< 以斯拉記 10 >
1 以斯拉禱告,認罪,哭泣,俯伏在上帝殿前的時候,有以色列中的男女孩童聚集到以斯拉那裏,成了大會,眾民無不痛哭。
೧ಎಜ್ರನು ದೇವಾಲಯದ ಮುಂದೆ ಅಡ್ಡಬಿದ್ದು ಅಳುತ್ತಾ ವಿಜ್ಞಾಪನೆಯನ್ನೂ, ಪಾಪನಿವೇದನೆಯನ್ನೂ ಮಾಡುತ್ತಿರುವಷ್ಟರಲ್ಲಿ ಇಸ್ರಾಯೇಲರ ಗಂಡಸರು, ಹೆಂಗಸರೂ ಮತ್ತು ಮಕ್ಕಳೂ ಮಹಾಸಮೂಹವಾಗಿ ಅವನ ಬಳಿಗೆ ಕೂಡಿಬಂದರು. ಅಲ್ಲಿನ ಜನರು ಬಹಳವಾಗಿ ದುಃಖಿಸುತ್ತಿದ್ದರು.
2 屬以攔的子孫、耶歇的兒子示迦尼對以斯拉說:「我們在此地娶了外邦女子為妻,干犯了我們的上帝,然而以色列人還有指望。
೨ಆಗ ಏಲಾಮ್ ಸಂತಾನದ ಯೆಹೀಯೇಲನ ಮಗನಾದ ಶೆಕನ್ಯನು ಎಜ್ರನಿಗೆ, “ಇಸ್ರಾಯೇಲರಾದ ನಾವು ಅನ್ಯಜನರಾದ ಈ ದೇಶನಿವಾಸಿಗಳಿಂದ ಹೆಣ್ಣನ್ನು ತೆಗೆದುಕೊಂಡು ನಮ್ಮ ದೇವರಿಗೆ ವಿರುದ್ಧವಾಗಿ ದ್ರೋಹಮಾಡಿದರೂ ನಮ್ಮನ್ನು ನಾವು ತಿದ್ದಿಕೊಳ್ಳುವ ನಿರೀಕ್ಷೆಯು ಇನ್ನೂ ಉಂಟು.
3 現在當與我們的上帝立約,休這一切的妻,離絕她們所生的,照着我主和那因上帝命令戰兢之人所議定的,按律法而行。
೩ಸ್ವಾಮಿಯಾದ ನೀನೂ ನಮ್ಮ ದೇವರ ಆಜ್ಞೆಯನ್ನು ಗೌರವಿಸುವವನೂ. ನೀನು ಹೇಳಿಕೊಟ್ಟ ಬುದ್ಧಿವಾದಕ್ಕೆ ಅನುಸಾರವಾಗಿ ಎಲ್ಲಾ ಹೆಂಡತಿಯರನ್ನೂ, ಅವರ ಮಕ್ಕಳನ್ನೂ ಕಳುಹಿಸಿಬಿಡುವುದಾಗಿ ಈಗಲೇ ನಮ್ಮ ದೇವರೊಂದಿಗೆ ಒಡಂಬಡಿಕೆಯನ್ನು ಮಾಡಿಕೊಂಡು ಧರ್ಮಶಾಸ್ತ್ರಕ್ಕೆ ಅನುಸಾರವಾಗಿ ನಡೆಯೋಣ.
4 你起來,這是你當辦的事,我們必幫助你,你當奮勉而行。」
೪ಎದ್ದೇಳು, ಈ ಕಾರ್ಯವನ್ನು ವಹಿಸತಕ್ಕವನು ನೀನು; ನಾವಾದರೋ ನಿನ್ನ ಸಹಾಯಕರು. ಧೈರ್ಯದಿಂದ ಕೈಹಾಕು” ಎಂದು ಹೇಳಿದನು.
