< 撒母耳記上 1 >

1 以法蓮山地的拉瑪‧瑣非有一個以法蓮人,名叫以利加拿,是蘇弗的玄孫,託戶的曾孫,以利戶的孫子,耶羅罕的兒子。
ಎಫ್ರಾಯೀಮ್ ಬೆಟ್ಟದ ಸೀಮೆಯಲ್ಲಿನ ರಾಮಾತಯಿಮ್ ಚೋಫೀಮ್ ಊರಿನಲ್ಲಿ ಎಲ್ಕಾನನೆಂಬ ಒಬ್ಬ ಮನುಷ್ಯನಿದ್ದನು. ಇವನು ಯೆರೋಹಾಮನ ಮಗನೂ ಎಲೀಹುವಿನ ಮೊಮ್ಮಗನೂ ತೋಹುವಿನ ಮರಿಮಗನೂ ಆಗಿದ್ದನು. ತೋಹು ಎಂಬವನು ಎಫ್ರಾಯೀಮ್ಯನಾದ ಚೂಫನ ಮಗನು.
2 他有兩個妻:一名哈拿,一名毗尼拿。毗尼拿有兒女,哈拿沒有兒女。
ಎಲ್ಕಾನನಿಗೆ ಇಬ್ಬರು ಹೆಂಡತಿಯರಿದ್ದರು. ಮೊದಲನೆಯವಳು ಹನ್ನಳು, ಎರಡನೆಯವಳು ಪೆನಿನ್ನಳು. ಪೆನಿನ್ನಳಿಗೆ ಮಕ್ಕಳಿದ್ದರು; ಹನ್ನಳಿಗೆ ಮಕ್ಕಳಿರಲಿಲ್ಲ.
3 這人每年從本城上到示羅,敬拜祭祀萬軍之耶和華;在那裏有以利的兩個兒子何弗尼、非尼哈當耶和華的祭司。
ಅವನು ಪ್ರತಿವರ್ಷವೂ ಸೇನಾಧೀಶ್ವರನಾದ ಯೆಹೋವನಿಗೆ ಯಜ್ಞವನ್ನು ಸಮರ್ಪಿಸಿ ಆತನನ್ನು ಆರಾಧಿಸುವುದಕ್ಕೋಸ್ಕರ ತನ್ನ ಊರಿನಿಂದ ಶೀಲೋವಿಗೆ ಹೋಗುತ್ತಿದ್ದನು. ಅಲ್ಲಿ ಏಲಿಯನ ಮಕ್ಕಳಾದ ಹೊಫ್ನಿ ಮತ್ತು ಫೀನೆಹಾಸ್ ಎಂಬವರು ಯೆಹೋವನ ಯಾಜಕರಾಗಿದ್ದರು.
4 以利加拿每逢獻祭的日子,將祭肉分給他的妻毗尼拿和毗尼拿所生的兒女;
ಎಲ್ಕಾನನು ಯಜ್ಞವನ್ನರ್ಪಿಸಿದಾಗೆಲ್ಲಾ ತನ್ನ ಹೆಂಡತಿಯಾದ ಪೆನಿನ್ನಳಿಗೂ ಆಕೆಯ ಎಲ್ಲಾ ಗಂಡು ಹೆಣ್ಣುಮಕ್ಕಳಿಗೂ ಭಾಗಗಳನ್ನು ಕೊಡುತ್ತಿದ್ದನು.
5 給哈拿的卻是雙分,因為他愛哈拿。無奈耶和華不使哈拿生育。
ಅವನು ಹನ್ನಳನ್ನು ಬಹಳವಾಗಿ ಪ್ರೀತಿಸಿದರೂ, ಯೆಹೋವನು ಆಕೆಯ ಗರ್ಭವನ್ನು ಮುಚ್ಚಿದ್ದರಿಂದ ಅವನು ಆಕೆಗೆ ಎರಡು ಭಾಗವನ್ನು ಕೊಡುತ್ತಿದ್ದನು.
