< 創世記 36 >

1 以掃就是以東,他的後代記在下面。
ಎದೋಮ್ ಎಂಬ ಏಸಾವನ ವಂಶಾವಳಿ ಇದು:
2 以掃娶迦南的女子為妻,就是赫人以倫的女兒亞大和希未人祭便的孫女、亞拿的女兒阿何利巴瑪,
ಏಸಾವನು ಕಾನಾನ್ಯರ ಪುತ್ರಿಯರನ್ನು ಅಂದರೆ, ಹಿತ್ತಿಯನಾದ ಏಲೋನನ ಮಗಳಾದ ಆದಾ, ಹಿವ್ವಿಯನಾದ ಸಿಬೆಯೋನನ ಮಗಳಾದ ಅನಾಹಳ ಮಗಳಾಗಿದ್ದ ಒಹೊಲೀಬಾಮ,
3 又娶了以實瑪利的女兒、尼拜約的妹子巴實抹。
ಇಷ್ಮಾಯೇಲನ ಮಗಳೂ ನೆಬಾಯೋತನ ಸಹೋದರಿಯೂ ಆಗಿದ್ದ ಬಾಸೆಮತ್ ಇವರನ್ನು ಮದುವೆಯಾಗಿದ್ದನು.
4 亞大給以掃生了以利法;巴實抹生了流珥;
ಆದಾಳು ಏಸಾವನಿಗೆ ಎಲೀಫಜನನ್ನು ಹೆತ್ತಳು. ಬಾಸೆಮತಳು ರೆಯೂವೇಲನನ್ನು ಹೆತ್ತಳು.
5 阿何利巴瑪生了耶烏施、雅蘭、可拉。這都是以掃的兒子,是在迦南地生的。
ಒಹೊಲೀಬಾಮಳು ಯೆಯೂಷನನ್ನು, ಯಳಾಮನನ್ನು, ಕೋರಹ ಇವರನ್ನು ಹೆತ್ತಳು. ಇವರು ಕಾನಾನ್ ದೇಶದಲ್ಲಿ ಏಸಾವನಿಗೆ ಹುಟ್ಟಿದ ಪುತ್ರರು.
6 以掃帶着他的妻子、兒女,與家中一切的人口,並他的牛羊、牲畜,和一切貨財,就是他在迦南地所得的,往別處去,離了他兄弟雅各。
ತರುವಾಯ ಏಸಾವನು ತನ್ನ ಹೆಂಡತಿಯರನ್ನೂ ಪುತ್ರಪುತ್ರಿಯರನ್ನೂ ತನ್ನ ಮನೆಯಲ್ಲಿದ್ದ ಎಲ್ಲಾ ಜನರನ್ನೂ ತನ್ನ ಹಿಂಡುಗಳನ್ನೂ ತನ್ನ ಎಲ್ಲಾ ಪಶುಗಳನ್ನೂ ಕಾನಾನ್ ದೇಶದಲ್ಲಿ ತಾನು ಸಂಪಾದಿಸಿದ್ದ ಎಲ್ಲಾ ಸಂಪತ್ತನ್ನೂ ತೆಗೆದುಕೊಂಡು, ತನ್ನ ಸಹೋದರನಾದ ಯಾಕೋಬನ ಬಳಿಯಿಂದ ಸ್ವಲ್ಪ ದೂರವಿದ್ದ ಮತ್ತೊಂದು ಊರಿಗೆ ಹೋದನು.
7 因為二人的財物群畜甚多,寄居的地方容不下他們,所以不能同居。
ಏಕೆಂದರೆ ಅವರ ಸಂಪತ್ತು ಅವರು ಕೂಡಿ ಇರುವುದಕ್ಕೆ ಆಗದಷ್ಟು ಅಭಿವೃದ್ಧಿಯಾಗಿತ್ತು. ಅವರ ಪಶುಪ್ರಾಣಿಗಳಿಗೋಸ್ಕರ ಅವರು ಪ್ರವಾಸವಾಗಿದ್ದ ದೇಶವು ಅವರಿಗೆ ಸಾಲದೆ ಹೋಯಿತು.
