< 雅歌 1 >
೧ಸೊಲೊಮೋನನು ರಚಿಸಿದ ಪರಮಗೀತೆ.
೨ನಿನ್ನ ಬಾಯ ಮುದ್ದುಗಳಿಂದ ನನಗೆ ಮುದ್ದಿಡು ನಿನ್ನ ಪ್ರೀತಿಯು ದ್ರಾಕ್ಷಾರಸಕ್ಕಿಂತಲೂ ಉತ್ತಮ.
3 你的膏油馨香; 你的名如同倒出来的香膏, 所以众童女都爱你。
೩ನಿನ್ನ ತೈಲವು ಸುಗಂಧ; ನಿನ್ನ ಹೆಸರು ಸುರಿದ ತೈಲದ ಸುಗಂಧದಂತೆ ವ್ಯಾಪಿಸಿರುವುದರಿಂದ, ತರುಣಿಯರು ನಿನ್ನನ್ನು ಪ್ರೀತಿಸುವರು.
4 愿你吸引我,我们就快跑跟随你。 王带我进了内室, 我们必因你欢喜快乐。 我们要称赞你的爱情, 胜似称赞美酒。 他们爱你是理所当然的。
೪ನನ್ನನ್ನು ನಿನ್ನಡೆಗೆ ಸೆಳೆದುಕೋ; ನಿನ್ನ ಹಿಂದೆ ಓಡಿ ಬರುವೆನು; ರಾಜನು ನನ್ನನ್ನು ಅಂತಃಪುರಕ್ಕೆ ಬರಮಾಡಿದ್ದಾನೆ; ನಿನ್ನಲ್ಲಿ ಹರ್ಷಿಸಿ ಉಲ್ಲಾಸಿಸುವೆವು, ನಿನ್ನ ಪ್ರೀತಿಯು ದ್ರಾಕ್ಷಾರಸಕ್ಕಿಂತಲೂ ಉತ್ತಮವಾದುದು; ಸ್ತ್ರೀಯರು ನಿನ್ನನ್ನು ಯಥಾರ್ಥವಾಗಿ ಪ್ರೀತಿಸುವರು.
5 耶路撒冷的众女子啊, 我虽然黑,却是秀美, 如同基达的帐棚, 好像所罗门的幔子。
೫ಯೆರೂಸಲೇಮಿನ ಮಹಿಳೆಯರೇ, ನಾನು ಕೇದಾರಿನ ಗುಡಾರಗಳಂತೆ ಕಪ್ಪಾಗಿದ್ದರೂ, ಸೊಲೊಮೋನನ ಪರದೆಗಳಂತೆ ಚೆಲುವಾಗಿದ್ದೇನೆ.
6 不要因日头把我晒黑了就轻看我。 我同母的弟兄向我发怒, 他们使我看守葡萄园; 我自己的葡萄园却没有看守。
೬ನಾನು ಕಪ್ಪಾಗಿದ್ದೇನೆ ಎಂದು ನನ್ನನ್ನು ದಿಟ್ಟಿಸಿ ನೋಡಬೇಡಿರಿ. ನಾನು ಕಪ್ಪಾಗಿರುವುದು ಸೂರ್ಯನ ತಾಪದಿಂದ. ನನ್ನ ಸಹೋದರರು ನನ್ನ ಮೇಲೆ ಕೋಪಗೊಂಡು ದ್ರಾಕ್ಷಿತೋಟಗಳನ್ನು ಕಾಯುವುದಕ್ಕೆ ಇಟ್ಟರು; ಆದುದರಿಂದ ನನ್ನ ಸ್ವಂತ ದ್ರಾಕ್ಷಿ ತೋಟವನ್ನೂ ನಾನು ಕಾಯ್ದುಕೊಳ್ಳಲಾಗಲಿಲ್ಲ.
7 我心所爱的啊,求你告诉我, 你在何处牧羊? 晌午在何处使羊歇卧? 我何必在你同伴的羊群旁边 好像蒙着脸的人呢?