6 毗尼拿見耶和華不使哈拿生育,就作她的對頭,大大激動她,要使她生氣。
ಇದಲ್ಲದೆ ಆಕೆಯ ಸವತಿಯಾದ ಪೆನಿನ್ನಳು, “ಯೆಹೋವನು ನಿನ್ನನ್ನು ಬಂಜೆಯನ್ನಾಗಿ ಮಾಡಿದ್ದಾನೆ” ಎಂದು ಹೇಳಿ ಆಕೆಯನ್ನು ಕೆಣಕಿ ನೋಯಿಸುತ್ತಿದ್ದಳು.
7 每年上到耶和華殿的時候,以利加拿都以雙分給哈拿;毗尼拿仍是激動她,以致她哭泣不吃飯。
ಅವರು ಪ್ರತಿವರ್ಷವೂ ಕುಟುಂಬವಾಗಿ ಯೆಹೋವನ ಮಂದಿರಕ್ಕೆ ಹೋದಾಗೆಲ್ಲಾ ಪೆನಿನ್ನಳು ಆಕೆಯನ್ನು ಕೆಣಕುತ್ತಿದ್ದುದರಿಂದ ಹನ್ನಳು ಊಟ ಮಾಡದೆ ಅಳುತ್ತಾ ಇದ್ದಳು.
8 她丈夫以利加拿對她說:「哈拿啊,你為何哭泣,不吃飯,心裏愁悶呢?有我不比十個兒子還好嗎?」
ಆಗ ಆಕೆಯ ಗಂಡನಾದ ಎಲ್ಕಾನನು ಆಕೆಗೆ “ಹನ್ನಾ, ಏಕೆ ಅಳುತ್ತೀ? ಊಟ ಮಾಡದಿರುವುದಕ್ಕೆ ಕಾರಣವೇನು? ನೀನು ವ್ಯಸನಪಡುವುದೇಕೆ? ನಾನು ನಿನಗೆ ಹತ್ತು ಮಂದಿ ಗಂಡು ಮಕ್ಕಳಿಗಿಂತ ಹೆಚ್ಚಾಗಿದ್ದೇನಲ್ಲಾ” ಅಂದನು.
9 他們在示羅吃喝完了,哈拿就站起來。祭司以利在耶和華殿的門框旁邊,坐在自己的位上。
ಅವರು ಶೀಲೋವಿನಲ್ಲಿದ್ದ ಒಂದು ಸಂದರ್ಭದಲ್ಲಿ, ಅನ್ನಪಾನಗಳನ್ನು ತೆಗೆದುಕೊಂಡ ಮೇಲೆ, ಹನ್ನಳು ಎದ್ದು ಯೆಹೋವನ ಮಂದಿರಕ್ಕೆ ಹೋದಳು. ಯಾಜಕನಾದ ಏಲಿಯು ಮಂದಿರದ್ವಾರದ ನಿಲುವುಗಳ ಬಳಿಯಲ್ಲಿದ್ದ ತನ್ನ ಪೀಠದ ಮೇಲೆ ಕುಳಿತ್ತಿದ್ದನು.
10 哈拿心裏愁苦,就痛痛哭泣,祈禱耶和華,
೧೦ಹನ್ನಳು ಬಹುದುಃಖದಿಂದ ಕಣ್ಣೀರು ಸುರಿಸುತ್ತಾ ಯೆಹೋವನಿಗೆ,
11 許願說:「萬軍之耶和華啊,你若垂顧婢女的苦情,眷念不忘婢女,賜我一個兒子,我必使他終身歸與耶和華,不用剃頭刀剃他的頭。」
೧೧“ಸೇನಾಧೀಶ್ವರನಾದ ಯೆಹೋವನೇ, ನಿನ್ನ ದಾಸಿಯ ದುಃಖವನ್ನು ಪರಾಂಬರಿಸು; ನಿನ್ನ ದಾಸಿಯನ್ನು ಮರೆಯದೆ ನನ್ನನ್ನು ನೆನಪಿಸಿಕೊಂಡು ನನಗೊಬ್ಬ ಮಗನನ್ನು ಕೊಡಬೇಕು; ಅವನು ಜೀವದಿಂದಿರುವ ತನಕ ನಿನ್ನವನಾಗಿಯೇ ಇರುವ ಹಾಗೆ ಅವನನ್ನು ನಿನಗೆ ಪ್ರತಿಷ್ಠಿಸುವೆನು; ಅವನ ತಲೆಯ ಮೇಲೆ ಕ್ಷೌರ ಕತ್ತಿಯನ್ನು ಮುಟ್ಟಗೊಡುವುದಿಲ್ಲ” ಎಂದು ಪ್ರಾರ್ಥಿಸಿ ಹರಕೆಮಾಡಿದಳು.
