< 耶利米書 28 >
1 當年,就是猶大王西底家登基第四年五月,基遍人押朔的兒子,先知哈拿尼雅,在耶和華的殿中當着祭司和眾民對我說:
ಅದೇ ವರ್ಷದಲ್ಲಿ ಯೆಹೂದದ ಅರಸನಾದ ಚಿದ್ಕೀಯನ ಆಳ್ವಿಕೆಯ ಪ್ರಾರಂಭದಲ್ಲಿ ನಾಲ್ಕನೆಯ ವರ್ಷದ ಐದನೆಯ ತಿಂಗಳಲ್ಲಿ ಗಿಬ್ಯೋನಿನವನಾದ ಅಜ್ಜೂರನ ಮಗನಾದ ಹನನ್ಯನೆಂಬ ಪ್ರವಾದಿಯು ಯೆಹೋವ ದೇವರ ಆಲಯದಲ್ಲಿ ಯಾಜಕರ ಮುಂದೆಯೂ, ಜನರೆಲ್ಲರ ಮುಂದೆಯೂ ನನಗೆ ಹೇಳಿದ್ದೇನೆಂದರೆ,
2 「萬軍之耶和華-以色列的上帝如此說:我已經折斷巴比倫王的軛。
“ಇಸ್ರಾಯೇಲಿನ ದೇವರೂ ಸೇನಾಧೀಶ್ವರ ಯೆಹೋವ ದೇವರೂ ಹೀಗೆ ಹೇಳುತ್ತಾರೆ: ‘ನಾನು ಬಾಬಿಲೋನಿನ ಅರಸನ ನೊಗವನ್ನು ಮುರಿದಿದ್ದೇನೆ.
3 二年之內,我要將巴比倫王尼布甲尼撒從這地掠到巴比倫的器皿,就是耶和華殿中的一切器皿都帶回此地。
ಎರಡು ವರ್ಷದೊಳಗಾಗಿ ನಾನು ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನು ಈ ಸ್ಥಳದಿಂದ ತೆಗೆದುಕೊಂಡು, ಬಾಬಿಲೋನಿಗೆ ಒಯ್ದ ಯೆಹೋವ ದೇವರ ಆಲಯದ ಪಾತ್ರೆಗಳನ್ನೆಲ್ಲಾ ತಿರುಗಿಸುವೆನು.
4 我又要將猶大王約雅敬的兒子耶哥尼雅和被擄到巴比倫去的一切猶大人帶回此地,因為我要折斷巴比倫王的軛。這是耶和華說的。」
ಯೆಹೂದದ ಅರಸನಾದ ಯೆಹೋಯಾಕೀಮನ ಮಗ ಯೆಕೊನ್ಯನನ್ನು ಬಾಬಿಲೋನಿಗೆ ಹೋದ ಯೆಹೂದದ ಸೆರೆಯವರೆಲ್ಲರನ್ನೂ ನಾನು ತಿರುಗಿ ಈ ಸ್ಥಳಕ್ಕೆ ಬರಮಾಡುವೆನು,’ ಎಂದು ಯೆಹೋವ ದೇವರು ಹೇಳುತ್ತಾರೆ. ಏಕೆಂದರೆ ಬಾಬಿಲೋನಿನ ಅರಸನ ನೊಗವನ್ನು ಮುರಿದುಬಿಡುವೆನು.”
5 先知耶利米當着祭司和站在耶和華殿裏的眾民對先知哈拿尼雅說:
ಆಗ ಪ್ರವಾದಿಯಾದ ಯೆರೆಮೀಯನು ಯಾಜಕರ ಮುಂದೆಯೂ, ಯೆಹೋವ ದೇವರ ಆಲಯದಲ್ಲಿ ನಿಂತಿರುವ ಜನರೆಲ್ಲರ ಮುಂದೆಯೂ ಪ್ರವಾದಿಯಾದ ಹನನ್ಯನಿಗೆ,
6 「阿們!願耶和華如此行,願耶和華成就你所預言的話,將耶和華殿中的器皿和一切被擄去的人從巴比倫帶回此地。
“ಆಮೆನ್, ಯೆಹೋವ ದೇವರು ಹಾಗೆಯೇ ಮಾಡಲಿ; ನೀನು ಪ್ರವಾದಿಸಿದೆ; ನಿನ್ನ ವಾಕ್ಯಗಳನ್ನು ಯೆಹೋವ ದೇವರು ನೆರವೇರಿಸಿ, ಯೆಹೋವ ದೇವರ ಆಲಯದ ಪಾತ್ರೆಗಳನ್ನೂ, ಸೆರೆಯವರೆಲ್ಲರನ್ನೂ ಬಾಬಿಲೋನಿನಿಂದ ತಿರುಗಿ ಈ ಸ್ಥಳಕ್ಕೆ ಬರಮಾಡಲಿ.
