< 歷代志下 14 >
1 亞比雅與他列祖同睡,葬在大衛城裏。他兒子亞撒接續他作王。亞撒年間,國中太平十年。
೧ಅಬೀಯನು ಮೃತನಾಗಿ ಪೂರ್ವಿಕರ ಬಳಿಗೆ ಸೇರಲು, ಅವನ ಶವವನ್ನು ದಾವೀದನಗರದಲ್ಲಿ ಸಮಾಧಿಮಾಡಿದರು. ಅವನಿಗೆ ಬದಲಾಗಿ ಅವನ ಮಗನಾದ ಆಸನು ಅರಸನಾದನು. ಇವನ ಕಾಲದ ಹತ್ತು ವರ್ಷ ದೇಶದಾದ್ಯಂತ ಸಮಾಧಾನವಿತ್ತು.
೨ಆಸನು ತನ್ನ ದೇವರಾದ ಯೆಹೋವನ ದೃಷ್ಟಿಯಲ್ಲಿ ಒಳ್ಳೆಯವನಾಗಿಯೂ ನೀತಿವಂತನಾಗಿಯೂ ನಡೆದನು.
೩ಇವನು ಅನ್ಯದೇವತೆಗಳ ಯಜ್ಞವೇದಿಗಳನ್ನೂ ಪೂಜಾಸ್ಥಳಗಳನ್ನೂ ತೆಗೆದುಹಾಕಿ ಕಲ್ಲುಕಂಬಗಳನ್ನು ಒಡೆದು ಹಾಕಿ, ಅಶೇರ ವಿಗ್ರಹ ಸ್ತಂಭಗಳನ್ನು ಕೆಡವಿ ಬಿಟ್ಟನು.
4 吩咐猶大人尋求耶和華-他們列祖的上帝,遵行他的律法、誡命;
೪ಯೆಹೂದ್ಯರಿಗೆ, “ನೀವು ನಿಮ್ಮ ಪೂರ್ವಿಕರ ದೇವರಾದ ಯೆಹೋವನನ್ನೇ ಆಶ್ರಯಿಸಿಕೊಂಡು ಧರ್ಮಶಾಸ್ತ್ರದ ವಿಧಿಗಳನ್ನು ಕೈಕೊಳ್ಳಿರಿ” ಎಂದು ಆಜ್ಞಾಪಿಸಿದನು.
೫ಯೆಹೂದದ ಎಲ್ಲಾ ಪಟ್ಟಣಗಳೊಳಗಿನಿಂದ ಪೂಜಾಸ್ಥಳಗಳನ್ನೂ ಸೂರ್ಯಸ್ತಂಭಗಳನ್ನೂ ತೆಗೆದುಹಾಕಿಸಿದನು. ಇವನ ಆಳ್ವಿಕೆಯಲ್ಲಿ ರಾಜ್ಯದೊಳಗೆ ಸಮಾಧಾನವಿತ್ತು.
6 又在猶大建造了幾座堅固城。國中太平數年,沒有戰爭,因為耶和華賜他平安。
೬ಯೆಹೋವನ ಅನುಗ್ರಹದಿಂದ ಶತ್ರುಭಯ ತಪ್ಪಿ ಯಾವ ಯುದ್ಧವೂ ಇಲ್ಲದೆ ದೇಶದಲ್ಲಿ ಸಮಾಧಾನವಿದ್ದುದರಿಂದ ಇವನು ಯೆಹೂದದಲ್ಲಿ ಕೋಟೆಕೊತ್ತಲುಗಳುಳ್ಳ ಪಟ್ಟಣಗಳನ್ನು ಕಟ್ಟಿಸಿದನು.
