< 約書亞記 6 >
೧ಯೆರಿಕೋವಿನವರು ಇಸ್ರಾಯೇಲ್ಯರಿಗೆ ಹೆದರಿ ತಮ್ಮ ಪಟ್ಟಣದ ಬಾಗಿಲುಗಳನ್ನು ಭದ್ರವಾಗಿ ಮುಚ್ಚಿಕೊಂಡರು. ಯಾರೂ ಒಳಗೆ ಹೋಗಲಿಲ್ಲ; ಹೊರಗೆ ಬರಲಿಲ್ಲ.
2 耶和華曉諭約書亞說:「看哪,我已經把耶利哥和耶利哥的王,並大能的勇士,都交在你手中。
೨ಆಗ ಯೆಹೋವನು ಯೆಹೋಶುವನಿಗೆ “ನೋಡು, ನಾನು ಯೆರಿಕೋವನ್ನೂ ಅದರ ಅರಸನನ್ನೂ ಹಾಗೂ ಯುದ್ಧವೀರರನ್ನೂ ನಿನ್ನ ಕೈಗೆ ಒಪ್ಪಿಸಿದ್ದೇನೆ.
3 你們的一切兵丁要圍繞這城,一日圍繞一次,六日都要這樣行。
೩ನಿನ್ನ ಭಟರೆಲ್ಲ ಆರು ದಿನಗಳ ವರೆಗೆ ದಿನಕ್ಕೆ ಒಂದು ಸಾರಿ ಪಟ್ಟಣವನ್ನು ಸುತ್ತಲಿ.
4 七個祭司要拿七個羊角走在約櫃前。到第七日,你們要繞城七次,祭司也要吹角。
೪ಏಳು ಮಂದಿ ಯಾಜಕರು ಕೊಂಬುಗಳನ್ನು ಹಿಡಿದುಕೊಂಡು ಮಂಜೂಷದ ಮುಂದೆ ನಡೆಯಲಿ. ಏಳನೆಯ ದಿನ ನೀವು ಪಟ್ಟಣವನ್ನು ಏಳು ಸಾರಿ ಸುತ್ತಬೇಕು; ಯಾಜಕರು ಕೊಂಬುಗಳನ್ನು ಊದಬೇಕು.
5 他們吹的角聲拖長,你們聽見角聲,眾百姓要大聲呼喊,城牆就必塌陷,各人都要往前直上。」
೫ಅವರು ದೀರ್ಘವಾಗಿ ಊದುವ ಕೊಂಬಿನ ಧ್ವನಿಯು ಕೇಳಿಸುತ್ತಲೇ ನೀವೆಲ್ಲರೂ ಗಟ್ಟಿಯಾಗಿ ಆರ್ಭಟಿಸಿರಿ. ಆಗ ಪಟ್ಟಣದ ಗೋಡೆಯು ತಾನೇ ಬಿದ್ದುಹೋಗುವುದು; ಪ್ರತಿಯೊಬ್ಬನೂ ನೆಟ್ಟಗೆ ಒಳಗೆ ನುಗ್ಗಬಹುದು” ಎಂದು ಹೇಳಿದನು.
6 嫩的兒子約書亞召了祭司來,吩咐他們說:「你們抬起約櫃來,要有七個祭司拿七個羊角走在耶和華的約櫃前」;
೬ಆಗ ನೂನನ ಮಗನಾದ ಯೆಹೋಶುವನು ಯಾಜಕರನ್ನು ಕರೆದು ಅವರಿಗೆ, “ಒಡಂಬಡಿಕೆಯ ಮಂಜೂಷವನ್ನು ಹೊತ್ತುಕೊಂಡು ಹೋಗಿರಿ. ಏಳು ಮಂದಿ ಯಾಜಕರು ಕೊಂಬುಗಳನ್ನು ಹಿಡಿದುಕೊಂಡು ಯೆಹೋವನ ಮಂಜೂಷದ ಮುಂದೆ ನಡೆಯಲಿ” ಎಂದನು.
