< 西番雅书 2 >
1 不知羞耻的国民哪,你们应当聚集! 趁命令没有发出, 日子过去如风前的糠, 耶和华的烈怒未临到你们, 他发怒的日子未到以先, 你们应当聚集前来。
೧ನಾಚಿಕೆಗೇಡಿ ಜನಾಂಗದವರೇ, ತೀರ್ಪು ಫಲಿಸುವುದರೊಳಗೆ, ಯೆಹೋವನ ಉಗ್ರಕೋಪವು ನಿಮ್ಮ ಮೇಲೆ ಬರುವುದಕ್ಕೆ ಮೊದಲೇ ಯೆಹೋವನ ಸಿಟ್ಟಿನ ದಿನವೂ ಉರಿದು ನಿಮ್ಮ ಮೇಲೆ ಬರುವುದಕ್ಕಿಂತ ಮೊದಲೇ, ನೀವೆಲ್ಲರೂ ಸೇರಿ ಬನ್ನಿರಿ, ಒಟ್ಟಾಗಿ ಕೂಡಿರಿ.
೨ಆ ಕಾಲವು ಹೊಟ್ಟಿನಂತೆ ಹಾರಿಹೋಗುತ್ತದಲ್ಲಾ.
3 世上遵守耶和华典章的谦卑人哪, 你们都当寻求耶和华! 当寻求公义谦卑, 或者在耶和华发怒的日子可以隐藏起来。
೩ಯೆಹೋವನ ನಿಯಮವನ್ನು ಕೈಕೊಂಡು ನಡೆಯುವ ಲೋಕದ ದೀನರೇ, ನೀವೆಲ್ಲರೂ ಯೆಹೋವನ ನೀತಿಯನ್ನು ಅನುಸರಿಸಿರಿ, ಧರ್ಮವನ್ನು ಅಭ್ಯಾಸಿಸಿರಿ, ನಮ್ರತೆಯನ್ನು ಹೊಂದಿಕೊಳ್ಳಿರಿ; ಬಹುಶಃ ಯೆಹೋವನ ಸಿಟ್ಟಿನ ದಿನದಲ್ಲಿ ನೀವು ಮರೆಯಾಗುವಿರಿ.
4 迦萨必致见弃; 亚实基伦必然荒凉。 人在正午必赶出亚实突的民; 以革伦也被拔出根来。
೪ಗಾಜ ಪಟ್ಟಣ ನಿರ್ಜನವಾಗುವುದು, ಅಷ್ಕೆಲೋನ್ ಹಾಳಾಗುವುದು, ಅಷ್ಡೋದ್ ನಿವಾಸಿಗಳನ್ನು ನಡು ಮಧ್ಯಾಹ್ನದಲ್ಲಿ ಆಕ್ರಮಿಸಿ ಓಡಿಸಿಬಿಡುವರು, ಎಕ್ರೋನ್ ನಗರ ನಿರ್ಮೂಲವಾಗುವುದು.
5 住沿海之地的基利提族有祸了! 迦南、非利士人之地啊,耶和华的话与你反对, 说:我必毁灭你,以致无人居住。
೫ಅಯ್ಯೋ, ಕರಾವಳಿಯಲ್ಲಿ ವಾಸಿಸುವ ಕೆರೇತ್ಯ ಜನಾಂಗವೇ, ನಿನ್ನ ಗತಿಯನ್ನು ಏನು ಹೇಳಲಿ! ಕಾನಾನೇ, ಫಿಲಿಷ್ಟಿಯ ದೇಶವೇ, ಯೆಹೋವನ ನುಡಿಯು ನಿನಗೆ ವಿರುದ್ಧವಾಗಿದೆ; ನಿನ್ನಲ್ಲಿ ವಾಸಿಸುವ ಜನರೇ ನಿಲ್ಲದಂತೆ ನಿನ್ನನ್ನು ನಾಶಮಾಡುವೆನು.
6 沿海之地要变为草场, 其上有牧人的住处和羊群的圈。
೬ಸಮುದ್ರ ತೀರದ ಆ ಪ್ರಾಂತ್ಯವು ಹುಲ್ಲುಗಾವಲಾಗಿ, ಕುರುಬರ ಗುಡಿಸಲಾಗಿ, ಹಿಂಡುಗಳ ದೊಡ್ಡಿಗಳು ಇವೇ ಅಲ್ಲಿರುವವು.
