< 耶利米書 49 >

1 論亞捫人。耶和華如此說: 以色列沒有兒子嗎? 沒有後嗣嗎? 瑪勒堪為何得迦得之地為業呢? 屬他的民為何住其中的城邑呢?
ಅಮ್ಮೋನ್ಯರನ್ನು ಕುರಿತು ಯೆಹೋವನು ಇಂತೆನ್ನುತ್ತಾನೆ, “ಇಸ್ರಾಯೇಲಿಗೆ ಮಕ್ಕಳಿಲ್ಲವೋ? ಬಾಧ್ಯನು ಇಲ್ಲವೋ? ಮಲ್ಕಾಮ್ ದೇವತೆಯು ಗಾದಿನ ಸೀಮೆಯನ್ನು ಸ್ವಾಧೀನ ಮಾಡಿಕೊಂಡಿರುವುದೇಕೆ? ಮಲ್ಕಾಮನ ಪ್ರಜೆಗಳು ಗಾದಿನ ಪಟ್ಟಣಗಳಲ್ಲಿ ಏಕೆ ವಾಸಿಸುತ್ತಾರೆ?
2 耶和華說: 日子將到,我必使人聽見打仗的喊聲, 是攻擊亞捫人拉巴的喊聲。 拉巴要成為亂堆; 屬她的鄉村要被火焚燒。 先前得以色列地為業的, 此時以色列倒要得他們的地為業。 這是耶和華說的。
ಆದುದರಿಂದ ಇಗೋ, ಶತ್ರುಗಳು ನನ್ನ ಅಪ್ಪಣೆಯ ಮೇರೆಗೆ ರಬ್ಬಾ ಎಂಬ ಅಮ್ಮೋನ್ಯರ ಪಟ್ಟಣದ ಮೇಲೆ ಬಿದ್ದು, ಯುದ್ಧ ಘೋಷಿಸುವ ದಿನಗಳು ಬರುವವು; ಆ ಪಟ್ಟಣವು ಹಾಳುದಿಬ್ಬವಾಗುವುದು; ಅದಕ್ಕೆ ಸೇರಿದ ಗ್ರಾಮಗಳು ಬೆಂಕಿಯಿಂದ ಸುಟ್ಟುಹೋಗುವವು; ಆಗ ಇಸ್ರಾಯೇಲು ತನ್ನನ್ನು ವಶಮಾಡಿಕೊಂಡವರನ್ನು ತಾನು ವಶಮಾಡಿಕೊಳ್ಳುವುದು. ಇದು ಯೆಹೋವನ ನುಡಿ.”
3 希實本哪,你要哀號, 因為愛地變為荒場。 拉巴的居民哪,要呼喊, 以麻布束腰; 要哭號,在籬笆中跑來跑去; 因瑪勒堪和屬他的祭司、 首領要一同被擄去。
“ಹೆಷ್ಬೋನಿನವರೇ, ಗೋಳಾಡಿರಿ; ‘ಆಯಿ’ ಎಂಬ ಊರು ಹಾಳಾಯಿತು, ರಬ್ಬಾ ಪಟ್ಟಣಕ್ಕೆ ಸೇರಿದ ಗ್ರಾಮಗಳವರೇ, ಕಿರಿಚಿರಿ, ಗೋಣಿತಟ್ಟನ್ನು ಸುತ್ತಿಕೊಳ್ಳಿರಿ, ಪ್ರಲಾಪಿಸಿರಿ, ಹಟ್ಟಿಗಳಲ್ಲಿ ಅತ್ತಿತ್ತ ಓಡಾಡಿರಿ; ಏಕೆಂದರೆ ಮಲ್ಕಾಮ್ ದೇವತೆಯು, ಅದರ ಯಾಜಕರೂ ಮತ್ತು ಪ್ರಧಾನರೂ ಒಟ್ಟಾಗಿ ಸೆರೆಗೆ ಹೋಗುವರು.
4 背道的民哪, 你們為何因有山谷, 就是水流的山谷誇張呢? 為何倚靠財寶說: 誰能來到我們這裏呢?