7 又對百姓說:「你們前去繞城,帶兵器的要走在耶和華的約櫃前。」
೭ಮತ್ತು ಅವನು ಜನರಿಗೆ “ನೀವು ಹೋಗಿ ಪಟ್ಟಣವನ್ನು ಸುತ್ತಿರಿ. ಯುದ್ಧಸನ್ನದ್ಧರೆಲ್ಲರೂ ಯೆಹೋವನ ಮಂಜೂಷದ ಮುಂದೆ ಹೋಗಲಿ” ಎಂದು ಹೇಳಿದನು.
8 約書亞對百姓說完了話,七個祭司拿七個羊角走在耶和華面前吹角;耶和華的約櫃在他們後面跟隨。
೮ಯೆಹೋಶುವನು ಆಜ್ಞಾಪಿಸಿದಂತೆಯೇ ಏಳು ಮಂದಿ ಯಾಜಕರು ಕೊಂಬುಗಳನ್ನು ಹಿಡಿದುಕೊಂಡು ಊದುತ್ತಾ, ಯೆಹೋವನ ಪ್ರಸನ್ನತೆಯಲ್ಲಿ ನಡೆದರು. ಯೆಹೋವನ ಒಡಂಬಡಿಕೆಯ ಮಂಜೂಷವು ಅವರ ಹಿಂದೆ ಹೋಯಿತು.
9 帶兵器的走在吹角的祭司前面,後隊隨着約櫃行。祭司一面走一面吹。
೯ಯುದ್ಧ ಸನ್ನದ್ಧರಾದವರು ಕೊಂಬುಗಳನ್ನು ಊದುತ್ತಿದ್ದ ಯಾಜಕರ ಮುಂದೆ ಇದ್ದರು. ಹಿಂಬದಿಯ ದಂಡು ಮಂಜೂಷದ ಹಿಂದಿತ್ತು. ಯಾಜಕರು ಕೊಂಬುಗಳನ್ನು ಊದುತ್ತಲೇ ಹೋಗುತ್ತಿದ್ದರು.
10 約書亞吩咐百姓說:「你們不可呼喊,不可出聲,連一句話也不可出你們的口,等到我吩咐你們呼喊的日子,那時才可以呼喊。」
೧೦ಯೆಹೋಶುವನು ಜನರಿಗೆ “ನೀವು ಈಗ ಆರ್ಭಟಿಸಬಾರದು; ನಿಮ್ಮ ಧ್ವನಿಯು ಕೇಳಿಸದಿರಲಿ, ನಿಮ್ಮ ಬಾಯಿಂದ ಒಂದು ಮಾತಾದರೂ ಹೊರಡದಿರಲಿ. ಆರ್ಭಟಿಸಿರೆಂದು ನಾನು ಹೇಳುವ ದಿನದಲ್ಲಿ ಮಾತ್ರ ಆರ್ಭಟಿಸಿರಿ” ಎಂದು ಆಜ್ಞಾಪಿಸಿದನು.
11 這樣,他使耶和華的約櫃繞城,把城繞了一次;眾人回到營裏,就在營裏住宿。
೧೧ಅವರು ಯೆಹೋವನ ಮಂಜೂಷವನ್ನು ಒಂದು ಸಾರಿ ಪಟ್ಟಣವನ್ನು ಪ್ರದಕ್ಷಿಣೆ ಮಾಡಿದ ಮೇಲೆ ತಿರುಗಿ ಪಾಳೆಯಕ್ಕೆ ಬಂದು ರಾತ್ರಿ ಕಳೆದರು.
೧೨ಯೆಹೋಶುವನು ಬೆಳಗಿನ ಜಾವದಲ್ಲೇ ಎದ್ದನು. ಯಾಜಕರು ಯೆಹೋವನ ಮಂಜೂಷವನ್ನು ಹೊತ್ತುಕೊಂಡು ಹೊರಟರು.