12 哈拿在耶和華面前不住地祈禱,以利定睛看她的嘴。(
೧೨ಆಕೆಯು ಬಹಳ ಹೊತ್ತಿನ ವರೆಗೆ ಯೆಹೋವನ ಮುಂದೆ ಪ್ರಾರ್ಥನೆಮಾಡುತ್ತಿರುವಾಗ ಏಲಿಯು ಆಕೆಯ ಬಾಯನ್ನೇ ನೋಡುತ್ತಿದ್ದನು.
13 原來哈拿心中默禱,只動嘴唇,不出聲音,因此以利以為她喝醉了。)
೧೩ಆಕೆ ತನ್ನ ಹೃದಯದಲ್ಲಿ ಪ್ರಾರ್ಥಿಸುತ್ತಿದ್ದರಿಂದ ತುಟಿಗಳು ಮಾತ್ರ ಅಲ್ಲಾಡುತ್ತಿದ್ದವು; ಶಬ್ದ ಕೇಳಿಸುತ್ತಿರಲಿಲ್ಲ. ಆದ್ದರಿಂದ ಆಕೆಯು ಮದ್ಯಪಾನಮಾಡಿದ್ದಾಳೆಂದು ತಿಳಿದು
14 以利對她說:「你要醉到幾時呢?你不應該喝酒。」
೧೪ಏಲಿಯು, “ನಿನ್ನ ಕುಡಿತದ ಅಮಲು ಇನ್ನೂ ಇಳಿಯಲಿಲ್ಲವೇ? ದ್ರಾಕ್ಷಾರಸದ ನಿಶೆ ನಿನ್ನನ್ನು ಬಿಟ್ಟು ಹೋಗಲಿ” ಅಂದನು.
15 哈拿回答說:「主啊,不是這樣。我是心裏愁苦的婦人,清酒濃酒都沒有喝,但在耶和華面前傾心吐意。
೧೫ಅದಕ್ಕೆ ಹನ್ನಳು “ಸ್ವಾಮೀ, ಹಾಗಲ್ಲ; ನಾನು ಬಹು ದುಃಖಪೀಡಿತಳು; ದ್ರಾಕ್ಷಾರಸವನ್ನಾದರೂ ಬೇರೆ ಯಾವ ಮದ್ಯವನ್ನಾದರೂ ಕುಡಿದವಳಲ್ಲ. ನನ್ನ ಮನೋವೇದನೆಯನ್ನು ಯೆಹೋವನ ಮುಂದೆ ತೋಡಿಕೊಳ್ಳುತ್ತಾ ಇದ್ದೇನೆ.
16 不要將婢女看作不正經的女子。我因被人激動,愁苦太多,所以祈求到如今。」
೧೬ನಿನ್ನ ದಾಸಿಯಾದ ನನ್ನನ್ನು ಅಯೋಗ್ಯಳೆಂದು ನೆನಸಬೇಡ; ಈವರೆಗೆ ನನ್ನ ಹೆಚ್ಚಾದ ಚಿಂತೆಯನ್ನೂ, ವ್ಯಥೆಯನ್ನೂ ಅರಿಕೆಮಾಡಿಕೊಳ್ಳುತ್ತಿದ್ದೆನು” ಎಂದು ಹೇಳಿದಳು.