5 以斯拉便起來,使祭司長和利未人,並以色列眾人起誓說,必照這話去行;他們就起了誓。
೫ಆಗ ಎಜ್ರನು ಎದ್ದು ಯಾಜಕರ ಮತ್ತು ಲೇವಿಯರ ಮುಖ್ಯಸ್ಥರಿಗೂ, ಎಲ್ಲಾ ಇಸ್ರಾಯೇಲರಿಗೂ ಈ ಪ್ರಕಾರ ನಡೆಯುವುದಾಗಿ ಪ್ರಮಾಣಮಾಡಬೇಕೆಂದು ಹೇಳಲು ಅವರು ಹಾಗೆಯೇ ಪ್ರಮಾಣಮಾಡಿದರು.
6 以斯拉從上帝殿前起來,進入以利亞實的兒子約哈難的屋裏,到了那裏不吃飯,也不喝水;因為被擄歸回之人所犯的罪,心裏悲傷。
೬ಆ ಮೇಲೆ ಎಜ್ರನು ದೇವಾಲಯದ ಮುಂದಣ ಸ್ಥಳವನ್ನು ಬಿಟ್ಟು ಎದ್ದು ಎಲ್ಯಾಷೀಬನ ಮಗನಾದ ಯೆಹೋಹಾನಾನನ ಕೊಠಡಿಗೆ ಹೋಗಿ ಅಲ್ಲಿ ಸೆರೆಯಿಂದ ಬಂದವರ ನಿಮಿತ್ತ ದುಃಖಿಸುತ್ತಾ, ಅನ್ನಪಾನಗಳನ್ನು ತೆಗೆದುಕೊಳ್ಳದೆ ರಾತ್ರಿಯನ್ನು ಕಳೆದನು.
7 他們通告猶大和耶路撒冷被擄歸回的人,叫他們在耶路撒冷聚集。
೭ತರುವಾಯ ಯೆಹೂದದಲ್ಲಿಯೂ ಯೆರೂಸಲೇಮಿನಲ್ಲಿಯೂ, “ಸೆರೆಯಿಂದ ಬಂದವರೆಲ್ಲರೂ ಯೆರೂಸಲೇಮಿನಲ್ಲಿ ಬಂದು ಸೇರಬೇಕು.
8 凡不遵首領和長老所議定、三日之內不來的,就必抄他的家,使他離開被擄歸回之人的會。
೮ಎಲ್ಲಾ ಮುಖ್ಯಸ್ಥರ ಮತ್ತು ಹಿರಿಯರ ನಿರ್ಣಯದ ಪ್ರಕಾರ ಮೂರು ದಿನಗಳೊಳಗೆ ಬಾರದವನು ತನ್ನ ಎಲ್ಲಾ ಆಸ್ತಿಯನ್ನೂ ಕಳೆದುಕೊಂಡು ಸೆರೆಯಿಂದ ಬಂದವರ ಸಭೆಯಿಂದ ಬಹಿಷ್ಕೃತನಾಗುವನು” ಎಂದು ಪ್ರಕಟಿಸಿದರು.
9 於是,猶大和便雅憫眾人,三日之內都聚集在耶路撒冷。那日正是九月二十日,眾人都坐在上帝殿前的寬闊處;因這事,又因下大雨,就都戰兢。
೯ಆಗ ಮೂರನೆಯ ದಿನದಲ್ಲಿ ಅಂದರೆ ಒಂಭತ್ತನೆಯ ತಿಂಗಳಿನ ಇಪ್ಪತ್ತನೆಯ ದಿನದಲ್ಲಿ ಯೆಹೂದ್ಯರ ಮತ್ತು ಬೆನ್ಯಾಮೀನ್ಯರ ಎಲ್ಲಾ ಪುರುಷರೂ ಯೆರೂಸಲೇಮಿನಲ್ಲಿ ಕೂಡಿಬಂದರು. ಆ ಸಂಗತಿಯ ನಿಮಿತ್ತವಾಗಿಯೂ, ದೊಡ್ಡ ಮಳೆಯ ದೆಸೆಯಿಂದಲೂ ನಡುಗುತ್ತಾ ದೇವಾಲಯದ ಅಂಗಳದಲ್ಲಿ ಕುಳಿತುಕೊಂಡರು.