7 他對猶大人說:「我們要建造這些城邑,四圍築牆,蓋樓,安門,做閂;地還屬我們,是因尋求耶和華-我們的上帝;我們既尋求他,他就賜我們四境平安。」於是建造城邑,諸事亨通。
೭ಇವನು ಯೆಹೂದ್ಯರಿಗೆ, “ನಾವು ನಮ್ಮ ದೇವರಾದ ಯೆಹೋವನನ್ನು ಆಶ್ರಯಿಸಿಕೊಂಡ ಕಾರಣ ಆತನ ಅನುಗ್ರಹದಿಂದ ಸುತ್ತಣ ವೈರಿಗಳ ಭಯ ತಪ್ಪಿ ದೇಶವು ಇನ್ನೂ ನಿರಾತಂಕವಾಗಿರುತ್ತದೆ. ಆದುದರಿಂದ ನಾವು ಪಟ್ಟಣಗಳನ್ನು ಕಟ್ಟಿ, ಅವುಗಳನ್ನು ಸುತ್ತಣ ಗೋಡೆ, ಗೋಪುರ, ಬುರುಜು ಬಾಗಿಲು, ಅಗುಳಿ ಇವುಗಳಿಂದ ಭದ್ರಪಡಿಸೋಣ” ಎನ್ನಲಾಗಿ ಅವರು ಅವುಗಳನ್ನು ಚೆನ್ನಾಗಿ ಕಟ್ಟಿ ಮುಗಿಸಿದರು.
8 亞撒的軍兵,出自猶大拿盾牌拿槍的三十萬人;出自便雅憫拿盾牌拉弓的二十八萬人。這都是大能的勇士。
೮ಆಸನಿಗೆ ಸೈನ್ಯವಿತ್ತು; ಅದರಲ್ಲಿ ಗುರಾಣಿ ಬರ್ಜಿಗಳನ್ನು ಹಿಡಿದಿರುವ ಮೂರು ಲಕ್ಷ ಮಂದಿ ಯೆಹೂದ್ಯ ಸೈನಿಕರಿದ್ದರು. ಖೇಡ್ಯ ಹಿಡಿದವರೂ ಬಿಲ್ಲುಗಾರರೂ ಆದ ಎರಡು ಲಕ್ಷದ ಎಂಭತ್ತು ಸಾವಿರ ಮಂದಿ ಬೆನ್ಯಾಮೀನ್ ಸೈನಿಕರೂ ಇದ್ದರು. ಇವರೆಲ್ಲರೂ ಯುದ್ಧವೀರರಾಗಿದ್ದರು.
9 有古實王謝拉率領軍兵一百萬,戰車三百輛,出來攻擊猶大人,到了瑪利沙。
೯ಕೂಷ್ಯನಾದ ಜೆರಹನು ಹತ್ತು ಲಕ್ಷ ಸೈನ್ಯವನ್ನೂ ಮುನ್ನೂರು ರಥಗಳನ್ನೂ ತೆಗೆದುಕೊಂಡು ಇಸ್ರಾಯೇಲರಿಗೆ ವಿರುದ್ಧವಾಗಿ ಯುದ್ಧಕ್ಕೆ ಹೊರಟು ಮಾರೇಷದವರೆಗೆ ಬಂದನು.
10 於是亞撒出去與他迎敵,就在瑪利沙的洗法谷彼此擺陣。
೧೦ಆಸನು ಅವನಿಗೆ ವಿರುದ್ಧವಾಗಿ ಹೊರಟನು. ಮಾರೇಷದ ಬಳಿಯಲ್ಲಿರುವ ಚೆಫಾತಾ ಬಯಲಿನಲ್ಲಿ ಇಬ್ಬರೂ ವ್ಯೂಹಕಟ್ಟಿದರು.
