< 雅歌 2 >
೧ನಾನು ಶಾರೋನಿನ ನೆಲಸಂಪಿಗೆ, ತಗ್ಗಿನ ತಾವರೆ.
೨ಸ್ತ್ರೀಯರಲ್ಲಿ ಶ್ರೇಷ್ಠಳು ನೀನು, ನನ್ನ ಪ್ರಿಯಳು ಮುಳ್ಳುಗಳ ಮಧ್ಯದಲ್ಲಿರುವ ತಾವರೆಯಂತಿರುವಳು.
3 我的良人在男子中, 如同苹果树在树林中。 我欢欢喜喜坐在他的荫下, 尝他果子的滋味,觉得甘甜。
೩ನನ್ನ ಪ್ರಿಯನು ಪುರುಷೋತ್ತಮನು ವನವೃಕ್ಷಗಳ ಮಧ್ಯೆ ಸೇಬಿನ ವೃಕ್ಷದಂತಿಹನು. ಅದರ ಫಲವು ನನ್ನ ನಾಲಿಗೆಗೆ ಸುಮಧುರ ನಾನು ಆತನ ನೆರಳಿನಲ್ಲಿ ಕುಳಿತು ಪರಮಾನಂದಗೊಂಡೆನು.
೪ಬರಮಾಡಿಕೊಂಡನು ನನ್ನನ್ನು ಔತಣಶಾಲೆಗೆ, ನನ್ನ ಮೇಲೆತ್ತಿದನು ಪ್ರೀತಿ ಎಂಬ ಪತಾಕೆ.
5 求你们给我葡萄干增补我力, 给我苹果畅快我心, 因我思爱成病。
೫ಅಸ್ವಸ್ಥಳಾಗಿರುವೆನು ಅನುರಾಗದಿಂದ, ದೀಪದ್ರಾಕ್ಷೆಯಿಂದ ನನ್ನನ್ನು ಉಪಚರಿಸಿರಿ, ಸೇಬು ಹಣ್ಣುಗಳಿಂದ ನನ್ನನ್ನು ಚೈತನ್ಯಗೊಳಿಸಿರಿ.
೬ಆತನ ಎಡಗೈ ನನಗೆ ತಲೆದಿಂಬಾಗಿದ್ದರೆ, ಆತನ ಬಲಗೈ ನನ್ನನ್ನು ಆಲಂಗಿಸಿದರೆ ನನಗೆ ಪರಮಾನಂದ!
7 耶路撒冷的众女子啊, 我指着羚羊或田野的母鹿嘱咐你们: 不要惊动、不要叫醒我所亲爱的, 等他自己情愿。
೭ಯೆರೂಸಲೇಮಿನ ಮಹಿಳೆಯರೇ, ಆತನು ತಾನಾಗಿ ಎಚ್ಚರಗೊಳ್ಳುವವರೆಗೆ ಯಾರೂ ನನ್ನ ಪ್ರಿಯನನ್ನು ಎಚ್ಚರಿಸದಿರಿ, ಆತನ ವಿಶ್ರಾಂತಿಗೆ ಯಾರೂ ಭಂಗ ಮಾಡದಿರಿ ಎಂದು ವನದ ಜಿಂಕೆ ಹರಿಣಗಳ ಮೇಲೆ ನಿಮ್ಮಿಂದ ಪ್ರಮಾಣಮಾಡಿಸುತ್ತೇನೆ.
8 听啊!是我良人的声音; 看哪!他蹿山越岭而来。
೮ಅಗೋ ನನ್ನ ಕಾಂತನ ಸಪ್ಪಳ! ಅವನು ಬೆಟ್ಟಗಳ ಮೇಲೆ ಹಾರುತ್ತಾ, ಗುಡ್ಡಗಳಲ್ಲಿ ಜಿಗಿಯುತ್ತಾ ಬರುತ್ತಿದ್ದಾನೆ;
9 我的良人好像羚羊,或像小鹿。 他站在我们墙壁后, 从窗户往里观看, 从窗棂往里窥探。
೯ನನ್ನ ಪ್ರಿಯನು ಜಿಂಕೆಯಂತೆಯೂ ಪ್ರಾಯದ ಹರಿಣದಂತೆಯೂ ಇದ್ದಾನೆ. ಆಹಾ, ಇಗೋ ನಮ್ಮ ಗೋಡೆಯ ಆಚೆ ನಿಂತು, ಕಿಟಕಿಗಳ ಮೂಲಕ ನೋಡುತ್ತಾನೆ, ಜಾಲಾಂದ್ರಗಳ ಮೂಲಕ ಇಣಿಕುಹಾಕುತ್ತಾನೆ!