10 祭司以斯拉站起來,對他們說:「你們有罪了;因你們娶了外邦的女子為妻,增添以色列人的罪惡。
೧೦ಯಾಜಕನಾದ ಎಜ್ರನು ಎದ್ದು ನಿಂತು ಅವರಿಗೆ, “ನೀವು ಅನ್ಯಜನರ ಹೆಣ್ಣುಗಳನ್ನು ಮದುವೆಮಾಡಿಕೊಂಡು ಇಸ್ರಾಯೇಲರ ಅಪರಾಧಗಳನ್ನು ಹೆಚ್ಚಿಸಿದ್ದೀರಿ.
11 現在當向耶和華-你們列祖的上帝認罪,遵行他的旨意,離絕這些國的民和外邦的女子。」
೧೧ಈಗ ನಿಮ್ಮ ಪೂರ್ವಿಕರ ದೇವರಾದ ಯೆಹೋವನಿಗೆ ಸ್ತೋತ್ರಮಾಡಿ, ನಿಮ್ಮ ಪಾಪಗಳನ್ನು ಅರಿಕೆಮಾಡಿ, ಆತನ ಚಿತ್ತಕ್ಕನುಸಾರವಾಗಿ ದೇಶನಿವಾಸಿಗಳನ್ನೂ ಮತ್ತು ಅನ್ಯಜನರಿಂದ ತಂದ ಹೆಂಡತಿಯರನ್ನೂ ಬಿಟ್ಟು ಬೇರೆಯಾಗಿರಿ” ಎಂದನು.
೧೨ಆಗ ಕೂಡಿಬಂದವರೆಲ್ಲರೂ ಗಟ್ಟಿಯಾಗಿ, “ನೀನು ಹೇಳಿದಂತೆಯೇ ಮಾಡುವುದು ನಮ್ಮ ಕರ್ತವ್ಯ.
13 只是百姓眾多,又逢大雨的時令,我們不能站在外頭,這也不是一兩天辦完的事,因我們在這事上犯了大罪;
೧೩ಆದರೆ ಕೂಡಿಬಂದವರು ಬಹು ಜನರು, ಈಗ ಮಳೆಗಾಲ; ಹೊರಗೆ ನಿಲ್ಲುವುದು ಅಸಾಧ್ಯ. ಈ ಕೆಲಸವು ಒಂದೆರಡು ದಿನಗಳಲ್ಲಿ ತೀರುವಂಥದಲ್ಲ; ಈ ವಿಷಯದಲ್ಲಿ ನಮ್ಮ ಅಪರಾಧವು ದೊಡ್ಡದು.
14 不如為全會眾派首領辦理。凡我們城邑中娶外邦女子為妻的,當按所定的日期,同着本城的長老和士師而來,直到辦完這事,上帝的烈怒就轉離我們了。」
೧೪ಆದುದರಿಂದ ನಮ್ಮ ಹಿರಿಯರು, ನಾಯಕರು ಸರ್ವಸಮೂಹಕ್ಕೋಸ್ಕರ ಕಾರ್ಯವನ್ನು ವಹಿಸಿಕೊಳ್ಳಲಿ; ನಮ್ಮ ನಮ್ಮ ಊರುಗಳಲ್ಲಿ ಅನ್ಯಜನರ ಸ್ತ್ರೀಯರನ್ನು ಮದುವೆಮಾಡಿಕೊಂಡವರೆಲ್ಲರೂ ನೇಮಿತವಾದ ದಿನದಲ್ಲಿ ತಮ್ಮ ಊರಿನ ಹಿರಿಯರೊಡನೆಯೂ ಮತ್ತು ನ್ಯಾಯಾಧಿಪತಿಗಳೊಡನೆಯೂ ಇಲ್ಲಿಗೆ ಸೇರಿ ಬರಲಿ. ನಮ್ಮ ದೇವರು ಈ ವಿಷಯದಲ್ಲಿ ನಮ್ಮ ಮೇಲೆ ಮಾಡಿಕೊಂಡಿರುವ ಉಗ್ರಕೋಪವು ಹೀಗೆ ಪರಿಹಾರವಾಗಲಿ” ಎಂದು ಉತ್ತರಕೊಟ್ಟರು.