‘ನನ್ನ ಮೇಲೆ ಯಾರು ತಾನೆ ಬಿದ್ದಾರು?’ ಎಂದು ಸ್ವಂತ ಆಸ್ತಿಪಾಸ್ತಿಯಲ್ಲಿ ಭರವಸೆ ಇಟ್ಟಿರುವ ಭ್ರಷ್ಟದೇಶವೇ, ‘ನನ್ನ ತಗ್ಗುಗಳಲ್ಲಿ ತುಂಬಾ ನೀರು ಹರಿಯುತ್ತದೆಂದು’ ಏಕೆ ಕೊಚ್ಚಿಕೊಳ್ಳುತ್ತೀ?
5 主-萬軍之耶和華說: 我要使恐嚇從四圍的人中臨到你們; 你們必被趕出, 各人一直前往, 沒有人收聚逃民。
ಸೇನಾಧೀಶ್ವರನಾದ ಯೆಹೋವನೆಂಬ ಕರ್ತನು ಹೀಗೆ ಹೇಳುತ್ತಾನೆ, ಇಗೋ, ನಿನ್ನ ನೆರೆಹೊರೆಯವರೆಲ್ಲರೂ ನಿನಗೆ ಭಯಾಸ್ಪದರಾಗುವಂತೆ ಮಾಡುವೆನು, ನಿನ್ನವರಲ್ಲಿ ಪ್ರತಿಯೊಬ್ಬನು ನಿಂತಮುಖವಾಗಿಯೇ ಅಟ್ಟಲ್ಪಡುವನು; ಚದುರಿದವರನ್ನು ಒಟ್ಟು ಸೇರಿಸುವುದಕ್ಕೆ ಯಾರೂ ಇಲ್ಲದಂತಾಗುವುದು.
6 後來我還要使被擄的亞捫人歸回。 這是耶和華說的。
ಆದರೂ ಕಾಲಾಂತರದಲ್ಲಿ ಅಮ್ಮೋನ್ಯರ ದುರವಸ್ಥೆಯನ್ನು ತಪ್ಪಿಸುವೆನು. ಇದು ಯೆಹೋವನ ನುಡಿ.”
7 論以東。萬軍之耶和華如此說: 提幔中再沒有智慧嗎? 明哲人不再有謀略嗎? 他們的智慧盡歸無有嗎?
ಎದೋಮನ್ನು ಕುರಿತು ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ತೇಮಾನ್ ಸೀಮೆಗೆ ಬುದ್ಧಿಯು ಇನ್ನಿಲ್ಲವೋ? ವಿವೇಕಿಗಳ ಆಲೋಚನಾಶಕ್ತಿಯು ಅಳಿಯಿತೋ? ಅವರ ಜ್ಞಾನವು ಮಾಯವಾಯಿತೋ?
8 底但的居民哪,要轉身逃跑, 住在深密處; 因為我向以掃追討的時候, 必使災殃臨到他。
ದೆದಾನಿನವರೇ, ಹಿಂದಿರುಗಿರಿ, ಓಡಿಹೋಗಿರಿ; ಒಳಪ್ರಾಂತ್ಯದಲ್ಲಿ ವಾಸಿಸಿರಿ; ಏಕೆಂದರೆ ನಾನು ಎದೋಮನ್ನು ದಂಡಿಸುವ ಕಾಲದಲ್ಲಿ ಏಸಾವನಿಗೆ ವಿಧಿಸಿದ ಆಪತ್ತನ್ನು ಅದರ ಮೇಲೆ ಬರಮಾಡುವೆನು.
9 摘葡萄的若來到他那裏, 豈不剩下些葡萄呢? 盜賊若夜間而來, 豈不毀壞直到夠了呢?
ದ್ರಾಕ್ಷಿಯ ಹಣ್ಣನ್ನು ಕೀಳುವವರು ನಿನ್ನ ಕಡೆಗೆ ಬಂದರೆ ಹಕ್ಕಲನ್ನೂ ಉಳಿಸುವುದಿಲ್ಲ; ಕಳ್ಳರು ರಾತ್ರಿವೇಳೆಯಲ್ಲಿ ನುಗ್ಗಿದರೆ ತಮಗೆ ಸಾಕಾಗುವವರೆಗೂ ಹಾಳುಮಾಡುವರು.
