< 耶利米書 8 >

1 耶和華說:「到那時,人必將猶大王的骸骨和他首領的骸骨、祭司的骸骨、先知的骸骨,並耶路撒冷居民的骸骨,都從墳墓中取出來,
ಯೆಹೋವನು ಹೀಗೆನ್ನುತ್ತಾನೆ, “ಆ ಕಾಲದಲ್ಲಿ ಯೆಹೂದದ ಅರಸರು, ಅಧಿಪತಿಗಳು, ಯಾಜಕರು, ಪ್ರವಾದಿಗಳು, ಯೆರೂಸಲೇಮಿನ ನಿವಾಸಿಗಳು, ಇವರೆಲ್ಲರ ಎಲುಬುಗಳನ್ನು ಸಮಾಧಿಗಳೊಳಗಿಂದ ತೆಗೆದುಬಿಡುವರು.
2 拋散在日頭、月亮,和天上眾星之下,就是他們從前所喜愛、所事奉、所隨從、所求問、所敬拜的。這些骸骨不再收殮,不再葬埋,必在地面上成為糞土;
ಅನಂತರ ಅವರು ಅದನ್ನು ತಾವು ಪ್ರೀತಿಸಿ, ಸೇವಿಸಿ, ಹಿಂಬಾಲಿಸಿ, ಆಶ್ರಯಿಸಿ ಪೂಜಿಸಿದ ಸೂರ್ಯ, ಚಂದ್ರ ತಾರಾಗಣಗಳ ಎದುರಿಗೆ ಹರಡಿಬಿಡುವರು. ಅವುಗಳನ್ನು ಯಾರೂ ಕೂಡಿಸಿ ಹೂಣಿಡುವುದಿಲ್ಲ; ಅವು ಭೂಮಿಯ ಮೇಲೆ ಗೊಬ್ಬರವಾಗುವವು.
3 並且這惡族所剩下的民在我所趕他們到的各處,寧可揀死不揀生。這是萬軍之耶和華說的。」
ನಾನು ಯಾವ ಸ್ಥಳಗಳಿಗೆ ಈ ದುಷ್ಟ ವಂಶದವರನ್ನು ಅಟ್ಟಿಬಿಟ್ಟಿದ್ದೆನೋ ಅಲ್ಲಿ ಉಳಿದವರೆಲ್ಲರೂ ಜೀವಿಸುವುದಕ್ಕಿಂತ ಮರಣವು ಲೇಸೆಂದು ಅದನ್ನು ಬಯಸುವರು” ಇದು ಯೆಹೋವನ ನುಡಿ.
4 你要對他們說,耶和華如此說: 人跌倒,不再起來嗎? 人轉去,不再轉來嗎?
ನೀನು ಅವರಿಗೆ ಹೀಗೆ ಹೇಳಬೇಕು, “ಯೆಹೋವನು ಇಂತೆನ್ನುತ್ತಾನೆ, ಬಿದ್ದವರು ಏಳದಿರುವರೋ? ಬಿಟ್ಟುಹೋದವನು ತಿರುಗಿ ಬರುವುದಿಲ್ಲವೋ?
5 這耶路撒冷的民,為何恆久背道呢? 他們守定詭詐,不肯回頭。
ಈ ಜನರು, ಯೆರೂಸಲೇಮ್ ಎಂದಿಗೂ ಹಿಂದಿರುಗದಂತೆ ಬಿಟ್ಟುಹೋದದ್ದೇಕೆ? ಮೋಸವನ್ನೇ ಪಟ್ಟಾಗಿ ಹಿಡಿದಿದ್ದಾರೆ, ತಿರುಗಿ ಬರುವುದಿಲ್ಲ.
6 我留心聽,聽見他們說不正直的話。 無人悔改惡行,說: 我做的是甚麼呢? 他們各人轉奔己路, 如馬直闖戰場。
ನಾನು ಕಿವಿಗೊಟ್ಟು ಕೇಳುವಾಗ ಅವರು ಯಥಾರ್ಥವಾಗಿ ಮಾತನಾಡಿಕೊಳ್ಳುತ್ತಿರಲಿಲ್ಲ; ಯಾರು ತನ್ನ ಅಧರ್ಮದ ವಿಷಯವಾಗಿ ಪಶ್ಚಾತ್ತಾಪಪಟ್ಟು ‘ಆಹಾ, ನಾನು ಎಂಥಾ ಕೆಲಸ ಮಾಡಿದೆ’ ಎಂದುಕೊಳ್ಳುತ್ತಿರಲಿಲ್ಲ; ಯುದ್ಧದಲ್ಲಿ ರಭಸವಾಗಿ ಓಡುವ ಕುದುರೆಯಂತೆ ಪ್ರತಿಯೊಬ್ಬನೂ ತನ್ನ ತನ್ನ ಮಾರ್ಗಕ್ಕೆ ತ್ವರೆಪಡುತ್ತಾನೆ.