13 七個祭司拿七個羊角在耶和華的約櫃前,時常行走吹角;帶兵器的在他們前面走,後隊隨着耶和華的約櫃行。祭司一面走一面吹。
೧೩ಏಳು ಮಂದಿ ಯಾಜಕರು ಕೊಂಬುಗಳನ್ನು ಊದುತ್ತಾ ಯೆಹೋವನ ಮಂಜೂಷದ ಮುಂದೆ ನಡೆದರು. ಯುದ್ಧ ಸನ್ನದ್ಧರು ಅವರ ಮುಂದಿದ್ದರು. ಹಿಂಬದಿಯ ದಂಡು ಯೆಹೋವನ ಮಂಜೂಷದ ಹಿಂದಿತ್ತು. ಕೊಂಬುಗಳನ್ನು ಊದುತ್ತಲೇ ಹೋಗುತ್ತಿದ್ದರು.
14 第二日,眾人把城繞了一次,就回營裏去。六日都是這樣行。
೧೪ಹೀಗೆ ಎರಡನೆಯ ದಿನದಲ್ಲಿಯೂ ಪಟ್ಟಣವನ್ನು ಸುತ್ತಿ ಪಾಳೆಯಕ್ಕೆ ಹಿಂದಿರುಗಿದರು.
15 第七日清早,黎明的時候,他們起來,照樣繞城七次;惟獨這日把城繞了七次。
೧೫ಆರು ದಿನ ಈ ಪ್ರಕಾರ ಮಾಡಿದರು. ಏಳನೆಯ ದಿನದಲ್ಲಿ ಅವರು ಸೂರ್ಯೋದಯವಾಗುತ್ತಲೇ ಎದ್ದು ಅದೇ ಕ್ರಮದಲ್ಲಿ ಪಟ್ಟಣವನ್ನು ಏಳು ಸಾರಿ ಸುತ್ತಿದರು. ಈ ದಿನದಲ್ಲಿ ಮಾತ್ರ ಅದನ್ನು ಏಳು ಸಾರಿ ಸುತ್ತಿದರು.
16 到了第七次,祭司吹角的時候,約書亞吩咐百姓說:「呼喊吧,因為耶和華已經把城交給你們了!
೧೬ಏಳನೆಯ ಸಾರಿ ಸುತ್ತುವಾಗ ಯಾಜಕರು ಕೊಂಬುಗಳನ್ನು ಊದಲು ಯೆಹೋಶುವನು ಜನರಿಗೆ, “ಆರ್ಭಟಿಸಿರಿ, ಯೆಹೋವನು ನಿಮಗೆ ಈ ಪಟ್ಟಣವನ್ನು ಕೊಟ್ಟಿದ್ದಾನೆ.
17 這城和其中所有的都要在耶和華面前毀滅;只有妓女喇合與她家中所有的可以存活,因為她隱藏了我們所打發的使者。
೧೭ಇದೂ ಇದರಲ್ಲಿರುವುದೆಲ್ಲವೂ ಯೆಹೋವನಿಗೆ ಅರ್ಪಿತವಾದವುಗಳೇ ಎಂದು ತಿಳಿಯಿರಿ. ವೇಶ್ಯೆಯಾದ ರಾಹಾಬಳೂ ಅವಳ ಸಂಗಡ ಮನೆಯಲ್ಲಿರುವವರೆಲ್ಲರೂ ಉಳಿಯಲಿ. ಏಕೆಂದರೆ ನಾವು ಕಳುಹಿಸಿದ ಗೂಢಚಾರರನ್ನು ಅವಳು ಅಡಗಿಸಿಟ್ಟಿದ್ದಳಲ್ಲಾ.
18 至於你們,務要謹慎,不可取那當滅的物,恐怕你們取了那當滅的物就連累以色列的全營,使全營受咒詛。
೧೮ನೀವಾದರೋ ಯೆಹೋವನಿಗೆ ಅರ್ಪಿಸುವ ವಸ್ತುಗಳ ವಿಷಯದಲ್ಲಿ ಜಾಗರೂಕತೆಯಿಂದಿರಬೇಕು. ನೀವು ಅವುಗಳಲ್ಲಿ ಯಾವುದನ್ನಾದರೂ ತೆಗೆದುಕೊಂಡರೆ, ಇಸ್ರಾಯೇಲ್ಯರ ಪಾಳೆಯವು ಶಾಪಕ್ಕೆ ಗುರಿಯಾಗಿ ನಾಶವಾದೀತು.