೭ನನ್ನ ಪ್ರಾಣಪ್ರಿಯನೇ, ನಿನ್ನ ಮಂದೆಯನ್ನು ಎಲ್ಲಿ ಮೇಯಿಸುವೆ? ನಡುಹಗಲಲ್ಲಿ ನಿನ್ನ ಮಂದೆಯು ಎಲ್ಲಿ ವಿಶ್ರಮಿಸುತ್ತಾರೆ? ಹೇಳು. ನಾನೇಕೆ ಅಲೆಮಾರಿಗಳಂತೆ ನಿನ್ನ ಗೆಳೆಯರ ಮಂದೆಗಳ ಹತ್ತಿರ ಅಲೆಯಬೇಕು?
8 你这女子中极美丽的, 你若不知道, 只管跟随羊群的脚踪去, 把你的山羊羔牧放在牧人帐棚的旁边。
೮ಸ್ತ್ರೀಯರಲ್ಲಿ ಅತಿ ಸುಂದರವಾದ ಹೆಣ್ಣು ನೀನು, ನಿನಗಿದು ಗೊತ್ತಿಲ್ಲವಾದರೆ ಹಿಂಡಿನ ಹೆಜ್ಜೆಯ ಜಾಡನ್ನು ಹಿಡಿದು ಹೋಗಿ, ಕುರುಬರ ಗುಡಾರಗಳ ಬಳಿಯಲ್ಲಿ ನಿನ್ನ ಮೇಕೆಮರಿಗಳನ್ನು ಮೇಯಿಸು.
೯ಪ್ರಿಯಳೇ, ನಿನ್ನನ್ನು ಫರೋಹನ ರಥವನ್ನೆಳೆವ ಹೆಣ್ಣು ಕುದುರೆಗೆ ಹೋಲಿಸಿದ್ದೇನೆ.
10 你的两腮因发辫而秀美; 你的颈项因珠串而华丽。
೧೦ನಿನ್ನ ಕೆನ್ನೆಗಳು ಆಭರಣಗಳಿಂದಲೂ, ನಿನ್ನ ಕಂಠವು ಹಾರಗಳಿಂದಲೂ ಎಷ್ಟೋ ಅಂದವಾಗಿವೆ!
೧೧ನಾನು ನಿನಗಾಗಿ ಬಂಗಾರದ ಅಂಚಿನಿಂದ ಕೂಡಿರುವ, ಬೆಳ್ಳಿಯ ಕುಚ್ಚಗಳನ್ನು ಮಾಡಿಸುವೆನು.
೧೨ರಾಜನು ಔತಣದಲ್ಲಿದ್ದಾಗ ಇತ್ತ ನನ್ನ ಸುಗಂಧತೈಲವು ಪರಿಮಳವನ್ನು ಬೀರುತ್ತಿತ್ತು.
೧೩ಎನ್ನಿನಿಯನು ನನ್ನ ಸ್ತನಗಳ ಮಧ್ಯದಲ್ಲಿನ ರಕ್ತಬೋಳದ ಚೀಲ;
14 我以我的良人为一棵凤仙花, 在隐·基底葡萄园中。
೧೪ನನ್ನ ಪಾಲಿಗೆ ನನ್ನ ನಲ್ಲನು ಏನ್ಗೆದಿಯ ದ್ರಾಕ್ಷಿ ತೋಟಗಳ ಗೋರಂಟೆಯ ಹೂಗೊಂಚಲು.
15 我的佳偶,你甚美丽!你甚美丽! 你的眼好像鸽子眼。
೧೫ಆಹಾ, ನನ್ನ ಪ್ರಿಯಳೇ, ನೀನು ಎಷ್ಟು ಚೆಲುವೆ, ಆಹಾ, ನೀನು ಎಷ್ಟು ಸುಂದರಿ! ನಿನ್ನ ನೇತ್ರಗಳು ಪಾರಿವಾಳಗಳಂತಿವೆ.
16 我的良人哪,你甚美丽可爱! 我们以青草为床榻,
೧೬ಆಹಾ, ಎನ್ನಿನಿಯನೇ, ನೀನೆಷ್ಟು ಸುಂದರ, ನೀನೆಷ್ಟು ಮನೋಹರ! ಹಚ್ಚ ಹಸಿರು ಚಿಗುರುಗಳು ನಮ್ಮ ಮಂಚ,
೧೭ನಮ್ಮ ಮನೆಯ ಛಾವಣಿ ತುರಾಯಿ ಮರಗಳೇ; ತೊಲೆಗಳು ದೇವದಾರು ವೃಕ್ಷಗಳೇ.