15 惟有亞撒黑的兒子約拿單,特瓦的兒子雅哈謝阻擋這事,並有米書蘭和利未人沙比太幫助他們。
೧೫ಅಸಾಹೇಲನ ಮಗನಾದ ಯೋನಾತಾನ್, ತಿಕ್ವನ ಮಗನಾದ ಯಹ್ಜೆಯ ಎಂಬವರು ಮಾತ್ರ ಈ ಅಭಿಪ್ರಾಯವನ್ನು ವಿರೋಧಿಸಿದರು; ಲೇವಿಯರಾದ ಮೆಷುಲ್ಲಾಮ್, ಶಬ್ಬೆತೈ ಎಂಬವರೂ ಇವರ ಪಕ್ಷವನ್ನು ಹಿಡಿದರು.
16 被擄歸回的人如此而行。祭司以斯拉和些族長按着宗族都指名見派;在十月初一日,一同在座查辦這事,
೧೬ಆದರೆ ಸೆರೆಯಿಂದ ಬಂದವರು ಮೇಲೆ ಹೇಳಿರುವುದನ್ನೇ ಒಪ್ಪಿಕೊಂಡರು. ಈ ವಿಚಾರಣೆಯನ್ನು ನಡೆಸುವುದಕ್ಕೆ ಯಾಜಕನಾದ ಎಜ್ರನೂ ಆಯಾ ಗೋತ್ರಗಳ ಪ್ರಧಾನಪುರುಷರನ್ನು ಹೆಸರುಹೆಸರಾಗಿ ನೇಮಿಸಿದನು. ಹತ್ತನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಇವರ ಮೊದಲನೆಯ ಸಭೆ ನಡೆಯಿತು.
೧೭ಅವರು ಅನ್ಯಜನರ ಸ್ತ್ರೀಯರನ್ನು ಮದುವೆಮಾಡಿಕೊಂಡವರ ಸಂಗತಿಯನ್ನು ಮೊದಲನೆಯ ತಿಂಗಳಿನ ಮೊದಲನೆಯ ದಿನದೊಳಗಾಗಿ ಪೂರ್ಣವಾಗಿ ವಿಚಾರಿಸಿ ನಿರ್ಧರಿಸಿದರು.
18 在祭司中查出娶外邦女子為妻的,就是耶書亞的子孫約薩達的兒子,和他弟兄瑪西雅、以利以謝、雅立、基大利;
೧೮ಅನ್ಯಜನರ ಸ್ತ್ರೀಯರನ್ನು ಮದುವೆಮಾಡಿಕೊಂಡವರು ಯಾರೆಂದರೆ: ಯಾಜಕರಲ್ಲಿ: ಯೋಚಾದಾಕನ ಮಗ ಯೇಷೂವ ಮತ್ತು ಅವನ ಸಹೋದರರ ಸಂತಾನದವರಾದ ಮಾಸೇಯ, ಎಲೀಯೆಜೆರ್, ಯಾರೀಬ್ ಮತ್ತು ಗೆದಲ್ಯ ಎಂಬುವವರು.
19 他們便應許必休他們的妻。他們因有罪,就獻群中的一隻公綿羊贖罪。
೧೯ಇವರು ತಮ್ಮ ಹೆಂಡತಿಯರನ್ನು ಕಳುಹಿಸಿಬಿಡುವುದಾಗಿ ಕೈ ಮುಟ್ಟಿ ಪ್ರಮಾಣಮಾಡಿ ತಾವು ಅಪರಾಧಿಗಳೆಂದು ಒಪ್ಪಿಕೊಂಡು ಪ್ರಾಯಶ್ಚಿತ್ತವಾಗಿ ಒಂದು ಟಗರನ್ನು ಸಮರ್ಪಿಸಿದರು.
