+ 創世記 1 >
೧ಆದಿಯಲ್ಲಿ ದೇವರು ಆಕಾಶವನ್ನು, ಭೂಮಿಯನ್ನು ಸೃಷ್ಟಿಮಾಡಿದನು.
2 地是空虛混沌,淵面黑暗;上帝的靈運行在水面上。
೨ಭೂಮಿಯು ಕ್ರಮವಿಲ್ಲದೆಯೂ ಬರಿದಾಗಿಯೂ ಇತ್ತು. ಆದಿಸಾಗರದ ಮೇಲೆ ಕತ್ತಲಿತ್ತು. ದೇವರಾತ್ಮವು ಸಾಗರದ ಮೇಲೆ ಚಲಿಸುತ್ತಿತ್ತು.
೩ಅನಂತರ ದೇವರು “ಬೆಳಕಾಗಲಿ” ಎಂದು ಆಜ್ಞಾಪಿಸಲು ಬೆಳಕಾಯಿತು.
೪ದೇವರು ಆ ಬೆಳಕನ್ನು ಒಳ್ಳೆಯದೆಂದು ಕಂಡನು.
5 上帝稱光為「晝」,稱暗為「夜」。有晚上,有早晨,這是頭一日。
೫ದೇವರು ಬೆಳಕನ್ನೂ ಕತ್ತಲನ್ನೂ ಬೇರ್ಪಡಿಸಿ ಬೆಳಕಿಗೆ “ಹಗಲು” ಎಂದೂ, ಕತ್ತಲೆಗೆ “ಇರುಳು” ಎಂದೂ ಹೆಸರಿಟ್ಟನು. ಹೀಗೆ ಸಾಯಂಕಾಲವೂ ಉದಯಕಾಲವೂ ಆಗಿ ಮೊದಲನೆಯ ದಿನವಾಯಿತು.
೬ಬಳಿಕ ದೇವರು “ಜಲರಾಶಿಗಳ ನಡುವೆ ವಿಸ್ತಾರವಾದ ಗುಮ್ಮಟವು ಉಂಟಾಗಲಿ ಅದು ಕೆಳಗಿನ ನೀರುಗಳನ್ನೂ ಮೇಲಿನ ನೀರುಗಳನ್ನೂ ಬೇರೆ ಬೇರೆ ಮಾಡಲಿ” ಅಂದನು.
7 上帝就造出空氣,將空氣以下的水、空氣以上的水分開了。事就這樣成了。
೭ದೇವರು ವಿಸ್ತಾರವಾದ ಗುಮ್ಮಟವನ್ನು ಮಾಡಿ ಅದರ ಕೆಳಗಿದ್ದ ನೀರುಗಳನ್ನು ಅದರ ಮೇಲಿದ್ದ ನೀರುಗಳಿಂದ ವಿಂಗಡಿಸಿದನು. ಅದು ಹಾಗೆಯೇ ಆಯಿತು.
8 上帝稱空氣為「天」。有晚上,有早晨,是第二日。
೮ದೇವರು ಆ ಗುಮ್ಮಟಕ್ಕೆ “ಆಕಾಶ” ಎಂದು ಹೆಸರಿಟ್ಟನು. ಹೀಗೆ ಸಾಯಂಕಾಲವೂ ಉದಯಕಾಲವೂ ಆಗಿ ಎರಡನೆಯ ದಿನವಾಯಿತು.
9 上帝說:「天下的水要聚在一處,使旱地露出來。」事就這樣成了。
೯ಅನಂತರ ದೇವರು, “ಆಕಾಶದ ಕೆಳಗಿರುವ ನೀರೆಲ್ಲಾ ಒಂದೇ ಸ್ಥಳದಲ್ಲಿ ಒಟ್ಟಿಗೆ ಕೂಡಿಕೊಳ್ಳಲಿ ಮತ್ತು ಒಣನೆಲವು ಕಾಣಿಸಲಿ” ಅಂದನು. ಹಾಗೆಯೇ ಆಯಿತು.
10 上帝稱旱地為「地」,稱水的聚處為「海」。上帝看着是好的。
೧೦ದೇವರು ಒಣನೆಲಕ್ಕೆ “ಭೂಮಿ” ಎಂದೂ ಜಲರಾಶಿಗೆ “ಸಮುದ್ರ” ಎಂದೂ ಹೆಸರಿಟ್ಟನು. ಆತನು ಅದನ್ನು ಒಳ್ಳೆಯದೆಂದು ನೋಡಿದನು.