10 我卻使以掃赤露, 顯出他的隱密處; 他不能自藏。 他的後裔、弟兄、鄰舍盡都滅絕; 他也歸於無有。
೧೦ನಾನೇ ಏಸಾವನ ಆಸರೆಯನ್ನು ಕಿತ್ತಿದ್ದೇನೆ, ಅವನ ಗುಪ್ತಸ್ಥಳಗಳನ್ನು ಬಟ್ಟಬಯಲುಮಾಡಿದ್ದೇನೆ, ಅಡಗಿಕೊಳ್ಳಲಾರನು; ಅವನ ಸಂತಾನದವರೂ, ಸಹೋದರರೂ ಮತ್ತು ನೆರೆಹೊರೆಯವರೂ ಹಾಳಾದರು, ಅವನೂ ಇಲ್ಲವಾದನು.
11 你撇下孤兒,我必保全他們的命; 你的寡婦可以倚靠我。
೧೧ನೀನು ನಿನ್ನ ಅನಾಥರನ್ನು ಬಿಡು, ನಾನೇ ಅವರನ್ನು ಉಳಿಸುವೆನು; ನಿನ್ನ ವಿಧವೆಯರು ನನ್ನಲ್ಲಿ ಭರವಸೆಯಿಡಲಿ.
12 耶和華如此說:「原不該喝那杯的一定要喝。你能盡免刑罰嗎?你必不能免,一定要喝!」
೧೨ಯೆಹೋವನು ಇಂತೆನ್ನುತ್ತಾನೆ, ಪಾತ್ರೆಯಲ್ಲಿ ಕುಡಿಯುವುದು ಯಾರ ಪಾಲಿಗೆ ಬರಲಿಲ್ಲವೋ, ಅವರೇ ಖಂಡಿತ ಕುಡಿಯಬೇಕಾಗಿರುವಲ್ಲಿ ನೀನು ಅದಕ್ಕೆ ತಪ್ಪಿಸಿಕೊಂಡೀಯಾ? ಆಗುವುದೇ ಇಲ್ಲ, ನೀನು ಕುಡಿದೇ ಕುಡಿಯುವಿ.
13 耶和華說:「我指着自己起誓,波斯拉必令人驚駭、羞辱、咒詛,並且荒涼。她的一切城邑必變為永遠的荒場。」
೧೩ಬೊಚ್ರವು ಹಾಳುಬಿದ್ದು ಪರಿಹಾಸ್ಯಕ್ಕೂ, ನಿಂದೆಗೂ ಶಾಪಕ್ಕೂ ಗುರಿಯಾಗಿದೆ. ಅದಕ್ಕೆ ಸೇರಿದ ಊರುಗಳೆಲ್ಲಾ ನಿತ್ಯನಾಶವನ್ನು ಹೊಂದುವವು ಎಂದು ನನ್ನ ಮೇಲೆ ಆಣೆಯಿಟ್ಟಿದ್ದೇನೆ. ಇದು ಯೆಹೋವನ ನುಡಿ.”
14 我從耶和華那裏聽見信息, 並有使者被差往列國去,說: 你們聚集來攻擊以東, 要起來爭戰。
೧೪ಯೆಹೋವನಿಂದ ಬಂದ ಸಮಾಚಾರವನ್ನು ಕೇಳಿದ್ದೇನೆ; ದೂತನ ಮೂಲಕ ಜನಾಂಗಗಳಿಗೆ ಹೀಗೆ ಹೇಳಿ ಕಳುಹಿಸಿದ್ದಾನೆ, “ನೀವು ಕೂಡಿಕೊಂಡು ಯುದ್ಧಕ್ಕೆ ಹೊರಟು ಎದೋಮಿನ ಮೇಲೆ ಬೀಳಿರಿ.
15 我使你在列國中為最小, 在世人中被藐視。
೧೫ಇಗೋ ಎದೋಮೇ, ನೀನು ಜನಾಂಗಗಳಲ್ಲಿ ಹೀನವಾಗಿ ಜನರ ತಾತ್ಸಾರಕ್ಕೆ ಈಡಾಗುವಂತೆ ಮಾಡಿದ್ದೇನೆ.