19 惟有金子、銀子,和銅鐵的器皿都要歸耶和華為聖,必入耶和華的庫中。」
೧೯ಎಲ್ಲಾ ಬೆಳ್ಳಿ ಬಂಗಾರವೂ, ತಾಮ್ರ ಕಬ್ಬಿಣಗಳ ಪಾತ್ರೆಗಳೂ ಯೆಹೋವನಿಗೆ ಮೀಸಲಾಗಿದ್ದು ಆತನ ಭಂಡಾರಕ್ಕೆ ಸೇರತಕ್ಕವುಗಳು” ಎಂದನು.
20 於是百姓呼喊,祭司也吹角。百姓聽見角聲,便大聲呼喊,城牆就塌陷,百姓便上去進城,各人往前直上,將城奪取;
೨೦ಕೂಡಲೆ ಜನರ ಆರ್ಭಟವೂ ಕೊಂಬುಗಳ ಧ್ವನಿಯೂ ಉಂಟಾದವು. ಜನರು ಕೊಂಬಿನ ಧ್ವನಿಯನ್ನು ಕೇಳಿ ಗಟ್ಟಿಯಾಗಿ ಆರ್ಭಟಿಸಲು ಪಟ್ಟಣದ ಗೋಡೆಯು ತಾನೇ ಬಿದ್ದುಹೋಯಿತು. ಪ್ರತಿಯೊಬ್ಬನೂ ನೆಟ್ಟಗೆ ಪಟ್ಟಣದಲ್ಲಿ ನುಗ್ಗಿ ಹೋದನು. ಅದು ಅವರಿಗೆ ವಶವಾಯಿತು.
21 又將城中所有的,不拘男女老少,牛羊和驢,都用刀殺盡。
೨೧ಪಟ್ಟಣದಲ್ಲಿದ್ದ ಗಂಡಸರನ್ನೂ, ಹೆಂಗಸರನ್ನೂ, ಹುಡುಗರನ್ನೂ, ಮುದುಕರನ್ನೂ, ದನ, ಕುರಿ ಕತ್ತೆಗಳನ್ನೂ ಸಂಪೂರ್ಣವಾಗಿ ಕತ್ತಿಯಿಂದ ಸಂಹರಿಸಿಬಿಟ್ಟರು.
22 約書亞吩咐窺探地的兩個人說:「你們進那妓女的家,照着你們向她所起的誓,將那女人和她所有的都從那裏帶出來。」
೨೨ಯೆಹೋಶುವನು ದೇಶವನ್ನು ಸಂಚರಿಸಿ ನೋಡಿದ್ದ ಇಬ್ಬರು ಗೂಢಚಾರರಿಗೆ “ನೀವು ಆ ವೇಶ್ಯೆಯ ಮನೆಗೆ ಹೋಗಿ ಅವಳಿಗೆ ಪ್ರಮಾಣಮಾಡಿದಂತೆ ಅವಳನ್ನೂ ಅವಳಿಗಿರುವುದೆಲ್ಲವನ್ನೂ ಹೊರಗೆ ತೆಗೆದುಕೊಂಡು ಬನ್ನಿರಿ” ಎಂದು ಹೇಳಲು
23 當探子的兩個少年人就進去,將喇合與她的父母、弟兄,和她所有的,並她一切的親眷,都帶出來,安置在以色列的營外。
೨೩ಆ ಯೌವನಸ್ಥರು ಹೋಗಿ ರಾಹಾಬಳನ್ನೂ ಅವಳ ತಂದೆತಾಯಿಯನ್ನು, ಸಹೋದರರನ್ನು, ಅವಳಿಗಿರುವುದೆಲ್ಲವನ್ನೂ, ಅವಳ ಗೋತ್ರದ ಎಲ್ಲಾ ಜನರನ್ನೂ ತಂದು ಇಸ್ರಾಯೇಲ್ಯರ ಪಾಳೆಯದ ಹೊರಗೆ ಇಟ್ಟರು.