10 我良人对我说: 〔新郎〕 我的佳偶,我的美人, 起来,与我同去!
೧೦ನನ್ನ ನಲ್ಲನು ನನಗೆ ಹೀಗೆಂದನು, “ನನ್ನ ಪ್ರಿಯತಮೇ, ಎನ್ನ ಸುಂದರಿಯೇ, ಎದ್ದು ನನ್ನೊಂದಿಗೆ ಬಾ!
೧೧ಇಗೋ, ಚಳಿಗಾಲ ಕಳೆಯಿತು, ಮಳೆಗಾಲ ಮುಗಿಯಿತು;
12 地上百花开放, 百鸟鸣叫的时候已经来到; 斑鸠的声音在我们境内也听见了。
೧೨ಭೂಮಿಯಲ್ಲೆಲ್ಲಾ ಹೂವುಗಳು ಕಾಣುತ್ತವೆ, ಕುಡಿ ಸವರುವ ಕಾಲ ಬಂತು, ಬೆಳವಕ್ಕಿಯ ಕೂಗು ದೇಶದಲ್ಲಿ ಕೇಳಿಸುತ್ತದೆ;
13 无花果树的果子渐渐成熟; 葡萄树开花放香。 我的佳偶,我的美人, 起来,与我同去!
೧೩ಅಂಜೂರದ ಕಾಯಿಗಳು ಹಣ್ಣಾಗಿವೆ, ದ್ರಾಕ್ಷಿಯ ಬಳ್ಳಿಗಳು ಹೂಬಿಟ್ಟಿವೆ, ಅದರ ಪರಿಮಳವನ್ನು ಬೀರುತ್ತಿದೆ. ನನ್ನ ಪ್ರಿಯಳೇ, ಎನ್ನ ಸುಂದರಿಯೇ, ಎದ್ದು ನನ್ನೊಂದಿಗೆ ಬಾ!
14 我的鸽子啊,你在磐石穴中, 在陡岩的隐密处。 求你容我得见你的面貌, 得听你的声音; 因为你的声音柔和, 你的面貌秀美。
೧೪ಬಂಡೆಯ ಬಿರುಕುಗಳಲ್ಲಿಯೂ, ಸಂದುಗಳ ಮರೆಯಲ್ಲಿಯೂ ಇರುವ ನನ್ನ ಪಾರಿವಾಳವೇ! ನಿನ್ನ ರೂಪವನ್ನು ನನಗೆ ತೋರಿಸು, ನಿನ್ನ ಧ್ವನಿಯನ್ನು ಕೇಳಿಸು; ಯಾಕೆಂದರೆ ನಿನ್ನ ಸ್ವರ ಎಷ್ಟೋ ಇಂಪು, ನಿನ್ನ ರೂಪವು ಎಷ್ಟೋ ಅಂದ.”
15 要给我们擒拿狐狸, 就是毁坏葡萄园的小狐狸, 因为我们的葡萄正在开花。
೧೫ತೋಟಗಳನ್ನು ಹಾಳುಮಾಡುವ ನರಿಗಳನ್ನು, ನರಿಮರಿಗಳನ್ನು ಹಿಡಿಯಿರಿ; ಹೂಬಿಟ್ಟಿರುವ ನಮ್ಮ ದ್ರಾಕ್ಷಿ ತೋಟಗಳು ಹಾಳು.
16 良人属我,我也属他; 他在百合花中牧放群羊。
೧೬ಎನ್ನಿನಿಯನು ನನ್ನವನೇ, ನಾನು ಅವನವಳೇ, ನೆಲದಾವರೆಗಳ ಮಧ್ಯದಲ್ಲಿ ಮಂದೆಯನ್ನು ಮೇಯಿಸುವವನಾಗಿದ್ದಾನೆ.
17 我的良人哪, 求你等到天起凉风、 日影飞去的时候, 你要转回,好像羚羊, 或像小鹿在比特山上。
೧೭ಕತ್ತಲು ಕಳೆಯುವ ಮೊದಲು, ಹೊತ್ತು ಮೂಡುವ ಮೊದಲು ಹೊರಟು ಬಾ ನನ್ನ ಪ್ರಿಯನೇ, ಬೇತೆರ್ ಪರ್ವತದಲ್ಲಿ ಜಿಂಕೆಯಂತೆಯೂ ಪ್ರಾಯದ ಹರಿಣದಂತೆಯೂ ಇರು.