7 这地必为犹大家剩下的人所得; 他们必在那里牧放群羊, 晚上必躺卧在亚实基伦的房屋中; 因为耶和华—他们的 神必眷顾他们, 使他们被掳的人归回。
೭ಆ ಕರಾವಳಿಯು ಉಳಿದ ಯೆಹೂದ್ಯರ ಪಾಲಾಗುವುದು; ದನಕುರಿಗಳನ್ನು ಅಲ್ಲೇ ಮೇಯಿಸುವರು; ಸಂಜೆಗೆ ಅಷ್ಕೆಲೋನಿನ ಮನೆಗಳಲ್ಲಿ ಮಲಗಿಕೊಳ್ಳುವರು; ಅವರ ದೇವರಾದ ಯೆಹೋವನು ಅವರನ್ನು ಪರಾಂಬರಿಸಿ ಅವರ ದುರವಸ್ಥೆಯನ್ನು ತಪ್ಪಿಸುವನು.
8 我听见摩押人的毁谤和亚扪人的辱骂, 就是毁谤我的百姓,自夸自大, 侵犯他们的境界。
೮ಮೋವಾಬ್ಯರೂ, ಅಮ್ಮೋನ್ಯರೂ ಅಹಂಕಾರದಿಂದ ನನ್ನ ಜನರ ಮೇರೆಯನ್ನು ಮೀರಿ, ಅವರನ್ನು ನಿಂದಿಸಿ, ಅವರ ಮೇಲೆ ಹೊರಿಸಿರುವ ದೂರುದೂಷಣೆಗಳು ನನ್ನ ಕಿವಿಗೆ ಬಿದ್ದಿವೆ.
9 万军之耶和华—以色列的 神说: 我指着我的永生起誓: 摩押必像所多玛, 亚扪人必像蛾摩拉, 都变为刺草、盐坑、永远荒废之地。 我百姓所剩下的必掳掠他们; 我国中所余剩的必得着他们的地。
೯ಇಸ್ರಾಯೇಲರ ದೇವರಾದ ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ನನ್ನ ಜೀವದಾಣೆ, ಸೊದೋಮಿನ ಗತಿಯೇ ಮೋವಾಬಿಗೂ ಆಗುವುದು. ಗೊಮೋರದ ದುರ್ದಶೆಯೇ ಅಮ್ಮೋನ್ಯರಿಗೆ ಸಂಭವಿಸುವುದು; ಆ ಪ್ರಾಂತ್ಯಗಳು ಮುಳ್ಳುಗಿಡಗಳಿಂದಲೂ, ಸೌಳುಗುಂಡಿಗಳಿಂದಲೂ ತುಂಬಿಕೊಂಡು ನಿತ್ಯ ನಾಶನಕ್ಕೆ ಈಡಾಗುವವು; ನನ್ನ ಜನರಲ್ಲಿ ಉಳಿದವರು ಅವುಗಳನ್ನು ಸೂರೆಮಾಡುವರು. ಅಳಿದುಳಿದ ನನ್ನ ಜನರಿಗೆ ಅವು ಸ್ವಾಸ್ತ್ಯವಾಗುವವು.”
10 这事临到他们是因他们骄傲,自夸自大, 毁谤万军之耶和华的百姓。
೧೦ಆ ಪ್ರಾಂತ್ಯಗಳವರು ಸೇನಾಧೀಶ್ವರನಾದ ಯೆಹೋವನ ಜನರನ್ನು ದೂಷಿಸಿ, ಅವರ ಮೇಲೆ ಉಬ್ಬಿಕೊಂಡು ಬಂದುದ್ದರಿಂದ ಅವರ ಅಹಂಕಾರದ ನಿಮಿತ್ತವೇ ಅವರಿಗೆ ಈ ಗತಿಯಾಗುವುದು!
