< 約伯記 18 >

1 書亞人比勒達回答說:
ಆಗ ಶೂಹ್ಯನಾದ ಬಿಲ್ದದನು ಪ್ರತ್ಯುತ್ತರವಾಗಿ ಹೀಗೆಂದನು,
2 你尋索言語要到幾時呢? 你可以揣摩思想,然後我們就說話。
“ಇನ್ನೆಷ್ಟರವರೆಗೆ ಮಾತುಗಳನ್ನು ಹಿಡಿಯುವುದಕ್ಕೆ ಹೊಂಚು ಹಾಕುತ್ತಿರುವೆ? ಮೊದಲು ನೀನು ಆಲೋಚಿಸು, ಆ ಮೇಲೆ ಮಾತನಾಡೋಣ.
3 我們為何算為畜生, 在你眼中看作污穢呢?
ಏಕೆ ನಮ್ಮನ್ನು ಮೃಗಗಳೆಂದು ಎಣಿಸಿದ್ದೀ? ನಿನ್ನ ದೃಷ್ಟಿಯಲ್ಲಿ ನಾವು ದಡ್ಡರೋ?
4 你這惱怒將自己撕裂的, 難道大地為你見棄、 磐石挪開原處嗎?
ಸಿಟ್ಟಿನಿಂದ ನಿನ್ನನ್ನು ಸೀಳಿಕೊಳ್ಳುವವನೇ, ನಿನಗಾಗಿ ಲೋಕವೇ ಹಾಳಾಗಬೇಕೋ, ಬಂಡೆಯು ತನ್ನ ಸ್ಥಳದಿಂದ ಜರುಗಬೇಕೋ?
5 惡人的亮光必要熄滅; 他的火焰必不照耀。
ಹೇಗಾದರೂ ದುಷ್ಟನ ದೀಪವು ಆರುವುದು, ಅವನ ಒಲೆಯು ಉರಿಯುವುದಿಲ್ಲ.
6 他帳棚中的亮光要變為黑暗; 他以上的燈也必熄滅。
ಅವನ ಗುಡಾರದಲ್ಲಿ ಬೆಳಕು ಕತ್ತಲಾಗುವುದು, ಅವನ ಮೇಲಣ ತೂಗು ದೀವಿಗೆಯು ನಂದಿಹೋಗುವುದು.
7 他堅強的腳步必見狹窄; 自己的計謀必將他絆倒。
ಅವನ ಬಲವುಳ್ಳ ಹೆಜ್ಜೆಗಳು ಇಕ್ಕಟ್ಟಾಗುವುದು, ಅವನ ಆಲೋಚನೆಯೇ ಅವನನ್ನು ಕೆಡವಿಹಾಕುವುದು.
8 因為他被自己的腳陷入網中, 走在纏人的網羅上。
ತನ್ನ ಹೆಜ್ಜೆಗಳಿಂದಲೇ ಬಲೆಗೆ ಬೀಳುವನು, ಹಾಳು ಗುಂಡಿಯ ಮೇಲೆ ನಡೆಯುವನು.
9 圈套必抓住他的腳跟; 機關必擒獲他。
ಬಲೆ ಅವನ ಹಿಮ್ಮಡಿಯನ್ನು ಸಿಕ್ಕಿಸಿ ಕಚ್ಚುವುದು, ಉರುಲು ಅವನನ್ನು ಹಿಡಿಯುವುದು.
10 活扣為他藏在土內; 羈絆為他藏在路上。
೧೦ನೆಲದ ಮೇಲೆ ಪಾಶವೂ, ದಾರಿಯಲ್ಲಿ ಜಾಲವೂ ಅವನಿಗಾಗಿ ಹೊಂಚಿಕೊಂಡಿರುವವು.
11 四面的驚嚇要使他害怕, 並且追趕他的腳跟。
೧೧ಎಲ್ಲಾ ಕಡೆಯಲ್ಲಿಯೂ ಅಪಾಯಗಳು ಅವನನ್ನು ಹೆದರಿಸಿ; ಅವನ ಹಿಮ್ಮಡಿ ತುಳಿಯುತ್ತಾ ಬೆನ್ನು ಹತ್ತುವವು.