೨೦ಇಮ್ಮೇರನ ಸಂತಾನದವರಾದ ಹನಾನೀ ಮತ್ತು ಜೆಬದ್ಯ.
21 哈琳的子孫中,有瑪西雅、以利雅、示瑪雅、耶歇、烏西雅。
೨೧ಹಾರೀಮನ ಸಂತಾನದವರಾದ ಮಾಸೇಯ, ಎಲೀಯ, ಶೆಮಾಯ, ಯೆಹೀಯೇಲ್ ಮತ್ತು ಉಜ್ಜೀಯ.
22 巴施戶珥的子孫中,有以利約乃、瑪西雅、以實瑪利、拿坦業、約撒拔、以利亞撒。
೨೨ಪಷ್ಹೂರನ ಸಂತಾನದವರಾದ ಎಲ್ಯೋವೇನೈ, ಮಾಸೇಯ, ಇಷ್ಮಾಯೇಲ್, ನೆತನೇಲ್, ಯೋಜಾಬಾದ್ ಮತ್ತು ಎಲ್ಲಾಸ.
23 利未人中,有約撒拔、示每、基拉雅(基拉雅就是基利他),還有毗他希雅、猶大、以利以謝。
೨೩ಲೇವಿಯರಲ್ಲಿ: ಯೋಜಾಬಾದ್, ಶಿಮ್ಮೀ, ಕೆಲೀಟ ಅನ್ನಿಸಿಕೊಳ್ಳುವವ ಕೇಲಾಯ, ಪೆತಹ್ಯ, ಯೆಹೂದ ಮತ್ತು ಎಲೀಯೆಜೆರ್.
24 歌唱的人中有以利亞實。守門的人中,有沙龍、提聯、烏利。
೨೪ಗಾಯಕರಲ್ಲಿ: ಎಲ್ಯಾಷೀಬ್. ದ್ವಾರಪಾಲಕರಲ್ಲಿ: ಶಲ್ಲೂಮ್, ಟೆಲೆಮ್ ಮತ್ತು ಊರೀ.
25 以色列人巴錄的子孫中,有拉米、耶西雅、瑪基雅、米雅民、以利亞撒、瑪基雅、比拿雅。
೨೫ಬೇರೆ ಇಸ್ರಾಯೇಲರಲ್ಲಿ: ಪರೋಷ್ ಸಂತಾನದವರಾದ ರಮ್ಯಾಹ, ಇಜ್ಜೀಯ ಎಲ್ಲಾಜಾರ್, ಮಿಯ್ಯಾಮಿನ್, ಮಲ್ಕೀಯ, ಬೆನಾಯ;
26 以攔的子孫中,有瑪他尼、撒迦利亞、耶歇、押底、耶利末、以利雅。
೨೬ಏಲಾಮ್ ಸಂತಾನದವರಾದ ಮತ್ತನ್ಯ, ಜೆಕರ್ಯ, ಯೆಹೀಯೇಲ್, ಅಬ್ದೀ, ಯೆರೇಮೋತ್ ಮತ್ತು ಏಲೀಯ.
27 薩土的子孫中,有以利約乃、以利亞實、瑪他尼、耶利末、撒拔、亞西撒。
೨೭ಜತ್ತೂ ಸಂತಾನದವರಾದ ಎಲ್ಯೋವೇನೈ, ಎಲ್ಯಾಷೀಬ್, ಮತ್ತನ್ಯ, ಯೆರೇಮೋತ್, ಜಾಬಾದ ಮತ್ತು ಅಜೀಜಾ.
28 比拜的子孫中,有約哈難、哈拿尼雅、薩拜、亞勒。
೨೮ಬೇಬೈ ಸಂತಾನದವರಾದ ಯೆಹೋಹಾನಾನ್, ಹನನ್ಯ, ಜಬ್ಬೈ ಮತ್ತು ಅತ್ಲೈ.