ಆದರೂ ನಾನು ನಿನಗೂ, ಜನರ ಕಿವಿಗಳಿಗೂ ಬೀಳುವಂತೆ ಹೇಳುವ ಈ ವಾಕ್ಯವನ್ನು ಕೇಳು.
8 從古以來,在你我以前的先知,向多國和大邦說預言,論到爭戰、災禍、瘟疫的事。
ನನಗೆ ಮುಂಚೆಯೂ, ನಿನಗೆ ಮುಂಚೆಯೂ ಇದ್ದ ಹಿಂದಿನ ಪ್ರವಾದಿಗಳು ಅನೇಕ ದೇಶಗಳಿಗೂ, ದೊಡ್ಡ ರಾಜ್ಯಗಳಿಗೂ ವಿರೋಧವಾಗಿ ಯುದ್ಧವನ್ನು ಕೇಡನ್ನೂ, ವ್ಯಾಧಿಯನ್ನೂ ಕುರಿತು ಪ್ರವಾದಿಸಿದರು.
9 先知預言的平安,到話語成就的時候,人便知道他真是耶和華所差來的。」
ಸಮಾಧಾನವನ್ನು ಕುರಿತು ಪ್ರವಾದಿಸುವ ಪ್ರವಾದಿಯಾದರೆ, ಆ ಪ್ರವಾದಿಯ ವಾಕ್ಯವು ಉಂಟಾಗುವಾಗ, ಅವನು ಯೆಹೋವ ದೇವರಿಂದ ನಿಜವಾಗಿ ಕಳುಹಿಸಲಾದ ಪ್ರವಾದಿ, ಎಂದು ತಿಳಿಯತಕ್ಕದ್ದು,” ಎಂದನು.
10 於是,先知哈拿尼雅將先知耶利米頸項上的軛取下來,折斷了。
ಆಗ ಪ್ರವಾದಿಯಾದ ಹನನ್ಯನು ಪ್ರವಾದಿಯಾದ ಯೆರೆಮೀಯನ ಕುತ್ತಿಗೆಯಿಂದ ನೊಗವನ್ನು ತೆಗೆದು, ಅದನ್ನು ಮುರಿದುಬಿಟ್ಟನು.
11 哈拿尼雅又當着眾民說:「耶和華如此說:二年之內我必照樣從列國人的頸項上折斷巴比倫王尼布甲尼撒的軛。」於是先知耶利米就走了。
ಹನನ್ಯನು ಜನರೆಲ್ಲರ ಮುಂದೆ ಹೇಳಿದ್ದೇನೆಂದರೆ, “ಯೆಹೋವ ದೇವರು ಹೀಗೆ ಹೇಳುತ್ತಾರೆ: ‘ಇದೇ ಪ್ರಕಾರ ನಾನು ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನ ನೊಗವನ್ನು ಎರಡು ವರ್ಷದೊಳಗಾಗಿ ಎಲ್ಲಾ ಜನಾಂಗಗಳ ಕುತ್ತಿಗೆಯ ಮೇಲಿನಿಂದ ಮುರಿದು ಹಾಕುವೆನು,’” ಎಂದನು. ಆಗ ಪ್ರವಾದಿಯಾದ ಯೆರೆಮೀಯನು ತನ್ನ ಮಾರ್ಗವಾಗಿ ಹೊರಟುಹೋದನು.
