< 歷代志上 19 >
೧ಇದಾದನಂತರ ಅಮ್ಮೋನಿಯರ ಅರಸನಾದ ನಾಹಾಷನು ಸತ್ತನು. ಅವನಿಗೆ ಬದಲಾಗಿ ಅವನ ಮಗನು ಅರಸನಾದನು.
2 大衛說:「我要照哈嫩的父親拿轄厚待我的恩典厚待哈嫩。」於是大衛差遣使者為他喪父安慰他。大衛的臣僕到了亞捫人的境內見哈嫩,要安慰他,
೨ದಾವೀದನು, “ನಾಹಾಷನು ನನಗೆ ದಯೆತೋರಿಸಿದ್ದರಿಂದ ನಾನೂ ಅವನ ಮಗನಾದ ಹಾನೂನನಿಗೆ ದಯೆತೋರಿಸುವೆನು” ಅಂದುಕೊಂಡು ಪಿತೃಶೋಕದಲ್ಲಿದ್ದ ಹಾನೂನನನ್ನು ಸಂತೈಸುವುದಕ್ಕೋಸ್ಕರ ದೂತರನ್ನು ಕಳುಹಿಸಿದನು. ದಾವೀದನ ಸೇವಕರು ಹಾನೂನನನ್ನು ಸಂತೈಸುವುದಕ್ಕೋಸ್ಕರ ಅಮ್ಮೋನಿಯರ ದೇಶಕ್ಕೆ ಬಂದರು.
3 但亞捫人的首領對哈嫩說:「大衛差人來安慰你,你想他是尊敬你父親嗎?他的臣僕來見你不是為詳察窺探、傾覆這地嗎?」
೩ಆಗ ಅಮ್ಮೋನ್ ಪ್ರಭುಗಳು ಹಾನೂನನಿಗೆ, “ದಾವೀದನು ನಿನ್ನ ಬಳಿಗೆ ಸಂತೈಸುವವರನ್ನು ಕಳುಹಿಸಿದ್ದರಿಂದ ಅವನು ನಿನ್ನ ತಂದೆಯನ್ನು ಸನ್ಮಾನಿಸುವವನಾಗಿದ್ದಾನೆಂದು ನೆನಸುತ್ತೀಯೋ? ಅವನ ಆಳುಗಳು ದೇಶವನ್ನು ಸಂಚರಿಸಿ ನೋಡಿ, ಅದನ್ನು ಸ್ವಾಧೀನಮಾಡಿಕೊಳ್ಳಬೇಕೆಂದು ಬಂದಿದ್ದಾರೆ” ಎಂದು ಹೇಳಿದರು.
4 哈嫩便將大衛臣僕的鬍鬚剃去一半,又割斷他們下半截的衣服,使他們露出下體,打發他們回去。
೪ಆದುದರಿಂದ ಹಾನೂನನು ದಾವೀದನ ಸೇವಕರನ್ನು ಹಿಡಿಸಿ, ಗಡ್ಡದ ಅರ್ಧ ಭಾಗವನ್ನು ಬೋಳಿಸಿ, ಅವರ ಸೊಂಟದ ಕೆಳಭಾಗದ ನಿಲುವಂಗಿಗಳನ್ನು ಕತ್ತರಿಸಿ ಕಳುಹಿಸಿಬಿಟ್ಟನು.
5 有人將臣僕所遇的事告訴大衛,他就差人去迎接他們,因為他們甚覺羞恥;告訴他們說:「可以住在耶利哥,等到鬍鬚長起再回來。」
೫ಅವರು ಹೋಗಿ ಈ ವರ್ತಮಾನವನ್ನು ದಾವೀದನಿಗೆ ಹೇಳಿಕಳುಹಿಸಿದಾಗ ಅವನು ಬಹಳ ಅವಮಾನಹೊಂದಿ ಅವರಿಗೆ ಆಳುಗಳ ಮುಖಾಂತರವಾಗಿ, “ನಿಮ್ಮ ಗಡ್ಡ ಬೆಳೆಯುವವರೆಗೆ ನೀವು ಯೆರಿಕೋವಿನಲ್ಲಿದ್ದು ಅನಂತರ ಬನ್ನಿರಿ” ಎಂದು ಹೇಳಿಸಿದನು.
6 亞捫人知道大衛憎惡他們,哈嫩和亞捫人就打發人拿一千他連得銀子,從美索不達米亞、亞蘭、瑪迦、瑣巴雇戰車和馬兵,
೬ತಾವು ದಾವೀದನಿಗೆ ಅಸಹ್ಯರಾದೆವೆಂದು ಹಾನೂನನೂ ಮತ್ತು ಅಮ್ಮೋನಿಯರೂ ತಿಳಿದು ಎರಡು ನದಿಗಳ ಮಧ್ಯದಲ್ಲಿರುವ ಅರಾಮ್ ಸೀಮೆಯಿಂದಲೂ, ಮಾಕದಿಂದಲೂ, ಚೋಬಾ ರಾಜ್ಯದಿಂದಲೂ ರಥಗಳನ್ನೂ, ರಾಹುತರನ್ನು ತರಿಸುವುದಕ್ಕೋಸ್ಕರ ಸಾವಿರ ತಲಾಂತು ಬೆಳ್ಳಿಯನ್ನೂ ಕಳುಹಿಸಿದರು.
