< 歷代志上 8 >

1 便雅憫的長子比拉,次子亞實別,三子亞哈拉,
ಬೆನ್ಯಾಮೀನನ ಮಕ್ಕಳು: ಬೆಳನು ಚೊಚ್ಚಲ ಮಗ. ಅಷ್ಬೇಲ್ ಎರಡನೆಯವನು, ಅಹ್ರಹ ಮೂರನೆಯವನು,
2 四子挪哈,五子拉法。
ನೋಹ ನಾಲ್ಕನೆಯವನು, ರಾಫ ಐದನೆಯವನು.
3 比拉的兒子是亞大、基拉、亞比忽、
ಬೆಳನ ಮಕ್ಕಳು: ಅದ್ದಾರ್, ಗೇರ, ಅಬೀಹೂದ್,
4 亞比書、乃幔、亞何亞、
ಅಬೀಷೂವ, ನಾಮಾನ್, ಅಹೋಹ,
5 基拉、示孚汛、戶蘭。
ಗೇರ, ಶೆಪೂಫಾನ್ ಮತ್ತು ಹೂರಾಮ್ ಎಂಬವರು.
6 以忽的兒子作迦巴居民的族長,被擄到瑪拿轄;
ಏಹೂದನ ಸಂತಾನದವರು ಗೆಬ ಊರಿನ ಎಲ್ಲಾ ಕುಟುಂಬಗಳಲ್ಲಿ ಪ್ರಮುಖರು.
7 以忽的兒子乃幔、亞希亞、基拉也被擄去。基拉生烏撒、亞希忽。
ನಾಮಾನ್, ಅಹೀಯ ಮತ್ತು ಗೇರ ಇವರು ಮಾನಹತಿಗೆ ಒಯ್ಯಲ್ಪಟ್ಟರು. ಏಹೂದನು ಉಚ್ಚ ಮತ್ತು ಅಹೀಹುದ್ ಇವರನ್ನು ಪಡೆದನು.
8 沙哈連休他二妻戶伸和巴拉之後,在摩押地生了兒子。
ಶಹರಯಿಮನು ತನ್ನ ಹೆಂಡತಿಯರಾದ ಹೂಷೀಮ್ ಮತ್ತು ಬಾರ ಎಂಬವರನ್ನು ತ್ಯಜಿಸಿ,
9 他與妻賀得同房,生了約巴、洗比雅、米沙、瑪拉干、
ಮತ್ತೊಬ್ಬ ಹೆಂಡತಿಯಾದ ಹೋದೆಷಳಿಂದ ಮೋವಾಬ್ ದೇಶದಲ್ಲಿ ಯೋವಾಬ್, ಚಿಬ್ಯ, ಮೇಷ, ಮಲ್ಕಾಮ್, ಯೆಯೂಚ್, ಸಾಕ್ಯ ಮತ್ತು ಮಿರ್ಮ ಇವರನ್ನು ಪಡೆದನು.
10 耶烏斯、沙迦、米瑪。他這些兒子都是族長。
೧೦ಶಹರಯಿಮನ ಮಕ್ಕಳಾದ ಇವರು ಗೋತ್ರ ಪ್ರಧಾನರಾಗಿದ್ದರು.
11 他的妻戶伸給他生的兒子有亞比突、以利巴力。
೧೧ಇದಲ್ಲದೆ ಅವನು ಹುಷೀಮಳಿಂದ ಅಬೀಟೂಬ್, ಎಲ್ಪಾಲ ಇವರನ್ನು ಪಡೆದನು.
12 以利巴力的兒子是希伯、米珊、沙麥。沙麥建立阿挪和羅德二城與其村莊。
೧೨ಎಲ್ಪಾಲನ ಮಕ್ಕಳು ಏಬರ್, ಮಿಷ್ಷಾಮ್ ಮತ್ತು ಶೆಮೆದ್. ಇವರೂ ಓನೋ, ಲೋದ್ ಎಂಬ ಪಟ್ಟಣಗಳನ್ನೂ, ಅವುಗಳಿಗೆ ಸೇರಿದ ಗ್ರಾಮಗಳನ್ನೂ ಕಟ್ಟಿಸಿದರು.
13 又有比利亞和示瑪是亞雅崙居民的族長,是驅逐迦特人的。
೧೩ಅಯ್ಯಾಲೋನ್ ಊರಿನ ಕುಟುಂಬಗಳಲ್ಲಿ ಪ್ರಮುಖರೂ, ಗತ್ ಊರಿನವರನ್ನು ಓಡಿಸಿ ಬಿಟ್ಟವರು ಬೆರೀಯ ಮತ್ತು ಶಮ.
