< 傳道書 4 >

1 我又轉念,見日光之下所行的一切欺壓。看哪,受欺壓的流淚,且無人安慰;欺壓他們的有勢力,也無人安慰他們。
ಆ ಮೇಲೆ ಪುನಃ ದೃಷ್ಟಿಸಿ ಸೂರ್ಯನ ಕೆಳಗೆ ನಡೆಯುತ್ತಿರುವ ಹಿಂಸೆಗಳನ್ನೆಲ್ಲಾ ನೋಡಿದೆನು. ಆಹಾ! ಹಿಂಸೆಗೊಂಡವರ ಕಣ್ಣೀರನ್ನು ನೋಡು. ಅವರನ್ನು ಸಂತೈಸುವವರು ಯಾರೂ ಇಲ್ಲ. ಅವರನ್ನು ಹಿಂಸಿಸುವವರಿಗೆ ಬಹಳ ಬಲ ಇದೆ. ಹಿಂಸೆಗೊಂಡವರನ್ನು ಸಂತೈಸುವವರು ಒಬ್ಬರೂ ಇಲ್ಲ.
2 因此,我讚歎那早已死的死人,勝過那還活着的活人。
ಇದನ್ನು ನೋಡಿ ಇನ್ನೂ ಜೀವದಿಂದಿದ್ದು ಬದುಕುವವರಿಗಿಂತ ಸತ್ತವರೇ ಮೇಲೆಂದು ಹೊಗಳಿದೆನು.
3 並且我以為那未曾生的,就是未見過日光之下惡事的,比這兩等人更強。
ಹೌದು, ಈ ಇಬ್ಬರಿಗಿಂತಲೂ ಇನ್ನೂ ಹುಟ್ಟದೇ, ಲೋಕದಲ್ಲಿ ನಡೆಯುತ್ತಿರುವ ಅಧರ್ಮವನ್ನು ನೋಡದೆ ಇರುವುದೇ ಒಳ್ಳೆಯದೆಂದು ತಿಳಿದುಕೊಂಡೆನು.
4 我又見人為一切的勞碌和各樣靈巧的工作就被鄰舍嫉妒。這也是虛空,也是捕風。
ಆಗ ಸಮಸ್ತ ಪ್ರಯಾಸವನ್ನು, ಕೈಗೂಡುವ ಸಕಲ ಕಾರ್ಯವನ್ನು ನೋಡಿ ಇವು ಪರಸ್ಪರ ಮತ್ಸರಕ್ಕೆ ಆಸ್ಪದವೆಂದು ಗ್ರಹಿಸಿಕೊಂಡೆನು. ಇದು ಗಾಳಿಯನ್ನು ಹಿಂದಟ್ಟಿದ ಹಾಗೆ ವ್ಯರ್ಥವೇ.
5 愚昧人抱着手,吃自己的肉。
ಮೂಢನು ತನ್ನ ಕೈಗಳನ್ನು ಮುಚ್ಚಿಕೊಂಡು ಯಾವ ಕೆಲಸವನ್ನು ಮಾಡದೆ, ತನ್ನನ್ನು ತಾನು ನಾಶಪಡಿಸಿಕೊಳ್ಳುವನು.
6 滿了一把,得享安靜,強如滿了兩把,勞碌捕風。
ಗಾಳಿಯನ್ನು ಹಿಂದಟ್ಟುವ ಹಾಗೆಯೇ ಪ್ರಯಾಸದಿಂದ ತುಂಬಿದ ಎರಡು ಕೈಗಳಿಂದ ಮಾಡಿದ ಕೆಲಸಕ್ಕಿಂತ ನೆಮ್ಮದಿಯಾಗಿ ಒಂದು ಕೈಯಿಂದ ಮಾಡಿದ ಕೆಲಸವೇ ಲೇಸು.
7 我又轉念,見日光之下有一件虛空的事:
ಆಗ ನಾನು ಲೋಕದಲ್ಲಿ ಮತ್ತೊಂದು ವ್ಯರ್ಥ ವಿಷಯವನ್ನು ಕಂಡೆನು.
8 有人孤單無二,無子無兄,竟勞碌不息,眼目也不以錢財為足。他說:「我勞勞碌碌,刻苦自己,不享福樂,到底是為誰呢?」這也是虛空,是極重的勞苦。
ಒಬ್ಬಂಟಿಗನಾದ ಒಬ್ಬ ಮನುಷ್ಯನಿದ್ದಾನೆ. ಅವನಿಗೆ ಅಣ್ಣತಮ್ಮಂದಿರು ಇಲ್ಲ, ಮಕ್ಕಳೂ ಇಲ್ಲ. ಆದರೂ ಅವನ ಪ್ರಯಾಸಕ್ಕೆ ಅಂತ್ಯವಿಲ್ಲ, ಐಶ್ವರ್ಯದಿಂದ ಅವನ ಕಣ್ಣಿಗೆ ತೃಪ್ತಿಯಿಲ್ಲ. ಅವನು, “ನಾನು ಸುಖವನ್ನು ತೊರೆದು ಯಾರಿಗೋಸ್ಕರ ಪ್ರಯಾಸಪಡುತ್ತಾ ಇದ್ದೇನೆ?” ಅಂದುಕೊಳ್ಳುವನು. ಇದೂ ಸಹ ವ್ಯರ್ಥವೇ. ಕೇವಲ ಪ್ರಯಾಸದ ಕೆಲಸವೇ ಸರಿ.