8 於是以掃住在西珥山裏;以掃就是以東。
ಹೀಗೆ ಎದೋಮನು ಎಂಬ ಏಸಾವನು ಸೇಯೀರ್ ಪರ್ವತದಲ್ಲಿ ವಾಸವಾಗಿದ್ದನು.
9 以掃是西珥山裏以東人的始祖,他的後代記在下面。
ಸೇಯೀರ್ ಪರ್ವತದಲ್ಲಿರುವ ಎದೋಮ್ಯರ ತಂದೆ ಏಸಾವನ ವಂಶಾವಳಿಗಳು ಇವೇ:
10 以掃眾子的名字如下。以掃的妻子亞大生以利法;以掃的妻子巴實抹生流珥。
ಏಸಾವನ ಪುತ್ರರ ಹೆಸರುಗಳು ಯಾವುವೆಂದರೆ: ಏಸಾವನ ಹೆಂಡತಿಯಾಗಿರುವ ಆದಾ ಎಂಬಾಕೆಯ ಮಗನಾಗಿರುವ ಎಲೀಫಜನು, ಏಸಾವನ ಹೆಂಡತಿ ಬಾಸೆಮತಳ ಮಗ ರೆಯೂವೇಲನು.
11 以利法的兒子是提幔、阿抹、洗玻、迦坦、基納斯。
ಎಲೀಫಜನ ಮಕ್ಕಳು ಯಾರೆಂದರೆ: ತೇಮಾನ್, ಓಮಾರ್, ಚೆಫೋ, ಗತಾಮ್, ಕೆನಜ್.
12 亭納是以掃兒子以利法的妾;她給以利法生了亞瑪力。這是以掃的妻子亞大的子孫。
ತಿಮ್ನಾಳು ಏಸಾವನ ಮಗ ಎಲೀಫಜನಿಗೆ ಉಪಪತ್ನಿಯಾಗಿದ್ದು, ಅಮಾಲೇಕನನ್ನು ಹೆತ್ತಳು. ಏಸಾವನ ಹೆಂಡತಿಯಾಗಿದ್ದ ಆದಾ ಎಂಬಾಕೆಯ ಪುತ್ರರು ಇವರೇ.
13 流珥的兒子是拿哈、謝拉、沙瑪、米撒。這是以掃妻子巴實抹的子孫。
ರೆಯೂವೇಲನ ಮಕ್ಕಳು ಯಾರೆಂದರೆ: ನಹತ್, ಜೆರಹ, ಶಮ್ಮಾ ಮತ್ತು ಮಿಜ್ಜಾ, ಇವರು ಏಸಾವನ ಹೆಂಡತಿ ಬಾಸೆಮತಳ ಮೊಮ್ಮಕ್ಕಳು.
14 以掃的妻子阿何利巴瑪是祭便的孫女,亞拿的女兒;她給以掃生了耶烏施、雅蘭、可拉。
ಏಸಾವನ ಹೆಂಡತಿಯಾಗಿದ್ದ ಸಿಬೆಯೋನನ ಮಗಳಾಗಿರುವ ಅನಾಹಳ ಮಗಳಾದ ಒಹೊಲೀಬಾಮಳ ಪುತ್ರರು ಯಾರೆಂದರೆ: ಆಕೆಯು ಏಸಾವನಿಗೆ ಯೆಯೂಷ್, ಯಳಾಮ್ ಹಾಗೂ ಕೋರಹ ಇವರನ್ನು ಹೆತ್ತಳು.
15 以掃子孫中作族長的記在下面。以掃的長子以利法的子孫中,有提幔族長、阿抹族長、洗玻族長、基納斯族長、
ಏಸಾವನ ಪುತ್ರರ ಮುಖಂಡರು ಯಾರೆಂದರೆ: ಏಸಾವನ ಚೊಚ್ಚಲ ಮಗನಾಗಿರುವ ಎಲೀಫಜನ ಮಕ್ಕಳಾದ ತೇಮಾನ್, ಓಮಾರ್, ಚೆಫೋ, ಕೆನಜ್,
16 可拉族長、迦坦族長、亞瑪力族長。這是在以東地從以利法所出的族長,都是亞大的子孫。
ಕೋರಹ, ಗತಾಮ್, ಅಮಾಲೇಕ್, ಎದೋಮ್ಯ ದೇಶದಲ್ಲಿದ್ದ ಎಲೀಫಜನಿಂದ ಬಂದ ಮುಖಂಡರು ಇವರೇ. ಇವರು ಆದಾ ಎಂಬಾಕೆಯ ಮೊಮ್ಮಕ್ಕಳು.