14 亞希約、沙煞、耶利末、
೧೪ಅಹಿಯೋ, ಶಾಷಕ್, ಯೆರೇಮೋತ್,
15 西巴第雅、亞拉得、亞得、
೧೫ಜೆಬದ್ಯ, ಅರಾದ್, ಎದೆರ್,
16 米迦勒、伊施巴、約哈都是比利亞的兒子。
೧೬ಮಿಕಾಯೇಲ್, ಇಷ್ಪ ಮತ್ತು ಯೋಹ ಬೆರೀಯನ ಮಕ್ಕಳು.
17 西巴第雅、米書蘭、希西基、希伯、
೧೭ಎಲ್ಪಾಲನ ಮಕ್ಕಳು ಜೆಬದ್ಯ, ಮೆಷುಲ್ಲಾಮ್, ಹೆಬೆರ್, ಹಿಜ್ಕೀ,
18 伊施米萊、伊斯利亞、約巴都是以利巴力的兒子。
೧೮ಇಷ್ಮೆರೈ, ಇಜ್ಲೀಯ ಮತ್ತು ಯೋಬಾಬ್.
19 雅金、細基利、撒底、
೧೯ಯಾಕೀಮ್, ಜಿಕ್ರೀ, ಜಬ್ದೀ,
20 以利乃、洗勒太、以列、
೨೦ಎಲೀಗೇನೈ, ಚಿಲ್ಲೆತೈ, ಎಲೀಯೇಲ್,
21 亞大雅、比拉雅、申拉都是示每的兒子。
೨೧ಆದಾಯ, ಬೆರಾಯ ಮತ್ತು ಶಿಮ್ರಾತ್ ಇವರು ಶಮ್ಮೀಯ ಮಕ್ಕಳು.
22 伊施班、希伯、以列、
೨೨ಇಷ್ಪಾನ್, ಏಬೆರ್, ಎಲೀಯೇಲ್,
23 亞伯頓、細基利、哈難、
೨೩ಅಬ್ದೋನ್, ಜಿಕ್ರೀ, ಹಾನಾನ್, ಹನನ್ಯ, ಏಲಾಮ್, ಅನೆತೋತೀಯ,
24 哈拿尼雅、以攔、安陀提雅、
೨೪
25 伊弗底雅、毗努伊勒都是沙煞的兒子。
೨೫ಇಫ್ದೆಯಾಹ ಮತ್ತು ಪೆನೂವೇಲನು ಇವರು ಶಾಷಕನ ಮಕ್ಕಳು.
26 珊示萊、示哈利、亞他利雅、
೨೬ಶಂಷೆರೈ, ಶೆಹರ್ಯ, ಅತಲ್ಯ,
27 雅利西、以利亞、細基利都是耶羅罕的兒子。
೨೭ಯಾರೆಷ್ಯ, ಏಲೀಯ ಮತ್ತು ಜಿಕ್ರೀ ಇವರು ಯೆರೋಹಾಮನ ಮಕ್ಕಳು.
28 這些人都是著名的族長,住在耶路撒冷。
೨೮ಇವರು ವಂಶಾವಳಿಯ ಪ್ರಕಾರ ಗೋತ್ರಪ್ರಧಾನರೂ, ಯೆರೂಸಲೇಮಿನಲ್ಲಿ ವಾಸಿಸುವವರೂ ಆಗಿದ್ದರು.
29 在基遍住的有基遍的父親耶利。他的妻名叫瑪迦;
೨೯ಗಿಬ್ಯೋನಿನಲ್ಲಿ ಗಿಬ್ಯೋನ್ಯರ ಮೂಲಪುರುಷನಾದ ಯೆಗೂವೇಲ್ ವಾಸಿಸುತ್ತಿದ್ದನು. ಅವನ ಹೆಂಡತಿಯ ಹೆಸರು ಮಾಕ.
30 他長子是亞伯頓。他又生蘇珥、基士、巴力、拿答、
೩೦ಚೊಚ್ಚಲ ಮಗನು ಅಬ್ದೋನನು, ತರುವಾಯ ಹುಟ್ಟಿದವರು, ಚೂರ್, ಕೀಷ್, ಬಾಳ್, ನಾದಾಬ್,
31 基多、亞希約、撒迦、米基羅。
೩೧ಗೆದೋರ್, ಅಹ್ಯೋ ಮತ್ತು ಜೆಕೆರ್ ಇವರು.