16 住在山穴中據守山頂的啊, 論到你的威嚇, 你因心中的狂傲自欺; 你雖如大鷹高高搭窩, 我卻從那裏拉下你來。 這是耶和華說的。
೧೬ಆಹಾ, ನಿನ್ನ ಭೀಕರತ್ವವೆಲ್ಲಿ! ಪರ್ವತಾಗ್ರದಲ್ಲಿ ನೆಲೆಗೊಂಡು ಬಂಡೆಯ ಬಿರುಕುಗಳಲ್ಲಿ ವಾಸಿಸುವ ಜನವೇ, ನಿನ್ನೆದೆಯ ಹೆಮ್ಮೆಯು ನಿನ್ನನ್ನು ಮೋಸಗೊಳಿಸಿದೆ; ನೀನು ಹದ್ದಿನಂತೆ ನಿನ್ನ ಗೂಡನ್ನು ಉನ್ನತಸ್ಥಾನದಲ್ಲಿ ಕಟ್ಟಿಕೊಂಡರೂ, ನಿನ್ನನ್ನು ಅಲ್ಲಿಂದ ಇಳಿಸಿಬಿಡುವೆನು. ಇದು ಯೆಹೋವನ ನುಡಿ.”
17 「以東必令人驚駭;凡經過的人就受驚駭,又因她一切的災禍嗤笑。
೧೭ಎದೋಮು ಪರಿಹಾಸ್ಯಕ್ಕೆ ಗುರಿಯಾಗುವುದು; ಹಾದುಹೋಗುವವರೆಲ್ಲರೂ ಅದಕ್ಕೆ ಸಂಭವಿಸಿದ ವಿಪತ್ತುಗಳಿಗೆ ಬೆರಗಾಗಿ ಸಿಳ್ಳುಹಾಕುವರು.
18 耶和華說:必無人住在那裏,也無人在其中寄居,要像所多瑪、蛾摩拉,和鄰近的城邑傾覆的時候一樣。
೧೮ನಾನು ಕೆಡವಿದ ಸೊದೋಮ್ ಗೊಮೋರ ಪಟ್ಟಣಗಳಲ್ಲಿಯೂ, ಸುತ್ತಣ ಊರುಗಳಲ್ಲಿಯೂ ಹೇಗೋ ಹಾಗೆಯೇ ಎದೋಮಿನಲ್ಲಿಯೂ ಯಾರೂ ವಾಸಿಸುವುದಿಲ್ಲ, ಯಾವ ನರಪ್ರಾಣಿಯೂ ಇಳಿದುಕೊಳ್ಳುವುದಿಲ್ಲ.
19 仇敵必像獅子從約旦河邊的叢林上來,攻擊堅固的居所。轉眼之間,我要使以東人逃跑,離開這地。誰蒙揀選,我就派誰治理這地。誰能比我呢?誰能給我定規日期呢?有何牧人能在我面前站立得住呢?
೧೯ಆಹಾ, ಒಬ್ಬನು ಸಿಂಹದೋಪಾದಿಯಲ್ಲಿ ಯೊರ್ದನಿನ ದಟ್ಟ ಅಡವಿಯಿಂದ ಎದೋಮ್ಯರಿಗೆ ನಿತ್ಯನೆಲೆಯಾದ ಗೋಮಾಳಕ್ಕೆ ಏರಿಬರುವನು; ಕ್ಷಣಮಾತ್ರದಲ್ಲಿ ನಾನು ಅವರನ್ನು ಅಲ್ಲಿಂದ ಓಡಿಸಿಬಿಡುವೆನು; ನಾನು ಆರಿಸಿಕೊಂಡವನನ್ನೇ ಅದನ್ನು ಕಾಯುವುದಕ್ಕೆ ನೇಮಿಸುವೆನು; ನನ್ನ ಸಮಾನನು ಯಾರು? ನನ್ನನ್ನು ನ್ಯಾಯವಿಚಾರಣೆಗೆ ಯಾರು ಕರೆದಾರು? ಮಂದೆಯನ್ನು ಕಾಯುವ ಯಾರು ನನ್ನೆದುರಿಗೆ ನಿಲ್ಲಬಲ್ಲರು?
20 你們要聽耶和華攻擊以東所說的謀略和他攻擊提幔居民所定的旨意。仇敵定要將他們群眾微弱的拉去,定要使他們的居所荒涼。
೨೦ಹೀಗಿರಲು ಯೆಹೋವನು ಎದೋಮಿನ ವಿಷಯವಾಗಿ ಮಾಡಿಕೊಂಡಿರುವ ಆಲೋಚನೆಯನ್ನೂ, ಆತನು ತೇಮಾನ್ಯರನ್ನು ಕುರಿತು ಸಂಕಲ್ಪಿಸಿರುವ ಉದ್ದೇಶವನ್ನೂ ಆಲಿಸಿರಿ; ಮೃಗಗಳು ಖಂಡಿತವಾಗಿ ಹಿಂಡಿನ ಮರಿಗಳನ್ನು ಎಳೆದುಕೊಂಡು ಹೋಗುವವು; ನಿಶ್ಚಯವಾಗಿ ಅವುಗಳ ಹುಲ್ಗಾವಲು ಅವುಗಳ ನಾಶನಕ್ಕಾಗಿ ಬೆದರುವುದು.
