< 以賽亞書 22 >

1 論異象谷的默示: 有甚麼事使你這滿城的人都上房頂呢?
ದಿವ್ಯದರ್ಶನದ ಕಣಿವೆಯ ವಿಷಯವಾದ ದೈವೋಕ್ತಿ. ಯಾವ ಕಾರಣಕ್ಕಾಗಿ ನಿನ್ನ ಜನರೆಲ್ಲರೂ ಮಾಳಿಗೆಗಳನ್ನು ಹತ್ತಿದರು?
2 你這滿處吶喊、大有喧嘩的城, 歡樂的邑啊, 你中間被殺的並不是被刀殺, 也不是因打仗死亡。
ಕೋಲಾಹಲದಿಂದ ತುಂಬಿ ಆರ್ಭಟಿಸುವ ಪಟ್ಟಣವೇ, ಸಂಭ್ರಮದ ಪಟ್ಟಣವೇ; ನಿನ್ನಲ್ಲಿ ಹತರಾದವರು ಕತ್ತಿಯಿಂದ ಸಾಯಲಿಲ್ಲ, ಅವರು ಯುದ್ಧದಲ್ಲಿ ಸತ್ತವರಲ್ಲ.
3 你所有的官長一同逃跑, 都為弓箭手所捆綁。 你中間一切被找到的都一同被捆綁; 他們本是逃往遠方的。
ನಿನ್ನ ಅಧಿಕಾರಿಗಳು ಒಟ್ಟಿಗೆ ಓಡಿ ಬಿಲ್ಲುಗಾರರಿಲ್ಲದೆ ಸೆರೆಯಾಗಿದ್ದಾರೆ; ದೂರದಿಂದ ಓಡುತ್ತಾ ಶತ್ರುವಿಗೆ ಸಿಕ್ಕಿದ ನಿನ್ನ ಜನರೆಲ್ಲರೊಂದಿಗೆ ಕಟ್ಟುಬಿದ್ದಿದ್ದಾರೆ.
4 所以我說:你們轉眼不看我, 我要痛哭。 不要因我眾民的毀滅, 就竭力安慰我。
ಹೀಗಿರಲು, “ನನ್ನ ಕಡೆಯಿಂದ ದೃಷ್ಟಿ ತಿರುಗಿಸಿರಿ, ಬಹು ಸಂಕಟದಿಂದ ನಾನು ಅಳುವೆನು, ನನ್ನ ಜನವೆಂಬ ಯುವತಿಯು ಹಾಳಾದ ವಿಷಯದಲ್ಲಿ ನನ್ನನ್ನು ಸಂತೈಸುವುದಕ್ಕೆ ತವಕಗೊಳ್ಳದಿರಿ.
5 因為主-萬軍之耶和華使「異象谷」 有潰亂、踐踏、煩擾的日子。 城被攻破, 哀聲達到山間。
ಸೇನಾಧೀಶ್ವರನಾದ ಯೆಹೋವನೆಂಬ ಕರ್ತನಿಂದ ದಿವ್ಯದರ್ಶನದ ಕಣಿವೆಗೆ ಗಲಿಬಿಲಿಯ ದಿನ, ತುಳಿದಾಟದ ದಿನ, ಭ್ರಾಂತಿಯ ದಿನ, ಕೋಟೆಯು ಒಡೆದು ಹೋಗಲು, ಕೂಗು ಬೆಟ್ಟವನ್ನು ಮುಟ್ಟುವ ದಿನ ಬಂದಿದೆ.
6 以攔帶着箭袋, 還有坐戰車的和馬兵; 吉珥揭開盾牌。
ಏಲಾಮು ಕುದರೆಗಳ ರಥಗಳ ಸಂಗಡ ಬತ್ತಳಿಕೆಯನ್ನು ಹೊತ್ತುಕೊಂಡು ಬಂದರು. ಕೀರಿನವರು ಗುರಾಣಿಯನ್ನು ತೆಗೆದರು.
7 你嘉美的谷遍滿戰車, 也有馬兵在城門前排列。
ನಿಮ್ಮ ಪ್ರಿಯವಾದ ಕಣಿವೆಗಳಲ್ಲಿ ರಥಗಳು ತುಂಬಿದವು, ರಾಹುತರು ಬಾಗಿಲಿನ ಹತ್ತಿರ ವ್ಯೂಹಕಟ್ಟಿದರು.”
