದಿಯ ಮಧ್ಯದಲ್ಲಿ ಕಾಲಿನಿಂದ ದಾಟಿದರು; ಅದಕ್ಕಾಗಿ ನಾವು ಆತನಲ್ಲಿ ಆನಂದಪಡೋಣ.
7 他用权能治理万民,直到永远。 他的眼睛鉴察列邦; 悖逆的人不可自高。 (细拉)
೭ಆತನು ಪರಾಕ್ರಮದಿಂದ ಸದಾಕಾಲವೂ ಆಳುತ್ತಾನೆ; ಜನಾಂಗಗಳನ್ನು ನೋಡಿಕೊಳ್ಳುತ್ತಾನೆ. ದಂಗೆಕೋರರು ಏಳದಿರಲಿ. (ಸೆಲಾ)
8 万民哪,你们当称颂我们的 神, 使人得听赞美他的声音。
೮ಜನಾಂಗಗಳೇ, ನಮ್ಮ ದೇವರನ್ನು ವಂದಿಸಿರಿ; ಆತನನ್ನು ಸ್ತುತಿಸುವ ಧ್ವನಿ ಕೇಳಿಸಲಿ.
೯ಆತನು ನಮ್ಮನ್ನು ಜೀವದಿಂದುಳಿಸಿ, ನಮ್ಮ ಕಾಲುಗಳನ್ನು ಜಾರದಂತೆ ಕಾಪಾಡಿದನು.
10 神啊,你曾试验我们, 熬炼我们,如熬炼银子一样。
೧೦ದೇವರೇ, ನಮ್ಮನ್ನು ಶೋಧಿಸಿದಿ; ಬೆಳ್ಳಿಯನ್ನು ಪುಟಕ್ಕೆ ಹಾಕುವ ಮೇರೆಗೆ ಶುದ್ಧಿಮಾಡಿದಿ.
೧೧ನಮ್ಮನ್ನು ಬಲೆಯಲ್ಲಿ ಸಿಕ್ಕಿಸಿದಿ; ನಮ್ಮ ಸೊಂಟಕ್ಕೆ ಭಾರವಾದ ಹೊರೆಯನ್ನು ಕಟ್ಟಿದಿ;
12 你使人坐车轧我们的头; 我们经过水火, 你却使我们到丰富之地。
೧೨ಮನುಷ್ಯರು ನಮ್ಮ ತಲೆಗಳ ಮೇಲೆಯೇ, ತಮ್ಮ ರಥಗಳನ್ನು ಹಾಯಿಸುವಂತೆ ಮಾಡಿದಿ. ನಾವು ಬೆಂಕಿಯನ್ನೂ, ನೀರನ್ನೂ ದಾಟಬೇಕಾಯಿತು; ಆದರೂ ಸುಸ್ಥಿತಿಗೆ ನಮ್ಮನ್ನು ನಡೆಸಿದಿ.
೧೩ನಾನು ನಿನ್ನ ಆಲಯಕ್ಕೆ ಬಂದು ಸರ್ವಾಂಗಹೋಮಗಳನ್ನು ಸಮರ್ಪಿಸುವೆನು.
೧೪ಇಕ್ಕಟ್ಟಿನ ವೇಳೆಯಲ್ಲಿ ನನ್ನ ತುಟಿಗಳು ಉಚ್ಚರಿಸಿದ ಬಾಯಿಂದ ಮಾಡಿದ ಹರಕೆಗಳನ್ನು ನಿನಗೆ ಸಲ್ಲಿಸುವೆನು.
15 我要把肥牛作燔祭, 将公羊的香祭献给你, 又把公牛和山羊献上。 (细拉)
೧೫ನಿನಗೆ ಟಗರು ಮುಂತಾದ ಪುಷ್ಟಪಶುಗಳನ್ನು ಯಜ್ಞರೂಪವಾಗಿ ಸಮರ್ಪಿಸಿ, ಸುವಾಸನೆಯನ್ನು ಉಂಟುಮಾಡುವೆನು; ಯಜ್ಞಕ್ಕಾಗಿ ಹೋತ ಮತ್ತು ಹೋರಿಗಳನ್ನು ಅರ್ಪಿಸುವೆನು. (ಸೆಲಾ)
16 凡敬畏 神的人,你们都来听! 我要述说他为我所行的事。
೧೬ಎಲ್ಲಾ ದೇವಭಕ್ತರೇ, ಬಂದು ಕೇಳಿರಿ; ಆತನು ನನಗಾಗಿ ಮಾಡಿದ್ದೆಲ್ಲವನ್ನು ನಿಮಗೆ ತಿಳಿಸುವೆನು.
೧೭ನನ್ನ ಮೊರೆಯೊಡನೆ ಕೃತಜ್ಞತಾಸ್ತುತಿಯೂ ನನ್ನ ನಾಲಿಗೆಯ ಮೇಲಿತ್ತು.
೧೮ನಾನು ಕೆಟ್ಟತನದ ಮೇಲೆ ಮನಸ್ಸಿಟ್ಟಿದ್ದರೆ, ಸ್ವಾಮಿಯು ನನ್ನ ವಿಜ್ಞಾಪನೆಯನ್ನು ಕೇಳುತ್ತಿದ್ದಿಲ್ಲ.
19 但 神实在听见了; 他侧耳听了我祷告的声音。
೧೯ಆದರೆ ದೇವರು ನನ್ನ ಮೊರೆಯನ್ನು ಲಕ್ಷಿಸಿ ಕೇಳಿದ್ದಾನಲ್ಲಾ.
20 神是应当称颂的! 他并没有推却我的祷告, 也没有叫他的慈爱离开我。
೨೦ಆತನು ನನ್ನ ಬಿನ್ನಹವನ್ನು ತಿರಸ್ಕರಿಸಲಿಲ್ಲ; ನನ್ನ ಮೇಲಿನ ತನ್ನ ದಯೆಯನ್ನು ತಪ್ಪಿಸಿಬಿಡಲಿಲ್ಲ. ದೇವರಿಗೆ ಸ್ತೋತ್ರವಾಗಲಿ.