11 上帝說:「地要發生青草和結種子的菜蔬,並結果子的樹木,各從其類,果子都包着核。」事就這樣成了。
೧೧ತರುವಾಯ ದೇವರು, “ಭೂಮಿಯು ಹುಲ್ಲನ್ನು, ಸಸ್ಯಗಳನ್ನೂ, ಬೀಜಬಿಡುವ ಕಾಯಿಪಲ್ಯದ ಗಿಡಗಳನ್ನೂ ಬೆಳೆಯಿಸಲಿ ಮತ್ತು ಬೀಜವುಳ್ಳ ಹಣ್ಣಿನ ಮರಗಳನ್ನು ಅವುಗಳ ಜಾತಿಗನುಸಾರವಾಗಿ ಫಲಿಸಲಿ” ಎಂದು ಹೇಳಿದನು, ಹಾಗೆಯೇ ಆಯಿತು.
12 於是地發生了青草和結種子的菜蔬,各從其類;並結果子的樹木,各從其類;果子都包着核。上帝看着是好的。
೧೨ಭೂಮಿಯಲ್ಲಿ ಸಸ್ಯಗಳು ಬೆಳೆದವು. ತಮ್ಮ ತಮ್ಮ ಜಾತಿಯ ಪ್ರಕಾರ ಬೀಜಬಿಡುವ ಕಾಯಿಪಲ್ಯದ ಗಿಡಗಳು ಉಂಟಾದವು. ತಮ್ಮ ತಮ್ಮ ಜಾತಿಗನುಸಾರವಾಗಿ ಬೀಜವುಳ್ಳ ಹಣ್ಣಿನ ಮರಗಳು ಉತ್ಪತ್ತಿಯಾದವು. ದೇವರು ಅದನ್ನು ಒಳ್ಳೆಯದೆಂದು ಕಂಡನು
೧೩ಹೀಗೆ ಸಾಯಂಕಾಲವೂ ಉದಯಕಾಲವೂ ಆಗಿ ಮೂರನೆಯ ದಿನವಾಯಿತು.
14 上帝說:「天上要有光體,可以分晝夜,作記號,定節令、日子、年歲,
೧೪ಬಳಿಕ ದೇವರು, “ಆಕಾಶ ಮಂಡಲದಲ್ಲಿ ಬೆಳಕುಗಳು ಉಂಟಾಗಲಿ. ಅವು ಹಗಲಿರುಳುಗಳನ್ನು ಬೇರೆ ಬೇರೆ ಮಾಡಲಿ. ಅವು ಕಾಲಗಳನ್ನೂ, ದಿನಸಂವತ್ಸರಗಳನ್ನೂ ಸೂಚಿಸುವ ಗುರುತುಗಳಾಗಿರಲಿ.
15 並要發光在天空,普照在地上。」事就這樣成了。
೧೫ಭೂಮಿಯ ಮೇಲೆ ಬೆಳಕು ಕೊಡುವುದಕ್ಕೆ ಅವು ಆಕಾಶಮಂಡಲದಲ್ಲಿ ದೀಪಗಳಂತಿರಲಿ” ಅಂದನು. ಹಾಗೆಯೇ ಆಯಿತು.
16 於是上帝造了兩個大光,大的管晝,小的管夜,又造眾星,
೧೬ದೇವರು ಹಗಲನ್ನಾಳುವುದಕ್ಕೆ ದೊಡ್ಡ ದೀಪವನ್ನೂ ಇರುಳನ್ನಾಳುವುದಕ್ಕೆ ಚಿಕ್ಕ ದೀಪವನ್ನೂ ಹೀಗೆ ಎರಡು ದೊಡ್ಡ ದೀಪಗಳನ್ನು ಉಂಟು ಮಾಡಿದನು. ಆತನು ನಕ್ಷತ್ರಗಳನ್ನು ಸಹ ಉಂಟು ಮಾಡಿದನು.
೧೭ದೇವರು ಆ ಬೆಳಕುಗಳನ್ನು ಆಕಾಶದಲ್ಲಿ ನಿಲ್ಲಿಸಿ ಭೂಮಿಯ ಮೇಲೆ ಬೆಳಕು ಕೊಡುವುದಕ್ಕೂ
೧೮ಹಗಲಿರುಳುಗಳನ್ನು ಆಳುವುದಕ್ಕೂ ಬೆಳಕನ್ನು, ಕತ್ತಲನ್ನು ಬೇರೆ ಬೇರೆ ಮಾಡುವುದಕ್ಕೂ ಅವುಗಳನ್ನು ನೇಮಿಸಿದನು. ದೇವರು ಅದನ್ನು ಒಳ್ಳೆಯದೆಂದು ಕಂಡನು.
೧೯ಸಾಯಂಕಾಲವೂ ಉದಯಕಾಲವೂ ಆಗಿ ನಾಲ್ಕನೆಯ ದಿನವಾಯಿತು.