24 眾人就用火將城和其中所有的焚燒了;惟有金子、銀子,和銅鐵的器皿都放在耶和華殿的庫中。
೨೪ಇಸ್ರಾಯೇಲ್ಯರು ಪಟ್ಟಣವನ್ನೂ ಅದರಲ್ಲಿರುವುದೆಲ್ಲವನ್ನೂ ಬೆಂಕಿಯಿಂದ ಸುಟ್ಟುಬಿಟ್ಟರು. ಆದರೆ ಬೆಳ್ಳಿಬಂಗಾರವನ್ನೂ, ತಾಮ್ರ ಕಬ್ಬಿಣಗಳ ಪಾತ್ರೆಗಳನ್ನೂ, ಯೆಹೋವನ ಆಲಯದ ಭಂಡಾರಕ್ಕೆ ಒಪ್ಪಿಸಿದರು.
25 約書亞卻把妓女喇合與她父家,並她所有的,都救活了;因為她隱藏了約書亞所打發窺探耶利哥的使者,她就住在以色列中,直到今日。
೨೫ವೇಶ್ಯೆಯಾದ ರಾಹಾಬಳು ಯೆರಿಕೋ ಪಟ್ಟಣವನ್ನು ಸಂಚರಿಸಿ ನೋಡುವುದಕ್ಕೆ ಬಂದಿದ್ದ ಯೆಹೋಶುವನ ಗೂಢಚಾರರನ್ನು ಅಡಗಿಸಿಟ್ಟದ್ದರಿಂದ ಅವನು ಅವಳನ್ನೂ, ಅವಳ ತಂದೆಯ ಮನೆಯವರನ್ನೂ, ಅವಳಿಗಿರುವುದೆಲ್ಲವನ್ನೂ ಉಳಿಸಿದನು. ಅವಳು ಇಂದಿನವರೆಗೂ ಇಸ್ರಾಯೇಲ್ಯರಲ್ಲಿ ವಾಸವಾಗಿದ್ದಾಳೆ.
26 當時,約書亞叫眾人起誓說:「有興起重修這耶利哥城的人,當在耶和華面前受咒詛。 他立根基的時候,必喪長子, 安門的時候,必喪幼子。」
೨೬ಅದೇ ಸಮಯದಲ್ಲಿ ಯೆಹೋಶುವನು ಇಸ್ರಾಯೇಲ್ಯರಿಂದ ಪ್ರಮಾಣಮಾಡಿಸಿ ಅವರಿಗೆ “ಈ ಯೆರಿಕೋ ಪಟ್ಟಣವನ್ನು ಕಟ್ಟುವುದಕ್ಕೆ ಕೈ ಹಾಕುವ ಮನುಷ್ಯನು ಯೆಹೋವನ ದೃಷ್ಟಿಯಲ್ಲಿ ಶಾಪಗ್ರಸ್ತನಾಗಿರಲಿ. ಅಂಥವನು ಅದಕ್ಕೆ ಅಸ್ತಿವಾರ ಹಾಕುವಾಗ ತನ್ನ ಹಿರಿಯ ಮಗನನ್ನೂ ಬಾಗಿಲುಗಳನ್ನಿಡುವಾಗ ಕಿರಿಯ ಮಗನನ್ನೂ ಕಳೆದುಕೊಳ್ಳಲಿ” ಎಂದು ಹೇಳಿದನು.
೨೭ಯೆಹೋವನು ಯೆಹೋಶುವನ ಸಂಗಡ ಇದ್ದುದರಿಂದ ಅವನ ಕೀರ್ತಿ ದೇಶದಲ್ಲೆಲ್ಲಾ ಹಬ್ಬಿತು.