7 空中的鸛鳥知道來去的定期; 斑鳩燕子與白鶴也守候當來的時令; 我的百姓卻不知道耶和華的法則。
ಆಕಾಶದಲ್ಲಿ ಹಾರುವ ಬಕವೂ ತನ್ನ ನಿಯಮಿತ ಕಾಲಗಳನ್ನು ತಿಳಿದುಕೊಂಡಿದೆ. ಬೆಳವಕ್ಕಿಯೂ, ಬಾನಕ್ಕಿಯೂ, ಕೊಕ್ಕರೆಯೂ ತಮ್ಮ ಗಮನಾಗಮನ ಸಮಯಗಳನ್ನು ಗಮನಿಸುತ್ತವೆ. ಆದರೆ ನನ್ನ ಜನರಾದರೋ ಯೆಹೋವನ ನಿಯಮವನ್ನು ತಿಳಿಯರು.
8 你們怎麼說:我們有智慧, 耶和華的律法在我們這裏? 看哪,文士的假筆舞弄虛假。
ಹೀಗಿರಲು ‘ನಾವು ಜ್ಞಾನಿಗಳು, ಯೆಹೋವನ ಧರ್ಮಶಾಸ್ತ್ರವು ನಮ್ಮಲ್ಲಿಯೇ ಇದೆ’ ಎಂದು ನೀವು ಅಂದುಕೊಳ್ಳುವುದು ಹೇಗೆ? ಆಹಾ, ಶಾಸ್ತ್ರಿಗಳ ಸುಳ್ಳು ಲೇಖನಿಯು ಅದನ್ನು ಸುಳ್ಳಾಗಿ ಮಾಡಿದೆ.
9 智慧人慚愧,驚惶,被擒拿; 他們棄掉耶和華的話, 心裏還有甚麼智慧呢?
ಜ್ಞಾನಿಗಳು ಆಶಾಭಂಗಪಟ್ಟು ಬೆಚ್ಚಿಬಿದ್ದು ಸಿಕ್ಕಿಕೊಂಡಿದ್ದಾರೆ. ಇಗೋ, ಯೆಹೋವನ ಮಾತನ್ನು ನಿರಾಕರಿಸಿದರು.
10 所以我必將他們的妻子給別人, 將他們的田地給別人為業; 因為他們從最小的到至大的都一味地貪婪, 從先知到祭司都行事虛謊。
೧೦ಅವರ ಜ್ಞಾನವು ಎಷ್ಟರದು? ಆದುದರಿಂದ ನಾನು ಇವರ ಹೆಂಡತಿಯರನ್ನು ಅನ್ಯರಿಗೂ ಮತ್ತು ಇವರ ಹೊಲಗದ್ದೆಗಳನ್ನು ಆಕ್ರಮಿಸುವವರಿಗೂ ಕೊಟ್ಟುಬಿಡುವೆನು. ಚಿಕ್ಕವರು ಮೊದಲುಗೊಂಡು ದೊಡ್ಡವರ ತನಕ ಎಲ್ಲರೂ ಬಾಚಿಕೊಳ್ಳುತ್ತಲೇ ಇದ್ದಾರೆ. ಪ್ರವಾದಿಗಳಿಂದ ಯಾಜಕರವರೆಗೆ ಸಕಲರೂ ಮೋಸಮಾಡುತ್ತಾರೆ.
11 他們輕輕忽忽地醫治我百姓的損傷,說: 平安了!平安了! 其實沒有平安。
೧೧ಸಮಾಧಾನವಿಲ್ಲದ್ದಿದ್ದರೂ, ‘ಸಮಾಧಾನ’ ಎಂದು ಹೇಳಿ ನನ್ನ ಪ್ರಜೆಯೆಂಬಾಕೆಯ ಗಾಯವನ್ನು ಮೇಲೆ ಮೇಲೆ ವಾಸಿಮಾಡಿದ್ದಾರೆ.