32 米基羅生示米暗。這些人和他們的弟兄在耶路撒冷對面居住。
೩೨ಮಿಕ್ಲೋತನು ಶಿಮಾಹನನ್ನು ಪಡೆದನು. ಇವರು ತಮ್ಮ ಗೋತ್ರದ ಕುಟುಂಬದವರೊಂದಿಗೆ ಯೆರೂಸಲೇಮಿನಲ್ಲಿ ವಾಸಿಸುತ್ತಿದ್ದರು.
33 尼珥生基士;基士生掃羅;掃羅生約拿單、麥基舒亞、亞比拿達、伊施‧巴力。
೩೩ನೇರನು ಕೀಷನನ್ನು ಪಡೆದನು; ಕೀಷನು ಸೌಲನನ್ನು ಪಡೆದನು; ಸೌಲನು ಯೋನಾತಾನ್, ಮಲ್ಕೀಷೂವ, ಅಬೀನಾದಾಬ್ ಮತ್ತು ಎಷ್ಬಾಳ ಇವರನ್ನು ಪಡೆದನು.
34 約拿單的兒子是米力‧巴力;米力‧巴力生米迦。
೩೪ಯೋನಾತಾನನು ಮೆರೀಬ್ಬಾಳನನ್ನು ಪಡೆದನು; ಮೆರೀಬ್ಬಾಳನು ಮೀಕನನ್ನು ಪಡೆದನು.
35 米迦的兒子是毗敦、米勒、他利亞、亞哈斯;
೩೫ಮೀಕನ ಮಕ್ಕಳು: ಪೀತೋನ್, ಮೆಲೆಕ್, ತರೇಯ, ಆಹಾಜ್ ಇವರೇ.
36 亞哈斯生耶何阿達;耶何阿達生亞拉篾、亞斯瑪威、心利;心利生摩撒;
೩೬ಆಹಾಜನು ಯೆಹೋವದ್ದಾಹನನ್ನು ಪಡೆದನು. ಯೆಹೋವದ್ದಾಹನು ಆಲೆಮೆತ್, ಅಜ್ಮಾವೆತ್, ಜಿಮ್ರೀ ಇವರನ್ನು ಪಡೆದನು.
37 摩撒生比尼亞;比尼亞的兒子是拉法;拉法的兒子是以利亞薩;以利亞薩的兒子是亞悉。
೩೭ಜಿಮ್ರೀಯು ಮೋಚನನ್ನು ಪಡೆದನು. ಮೋಚನು ಬಿನ್ನನನ್ನು ಪಡೆದನು. ಇವನ ಮಗ ರಾಫ. ಇವನ ಮಗನು ಎಲ್ಲಾಸ. ಇವನ ಮಗನು ಅಚೇಲ.
38 亞悉有六個兒子,他們的名字是亞斯利干、波基路、以實瑪利、示亞利雅、俄巴底雅、哈難。這都是亞悉的兒子。
೩೮ಅಚೇಲನಿಗೆ ಆರು ಮಂದಿ ಮಕ್ಕಳಿದ್ದರು. ಅವರ ಹೆಸರುಗಳು ಅಜ್ರೀಕಾಮ್, ಬೋಕೆರೂ, ಇಷ್ಮಾಯೇಲ್, ಶೆಯರ್ಯ, ಓಬದ್ಯ ಮತ್ತು ಹಾನಾನ್.
39 亞悉兄弟以設的長子是烏蘭,次子耶烏施,三子是以利法列。
೩೯ಆಚೇಲನ ತಮ್ಮನಾದ ಏಷಕನ ಮಕ್ಕಳು: ಚೊಚ್ಚಲು ಮಗ ಊಲಾಮ್, ಎರಡನೆಯವನು ಯೆಯೂಷ್, ಮೂರನೆಯವನಾದ ಎಲೀಫೆಲೆಟ್.
40 烏蘭的兒子都是大能的勇士,是弓箭手,他們有許多的子孫,共一百五十名,都是便雅憫人。
೪೦ಊಲಾಮನ ಮಕ್ಕಳು ಬಿಲ್ಲನ್ನು ಉಪಯೋಗಿಸುವುದರಲ್ಲಿ ಗಟ್ಟಿಗರಾದ ರಣವೀರರು. ಅವರು ಅನೇಕ ಮಂದಿ ಮಕ್ಕಳನ್ನೂ, ಮೊಮ್ಮಕ್ಕಳನ್ನೂ ಪಡೆದರು. ಒಟ್ಟು ನೂರ ಐವತ್ತು ಜನರು ಅವರ ಕುಟುಂಬದಲ್ಲಿದ್ದರು. ಎಲ್ಲರೂ ಬೆನ್ಯಾಮೀನ್ಯರು.

< 歷代志上 8 >