8 他去掉猶大的遮蓋。 那日,你就仰望林庫內的軍器。
ಅವನು ಯೆಹೂದದ ರಕ್ಷಣೆಯ ಮುಸುಕನ್ನು ತೆಗೆದಿದ್ದಾನೆ. ಆ ದಿನದಲ್ಲಿ (ಲೆಬನೋನಿನ) ತೋಪು ಎನಿಸಿಕೊಳ್ಳುವ ಮಂದಿರದಲ್ಲಿನ ಆಯುಧಗಳ ಕಡೆಗೆ ದೃಷ್ಟಿಹಾಕಿದಿರಿ.
9 你們看見大衛城的破口很多,便聚積下池的水,
ದಾವೀದನ ಪಟ್ಟಣದ ಕೋಟೆಯ ಒಡಕುಗಳು ಬಹಳವೆಂದು ನೋಡಿದಿರಿ; ಕೆಳಗಿನ ಕೊಳಕ್ಕೆ ನೀರನ್ನು ಹಾಯಿಸಿದಿರಿ.
10 又數點耶路撒冷的房屋,將房屋拆毀,修補城牆,
೧೦ಯೆರೂಸಲೇಮಿನ ಮನೆಗಳನ್ನು ಲೆಕ್ಕಿಸಿ, ಪೌಳಿಗೋಡೆಯನ್ನು ಭದ್ರಪಡಿಸುವುದಕ್ಕೆ ಮನೆಗಳನ್ನು ಒಡೆದು ಹಾಕಿಬಿಟ್ಟಿರಿ.
11 又在兩道城牆中間挖一個聚水池可盛舊池的水,卻不仰望做這事的主,也不顧念從古定這事的。
೧೧ಎರಡು ಗೋಡೆಗಳ ನಡುವೆ ಹಳೆಯ ಕೊಳದ ನೀರಿಗಾಗಿ ತೊಟ್ಟಿಯನ್ನು ಮಾಡಿದ್ದೀರಿ; ಆದರೆ ಇದನ್ನೆಲ್ಲಾ ನಡೆಸಿದಾತನ ಕಡೆಗೆ ನೀವು ದೃಷ್ಟಿಯಿಡಲಿಲ್ಲ, ಪುರಾತನ ಕಾಲದಲ್ಲಿ ಸಂಕಲ್ಪಿಸಿದಾತನನ್ನು ನೀವು ಲಕ್ಷಿಸಲಿಲ್ಲ.
12 當那日,主-萬軍之耶和華叫人哭泣哀號, 頭上光禿,身披麻布。
೧೨ಸೇನಾಧೀಶ್ವರನಾದ ಯೆಹೋವನೆಂಬ ಕರ್ತನು, ಆ ದಿನದಲ್ಲಿ ನಿಮಗೆ ಆಜ್ಞಾಪಿಸಿದನು. ಕಣ್ಣೀರು ಸುರಿಸಿ, ಗೋಳಾಡಿರಿ, ತಲೆಬೋಳಿಸಿಕೊಳ್ಳಿರಿ, ಗೋಣಿತಟ್ಟನ್ನು ಸುತ್ತಿಕೊಳ್ಳಿರಿ ಎಂಬುದೇ.
13 誰知,人倒歡喜快樂, 宰牛殺羊,吃肉喝酒,說: 我們吃喝吧!因為明天要死了。
೧೩ಆದರೆ ಇಗೋ, ಉಲ್ಲಾಸ, ಹರ್ಷ, ಕುರಿದನಗಳನ್ನು ಕಡಿಯುವುದು, ಮಾಂಸ ತಿನ್ನುವುದು, ದ್ರಾಕ್ಷಾರಸ ಕುಡಿಯುವುದು, ನಾಳೆ ಸಾಯುತ್ತೇವೆಂದು ಇಂದು ತಿಂದು ಕುಡಿಯುವುದೇ ನಿಮ್ಮ ಕಾರ್ಯ.