11 耶和华必向他们显可畏之威, 因他必叫世上的诸神瘦弱。 列国海岛的居民各在自己的地方敬拜他。
೧೧ಯೆಹೋವನು ಅವರಿಗೆ ಭಯಂಕರನಾಗುವನು; ಲೋಕದ ದೇವರುಗಳನ್ನೆಲ್ಲಾ ನಾಶಮಾಡುವನು; ಸಮಸ್ತ ಜನರು, ಪ್ರತಿಯೊಂದು ಪ್ರಾಂತ್ಯದ ನಿವಾಸಿಗಳು ಸಕಲ ಜನಾಂಗಗಳವರು ತಮ್ಮ ತಮ್ಮ ಸ್ಥಳಗಳಲ್ಲೇ ಆತನನ್ನು ಆರಾಧಿಸುವರು.
೧೨ಕೂಷಿನವರೇ, ನೀವು ಸಹ ನನ್ನ ಖಡ್ಗದಿಂದ ಹತರಾಗುವಿರಿ.
13 耶和华必伸手攻击北方,毁灭亚述, 使尼尼微荒凉,又干旱如旷野。
೧೩ಯೆಹೋವನು ಉತ್ತರಕ್ಕೆ ಕೈಚಾಚಿ ಅಶ್ಶೂರವನ್ನು ಧ್ವಂಸ ಮಾಡುವನು; ನಿನವೆಯನ್ನು ಹಾಳುಮಾಡಿ ನೀರಿಲ್ಲದ ಮರುಭೂಮಿಯಂತೆ ಒಣಗಿಸಿಬಿಡುವನು.
14 群畜,就是各国的走兽必卧在其中; 鹈鹕和箭猪要宿在柱顶上。 在窗户内有鸣叫的声音; 门槛都必毁坏, 香柏木已经露出。
೧೪ಜನಾಂಗಗಳ ಪಶುಗಳೆಲ್ಲಾ ಮಂದೆಮಂದೆಯಾಗಿ ಅದರ ಮಧ್ಯದಲ್ಲಿ ಮಲಗಿಕೊಳ್ಳುವವು; ಕೊಕ್ಕರೆಯೂ, ಮುಳ್ಳುಹಂದಿಯೂ ಹಟ್ಟಿಗಳಲ್ಲಿ ವಾಸಮಾಡಿಕೊಳ್ಳುವವು. ಗೂಬೆಯು ಕಿಟಕಿಗಳಲ್ಲಿ ಮನೆಕಂಬಗಳ ಮೇಲೆ ಚಿಲಿಪಿಲಿ ಗಾನವು ತಂಗುವವು; ಕಾಗೆಗಳ ಕೂಗು ಹೊಸ್ತಿಲುಗಳಲ್ಲಿ ಕೇಳುವುದು; ದೇವದಾರು ಹಲಿಗೆಯ ಹೊದಿಕೆಯು ಕೀಳಲ್ಪಡುವುದು.
15 这是素来欢乐安然居住的城, 心里说:惟有我,除我以外再没有别的; 现在何竟荒凉成为野兽躺卧之处! 凡经过的人都必摇手嗤笑她。
೧೫ಈ ನಿನವೆಯು ಮೊದಲು ಉಲ್ಲಾಸದ ನಗರಿಯಾಗಿ ನೆಮ್ಮದಿಯಿಂದ ನೆಲೆಗೊಂಡಿದ್ದು ತನ್ನ ಹೃದಯದೊಳಗೆ, “ನಾನೇ ಇರುವವಳು, ನನ್ನ ಹೊರತು ಇನ್ನು ಯಾರೂ ಇಲ್ಲ” ಅಂದುಕೊಳ್ಳುತ್ತಿತ್ತು; ಅಯ್ಯೋ, ಎಷ್ಟೋ ಹಾಳಾಗಿ ಹೋಗಿ ಮೃಗಗಳು ತಂಗುವ ಕೊಟ್ಟಿಗೆಯ ಬೀಡಾಗಿದೆ! ಅದರ ಮುಂದೆ ಹಾದುಹೋಗುವವರೆಲ್ಲರು ಸಿಳ್ಳು ಹಾಕಿ ಅಪಹಾಸ್ಯ ಮಾಡುತ್ತಾರೆ.