17 以利說:「你可以平平安安地回去。願以色列的上帝允准你向他所求的!」
೧೭ಆಗ ಏಲಿಯು ಆಕೆಗೆ, “ಸಮಾಧಾನದಿಂದ ಹೋಗು; ಇಸ್ರಾಯೇಲಿನ ದೇವರು ನಿನ್ನ ಪ್ರಾರ್ಥನೆಯನ್ನು ನೆರವೇರಿಸಲಿ” ಎಂದನು.
18 哈拿說:「願婢女在你眼前蒙恩。」於是婦人走去吃飯,面上再不帶愁容了。
೧೮ಹನ್ನಳು ಏಲಿಗೆ, “ನಿನ್ನ ದಾಸಿಯ ಮೇಲೆ ಕಟಾಕ್ಷವಿರಲಿ” ಎಂದು ಹೇಳಿ ಹೊರಟುಹೋಗಿ ಊಟಮಾಡಿದಳು. ಆ ಮೇಲೆ ಆಕೆಯ ಮುಖದಲ್ಲಿ ದುಃಖವು ಕಾಣಲಿಲ್ಲ.
19 次日清早,他們起來,在耶和華面前敬拜,就回拉瑪。到了家裏,以利加拿和妻哈拿同房,耶和華顧念哈拿,
೧೯ಅವರು ಮರುದಿನ ಬೆಳಿಗ್ಗೆ ಎದ್ದು ಯೆಹೋವನನ್ನು ಆರಾಧಿಸಿ ರಾಮದಲ್ಲಿದ್ದ ತಮ್ಮ ಮನೆಗೆ ಬಂದರು. ಎಲ್ಕಾನನು ತನ್ನ ಹೆಂಡತಿಯಾದ ಹನ್ನಳೊಂದಿಗೆ ಸಂಗಮಿಸಲು, ಯೆಹೋವನು ಆಕೆಯ ಪ್ರಾರ್ಥನೆಯನ್ನು ಪರಿಗಣಿಸಿದ್ದರಿಂದ ಆಕೆಯು ಗರ್ಭಿಣಿಯಾದಳು.
20 哈拿就懷孕。日期滿足,生了一個兒子,給他起名叫撒母耳,說:「這是我從耶和華那裏求來的。」
೨೦ಹನ್ನಳು ದಿನತುಂಬಿದ ಮೇಲೆ ಒಬ್ಬ ಮಗನನ್ನು ಹೆತ್ತಳು. ಯೆಹೋವನನ್ನು ಬೇಡಿ ಪಡೆದುಕೊಂಡೆನೆಂದು ಹೇಳಿ ಆ ಮಗನಿಗೆ ಸಮುವೇಲನೆಂದು ಹೆಸರಿಟ್ಟಳು.
21 以利加拿和他全家都上示羅去,要向耶和華獻年祭,並還所許的願。
೨೧ಎಲ್ಕಾನನು ಎಂದಿನಂತೆ ಕುಟುಂಬ ಸಹಿತವಾಗಿ ಯೆಹೋವನಿಗೆ ವಾರ್ಷಿಕಯಜ್ಞವನ್ನು ಅರ್ಪಿಸಿ ಹರಕೆಸಲ್ಲಿಸಬೇಕೆಂದು ಶೀಲೋವಿಗೆ ಹೋಗುವುದಕ್ಕೆ ಸಿದ್ಧನಾಗಲು ಹನ್ನಳು
22 哈拿卻沒有上去,對丈夫說:「等孩子斷了奶,我便帶他上去朝見耶和華,使他永遠住在那裏。」
೨೨“ಮಗನು ಮೊಲೆಬಿಡುವ ವರೆಗೂ ನಾನು ಬರುವುದಿಲ್ಲ; ಅವನು ಯೆಹೋವನ ಸನ್ನಿಧಿಯಲ್ಲಿ ಕಾಣಿಸಿಕೊಂಡು ಯಾವಾಗಲೂ ಅಲ್ಲಿಯೇ ಇರುವ ಹಾಗೆ ಅವನನ್ನು ಕರೆದುಕೊಂಡು ಬರುವೆನು” ಎಂದು ಹೇಳಿದಳು.