21 因他們仆倒的聲音,地就震動。人在紅海那裏必聽見呼喊的聲音。
೨೧ಎದೋಮ್ಯರು ಧಡಮ್ಮನೆ ಬೀಳಲು ಭೂಮಿಯು ಕಂಪಿಸುವುದು; ಅದರ ಗೋಳು ಕೆಂಪು ಸಮುದ್ರದವರೆಗೂ ಕೇಳಿಸುವುದು!
22 仇敵必如大鷹飛起,展開翅膀攻擊波斯拉。到那日,以東的勇士心中疼痛如臨產的婦人。」
೨೨ಇಗೋ, ಬೊಚ್ರದ ಮೇಲೆ ಎರಗಬೇಕೆಂದು ಶತ್ರುವು ರಣಹದ್ದಿನಂತೆ ತನ್ನ ರೆಕ್ಕೆಗಳನ್ನು ಹರಡಿ ಹಾರಿ ಏರುವನು; ಆ ದಿನದಲ್ಲಿ ಎದೋಮಿನ ಶೂರರ ಎದೆಯು ಹೆರುವ ಹೆಂಗಸಿನ ಎದೆಯಂತೆ ಅದರುವುದು.
23 論大馬士革。 哈馬和亞珥拔蒙羞, 因他們聽見凶惡的信息就消化了。 海上有憂愁,不得平靜。
೨೩ದಮಸ್ಕವನ್ನು ಕುರಿತದ್ದು, “ಹಮಾತಿಗೂ ಮತ್ತು ಅರ್ಪಾದಿಗೂ ಆಶಾಭಂಗವಾಯಿತು; ಅವು ಅಶುಭ ಸಮಾಚಾರವನ್ನು ಕೇಳಿ ಕರಗಿ ಹೋಗಿವೆ; ಸಮುದ್ರಕ್ಕೆ ತಲ್ಲಣ ಹತ್ತಿದೆ, ಸುಮ್ಮನಿರಲಾರದು.
24 大馬士革發軟,轉身逃跑。 戰兢將她捉住; 痛苦憂愁將她抓住, 如產難的婦人一樣。
೨೪ದಮಸ್ಕವು ಕುಂದಿದೆ, ಓಡಿಹೋಗಲು ಹಿಂದಿರುಗಿದೆ; ಅದಕ್ಕೆ ನಡುಕ ಹಿಡಿದಿದೆ, ಪ್ರಸವವೇದನೆಯಂತಿರುವ ಯಾತನೆ ಮತ್ತು ವ್ಯಥೆಗಳಿಗೆ ಒಳಗಾಗಿದೆ.
25 我所喜樂可稱讚的城, 為何被撇棄了呢?
೨೫ಅಯ್ಯೋ, ಹೆಸರುವಾಸಿ ಪಟ್ಟಣವು, ನನ್ನ ಇಷ್ಟದ ಪುರವು ಏಕೆ ವಲಸೆಹೋಗಲಿಲ್ಲ!
26 她的少年人必仆倒在街上; 當那日,一切兵丁必默默無聲。 這是萬軍之耶和華說的。
೨೬ಅದರ ದುರ್ಗತಿಯಿಂದ ಆ ದಿನದಲ್ಲಿ ಅಲ್ಲಿನ ಯೌವನಸ್ಥರು ಚೌಕಗಳಲ್ಲಿ ಬಿದ್ದುಬಿಡುವರು, ಯುದ್ಧವೀರರೆಲ್ಲಾ ಸುಮ್ಮನಾಗುವರು.
27 我必在大馬士革城中使火着起, 燒滅便‧哈達的宮殿。
೨೭ಆಗ ನಾನು ದಮಸ್ಕದ ಕೋಟೆಯಲ್ಲಿ ಬೆಂಕಿಯನ್ನು ಹೊತ್ತಿಸುವೆನು, ಅದು ಬೆನ್ ಹದದನ ಅರಮನೆಗಳನ್ನು ದಹಿಸಿಬಿಡುವುದು” ಎಂದು ಸೇನಾಧೀಶ್ವರನಾದ ಯೆಹೋವನು ಅನ್ನುತ್ತಾನೆ.