17 以掃的兒子流珥的子孫中,有拿哈族長、謝拉族長、沙瑪族長、米撒族長。這是在以東地從流珥所出的族長,都是以掃妻子巴實抹的子孫。
ಏಸಾವನ ಮಗ ರೆಯೂವೇಲನ ಪುತ್ರರು ಯಾರೆಂದರೆ: ನಹತ್, ಜೆರಹ, ಶಮ್ಮಾ ಹಾಗೂ ಮಿಜ್ಜಾ; ಎದೋಮ್ ದೇಶದಲ್ಲಿದ್ದ ರೆವುಯೇಲನಿಂದ ಬಂದ ಮುಖಂಡರು ಇವರೇ. ಇವರು ಏಸಾವನ ಹೆಂಡತಿ ಬಾಸೆಮತಳ ಮೊಮ್ಮಕ್ಕಳು.
18 以掃的妻子阿何利巴瑪的子孫中,有耶烏施族長、雅蘭族長、可拉族長。這是從以掃妻子,亞拿的女兒,阿何利巴瑪子孫中所出的族長。
ಏಸಾವನ ಹೆಂಡತಿ ಒಹೊಲೀಬಾಮಳ ಪುತ್ರರು ಯಾರೆಂದರೆ: ಯೆಯೂಷ್, ಯಳಾಮ್ ಮತ್ತು ಕೋರಹ ಇವರೇ. ಇವರು ಅನಾಹನ ಮಗಳೂ ಏಸಾವನ ಹೆಂಡತಿಯೂ ಆಗಿದ್ದ ಒಹೊಲೀಬಾಮಳಿಂದ ಬಂದ ಮುಖಂಡರು.
19 以上的族長都是以掃的子孫;以掃就是以東。
ಇವರು ಎದೋಮ್ ಎಂಬ ಏಸಾವನ ಪುತ್ರರು. ಇವರು ಮುಖಂಡರಾಗಿದ್ದರು.
20 那地原有的居民-何利人西珥的子孫記在下面:就是羅坍、朔巴、祭便、亞拿、
ದೇಶದಲ್ಲಿ ವಾಸಿಸುತ್ತಿದ್ದ ಹೋರಿಯನಾದ ಸೇಯೀರನ ಪುತ್ರರು ಯಾರೆಂದರೆ: ಲೋಟಾನ್, ಶೋಬಾಲ್, ಸಿಬೆಯೋನ್, ಅನಾಹ,
21 底順、以察、底珊。這是從以東地的何利人西珥子孫中所出的族長。
ದೀಶೋನ್, ಏಚೆರ್, ದೀಶಾನ್ ಇವರು ಎದೋಮ್ ದೇಶದಲ್ಲಿದ್ದ ಸೇಯೀರನ ಮಕ್ಕಳಾದ ಹೋರಿಯರ ಮುಖಂಡರು.
22 羅坍的兒子是何利、希幔;羅坍的妹子是亭納。
ಲೋಟಾನನ ಪುತ್ರರು ಯಾರೆಂದರೆ: ಹೋರಿ ಮತ್ತು ಹೋಮಾಮ್. ಲೋಟಾನನಿಗೆ ತಿಮ್ನಾ ಎಂಬ ಸಹೋದರಿ ಇದ್ದಳು.
23 朔巴的兒子是亞勒文、瑪拿轄、以巴錄、示玻、阿南。
ಶೋಬಾಲನ ಮಕ್ಕಳು ಯಾರೆಂದರೆ: ಅಲ್ವಾನ್, ಮಾನಹತ್, ಏಬಾಲ್, ಶೆಫೋ ಮತ್ತು ಓನಾಮ್.
