< 诗篇 92 >

1 安息日的诗歌。 称谢耶和华! 歌颂你至高者的名!
ಕೀರ್ತನೆ; ಸಬ್ಬತ್ ದಿನದ ಗೀತೆ. ಯೆಹೋವನೇ, ನಿನ್ನನ್ನು ಕೊಂಡಾಡುವುದೂ, ಪರಾತ್ಪರನಾದ ದೇವರೇ, ನಿನ್ನ ನಾಮವನ್ನು ಸಂಕೀರ್ತಿಸುವುದೂ ಯುಕ್ತವಾಗಿದೆ.
2 用十弦的乐器和瑟, 用琴弹幽雅的声音, 早晨传扬你的慈爱; 每夜传扬你的信实。 这本为美事。
ವೀಣೆ, ಸ್ವರಮಂಡಲಗಳಿಂದಲೂ, ಕಿನ್ನರಿಯ ಘನಸ್ವರದಿಂದಲೂ,
3
ಹೊತ್ತಾರೆಯಲ್ಲಿ ನಿನ್ನ ಪ್ರೇಮವನ್ನೂ, ರಾತ್ರಿಯಲ್ಲಿ ನಿನ್ನ ಸತ್ಯವನ್ನೂ ವರ್ಣಿಸುವುದು ಉಚಿತವಾಗಿದೆ.
4 因你—耶和华借着你的作为叫我高兴, 我要因你手的工作欢呼。
ಯೆಹೋವನೇ, ನಿನ್ನ ಕ್ರಿಯೆಗಳಿಂದ ನನ್ನನ್ನು ಸಂತೋಷಪಡಿಸಿದ್ದಿ; ನಿನ್ನ ಕೆಲಸಗಳಿಗಾಗಿ ಉತ್ಸಾಹಧ್ವನಿ ಮಾಡುತ್ತೇನೆ.
5 耶和华啊,你的工作何其大! 你的心思极其深!
ಯೆಹೋವನೇ, ನಿನ್ನ ಕೃತ್ಯಗಳು ಎಷ್ಟೋ ಶ್ರೇಷ್ಠವಾಗಿವೆ; ನಿನ್ನ ಆಲೋಚನೆಗಳು ಅಶೋಧ್ಯವಾಗಿವೆ.
6 畜类人不晓得; 愚顽人也不明白。
ಪಶುಪ್ರಾಯನು ಅರಿಯನು; ಮೂರ್ಖನು ಇದನ್ನು ಗ್ರಹಿಸಿಕೊಳ್ಳನು.
7 恶人茂盛如草, 一切作孽之人发旺的时候, 正是他们要灭亡, 直到永远。
ದುಷ್ಟರು ಹುಲ್ಲಿನಂತೆ ಬೆಳೆಯುವುದೂ, ಕೆಡುಕರು ಹೂವಿನಂತೆ ಮೆರೆಯುವುದೂ ತೀರಾ ಹಾಳಾಗುವುದಕ್ಕಾಗಿಯೇ.
8 惟你—耶和华是至高, 直到永远。
ಯೆಹೋವನೇ, ನೀನಾದರೋ ಸದಾ ಉನ್ನತಸ್ಥಾನದಲ್ಲಿರುತ್ತೀ.
9 耶和华啊,你的仇敌都要灭亡; 一切作孽的也要离散。
ಯೆಹೋವನೇ, ಇಗೋ ನಿನ್ನ ಶತ್ರುಗಳು! ಅವರೆಲ್ಲಾ ನಾಶವಾಗುತ್ತಿದ್ದಾರೆ. ಅಧರ್ಮಿಗಳೆಲ್ಲಾ ಚದರಿಹೋಗುವರು.
10 你却高举了我的角,如野牛的角; 我是被新油膏了的。
೧೦ಆದರೆ ನನ್ನ ಕೊಂಬನ್ನು ಕಾಡುಕೋಣದ ಕೊಂಬಿನಂತೆ ಎತ್ತಿದ್ದಿ; ಚೈತನ್ಯತೈಲದಿಂದ ನನ್ನನ್ನು ಅಭಿಷೇಕಿಸಿದ್ದಿ.
11 我眼睛看见仇敌遭报; 我耳朵听见那些起来攻击我的恶人受罚。
೧೧ನನ್ನ ಶತ್ರುಗಳಿಗುಂಟಾದ ದುರ್ಗತಿಯನ್ನು ಕಣ್ಣಾರೆ ಕಂಡಿದ್ದೇನೆ; ನನಗೆ ವಿರುದ್ಧವಾಗಿ ಎದ್ದವರ ವಿಪತ್ತನ್ನು ಕಿವಿಯಾರೆ ಕೇಳಿದ್ದೇನೆ.
12 义人要发旺如棕树, 生长如黎巴嫩的香柏树。
೧೨ನೀತಿವಂತರು ಖರ್ಜೂರದ ಮರದಂತೆ ಬೆಳೆಯುವರು; ಲೆಬನೋನಿನ ದೇವದಾರು ವೃಕ್ಷದ ಹಾಗೆ ವೃದ್ಧಿಯಾಗುವರು.
13 他们栽于耶和华的殿中, 发旺在我们 神的院里。
೧೩ಯೆಹೋವನ ಆಲಯದಲ್ಲಿ ಸಸಿಗಳಂತೆ ನೆಡಲ್ಪಟ್ಟವರು, ನಮ್ಮ ದೇವರ ಅಂಗಳದಲ್ಲಿ ಚೆನ್ನಾಗಿ ಬೆಳೆಯುವರು.
14 他们年老的时候仍要结果子, 要满了汁浆而常发青,
೧೪ಮುಪ್ಪಿನಲ್ಲಿಯೂ ಫಲಿಸುವರು; ಪುಷ್ಟಿಯಾಗಿದ್ದು ಶೋಭಿಸುವರು.
15 好显明耶和华是正直的。 他是我的磐石,在他毫无不义。
೧೫ಹೀಗೆ ಅವರು ಯೆಹೋವನ ಸತ್ಯಸಂಧತೆಗೆ ದೃಷ್ಟಾಂತರಾಗಿರುವರು. ಆತನೇ ನನ್ನ ಬಂಡೆಯು; ಆತನು ನಿರ್ವಂಚಕನು.

< 诗篇 92 >