28 論巴比倫王尼布甲尼撒所攻打的基達和夏瑣的諸國。耶和華如此說: 迦勒底人哪,起來上基達去, 毀滅東方人。
೨೮ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಹೊಡೆದ ಕೇದಾರನ್ನೂ ಹಾಚೋರಿನ ರಾಷ್ಟ್ರಗಳನ್ನೂ ಕುರಿತದ್ದು. “ಏಳಿರಿ, ಕೇದಾರಿಗೆ ಹೋಗಿ ಪೂರ್ವ ದಿಕ್ಕಿನ ದೇಶದವರನ್ನು ಹಾಳುಮಾಡಿರಿ” ಎಂದು ಯೆಹೋವನು ಶತ್ರುಗಳಿಗೆ ಅಪ್ಪಣೆಮಾಡಿದ್ದಾನೆ.
29 他們的帳棚和羊群都要奪去, 將幔子和一切器皿,並駱駝為自己掠去。 人向他們喊着說: 四圍都有驚嚇。
೨೯“ಶತ್ರುಗಳು ಅವರ ಗುಡಾರಗಳನ್ನೂ ಮತ್ತು ಹಿಂಡುಗಳನ್ನೂ ಅಪಹರಿಸಿಕೊಳ್ಳುವರು. ಅವರ ಪರದೆಗಳನ್ನೂ ಸಮಸ್ತ ಸಾಮಗ್ರಿಗಳನ್ನೂ, ಒಂಟೆಗಳನ್ನೂ ತೆಗೆದುಕೊಂಡು ಹೋಗುವರು, ‘ಸುತ್ತಮುತ್ತಲು ದಿಗಿಲು’ ಎಂಬುದಾಗಿ ಅವರ ಕಡೆಗೆ ಕೂಗುವರು.”
30 耶和華說: 夏瑣的居民哪,要逃奔遠方, 住在深密處; 因為巴比倫王尼布甲尼撒設計謀害你們, 起意攻擊你們。
೩೦ಯೆಹೋವನು ಇಂತೆನ್ನುತ್ತಾನೆ, “ಹಾಚೋರಿನವರೇ, ಓಡಿಹೋಗಿರಿ, ದೂರ ಅಲೆದಾಡಿರಿ, ಒಳಪ್ರಾಂತ್ಯದಲ್ಲಿ ವಾಸಿಸಿರಿ, ಏಕೆಂದರೆ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ನಿಮಗೆ ಕೇಡನ್ನು ಬಗೆದು ನಿಮ್ಮ ನಾಶಕ್ಕೆ ಉಪಾಯವನ್ನು ಕಲ್ಪಿಸಿಕೊಂಡಿದ್ದಾನೆ.
31 耶和華說: 迦勒底人哪,起來! 上安逸無慮的居民那裏去; 他們是無門無閂、獨自居住的。
೩೧ಬಾಬೆಲಿನವರೇ, ಏಳಿರಿ. ಅಗುಳಿಯೂ, ಬಾಗಿಲೂ ಬೇಕೆನ್ನದೆ ನೆಮ್ಮದಿಯಿಂದ ನಿರ್ಭಯವಾಗಿ ಪ್ರತ್ಯೇಕವಾಗಿ ವಾಸಿಸುವ ಜನಾಂಗದ ಮೇಲೆ ಬೀಳಿರಿ!
32 他們的駱駝必成為掠物; 他們眾多的牲畜必成為擄物。 我必將剃周圍頭髮的人分散四方, 使災殃從四圍臨到他們。 這是耶和華說的。
೩೨ಅವರ ಒಂಟೆಗಳು ಕೊಳ್ಳೆಯಾಗುವವು, ಅವರ ಲೆಕ್ಕವಿಲ್ಲದ ದನಕುರಿಗಳು ಸೂರೆಹೋಗುವವು; ಚಂಡಿಕೆಬಿಟ್ಟುಕೊಂಡಿರುವ ಜನರನ್ನು ಎಲ್ಲಾ ಕಡೆಯ ಗಾಳಿಗೂ ತೂರುವೆನು; ಎಲ್ಲಾ ಕಡೆಯಿಂದಲೂ ವಿಪತ್ತನ್ನು ಅವರ ಮೇಲೆ ಬರಮಾಡುವೆನು.