23 她丈夫以利加拿說:「就隨你的意行吧!可以等兒子斷了奶。但願耶和華應驗他的話。」於是婦人在家裏乳養兒子,直到斷了奶;
೨೩ಆಕೆಯ ಗಂಡನಾದ ಎಲ್ಕಾನನು ಆಕೆಗೆ “ನಿನಗೆ ಸರಿತೋರುವ ಹಾಗೆ ಆಗಲಿ; ಮಗನು ಮೊಲೆಬಿಡುವವರೆಗೆ ಇರು. ಯೆಹೋವನು ತನ್ನ ವಾಕ್ಯವನ್ನು ದೃಢಪಡಿಸಲಿ” ಅಂದನು. ಮಗನು ಮೊಲೆಬಿಡುವ ತನಕ ಹನ್ನಳು ಮನೆಯಲ್ಲೇ ಇದ್ದು ಅವನನ್ನು ಸಾಕಿದಳು.
24 既斷了奶,就把孩子帶上示羅,到了耶和華的殿;又帶了三隻公牛,一伊法細麵,一皮袋酒。(那時,孩子還小。)
೨೪ಅನಂತರ ಆಕೆಯು ಮೂರು ವರ್ಷದ ಒಂದು ಹೋರಿಯನ್ನೂ, ಒಂದು ಏಫಾ ಹಿಟ್ಟನ್ನೂ, ಒಂದು ತಿತ್ತಿ ದ್ರಾಕ್ಷಾರಸವನ್ನೂ ತೆಗೆದುಕೊಂಡು ಪುತ್ರನೊಂದಿಗೆ ಶೀಲೋವಿನಲ್ಲಿದ್ದ ಯೆಹೋವನ ಮಂದಿರಕ್ಕೆ ಬಂದಳು. ಮಗನು ಇನ್ನೂ ಚಿಕ್ಕವನಾಗಿದ್ದನು.
25 宰了一隻公牛,就領孩子到以利面前。
೨೫ಅವರು ಹೋರಿಯನ್ನು ಯಜ್ಞಮಾಡಿದ ಮೇಲೆ ಮಗನನ್ನು ಏಲಿಯ ಬಳಿಗೆ ಕರೆದುಕೊಂಡು ಬಂದರು.
26 婦人說:「主啊,我敢在你面前起誓,從前在你這裏站着祈求耶和華的那婦人,就是我。
೨೬ಹನ್ನಳು ಏಲಿಗೆ “ಸ್ವಾಮೀ, ನಿನ್ನ ಜೀವದಾಣೆ; ಮೊದಲು ಯೆಹೋವನ ಸನ್ನಿಧಿಯಲ್ಲಿ ಪ್ರಾರ್ಥನೆಮಾಡುತ್ತಾ, ಇಲ್ಲಿ ನಿನ್ನ ಹತ್ತಿರ ನಿಂತಿದ್ದ ಸ್ತ್ರೀಯು ನಾನೇ.
27 我祈求為要得這孩子;耶和華已將我所求的賜給我了。
೨೭ಆತನು ನನ್ನ ಪ್ರಾರ್ಥನೆಯ ಫಲವಾಗಿ ಅನುಗ್ರಹಿಸಿದ ಮಗನು ಇವನೇ;
28 所以,我將這孩子歸與耶和華,使他終身歸與耶和華。」 於是在那裏敬拜耶和華。
೨೮ನಾನು ಇವನನ್ನು ಯೆಹೋವನಿಗೇ ಒಪ್ಪಿಸಿಬಿಟ್ಟಿದ್ದೇನೆ. ಇವನು ಜೀವದಿಂದಿರುವ ತನಕ ಆತನಿಗೇ ಪ್ರತಿಷ್ಠಿತನಾಗಿರುವನು” ಎಂದು ಹೇಳಿದಳು. ಆ ಮೇಲೆ ಅವರು ಶಿಲೋವಿನಲ್ಲಿ ಯೆಹೋವನನ್ನು ಆರಾಧಿಸಿದರು.

< 撒母耳記上 1 >