29 巴尼的子孫中,有米書蘭、瑪鹿、亞大雅、雅述、示押、耶利末。
೨೯ಬಾನೀ ಸಂತಾನದವರಾದ ಮೆಷುಲ್ಲಾಮ್, ಮಲ್ಲೂಕ್, ಅದಾಯ, ಯಾಷೂಬ್, ಶೆಯಾಲ್ ಮತ್ತು ರಾಮೋತ್.
30 巴哈‧摩押的子孫中,有阿底拿、基拉、比拿雅、瑪西雅、瑪他尼、比撒列、賓內、瑪拿西。
೩೦ಪಹತ್ ಮೋವಾಬ್, ಸಂತಾನದವರಾದ ಅದ್ನ ಕೆಲಾಲ್, ಬೆನಾಯ, ಮಾಸೇಯ ಮತ್ತನ್ಯ, ಬೆಚಲೇಲ್, ಬಿನ್ನೂಯ್ ಮತ್ತು ಮನಸ್ಸೆ.
31 哈琳的子孫中,有以利以謝、伊示雅、瑪基雅、示瑪雅、西緬、
೩೧ಹಾರೀಮ್ ಸಂತಾನದವರಾದ ಎಲೀಯೆಜೆರ್, ಇಷ್ಷೀಯ, ಮಲ್ಕೀಯ, ಶೆಮಾಯ, ಸಿಮೆಯೋನ್,
೩೨ಬೆನ್ಯಾಮೀನ್, ಮಲ್ಲೂಕ್ ಮತ್ತು ಶೆಮರ್ಯ.
33 哈順的子孫中,有瑪特乃、瑪達他、撒拔、以利法列、耶利買、瑪拿西、示每。
೩೩ಹಾಷುಮ್, ಸಂತಾನದವರಾದ ಮತ್ತೆನೈ, ಮತ್ತತ್ತ, ಜಾಬಾದ, ಎಲೀಫೆಲೆಟ್, ಯೆರೇಮೈ, ಮನಸ್ಸೆ ಮತ್ತು ಶಿಮ್ಮೀ.
೩೪ಬಾನೀ ಸಂತಾನದರಾದ ಮಾದೈ, ಅಮ್ರಾಮ್, ಊವೇಲ್
೩೬ವನ್ಯಾಹ, ಮೆರೇಮೋತ್, ಎಲ್ಯಾಷೀಬ್,
೩೭ಮತ್ತನ್ಯ, ಮತ್ತೆನೈ, ಯಾಸೈ,
೩೮ಬಾನೀ, ಬಿನ್ನೂಯ್, ಶಿಮ್ಮೀ,
೪೧ಅಜರೇಲ್, ಶೆಲೆಮ್ಯ, ಶೆಮರ್ಯ,
೪೨ಶಲ್ಲೂಮ್, ಅಮರ್ಯ ಮತ್ತು ಯೋಸೇಫ್.
43 尼波的子孫中,有耶利、瑪他提雅、撒拔、西比拿、雅玳、約珥、比拿雅。
೪೩ನೆಬೋ ಸಂತಾನದವರಾದ ಯೆಗೀಯೇಲ್, ಮತ್ತಿತ್ಯ, ಜಾಬಾದ, ಜೆಬೀನ, ಯದ್ದೈ, ಯೋವೇಲ್ ಮತ್ತು ಬೆನಾಯ.
44 這些人都娶了外邦女子為妻,其中也有生了兒女的。
೪೪ಇವರೆಲ್ಲರೂ ಅನ್ಯಕುಲದ ಸ್ತ್ರೀಯರನ್ನು ಮದುವೆ ಮಾಡಿಕೊಂಡವರು. ಕೆಲವರಿಗೆ ಆ ಸ್ತ್ರೀಯರಲ್ಲಿ ಮಕ್ಕಳು ಹುಟ್ಟಿದ್ದರು.