14 萬軍之耶和華親自默示我說: 這罪孽直到你們死,斷不得赦免! 這是主-萬軍之耶和華說的。
೧೪ಹೀಗಿರಲು, ಸೇನಾಧೀಶ್ವರನಾದ ಯೆಹೋವನು ನನ್ನ ಕಿವಿಗಳಲ್ಲಿ ಪ್ರಕಟಿಸಿದ್ದೇನೆಂದರೆ, “ನೀವು ಸಾಯುವ ತನಕ ಈ ಅಧರ್ಮಕ್ಕೆ ಪ್ರಾಯಶ್ಚಿತ್ತವು ಇಲ್ಲವೇ ಇಲ್ಲ ಎಂದು ಸೇನಾಧೀಶ್ವರನಾಗಿರುವ ಯೆಹೋವನೆಂಬ ಕರ್ತನಾದ ನಾನು ನುಡಿದಿದ್ದೇನೆ” ಎಂಬುದೇ.
15 主-萬軍之耶和華這樣說:「你去見掌銀庫的,就是家宰舍伯那,對他說:
೧೫ಸೇನಾಧೀಶ್ವರನಾದ ಯೆಹೋವನೆಂಬ ಕರ್ತನು ಹೀಗೆ ನುಡಿದಿದ್ದಾನೆ, “ಹೋಗು, ಅರಮನೆಯ ಮೇಲ್ವಿಚಾರಕನಾದ ಶೆಬ್ನನೆಂಬ ಈ ಅಧ್ಯಕ್ಷನ ಬಳಿಗೆ ಹೋಗಿ ಅವನಿಗೆ ಹೇಳತಕ್ಕದ್ದೇನೆಂದರೆ,
16 『你在這裏做甚麼呢?有甚麼人竟在這裏鑿墳墓,就是在高處為自己鑿墳墓,在磐石中為自己鑿出安身之所?
೧೬‘ಇಲ್ಲಿ ನಿನಗೇನು ಕೆಲಸ? ಇಲ್ಲಿ ನಿನಗಾಗಿ ಸಮಾಧಿಯನ್ನು ತೋಡಿಸಿಕೊಂಡಿರುವ ನೀನು ಯಾರು? ಉನ್ನತದಲ್ಲಿ ನಿನಗೆ ಸಮಾಧಿಯನ್ನು ಕೊರೆಸುತ್ತಾ, ಬಂಡೆಯನ್ನು ಕೆತ್ತಿಸಿ, ನಿನಗಾಗಿ ವಿಶ್ರಾಂತಿಯ ಸ್ಥಳವನ್ನು ತೋಡಿಸಿದಿ ಅಲ್ಲವೇ?’”
17 看哪,耶和華必像大有力的人,將你緊緊纏裹,竭力拋去。
೧೭ಇಗೋ, ಬಲಿಷ್ಠ ಮನುಷ್ಯನಾದ ನಿನ್ನನ್ನು ಯೆಹೋವನು ಎಸೆಯುವನು, ನಿನ್ನನ್ನು ಕೆಳಗೆ ಎಸೆಯುವನು, ನಿನ್ನನ್ನು ಗಟ್ಟಿಯಾಗಿ ಹಿಡಿಯುವನು.
18 他必將你滾成一團,拋在寬闊之地,好像拋球一樣。你這主人家的羞辱,必在那裏坐你榮耀的車,也必在那裏死亡。
೧೮ನಿನ್ನನ್ನು ಚೆಂಡಿನಂತೆ ಸುತ್ತಿ ಸುತ್ತಿ ವಿಸ್ತಾರವಾದ ದೇಶಕ್ಕೆ ಬಿಸಾಡುವನು; ದಣಿಯ ಮನೆಗೆ ಅವಮಾನ ತಂದವನೇ, ಅಲ್ಲೇ ಸಾಯುವಿ, ನಿನ್ನ ವೈಭವದ ರಥಗಳು ಅಲ್ಲೇ ಇರುವವು.
19 我必趕逐你離開官職;你必從你的原位撤下。』
೧೯ಯೆಹೋವನಾದ ನಾನು, “ನಿನ್ನನ್ನು ಉದ್ಯೋಗದಿಂದ ತಳ್ಳಿಬಿಡುವೆನು, ನಿನ್ನ ಪದವಿಯಿಂದ ನಿನ್ನನ್ನು ಎಳೆದು ಹಾಕುವೆನು.