12 他們行可憎的事知道慚愧嗎? 不然,他們毫不慚愧, 也不知羞恥。 因此他們必在仆倒的人中仆倒; 我向他們討罪的時候, 他們必致跌倒。 這是耶和華說的。
೧೨ಅಸಹ್ಯ ಕಾರ್ಯಗಳನ್ನು ಮಾಡಿ ಅವಮಾನಕ್ಕೆ ಗುರಿಯಾದರೂ ಎಳ್ಳಷ್ಟೂ ನಾಚಿಕೆಪಡಲಿಲ್ಲ, ಲಜ್ಜೆಯ ಗಂಧವನ್ನೂ ತಿಳಿಯಲಿಲ್ಲ. ಆದಕಾರಣ ನಾನು ದಂಡಿಸುವ ಸಮಯದಲ್ಲಿ ಅವರು ಮುಗ್ಗರಿಸುವರು, ಬೀಳುವವರ ಸಂಗಡ ಬಿದ್ದೇ ಹೋಗುವರು ಎಂದು ಯೆಹೋವನು ನುಡಿಯುತ್ತಾನೆ.
13 耶和華說:我必使他們全然滅絕; 葡萄樹上必沒有葡萄, 無花果樹上必沒有果子, 葉子也必枯乾。 我所賜給他們的, 必離開他們過去。
೧೩ನಾನು ಇವರನ್ನು ಸಂಪೂರ್ಣವಾಗಿ ನಿರ್ಮೂಲ ಮಾಡಿಬಿಡುವೆನು. ದ್ರಾಕ್ಷಿಯ ಬಳ್ಳಿಯಲ್ಲಿಯೂ, ಅಂಜೂರದ ಮರದಲ್ಲಿಯೂ ಹಣ್ಣಿರುವುದಿಲ್ಲ, ಎಲೆಯು ಬಾಡುವುದು; ನಾನು ಹಾಳುಮಾಡುವವರನ್ನು ಅವರಿಗೆ ನೇಮಿಸುವೆನು” ಇದು ಯೆಹೋವನ ನುಡಿ.
14 我們為何靜坐不動呢? 我們當聚集,進入堅固城, 在那裏靜默不言; 因為耶和華-我們的上帝使我們靜默不言, 又將苦膽水給我們喝, 都因我們得罪了耶和華。
೧೪ಆ ಕಾಲದಲ್ಲಿ ಜನರು, “ಸುಮ್ಮನೆ ಕುಳಿತಿರುವುದೇಕೆ? ಕೂಡಿಕೊಳ್ಳಿರಿ, ಕೋಟೆಕೊತ್ತಲಗಳ ಪಟ್ಟಣಗಳಲ್ಲಿ ಸೇರಿ ಅಲ್ಲೇ ನಾಶವಾಗೋಣ. ನಾವು ನಮ್ಮ ದೇವರಾದ ಯೆಹೋವನಿಗೆ ಪಾಪಮಾಡಿದ್ದರಿಂದ ಆತನು ನಮ್ಮನ್ನು ನಾಶನಕ್ಕೆ ಗುರಿಮಾಡಿ ಕಹಿಯಾದ ನೀರನ್ನು ಕುಡಿಸಿದ್ದಾನಷ್ಟೆ.
15 我們指望平安, 卻得不着好處; 指望痊癒的時候, 不料,受了驚惶。
೧೫ನಾವು ಸುಖವನ್ನು ನಿರೀಕ್ಷಿಸಿದೆವು, ಯಾವ ಮೇಲೂ ಆಗಲಿಲ್ಲ; ಕ್ಷೇಮಕಾಲವನ್ನು ಎದುರುನೋಡಿದೆವು, ಹಾ, ಅಂಜಿಕೆಯೇ!