12 他的力量必因飢餓衰敗; 禍患要在他旁邊等候。
೧೨ಅವನ ಬಲವು ಕುಂದಿಹೋಗುವುದು. ಅವನು ಎಡವಿ ಬಿದ್ದಾನೇ ಎಂದು ವಿಪತ್ತು ಕಾದಿರುವುದು.
13 他本身的肢體要被吞吃; 死亡的長子要吞吃他的肢體。
೧೩ಮೃತ್ಯುವಿನ ಹಿರಿಯ ಮಗನು ಅವನ ಚರ್ಮವನ್ನು ಚೂರು ಚೂರಾಗಿ ತಿಂದು, ಅವನ ಅಂಗಗಳನ್ನು ನುಂಗಿಬಿಡುವನು.
14 他要從所倚靠的帳棚被拔出來, 帶到驚嚇的王那裏。
೧೪ಅವನ ನಿರ್ಭಯದ ಗುಡಾರದಿಂದ ಅವನನ್ನು ಎಳೆದು, ಮಹಾಭೀತಿಗಳ ರಾಜನ ಸನ್ನಿಧಿಗೆ ಸಾಗಿಸಿಕೊಂಡು ಹೋಗುವನು.
15 不屬他的必住在他的帳棚裏; 硫磺必撒在他所住之處。
೧೫ಅವನ ಸಂಬಂಧಿಕರಲ್ಲದವರು ಅವನ ಗುಡಾರದಲ್ಲಿ ವಾಸಿಸುವರು, ಅವನ ಮನೆಯ ಮೇಲೆ ಗಂಧಕವು ಎರಚಲ್ಪಡುವುದು.
16 下邊,他的根本要枯乾; 上邊,他的枝子要剪除。
೧೬ಅವನ ವಂಶವೃಕ್ಷದ ಬೇರುಗಳು ಒಣಗುವುದು, ಅದರ ರೆಂಬೆಯು ಮೇಲೆ ಬಾಡುವುದು.
17 他的記念在地上必然滅亡; 他的名字在街上也不存留。
೧೭ಅವನ ಸ್ಮರಣೆಯು ಭೂಮಿಯಲ್ಲಿ ಅಳಿದುಹೋಗುವುದು, ಅವನ ಹೆಸರು ಹೊರಗಣ ಪ್ರಾಂತ್ಯಗಳಲ್ಲಿಯೂ ಇರುವುದಿಲ್ಲ.
18 他必從光明中被攆到黑暗裏, 必被趕出世界。
೧೮ಅವನನ್ನು ಬೆಳಕಿನಿಂದ ಕತ್ತಲೆಗೆ ನೂಕಿ, ಲೋಕದಿಂದಲೇ ಅಟ್ಟಿಬಿಡುವರು.
19 在本民中必無子無孫; 在寄居之地也無一人存留。
೧೯ಅವನಿಗೆ ಸ್ವಜನರಲ್ಲಿ ಮಗನಾಗಲಿ, ಮೊಮ್ಮಗನಾಗಲಿ ಇರುವುದಿಲ್ಲ. ಅವನು ವಾಸಿಸುವ ಸ್ಥಳದಲ್ಲಿ ಯಾರೂ ಉಳಿಯುವುದಿಲ್ಲ.
20 以後來的要驚奇他的日子, 好像以前去的受了驚駭。
೨೦ಪಡುವಣದವರು ಅವನ ನಾಶದ ದಿನವನ್ನು ನೋಡಿ ಹೆದರುವರು, ಹಾಗೆಯೇ ಮೂಡಣದವರು ಭಯಭ್ರಾಂತರಾಗುವರು.
21 不義之人的住處總是這樣; 此乃不認識上帝之人的地步。
೨೧ಕೆಡುಕರ ನಿವಾಸಗಳ ಸ್ಥಿತಿಯು ಇಂಥದೇ. ದೇವರನ್ನು ಲಕ್ಷಿಸದವನ ಸ್ಥಿತಿಯು ಹೀಗೆಯೇ ಇರುತ್ತದೆ.”

< 約伯記 18 >