9 兩個人總比一個人好,因為二人勞碌同得美好的果效。
ಒಬ್ಬನಿಗಿಂತ ಇಬ್ಬರು ಕೆಲಸ ಮಾಡುವುದು ಒಳ್ಳೆಯದು. ಅವರ ಪ್ರಯಾಸಕ್ಕೆ ಒಳ್ಳೆಯ ಲಾಭವನ್ನು ಸಂಪಾದಿಸಬಹುದು.
10 若是跌倒,這人可以扶起他的同伴;若是孤身跌倒,沒有別人扶起他來,這人就有禍了。
೧೦ಒಬ್ಬನು ಬಿದ್ದರೆ, ಇನ್ನೊಬ್ಬನು ತನ್ನ ಸ್ನೇಹಿತನನ್ನು ಮೇಲಕ್ಕೆ ಎಬ್ಬಿಸುವನು. ಒಬ್ಬನು ಒಬ್ಬಂಟ್ಟಿಗನಾಗಿ ಬಿದ್ದರೆ, ಅವನನ್ನು ಮೇಲಕ್ಕೆ ಎಬ್ಬಿಸುವವನು ಯಾರೂ ಇಲ್ಲ, ಅವನ ಗತಿ ದುರ್ಗತಿಯೇ.
11 再者,二人同睡就都暖和,一人獨睡怎能暖和呢?
೧೧ಮತ್ತು ಇಬ್ಬರು ಜೊತೆಯಲ್ಲಿ ಮಲಗಿಕೊಂಡರೆ ಅವರಿಗೆ ಬೆಚ್ಚಗಾಗುತ್ತದೆ, ಆದರೆ ಒಬ್ಬನು ಹೇಗೆ ಬೆಚ್ಚಗಿರುತ್ತಾನೆ?
12 有人攻勝孤身一人,若有二人便能敵擋他;三股合成的繩子不容易折斷。
೧೨ಒಬ್ಬನನ್ನು ಮತ್ತೊಬ್ಬನು ಜಯಿಸಬಹುದು, ಆದರೆ ಗೆದ್ದವನನ್ನು ಇಬ್ಬರು ಎದುರಿಸಿ ನಿಲ್ಲಿಸಬಹುದು. ಮೂರು ಹುರಿಯ ಹಗ್ಗ ಬೇಗನೆ ಕಿತ್ತುಹೋಗುವುದಿಲ್ಲ.
13 貧窮而有智慧的少年人勝過年老不肯納諫的愚昧王。
೧೩ಎಚ್ಚರಿಕೆಯ ಮಾತಿಗೆ ಕಿವಿಗೊಡದ ಮುದಕನೂ, ಮೂಢನೂ ಆದ ಅರಸನಿಗಿಂತ ಜ್ಞಾನಿಯಾದ ಬಡ ಯುವಕನೇ ಮೇಲು.
14 這人是從監牢中出來作王,在他國中,生來原是貧窮的。
೧೪ಇಂಥ ಯುವಕನೊಬ್ಬನು ರಾಜನಾಗಲು ಸೆರೆಮನೆಯಿಂದ ಬಂದಿರಬಹುದು ಅಥವಾ ತನ್ನ ರಾಜ್ಯದಲ್ಲಿ ಬಡ ಪ್ರಜೆಯಾಗಿ ಹುಟ್ಟಿರಬಹುದು.
15 我見日光之下一切行動的活人都隨從那第二位,就是起來代替老王的少年人。
೧೫ಸೂರ್ಯನ ಕೆಳಗೆ ಜೀವಿಸಿ ಮತ್ತು ನಡೆದಾಡಿದವರೆಲ್ಲರೂ ಅರಸನ ಉತ್ತರಾಧಿಕಾರಿಯಾದ ಯುವಕನ ಪಕ್ಷವಹಿಸುವುದನ್ನು ನಾನು ನೋಡಿದೆನು.
16 他所治理的眾人就是他的百姓,多得無數;在他後來的人尚且不喜悅他。這真是虛空,也是捕風。
೧೬ಇವನ ಅಧಿಪತ್ಯಕ್ಕೆ ಒಳಪಟ್ಟ ಎಲ್ಲಾ ಜನರ ಸಂಖ್ಯೆಯು ಅಪಾರ. ಅವನ ಆಳ್ವಿಕೆಯ ನಂತರ ಇವನಲ್ಲಿ ಆನಂದಿಸುವುದಿಲ್ಲ. ಇದೂ ಸಹ ಗಾಳಿಯನ್ನು ಹಿಂದಟ್ಟಿದ ಹಾಗೆ ವ್ಯರ್ಥವಾಗಿದೆ.

< 傳道書 4 >