20 上帝說:「水要多多滋生有生命的物;要有雀鳥飛在地面以上,天空之中。」
೨೦ತರುವಾಯ ದೇವರು, “ಗುಂಪು ಗುಂಪಾಗಿ ಚಲಿಸುವ ಜಲಜಂತುಗಳು ನೀರಿನಲ್ಲಿ ತುಂಬಿಕೊಳ್ಳಲಿ, ಪಕ್ಷಿಗಳು ಭೂಮಿಯ ಮೇಲೆ ಅಂತರಿಕ್ಷದಲ್ಲಿ ಹಾರಾಡಲಿ” ಎಂದು ಹೇಳಿದನು.
21 上帝就造出大魚和水中所滋生各樣有生命的動物,各從其類;又造出各樣飛鳥,各從其類。上帝看着是好的。
೨೧ಹೀಗೆ ದೇವರು ಮಹಾ ಜಲಚರಗಳನ್ನೂ ನೀರಿನಲ್ಲಿ ತುಂಬಿರುವ ಸಕಲ ವಿಧವಾದ ಜೀವಿಗಳನ್ನೂ ರೆಕ್ಕೆಗಳುಳ್ಳ ಸಕಲವಿಧವಾದ ಪಕ್ಷಿಗಳನ್ನೂ ಅವುಗಳ ಜಾತಿಗನುಸಾರವಾಗಿ ಉಂಟುಮಾಡಿದನು. ಆತನು ಅದನ್ನು ಒಳ್ಳೆಯದೆಂದು ಕಂಡನು.
22 上帝就賜福給這一切,說:「滋生繁多,充滿海中的水;雀鳥也要多生在地上。」
೨೨ಇದಲ್ಲದೆ ದೇವರು, “ಅವುಗಳಿಗೆ ನೀವು ಅಭಿವೃದ್ಧಿಯಾಗಿ ಹೆಚ್ಚಿರಿ, ಜಲಚರಗಳು ಸಮುದ್ರದ ನೀರಿನಲ್ಲಿ ತುಂಬಿಕೊಳ್ಳಲಿ, ಪಕ್ಷಿಗಳು ಭೂಮಿಯ ಮೇಲೆ ಹೆಚ್ಚಲಿ” ಎಂದು ಹೇಳಿ ಆಶೀರ್ವದಿಸಿದನು.
೨೩ಹೀಗೆ ಸಾಯಂಕಾಲವೂ ಉದಯಕಾಲವೂ ಆಗಿ ಐದನೆಯ ದಿನವಾಯಿತು.
24 上帝說:「地要生出活物來,各從其類;牲畜、昆蟲、野獸,各從其類。」事就這樣成了。
೨೪ಬಳಿಕ ದೇವರು, “ಭೂಮಿಯಿಂದ ಜೀವಜಂತುಗಳು ಉಂಟಾಗಲಿ; ಪಶು, ಕ್ರಿಮಿಗಳೂ ಕಾಡುಮೃಗಗಳು, ತಮ್ಮ ತಮ್ಮ ಜಾತಿಗನುಸಾರವಾಗಿ ಹುಟ್ಟಲಿ” ಅಂದನು. ಹಾಗೆಯೇ ಆಯಿತು.
25 於是上帝造出野獸,各從其類;牲畜,各從其類;地上一切昆蟲,各從其類。上帝看着是好的。
೨೫ದೇವರು ಕಾಡುಮೃಗಗಳನ್ನೂ, ಪಶುಗಳನ್ನೂ, ನೆಲದ ಮೇಲೆ ಹರಿದಾಡುವ ಕ್ರಿಮಿಕೀಟಗಳನ್ನೂ ಅವುಗಳ ಜಾತಿಗನುಸಾರವಾಗಿ ಉಂಟುಮಾಡಿದನು. ಆತನು ಅದನ್ನು ಒಳ್ಳೆಯದೆಂದು ಕಂಡನು.
26 上帝說:「我們要照着我們的形像、按着我們的樣式造人,使他們管理海裏的魚、空中的鳥、地上的牲畜,和全地,並地上所爬的一切昆蟲。」
೨೬ಆಮೇಲೆ ದೇವರು, ನಮ್ಮ ಸ್ವರೂಪದಲ್ಲಿ ನಮ್ಮ ಹೋಲಿಕೆಗೆ ಸರಿಯಾಗಿ ಮನುಷ್ಯರನ್ನು ಉಂಟು ಮಾಡೋಣ. ಅವರು ಸಮುದ್ರದಲ್ಲಿರುವ ಮೀನುಗಳ ಮೇಲೆಯೂ, ಅಂತರಿಕ್ಷದಲ್ಲಿ ಹಾರಾಡುವ ಪಕ್ಷಿಗಳ ಮೇಲೆಯೂ, ಪ್ರಾಣಿಗಳ ಮೇಲೆಯೂ, ನೆಲದ ಮೇಲೆ ಹರಿದಾಡುವ ಎಲ್ಲಾ ಕ್ರಿಮಿಕೀಟಗಳ ಮೇಲೆಯೂ ಎಲ್ಲಾ ಭೂಮಿಯ ಮೇಲೆಯೂ ದೊರೆತನಮಾಡಲಿ ಅಂದನು.