11 亞撒呼求耶和華-他的上帝說:「耶和華啊,惟有你能幫助軟弱的,勝過強盛的。耶和華-我們的上帝啊,求你幫助我們;因為我們仰賴你,奉你的名來攻擊這大軍。耶和華啊,你是我們的上帝,不要容人勝過你。」
೧೧ಆಸನು ತನ್ನ ದೇವರಾದ ಯೆಹೋವನಿಗೆ, “ಯೆಹೋವನೇ, ಬಲಿಷ್ಠನು ಬಲಹೀನನ ಮೇಲೆ ಬೀಳುವಲ್ಲಿ, ರಕ್ಷಿಸಲು ನಿನ್ನ ಹೊರತು ಬೇರಾರೂ ರಕ್ಷಿಸುವುದಿಲ್ಲ. ನಮ್ಮ ದೇವರಾದ ಯೆಹೋವನೇ, ನಮ್ಮನ್ನು ರಕ್ಷಿಸು. ನಿನ್ನಲ್ಲಿ ಭರವಸವಿಟ್ಟು ನಿನ್ನ ಹೆಸರಿನಲ್ಲಿ ಈ ಮಹಾಸಮೂಹಕ್ಕೆ ವಿರೋಧವಾಗಿ ಯುದ್ಧಕ್ಕೆ ಬಂದೆವಲ್ಲಾ. ಯೆಹೋವನೇ, ನಮ್ಮ ದೇವರು ನೀನು. ನರರು ನಿನ್ನೆದುರು ಗೆಲ್ಲಬಾರದು” ಎಂದು ಮೊರೆಯಿಡಲು.
12 於是耶和華使古實人敗在亞撒和猶大人面前,古實人就逃跑了;
೧೨ಯೆಹೋವನು ಕೂಷ್ಯರನ್ನು ಆಸನಿಂದಲೂ ಯೆಹೂದ್ಯರಿಂದಲೂ ಅಪಜಯ ಉಂಟಾಗುವಂತೆ ಮಾಡಿದನು.
13 亞撒和跟隨他的軍兵追趕他們,直到基拉耳。古實人被殺的甚多,不能再強盛,因為敗在耶和華與他軍兵面前。猶大人就奪了許多財物,
೧೩ಕೂಷ್ಯರು ಸೋತು ಓಡಿಹೋದಾಗ ಆಸನೂ ಅವನ ಜನರೂ ಗೆರಾರಿನವರೆಗೂ ಅವರನ್ನು ಹಿಂದಟ್ಟಿ ಸಂಹರಿಸಿದರು; ಅವರಲ್ಲಿ ಯಾರೂ ಜೀವದಿಂದುಳಿಯಲಿಲ್ಲ. ಯೆಹೋವನ ಮತ್ತು ಆತನ ಸೈನ್ಯದ ಮುಂದೆ ನುಚ್ಚು ನೂರಾಗಿ ಹೋದರು. ಇಸ್ರಾಯೇಲರಿಗೆ ಅಪರಿಮಿತವಾದ ಕೊಳ್ಳೆ ಸಿಕ್ಕಿತು.
14 又打破基拉耳四圍的城邑;耶和華使其中的人都甚恐懼。猶大人又將所有的城擄掠一空,因其中的財物甚多,
೧೪ಇದಲ್ಲದೆ ಯೆಹೋವನ ಭಯದಿಂದ ತಬ್ಬಿಬ್ಬಾದ ಗೆರಾರಿನ ಸುತ್ತಣ ಪಟ್ಟಣಗಳನ್ನು ಅವರು ವಶಪಡಿಸಿಕೊಂಡು, ಅವುಗಳನ್ನೆಲ್ಲಾ ಸುಲಿಗೆಮಾಡಿದರು. ಅವುಗಳಿಂದ ಅವರಿಗೆ ದೊಡ್ಡ ಕೊಳ್ಳೆ ಸಿಕ್ಕಿತು.
15 又毀壞了群畜的圈,奪取許多的羊和駱駝,就回耶路撒冷去了。
೧೫ದನ ಕಾಯುವವರ ಗುಡಾರಗಳ ಮೇಲೂ ದಾಳಿಮಾಡಿ ಸಾಕಷ್ಟು ಒಂಟೆ ಕುರಿಗಳನ್ನು ಯೆರೂಸಲೇಮಿಗೆ ಹೊಡೆದುಕೊಂಡು ಬಂದರು.