12 先知哈拿尼雅把先知耶利米頸項上的軛折斷以後,耶和華的話臨到耶利米說:
ಆಗ ಪ್ರವಾದಿಯಾದ ಹನನ್ಯನು ಆ ನೊಗವನ್ನು ಪ್ರವಾದಿಯಾದ ಯೆರೆಮೀಯನ ಕುತ್ತಿಗೆಯ ಮೇಲಿನಿಂದ ಮುರಿದು ಹಾಕಿದ ಮೇಲೆ, ಯೆಹೋವ ದೇವರ ವಾಕ್ಯವು ಯೆರೆಮೀಯನಿಗೆ ಉಂಟಾಗಿ,
13 「你去告訴哈拿尼雅說,耶和華如此說:你折斷木軛,卻換了鐵軛!
“ನೀನು ಹೋಗಿ ಹನನ್ಯನಿಗೆ ಹೀಗೆ ಹೇಳು: ‘ನೀವು ಮರದ ನೊಗಗಳನ್ನು ಮುರಿದಿದ್ದೀ; ಆದರೆ ಅವಕ್ಕೆ ಬದಲಾಗಿ ನಿನ್ನ ಮೇಲೆ ಕಬ್ಬಿಣದ ನೊಗಗಳನ್ನು ಉಂಟುಮಾಡು,’ ಎಂದು ಯೆಹೋವ ದೇವರು ಹೇಳುತ್ತಾರೆ.
14 因為萬軍之耶和華-以色列的上帝如此說:我已將鐵軛加在這些國的頸項上,使他們服事巴比倫王尼布甲尼撒,他們總要服事他;我也把田野的走獸給了他。」
ಇಸ್ರಾಯೇಲರ ದೇವರಾದ ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ: ‘ನಾನು ಈ ಎಲ್ಲಾ ಜನಾಂಗಗಳ ಕುತ್ತಿಗೆಗಳ ಮೇಲೆ ಅವರು ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನಿಗೆ ಸೇವೆ ಮಾಡುವ ಹಾಗೆ ಕಬ್ಬಿಣದ ನೊಗವನ್ನು ಇಡುವೆನು. ಅವರು ಅವನಿಗೆ ಸೇವೆಮಾಡುವರು; ಕಾಡುಮೃಗಗಳನ್ನು ಸಹ ಅವನಿಗೆ ಕೊಡುವೆನು.’”
15 於是先知耶利米對先知哈拿尼雅說:「哈拿尼雅啊,你應當聽!耶和華並沒有差遣你,你竟使這百姓倚靠謊言。
ಆಗ ಪ್ರವಾದಿಯಾದ ಯೆರೆಮೀಯನು ಪ್ರವಾದಿಯಾದ ಹನನ್ಯನಿಗೆ ಹೇಳಿದ್ದೇನೆಂದರೆ, “ಹನನೀಯನೇ, ಕೇಳು. ಯೆಹೋವ ದೇವರು ನಿನ್ನನ್ನು ಕಳುಹಿಸಲಿಲ್ಲ. ಆದರೆ ನೀನು ಈ ಜನರನ್ನು ಸುಳ್ಳಿನಲ್ಲಿ ಭರವಸೆ ಇಡುವಂತೆ ಮಾಡುತ್ತೀ.
16 所以耶和華如此說:看哪,我要叫你去世,你今年必死,因為你向耶和華說了叛逆的話。」
ಆದ್ದರಿಂದ ಯೆಹೋವ ದೇವರು ಹೀಗೆ ಹೇಳುತ್ತಾರೆ: ‘ಇಗೋ, ನಾನು ನಿನ್ನನ್ನು ಭೂಮಿಯ ಮೇಲಿನಿಂದ ಬಿಸಾಡಿಬಿಡುತ್ತೇನೆ. ಈ ವರ್ಷವೇ ನೀನು ಸಾಯುವೆ. ಏಕೆಂದರೆ ನೀನು ಯೆಹೋವ ದೇವರಿಗೆ ವಿರೋಧವಾಗಿ ದ್ರೋಹ ಬಗೆದಿದ್ದೀ,’” ಎಂದನು.
ಹಾಗೆಯೇ ಪ್ರವಾದಿಯಾದ ಹನನ್ಯನು ಅದೇ ವರ್ಷದಲ್ಲಿ ಏಳನೆಯ ತಿಂಗಳಲ್ಲಿ ಸತ್ತನು.