33 夏瑣必成為野狗的住處, 永遠淒涼; 必無人住在那裏, 也無人在其中寄居。
೩೩ಆಗ ಹಾಚೋರು ಸದಾ ಹಾಳುಬಿದ್ದು ನರಿಗಳಿಗೆ ಹಕ್ಕೆಯಾಗುವುದು; ಅಲ್ಲಿ ಯಾರೂ ವಾಸಿಸರು, ಯಾವ ನರಮನುಷ್ಯನೂ ಇಳುಕೊಳ್ಳನು, ಇದು ಯೆಹೋವನ ನುಡಿ.”
34 猶大王西底家登基的時候,耶和華論以攔的話臨到先知耶利米說:
೩೪ಯೆಹೂದದ ಅರಸನಾದ ಚಿದ್ಕೀಯನ ಆಳ್ವಿಕೆಯ ಪ್ರಾರಂಭದಲ್ಲಿ ಯೆಹೋವನು ಏಲಾಮಿನ ವಿಷಯವಾದ ಈ ವಾಕ್ಯವನ್ನು ಪ್ರವಾದಿಯಾದ ಯೆರೆಮೀಯನಿಗೆ ದಯಪಾಲಿಸಿದನು.
35 「萬軍之耶和華如此說:我必折斷以攔人的弓,就是他們為首的權力。
೩೫“ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, ಇಗೋ, ನಾನು ಏಲಾಮಿನ ಬಲವಾದ ಮುಖ್ಯ ಬಿಲ್ಲನ್ನು ಮುರಿದುಬಿಡುವೆನು.
36 我要使四風從天的四方颳來,臨到以攔人,將他們分散四方。這被趕散的人沒有一國不到的。」
೩೬ನಾನು ನಾಲ್ಕು ದಿಕ್ಕುಗಳಿಂದಲೂ ನಾಲ್ಕು ಗಾಳಿಗಳನ್ನು ಏಲಾಮ್ಯರ ಮೇಲೆ ಬರಮಾಡಿ, ಅವರನ್ನು ಆಯಾ ಗಾಳಿಗಳಿಗೆ ತೂರಿಬಿಡುವೆನು; ಏಲಾಮು ದೇಶಭ್ರಷ್ಟರಾದವರನ್ನು ಸೇರದೆ ಇರುವ ರಾಜ್ಯವೇ ಇರುವುದಿಲ್ಲ.
37 耶和華說:「我必使以攔人在仇敵和尋索其命的人面前驚惶;我也必使災禍,就是我的烈怒臨到他們,又必使刀劍追殺他們,直到將他們滅盡。
೩೭ಏಲಾಮ್ಯರು ತಮ್ಮ ಪ್ರಾಣಹುಡುಕುವ ಶತ್ರುಗಳಿಂದ ಕಂಗೆಡುವಂತೆ ಮಾಡುವೆನು; ನನ್ನ ರೋಷಾಗ್ನಿಯ ವಿಪತ್ತನ್ನು ಅವರ ಮೇಲೆ ಬರಮಾಡುವೆನು; ಇದು ಯೆಹೋವನ ನುಡಿ; ಅವರು ನಿರ್ಮೂಲವಾಗುವ ತನಕ ಅವರ ಹಿಂದೆ ಖಡ್ಗವನ್ನು ಅಟ್ಟುವೆನು;
38 我要在以攔設立我的寶座,從那裏除滅君王和首領。這是耶和華說的。
೩೮ನನ್ನ ಸಿಂಹಾಸನವನ್ನು ಏಲಾಮಿನಲ್ಲಿ ಸ್ಥಾಪಿಸಿ ಆ ದೇಶದ ಅರಸನನ್ನೂ, ಪ್ರಧಾನರನ್ನೂ ಅಳಿಸಿಬಿಡುವೆನು.
39 「到末後,我還要使被擄的以攔人歸回。這是耶和華說的。」
೩೯ಇದು ಯೆಹೋವನ ನುಡಿ. ಆದರೂ ಕಟ್ಟಕಡೆಯಲ್ಲಿ ಏಲಾಮಿನ ದುರವಸ್ಥೆಯನ್ನು ತಪ್ಪಿಸುವೆನು. ಇದು ಯೆಹೋವನ ನುಡಿ.”

< 耶利米書 49 >