7 於是雇了三萬二千輛戰車和瑪迦王並他的軍兵;他們來安營在米底巴前。亞捫人也從他們的城裏出來,聚集交戰。
೭ಆಗ ಮೂವತ್ತೆರಡು ಸಾವಿರ ರಥಬಲದವರೂ, ಮಾಕದ ಅರಸನೂ ಮತ್ತು ಅವನ ದಂಡಾಳುಗಳು ಬಂದು ಅವರ ಸಹಾಯಕ್ಕೋಸ್ಕರ ಮೇದೆಬ ಊರಿನ ಮುಂದೆ ಪಾಳೆಯ ಮಾಡಿಕೊಂಡರು. ಅಮ್ಮೋನಿಯರೂ ತಮ್ಮ ಪಟ್ಟಣಗಳಿಂದ ಯುದ್ಧಕ್ಕೆ ಕೂಡಿಬಂದರು.
೮ಈ ಸುದ್ದಿಯು ದಾವೀದನಿಗೆ ಮುಟ್ಟಿದಾಗ ಅವನು ಯೋವಾಬನನ್ನೂ, ಎಲ್ಲಾ ಶೂರಸೈನಿಕರನ್ನೂ ಕಳುಹಿಸಿದನು.
9 亞捫人出來在城門前擺陣,所來的諸王另在郊野擺陣。
೯ಕೂಡಲೆ ಅಮ್ಮೋನಿಯರು ಹೊರಗೆ ಬಂದು ಊರ ಬಾಗಿಲಿನ ಬಳಿಯಲ್ಲಿ ವ್ಯೂಹಕಟ್ಟಿದರು. ಅವರ ಸಹಾಯಕ್ಕಾಗಿ ಬಂದ ಅರಸರು ಪ್ರತ್ಯೇಕವಾಗಿ ಮೈದಾನದಲ್ಲಿ ನಿಂತರು.
10 約押看見敵人在他前後擺陣,就從以色列軍中挑選精兵,使他們對着亞蘭人擺陣;
೧೦ಯೋವಾಬನು ತನ್ನ ಮುಂದೆಯೂ ಹಿಂದೆಯೂ ಯುದ್ಧ ಪ್ರಾರಂಭವಾದದ್ದನ್ನು ಕಂಡು ಇಸ್ರಾಯೇಲ್ಯರಲ್ಲಿ ಶ್ರೇಷ್ಠರಾದ ಎಲ್ಲಾ ಸೈನಿಕರನ್ನು ಆರಿಸಿಕೊಂಡು, ಅವರನ್ನು ಅರಾಮ್ಯರಿಗೆ ವಿರೋಧವಾಗಿ ನಿಲ್ಲಿಸಿದನು.
೧೧ಉಳಿದ ಜನರನ್ನು ತನ್ನ ತಮ್ಮನಾದ ಅಬ್ಷೈಯ ವಶಕ್ಕೆ ಕೊಟ್ಟು ಅವನಿಗೆ,
12 約押對亞比篩說:「亞蘭人若強過我,你就來幫助我;亞捫人若強過你,我就去幫助你。
೧೨“ಅರಾಮ್ಯರು ನನ್ನನ್ನು ಸೋಲಿಸುವಂತೆ ಕಂಡರೆ ನೀನು ನನ್ನ ಸಹಾಯಕ್ಕೆ ಬಾ, ಅಮ್ಮೋನಿಯರು ನಿನ್ನನ್ನು ಸೋಲಿಸುವಂತೆ ಕಂಡರೆ ನಾನು ನಿನ್ನ ಸಹಾಯಕ್ಕೆ ಬರುವೆನು.
13 我們都當剛強,為本國的民和上帝的城邑作大丈夫,願耶和華憑他的意旨而行。」
೧೩ಧೈರ್ಯದಿಂದಿರು, ನಮ್ಮ ಜನರಿಗೋಸ್ಕರವೂ, ನಮ್ಮ ದೇವರ ಪಟ್ಟಣಗಳಿಗೋಸ್ಕರವೂ, ನಮ್ಮ ಪೌರುಷವನ್ನು ತೋರಿಸೋಣ. ಯೆಹೋವನು ತನಗೆ ಸರಿಕಾಣುವ ಹಾಗೆ ಮಾಡಲಿ” ಎಂದು ಹೇಳಿ ಅವನನ್ನು ಅಮ್ಮೋನಿಯರಿಗೆ ವಿರುದ್ಧವಾಗಿ ಕಳುಹಿಸಿದನು.
