< 以賽亞書 64 >

1 願你裂天而降; 願山在你面前震動-
ಆಹಾ, ನೀನು ಆಕಾಶವನ್ನು ಸೀಳಿ ಇಳಿದು ಬರಬಾರದೇ! ನಿನ್ನ ದರ್ಶನವು ಉಂಟಾಗಿ ಪರ್ವತಗಳು ಅಗಲಿದರೆ ಎಷ್ಟೋ ಒಳ್ಳೆಯದು!
2 好像火燒乾柴, 又像火將水燒開, 使你敵人知道你的名, 使列國在你面前發顫!
ಒಣಗಿಡಕ್ಕೆ ಹತ್ತುವ ಕಿಚ್ಚಿನ ಪ್ರಕಾರ, ನೀರನ್ನು ಕುದಿಸುವ ಬೆಂಕಿಯೋಪಾದಿಯಲ್ಲಿಯೂ ನೀನು ಪ್ರತ್ಯಕ್ಷನಾಗಿ, ನಿನ್ನ ನಾಮಮಹತ್ತನ್ನು ನಿನ್ನ ಶತ್ರುಗಳಿಗೆ ತಿಳಿಯಪಡಿಸಿ, ಜನಾಂಗಗಳನ್ನು ನಿನ್ನ ದರ್ಶನದಿಂದ ನಡುಗಿಸಬಾರದೇ!
3 你曾行我們不能逆料可畏的事。 那時你降臨,山嶺在你面前震動。
ಹೌದು, ನೀನು ಮೊದಲಿನಂತೆ ನಮ್ಮ ನಿರೀಕ್ಷೆಗೆ ಮೀರಿದ ಭಯಂಕರ ಕೃತ್ಯಗಳನ್ನು ನಡೆಸಿ ಇಳಿದು ಬಂದು, ಪರ್ವತಗಳು ನಿನ್ನ ದರ್ಶನದಿಂದ ನಡುಗಿದರೆ ಎಷ್ಟೋ ಲೇಸು!
4 從古以來,人未曾聽見、未曾耳聞、未曾眼見 在你以外有甚麼神為等候他的人行事。
ನಿನ್ನನ್ನು ಬಿಟ್ಟರೆ ನಿರೀಕ್ಷಿಸುವವನಿಗೆ ಕಾರ್ಯಕರ್ತನಾದ ಯಾವ ದೇವರನ್ನೂ ಆದಿಯಿಂದ ಯಾರೂ ಕೇಳಲಿಲ್ಲ, ಯಾರ ಕಿವಿಗೂ ಬೀಳಲಿಲ್ಲ, ಯಾರ ಕಣ್ಣೂ ಕಾಣಲಿಲ್ಲ.
5 你迎接那歡喜行義、記念你道的人; 你曾發怒,我們仍犯罪; 這景況已久,我們還能得救嗎?
ಧರ್ಮವನ್ನು ಅನುಸರಿಸಲು ಸಂತೋಷಪಟ್ಟು ನಿನ್ನ ಮಾರ್ಗದಲ್ಲಿ ನಡೆಯುತ್ತಾ ನಿನ್ನನ್ನು ಸ್ಮರಿಸುವವರಿಗೆ ಪ್ರಸನ್ನನಾಗಿದ್ದಿ; ನಮ್ಮ ಮೇಲಾದರೋ ರೋಷಗೊಂಡಿದ್ದಿ; ಆದರೂ ಪಾಪದಲ್ಲಿ ಮುಳುಗಿರುವ ನಮಗೆ ರಕ್ಷಣೆಯಾದೀತೇ?
6 我們都像不潔淨的人; 所有的義都像污穢的衣服。 我們都像葉子漸漸枯乾; 我們的罪孽好像風把我們吹去。
ನಾವೆಲ್ಲರು ಅಶುದ್ಧನ ಹಾಗಿದ್ದೇವೆ, ನಮ್ಮ ಧರ್ಮಕಾರ್ಯಗಳೆಲ್ಲಾ ಹೊಲೆಯ ಬಟ್ಟೆಯಂತಿವೆ; ನಾವೆಲ್ಲರೂ ಎಲೆಗಳೋಪಾದಿಯಲ್ಲಿ ಒಣಗಿಹೋಗಿದ್ದೇವೆ; ನಮ್ಮ ಅಪರಾಧಗಳು ಬಿರುಗಾಳಿಯ ಪ್ರಕಾರ ನಮ್ಮನ್ನು ಬಡಿದುಕೊಂಡು ಹೋಗಿವೆ.