24 祭便的兒子是亞雅、亞拿(當時在曠野放他父親祭便的驢,遇着溫泉的,就是這亞拿)。
ಸಿಬೆಯೋನನ ಮಕ್ಕಳು: ಅಯ್ಯಾಹ ಮತ್ತು ಅನಾಹ ಎಂಬುವರು. ತನ್ನ ತಂದೆ ಸಿಬೆಯೋನನ ಕತ್ತೆಗಳನ್ನು ಕಾಯುವಾಗ ಕಾಡಿನಲ್ಲಿ ಬಿಸಿನೀರಿನ ಒರತೆಗಳನ್ನು ಕಂಡುಕೊಂಡವನೂ ಅರಣ್ಯದಲ್ಲಿ ಹೇಸರಗತ್ತೆಗಳನ್ನು ಕಂಡುಕೊಂಡವನು ಈ ಅನಾಹನೇ.
25 亞拿的兒子是底順;亞拿的女兒是阿何利巴瑪。
ಅನಾಹನ ಮಕ್ಕಳು ಯಾರೆಂದರೆ: ದೀಶೋನ್ ಮತ್ತು ಅನಾಹನ ಮಗಳಾದ ಒಹೊಲೀಬಾಮಳು.
26 底順的兒子是欣但、伊是班、益蘭、基蘭。
ದೀಶೋನನ ಮಕ್ಕಳು ಯಾರೆಂದರೆ: ಹೆಮ್ದಾನ್, ಎಷ್ಬಾನ್, ಇತ್ರಾನ್ ಮತ್ತು ಕೆರಾನ್.
27 以察的兒子是辟罕、撒番、亞干。
ಏಚೆರನ ಮಕ್ಕಳು ಯಾರೆಂದರೆ: ಬಿಲ್ಹಾನ್, ಜಾವಾನ್ ಮತ್ತು ಆಕಾನ್.
28 底珊的兒子是烏斯、亞蘭。
ದೀಶಾನನ ಮಕ್ಕಳು ಯಾರೆಂದರೆ: ಊಚ್ ಮತ್ತು ಅರಾನ್.
29 從何利人所出的族長記在下面:就是羅坍族長、朔巴族長、祭便族長、亞拿族長、
ಹೋರಿಯರಿಂದ ಬಂದ ಮುಖಂಡರು ಯಾರೆಂದರೆ: ಲೋಟಾನ್, ಶೋಬಾಲ್, ಸಿಬೆಯೋನ್, ಅನಾಹ,
30 底順族長、以察族長、底珊族長。這是從何利人所出的族長,都在西珥地,按着宗族作族長。
ದೀಶೋನ್, ಏಚೆರ್, ದೀಶಾನ್. ಹೋರಿಯರಿಂದ ಹುಟ್ಟಿದ ಸೇಯೀರ್ ದೇಶದಲ್ಲಿ ಮುಖಂಡರು ಇವರೇ.
31 以色列人未有君王治理以先,在以東地作王的記在下面。
ಇಸ್ರಾಯೇಲರನ್ನು ಯಾವ ಅರಸನೂ ಆಳುವುದಕ್ಕಿಂತ ಮುಂಚೆ ಎದೋಮ್ ದೇಶದಲ್ಲಿ ಆಳಿದ ಅರಸರು ಇವರೇ.
32 比珥的兒子比拉在以東作王,他的京城名叫亭哈巴。
ಎದೋಮಿನಲ್ಲಿ ಬೆಯೋರನ ಮಗನಾದ ಬೆಲಗನು ಆಳಿದನು. ಅವನ ಪಟ್ಟಣದ ಹೆಸರು ದಿನ್ಹಾಬಾ.
33 比拉死了,波斯拉人謝拉的兒子約巴接續他作王。
ಬೆಲಗನ ಮರಣದ ನಂತರ ಅವನ ಬದಲಾಗಿ ಬೊಚ್ರದವನಾದ ಜೆರಹನ ಮಗ ಯೋಬಾಬನು ಉತ್ತರಾಧಿಕಾರಿಯಾದನು.
34 約巴死了,提幔地的人戶珊接續他作王。
ಯೋಬಾಬನ ಮರಣದ ನಂತರ ಅವನ ಬದಲಾಗಿ ತೇಮಾನೀಯರ ದೇಶದ ಹುಷಾಮನು ಅರಸನಾದನು.