20 「到那日,我必召我僕人希勒家的兒子以利亞敬來,
೨೦ಆ ದಿನದಲ್ಲಿ ನನ್ನ ಸೇವಕನೂ, ಹಿಲ್ಕೀಯನ ಮಗನೂ ಆದ ಎಲ್ಯಾಕೀಮನನ್ನು ಕರೆಯುವೆನು.
21 將你的外袍給他穿上,將你的腰帶給他繫緊,將你的政權交在他手中。他必作耶路撒冷居民和猶大家的父。
೨೧ನಿನ್ನ ನಿಲುವಂಗಿಯನ್ನು ಅವನಿಗೆ ತೊಡಿಸಿ, ನಿನ್ನ ನಡುಕಟ್ಟನ್ನು ಅವನಿಗೆ ಕಟ್ಟಿ, ನಿನ್ನ ಅಧಿಕಾರವನ್ನು ಅವನ ಕೈಗೆ ಕೊಡುವೆನು; ಅವನು ಯೆರೂಸಲೇಮಿನ ನಿವಾಸಿಗಳಿಗೂ, ಯೆಹೂದದ ಮನೆತನದವರಿಗೂ ತಂದೆಯಾಗುವನು.
22 我必將大衛家的鑰匙放在他肩頭上。他開,無人能關;他關,無人能開。
೨೨ನಾನು ದಾವೀದನ ಮನೆಯ ಬೀಗದ ಕೈಯನ್ನು ನಿನ್ನ ಹೊಣೆಗಾರಿಕೆಗೆ ಕೊಡುವೆನು; ಅವನು ತೆರೆದರೆ ಯಾರೂ ಮುಚ್ಚರು, ಮುಚ್ಚಿದರೆ ಯಾರೂ ತೆರೆಯರು.
23 我必將他安穩,像釘子釘在堅固處;他必作為他父家榮耀的寶座。
೨೩ಗಟ್ಟಿಯಾದ ಸ್ಥಳದಲ್ಲಿ ಮೊಳೆಯನ್ನು ಹೊಡೆದ ಹಾಗೆ ಅವನನ್ನು ಭದ್ರಪಡಿಸುವೆನು. ಅವನು ತನ್ನ ವಂಶದವರಿಗೆ ವೈಭವವುಳ್ಳ ಸಿಂಹಾಸನವಾಗಿರುವನು.
24 他父家所有的榮耀,連兒女帶子孫,都掛在他身上,好像一切小器皿,從杯子到酒瓶掛上一樣。
೨೪ಬಟ್ಟಲು ಮೊದಲುಗೊಂಡು ಕೊಡದ ತನಕ ಸಕಲ ಸಾಧಾರಣ ಪಾತ್ರೆಗಳನ್ನು ಅಂದರೆ ತಂದೆಯ ಸಂತಾನ, ಸಂತತಿಯಾದ ಅವನ ಮನೆಯ ವೈಭವವನ್ನು ಅವರು ಆ ದಿನದಲ್ಲಿ ಅವನಿಗೆ ವಹಿಸುವರು” ಎಂಬುದೇ.
25 萬軍之耶和華說:當那日,釘在堅固處的釘子必壓斜,被砍斷落地;掛在其上的重擔必被剪斷。因為這是耶和華說的。」
೨೫ಸೇನಾಧೀಶ್ವರನಾದ ಯೆಹೋವನು ಹೀಗೆ ನುಡಿಯುತ್ತಾನೆ. “ಗಟ್ಟಿಯಾದ ಸ್ಥಳದಲ್ಲಿ ಹೊಡೆದ ಮೊಳೆಯು ಆ ದಿನದಲ್ಲಿ ಕುಸಿದು ಹೋಗುವುದು; ಅದು ಬಡಿಯಲ್ಪಟ್ಟು ಬೀಳಲಾಗಿ ಅದರ ಮೇಲೆ ಇದ್ದ ಭಾರವೂ ತೆಗೆದು ಹಾಕಲ್ಪಡುವುದು ಯೆಹೋವನೇ ಇದನ್ನು ನುಡಿದಿದ್ದಾನೆ” ಎಂಬುದೇ.

< 以賽亞書 22 >