7 並且無人求告你的名; 無人奮力抓住你。 原來你掩面不顧我們, 使我們因罪孽消化。
ಈಗ ನಿನ್ನ ಹೆಸರೆತ್ತಿ ಪ್ರಾರ್ಥಿಸಿ, ನಿನ್ನನ್ನು ಆಶ್ರಯಿಸಲು ತ್ರಾಣ ತಂದುಕೊಳ್ಳುವವನು ಎಲ್ಲಿಯೂ ಇಲ್ಲ; ನೀನು ನಮಗೆ ವಿಮುಖನಾಗಿ ನಮ್ಮನ್ನು ನಮ್ಮ ಅಪರಾಧಗಳಿಗೆ ವಶಮಾಡಿದ್ದಿಯಲ್ಲಾ.
8 耶和華啊,現在你仍是我們的父! 我們是泥,你是窯匠; 我們都是你手的工作。
ಈಗಲಾದರೋ ಯೆಹೋವನೇ, ನೀನು ನಮ್ಮ ತಂದೆಯಾಗಿದ್ದಿ; ನೀನು ಕುಂಬಾರನು, ನಾವು ಜೇಡಿಮಣ್ಣು, ನಾವೆಲ್ಲರೂ ನಿನ್ನ ಕೈಕೆಲಸವೇ.
9 耶和華啊,求你不要大發震怒, 也不要永遠記念罪孽。 求你垂顧我們, 我們都是你的百姓。
ಯೆಹೋವನೇ, ಅತಿರೋಷಗೊಳ್ಳದಿರು, ನಮ್ಮ ಅಧರ್ಮವನ್ನು ಕಡೆಯವರೆಗೂ ಜ್ಞಾಪಕದಲ್ಲಿಡಬೇಡ; ಎಲೈ, ಕರ್ತನೇ, ಕಟಾಕ್ಷಿಸು, ನಾವೆಲ್ಲರೂ ನಿನ್ನ ಜನರಾಗಿದ್ದೇವೆ.
10 你的聖邑變為曠野。 錫安變為曠野; 耶路撒冷成為荒場。
೧೦ನಿನ್ನ ಪರಿಶುದ್ಧ ಪಟ್ಟಣಗಳು ಕಾಡಾಗಿವೆ, ಚೀಯೋನು ಬೀಡಾಗಿದೆ, ಯೆರೂಸಲೇಮು ಹಾಳಾಗಿ ಹೋಗಿದೆ.
11 我們聖潔華美的殿- 就是我們列祖讚美你的所在被火焚燒; 我們所羨慕的美地盡都荒廢。
೧೧ನಮ್ಮ ಪೂರ್ವಿಕರು ನಿನ್ನನ್ನು ಕೀರ್ತಿಸುತ್ತಿದ್ದ ಸುಂದರ ಪವಿತ್ರಾಲಯವನ್ನು ಬೆಂಕಿಯು ಸುಟ್ಟುಬಿಟ್ಟಿದೆ, ನಮ್ಮ ಅಮೂಲ್ಯ ವಸ್ತುಗಳೆಲ್ಲಾ ನಾಶವಾಗಿವೆ.
12 耶和華啊,有這些事,你還忍得住嗎? 你仍靜默使我們深受苦難嗎?
೧೨ಯೆಹೋವನೇ, ಇವುಗಳನ್ನು ನೋಡಿಯೂ ನಿನ್ನನ್ನು ಬಿಗಿಹಿಡಿಯುವಿಯೋ? ಸುಮ್ಮನಿರುವಿಯೋ? ನಮ್ಮನ್ನು ಹೆಚ್ಚಾಗಿ ಕುಗ್ಗಿಸುವಿಯೋ?”

< 以賽亞書 64 >