14 於是約押和跟隨他的人前進攻打亞蘭人;亞蘭人在約押面前逃跑。
೧೪ಯೋವಾಬನೂ ಅವನ ಜನರೂ ಅರಾಮ್ಯರಿಗೆ ವಿರುದ್ಧವಾಗಿ ಯುದ್ಧಪ್ರಾರಂಭಿಸಿದಾಗ ಅರಾಮ್ಯರು ಓಡಿಹೋದರು.
15 亞捫人見亞蘭人逃跑,他們也在約押的兄弟亞比篩面前逃跑進城。約押就回耶路撒冷去了。
೧೫ಅವರು ಓಡಿಹೋಗುವುದನ್ನು ಅಮ್ಮೋನಿಯರು ಕಂಡು ಅವರೂ ಅವನ ತಮ್ಮನಾದ ಅಬ್ಷೈಯ ಎದುರಿನಿಂದ ಓಡಿಹೋಗಿ ಪಟ್ಟಣವನ್ನು ಪ್ರವೇಶಿಸಿದರು. ಯೋವಾಬನು ಯೆರೂಸಲೇಮಿಗೆ ಹೋದನು.
16 亞蘭人見自己被以色列人打敗,就打發使者將大河那邊的亞蘭人調來,哈大利謝的將軍朔法率領他們。
೧೬ಅರಾಮ್ಯರಿಗೆ ತಾವು ಇಸ್ರಾಯೇಲರಿಂದ ಅಪಜಯ ಹೊಂದಿದ್ದೇವೆಂದು ಗೊತ್ತಾದಾಗ ಅವರು ಯೂಫ್ರೆಟಿಸ್ ನದಿಯ ಆಚೆಯಲ್ಲಿದ್ದ ಅರಾಮ್ಯರನ್ನು ಕರೆಕಳುಹಿಸಿದರು. ಹದರೆಜರನ ಸೇನಾಧಿಪತಿಯಾದ ಶೋಫಕನು ಅವರ ನಾಯಕನಾದನು.
17 有人告訴大衛,他就聚集以色列眾人過約旦河,來到亞蘭人那裏,迎着他們擺陣。大衛既擺陣攻擊亞蘭人,亞蘭人就與他打仗。
೧೭ಈ ಸುದ್ದಿಯು ದಾವೀದನಿಗೆ ಮುಟ್ಟಿದಾಗ ಅವನು ಇಸ್ರಾಯೇಲರನ್ನು ಕೂಡಿಸಿಕೊಂಡು ಯೊರ್ದನ್ ಹೊಳೆಯನ್ನು ದಾಟಿ, ಅರಾಮ್ಯರ ಸಮೀಪಕ್ಕೆ ಬಂದು ಅವರೊಡನೆ ಕಾದಾಡುವುದಕ್ಕೊಸ್ಕರ ವ್ಯೂಹ ಕಟ್ಟಿದನು.
18 亞蘭人在以色列人面前逃跑。大衛殺了亞蘭七千輛戰車的人,四萬步兵,又殺了亞蘭的將軍朔法。
೧೮ಅರಾಮ್ಯರು ಯುದ್ಧಕ್ಕೆ ನಿಂತಾಗ ಇಸ್ರಾಯೇಲರ ಮುಂದೆ ಸೋತು ಓಡಿಹೋದರು. ದಾವೀದನು ಅರಾಮ್ಯರ ಏಳುಸಾವಿರ ರಥಗಳನ್ನು ಹಾಳುಮಾಡಿ, ನಲ್ವತ್ತು ಸಾವಿರ ಕಾಲಾಳುಗಳನ್ನು ಕೊಂದುಬಿಟ್ಟನು. ಅವನು ಸೇನಾಧಿಪತಿಯಾದ ಶೋಫಕನನ್ನೂ ಕೊಂದನು.
19 屬哈大利謝的諸王見自己被以色列人打敗,就與大衛和好,歸服他。於是亞蘭人不敢再幫助亞捫人了。
೧೯ಹದರೆಜರನ ದಾಸರು ಇಸ್ರಾಯೇಲರ ಮುಂದೆ ತಮ್ಮ ಕೈ ಸಾಗದೆಂದು ತಿಳಿದು ದಾವೀದನೊಡನೆ ಒಪ್ಪಂದ ಮಾಡಿಕೊಂಡು ಅವನ ದಾಸರಾದರು. ಅಂದಿನಿಂದ ಅರಾಮ್ಯರು ಅಮ್ಮೋನಿಯರಿಗೆ ಸಹಾಯಮಾಡುವುದಕ್ಕೆ ಮನಸ್ಸು ಮಾಡಲ್ಲಿಲ್ಲ.