35 戶珊死了,比達的兒子哈達接續他作王;這哈達就是在摩押地殺敗米甸人的,他的京城名叫亞未得。
ಹುಷಾಮನ ಮರಣದ ನಂತರ ಅವೀತದ ಬೆದದನ ಮಗ ಹದದ ಅರಸನಾದನು. ಇವನು ಮೋವಾಬ್ ದೇಶದಲ್ಲಿ ನಡೆದ ಯುದ್ಧದಲ್ಲಿ ಮಿದ್ಯಾನರನ್ನು ಸೋಲಿಸಿದ; ಅವನ ರಾಜಧಾನಿಯ ಹೆಸರು ಅವೀತ್.
36 哈達死了,瑪士利加人桑拉接續他作王。
ಹದದ ಮೃತನಾದ ಮೇಲೆ ಅವನ ಬದಲಾಗಿ ಮಸ್ರೇಕದವನಾದ ಸಮ್ಲಾಹನು ಅರಸನಾದನು.
37 桑拉死了,大河邊的利河伯人掃羅接續他作王。
ಸಮ್ಲಾಹನ ಮರಣದ ನಂತರ ಅವನ ಬದಲಾಗಿ ಯೂಫ್ರೇಟೀಸ್ ನದಿತೀರದಲ್ಲಿರುವ ರೆಹೋಬೋತ್ ಊರಿನ ಸೌಲನು ಅರಸನಾದನು.
38 掃羅死了,亞革波的兒子巴勒‧哈南接續他作王。
ಸೌಲನು ಮೃತನಾದ ಮೇಲೆ ಅಕ್ಬೋರನ ಮಗ ಬಾಳ್ ಹಾನಾನ್ ಅರಸನಾದನು.
39 亞革波的兒子巴勒‧哈南死了,哈達接續他作王,他的京城名叫巴烏;他的妻子名叫米希她別,是米‧薩合的孫女,瑪特列的女兒。
ಅಕ್ಬೋರನ ಮಗ ಬಾಳ್ ಹಾನಾನನು ಮೃತನಾದ ಮೇಲೆ ಅವನ ಬದಲಾಗಿ ಹದದನು ಆಳಿದನು. ಅವನ ಪಟ್ಟಣದ ಹೆಸರು ಪಾವು. ಅವನ ಹೆಂಡತಿಯ ಹೆಸರು ಮೆಹೇಟಬೇಲ್. ಈಕೆಯು ಮೇಜಾಹಾಬನ ಮಗಳಾದ ಮಟ್ರೇದಳ ಮಗಳು.
40 從以掃所出的族長,按着他們的宗族、住處、名字記在下面:就是亭納族長、亞勒瓦族長、耶帖族長、
ಕುಟುಂಬ, ಸ್ಥಳ, ಹೆಸರುಗಳ ಪ್ರಕಾರವಾಗಿ ಏಸಾವನ ಮುಖಂಡರ ಹೆಸರುಗಳು ಯಾವುವೆಂದರೆ: ತಿಮ್ನಾ, ಅಲ್ವಾ, ಯೆತೇತ,
41 阿何利巴瑪族長、以拉族長、比嫩族長、
ಒಹೊಲೀಬಾಮ, ಏಲಾ, ಪೀನೋನ್,
42 基納斯族長、提幔族長、米比薩族長、
ಕೆನಜ್, ತೇಮಾನ್, ಮಿಬ್ಜಾರ,
43 瑪基疊族長、以蘭族長。這是以東人在所得為業的地上,按着他們的住處。(所有的族長都是以東人的始祖以掃的後代。)
ಮಗ್ದೀಯೇಲ್ ಮತ್ತು ಗೀರಾಮ್ ಇವರೇ ತಮ್ಮ ನಿವಾಸಸ್ಥಳಗಳ ಪ್ರಕಾರ ಎದೋಮ್ಯರ ಮುಖಂಡರು. ಎದೋಮ್ಯರ ತಂದೆ ಏಸಾವನು ವಂಶಾವಳಿ ಇದೇ.

< 創世記 36 >