27 上帝就照着自己的形像造人,乃是照着他的形像造男造女。
೨೭ಹೀಗೆ ದೇವರು; “ಮನುಷ್ಯನನ್ನು ತನ್ನ ಸ್ವರೂಪದಲ್ಲಿ ಉಂಟುಮಾಡಿದನು. ದೇವರ ಸ್ವರೂಪದಲ್ಲಿ ಅವನನ್ನು ಉಂಟುಮಾಡಿದನು. ಅವರನ್ನು ಗಂಡುಹೆಣ್ಣಾಗಿ ಸೃಷ್ಟಿ ಮಾಡಿದನು.”
28 上帝就賜福給他們,又對他們說:「要生養眾多,遍滿地面,治理這地,也要管理海裏的魚、空中的鳥,和地上各樣行動的活物。」
೨೮ಇದಲ್ಲದೆ ದೇವರು ಅವರನ್ನು ಆಶೀರ್ವದಿಸಿ, “ನೀವು ಬಹು ಸಂತಾನವುಳ್ಳವರಾಗಿ ಹೆಚ್ಚಿರಿ. ಭೂಮಿಯಲ್ಲಿ ತುಂಬಿಕೊಂಡು ಅದನ್ನು ವಶಮಾಡಿಕೊಳ್ಳಿರಿ. ಸಮುದ್ರದ ಮೀನುಗಳ ಮೇಲೆಯೂ ಆಕಾಶದ ಪಕ್ಷಿಗಳ ಮೇಲೆಯೂ ಭೂಮಿಯಲ್ಲಿ ಚಲಿಸುವ ಎಲ್ಲಾ ಜೀವಿಗಳ ಮೇಲೆಯೂ ದೊರೆತನ ಮಾಡಿರಿ” ಎಂದು ಅವರಿಗೆ ಹೇಳಿದನು.
29 上帝說:「看哪,我將遍地上一切結種子的菜蔬和一切樹上所結有核的果子全賜給你們作食物。
೨೯ಅಲ್ಲದೆ ದೇವರು, “ಇಗೋ, ಸಮಸ್ತ ಭೂಮಿಯ ಮೇಲಿರುವ ಬೀಜವುಳ್ಳ ಎಲ್ಲಾ ಪೈರುಗಳನ್ನೂ, ಬೀಜವುಳ್ಳ ಎಲ್ಲಾ ಹಣ್ಣಿನ ಮರಗಳನ್ನೂ ನಿಮಗೆ ಆಹಾರಕ್ಕಾಗಿ ಕೊಟ್ಟಿದ್ದೇನೆ
30 至於地上的走獸和空中的飛鳥,並各樣爬在地上有生命的物,我將青草賜給牠們作食物。」事就這樣成了。
೩೦ಇದಲ್ಲದೆ ಭೂಮಿಯ ಮೇಲೆ ತಿರುಗಾಡುವ ಮೃಗಗಳು, ಆಕಾಶದಲ್ಲಿ ಹಾರಾಡುವ ಪಕ್ಷಿಗಳು, ನೆಲದಲ್ಲಿ ಹರಿದಾಡುವ ಕ್ರಿಮಿಕೀಟಗಳು ಮೊದಲಾದ ಜೀವಿಗಳಿಗೆ ಹಸುರಾದ ಸಸ್ಯಗಳನ್ನೆಲ್ಲಾ ಆಹಾರಕ್ಕಾಗಿ ಕೊಟ್ಟಿದ್ದೇನೆ” ಎಂದು ಹೇಳಿದನು. ಅದು ಹಾಗೆಯೇ ಆಯಿತು.
31 上帝看着一切所造的都甚好。有晚上,有早晨,是第六日。
೩೧ದೇವರು ತಾನು ಉಂಟುಮಾಡಿದ್ದನ್ನೆಲ್ಲಾ ನೋಡಲಾಗಿ ಅವೆಲ್ಲವೂ ಬಹು ಒಳ್ಳೆಯದಾಗಿ ತೋರಿತು. ಸಾಯಂಕಾಲವೂ ಉದಯಕಾಲವೂ ಆಗಿ ಆರನೆಯ ದಿನವಾಯಿತು.