16 聽見從但那裏敵人的馬噴鼻氣, 他的壯馬發嘶聲, 全地就都震動; 因為他們來吞滅這地和其上所有的, 吞滅這城與其中的居民。
೧೬ವೈರಿಯ ಕುದುರೆಗಳ ಬುಸುಗಾಟವು ದಾನನಿಂದ ಕೇಳಿಬರುತ್ತದೆ; ತುರಂಗಗಳ (ಯುದ್ಧದ ಕುದುರೆ) ಕೆನೆತದ ಶಬ್ದಕ್ಕೆ ದೇಶವೆಲ್ಲಾ ಕಂಪಿಸುತ್ತದೆ. ಶತ್ರುಗಳು ಬಂದರು, ಸೀಮೆಯನ್ನೂ, ಅದರಲ್ಲಿರುವ ಸಮಸ್ತವನ್ನೂ, ಪಟ್ಟಣವನ್ನೂ, ಪಟ್ಟಣದ ನಿವಾಸಿಗಳನ್ನೂ ನುಂಗಿಬಿಟ್ಟರು” ಎಂದು ಹೇಳುವರು.
17 看哪,我必使毒蛇到你們中間, 是不服法術的, 必咬你們。 這是耶和華說的。
೧೭ಅದಕ್ಕೆ ಯೆಹೋವನು, “ಇಗೋ, ನಾನು ನಿಮ್ಮ ಮೇಲೆ ಹಾವುಗಳನ್ನು, ಮಂತ್ರಕ್ಕೆ ಅಧೀನವಾಗದ ನಾಗಗಳನ್ನು ಬಿಡುವೆನು; ಅವು ನಿಮ್ಮನ್ನು ಕಚ್ಚುವವು” ಎಂದು ನುಡಿದಿದ್ದಾನೆ.
18 我有憂愁,願能自慰; 我心在我裏面發昏。
೧೮ಅಯ್ಯೋ, ನನ್ನ ದುಃಖಕ್ಕೆ ಕೊನೆಯಿಲ್ಲವೇ? ನನ್ನ ಹೃದಯವು ನನ್ನೊಳಗೆ ಕುಂದಿಹೋಗಿದೆ.
19 聽啊,是我百姓的哀聲從極遠之地而來, 說:耶和華不在錫安嗎? 錫安的王不在其中嗎? 耶和華說:他們為甚麼以雕刻的偶像 和外邦虛無的神惹我發怒呢?
೧೯ಆಹಾ, ನನ್ನ ಪ್ರಜೆಯೆಂಬಾಕೆಯು, “ಯೆಹೋವನು ಚೀಯೋನಿನಲ್ಲಿಲ್ಲವೋ, ಅದರ ರಾಜನು ಅಲ್ಲಿ ವಾಸವಾಗಿಲ್ಲವೋ?” ಎಂದು ಮೊರೆಯಿಡುವ ಶಬ್ದವು ದೂರದೇಶದಿಂದ ಕೇಳಿಸುತ್ತದೆ. ಅದಕ್ಕೆ ಯೆಹೋವನು, “ಇವರು ತಮ್ಮ ವಿಗ್ರಹಗಳಿಂದಲೂ, ಅನ್ಯದೇವತೆಗಳ ಶೂನ್ಯರೂಪಗಳಿಂದಲೂ ಏಕೆ ನನ್ನನ್ನು ಕೆಣಕಿದ್ದಾರೆ” ಎಂದು ನುಡಿಯುತ್ತಾನೆ.
20 麥秋已過,夏令已完, 我們還未得救!
೨೦ಸುಗ್ಗಿ ತೀರಿತು, ಹಣ್ಣಿನ ಕಾಲ ಮುಗಿಯಿತು, ನಮಗೆ ಉದ್ಧಾರವೇ ಆಗಲಿಲ್ಲ.
21 先知說:因我百姓的損傷, 我也受了損傷。 我哀痛,驚惶將我抓住。
೨೧ನನ್ನ ಪ್ರಜೆಯೆಂಬಾಕೆಯ ವೇದನೆಯಿಂದ ನನಗೆ ಮನೋಯಾತನೆಯಾಯಿತು, ನಾನು ಶೋಕಿಸಿದೆನು, ಭಯವು ನನ್ನನ್ನು ಹಿಡಿದಿದೆ.
22 在基列豈沒有乳香呢? 在那裏豈沒有醫生呢? 我百姓為何不得痊癒呢?
೨೨ಗಿಲ್ಯಾದಿನಲ್ಲಿ ಔಷಧವಿಲ್ಲವೋ? ಅಲ್ಲಿ ವೈದ್ಯನು ಸಿಕ್ಕನೋ? ನನ್ನ ಪ್ರಜೆಯೆಂಬಾಕೆಗೆ ಏಕೆ ಗುಣವಾಗಲಿಲ್ಲ?

< 耶利米書 8 >