< 瑪拉基書 3 >
1 萬軍之耶和華說:「我要差遣我的使者在我前面預備道路。你們所尋求的主必忽然進入他的殿;立約的使者,就是你們所仰慕的,快要來到。」
೧“ಇಗೋ, ನನ್ನ ದೂತನನ್ನು ಕಳುಹಿಸುತ್ತೇನೆ, ಆತನು ನನ್ನ ಮುಂದೆ ದಾರಿಯನ್ನು ಸರಿಮಾಡುವನು; ನೀವು ಹಂಬಲಿಸುವ ಕರ್ತನು ತನ್ನ ಆಲಯಕ್ಕೆ ಪಕ್ಕನೇ ಬರುವನು; ಆಹಾ, ನಿಮಗೆ ಇಷ್ಟನಾದ ಒಡಂಬಡಿಕೆಯ ದೂತನು ಬರುತ್ತಾನೆ” ಇದು ಸೇನಾಧೀಶ್ವರನಾದ ಯೆಹೋವನ ನುಡಿ.
2 他來的日子,誰能當得起呢?他顯現的時候,誰能立得住呢?因為他如煉金之人的火,如漂布之人的鹼。
೨ಆತನು ಬರುವ ದಿನವನ್ನು ಯಾರು ತಾಳಾರು? ಆತನು ಕಾಣಿಸಿಕೊಳ್ಳುವಾಗ ಯಾರು ನಿಂತಾರು? ಆತನು ಅಕ್ಕಸಾಲಿಗನ ಬೆಂಕಿಗೂ, ಅಗಸನ ಸಾಬೂನಿಗೂ ಸಮಾನನಾಗಿದ್ದಾನೆ.
3 他必坐下如煉淨銀子的,必潔淨利未人,熬煉他們像金銀一樣;他們就憑公義獻供物給耶和華。
೩ಬೆಳ್ಳಿಯನ್ನು ಶೋಧಿಸುವ ಅಕ್ಕಸಾಲಿಗನಂತೆ ಕುಳಿತು ಲೇವಿ ವಂಶದವರನ್ನು ಶೋಧಿಸಿ ಬೆಳ್ಳಿಬಂಗಾರಗಳನ್ನೋ ಎಂಬಂತೆ ಶುದ್ಧೀಕರಿಸುವನು; ಅವರು ಸದ್ಧರ್ಮಿಗಳಾಗಿ ಯೆಹೋವನಿಗೆ ನೈವೇದ್ಯಗಳನ್ನು ತಂದೊಪ್ಪಿಸುವರು.
4 那時,猶大和耶路撒冷所獻的供物必蒙耶和華悅納,彷彿古時之日、上古之年。
೪ಆಗ ಯೆಹೂದದ ಮತ್ತು ಯೆರೂಸಲೇಮಿನ ನೈವೇದ್ಯವು, ಪೂರ್ವದಿನಗಳಲ್ಲಿ ಪುರಾತನ ಕಾಲದಲ್ಲಿ ಯೆಹೋವನಿಗೆ ಮೆಚ್ಚಿಕೆಯಾದಂತೆ ಆಗಿರುವುದು.
5 萬軍之耶和華說:「我必臨近你們,施行審判。我必速速作見證,警戒行邪術的、犯姦淫的、起假誓的、虧負人之工價的、欺壓寡婦孤兒的、屈枉寄居的,和不敬畏我的。」
೫“ನಾನು ನ್ಯಾಯತೀರಿಸುವುದಕ್ಕೆ ನಿಮ್ಮ ಬಳಿಗೆ ಬರುವೆನು; ಮಾಟಗಾರನು, ವ್ಯಭಿಚಾರಿಯೂ, ಸುಳ್ಳುಸಾಕ್ಷಿ ಹೇಳುವವನು, ಕೂಲಿ ಹಿಡಿದು ಕೂಲಿಯವನನ್ನು ಮೋಸಪಡಿಸುವವನು, ವಿಧವೆಯರನ್ನು ಮತ್ತು ಅನಾಥರನ್ನೂ ಬಾಧಿಸುವವನು, ವಿದೇಶಿಯ ನ್ಯಾಯತಪ್ಪಿಸುವವನು ಅಂತು ನನಗೆ ಹೆದರದಿರುವ ಇವರೆಲ್ಲರಿಗೆ ವಿರುದ್ಧವಾಗಿ ನಾನು ಶೀಘ್ರವಾಗಿ ನ್ಯಾಯತೀರಿಸಿ ಸಾಕ್ಷಿಯಾಗಿರುವೆನು” ಇದು ಸೇನಾಧೀಶ್ವರನಾದ ಯೆಹೋವನ ನುಡಿ.
6 「因我-耶和華是不改變的,所以你們雅各之子沒有滅亡。
೬“ಆದರೂ ಯೆಹೋವನಾದ ನಾನು ಮಾರ್ಪಟ್ಟಿಲ್ಲ. ಆದುದರಿಂದ ಯಾಕೋಬ ಸಂತತಿಯವರೇ ನೀವು ಅಳಿಯದೆ ಉಳಿದಿದ್ದೀರಿ.”
7 萬軍之耶和華說:從你們列祖的日子以來,你們常常偏離我的典章而不遵守。現在你們要轉向我,我就轉向你們。你們卻問說:『我們如何才是轉向呢?』
೭“ನಿಮ್ಮ ಪೂರ್ವಿಕರ ಕಾಲದಿಂದಲೂ ನೀವು ನನ್ನ ವಿಧಿಗಳನ್ನು ಅನುಸರಿಸಿ ನಡೆಯಲ್ಲಿಲ್ಲ. ನನ್ನ ಕಡೆಗೆ ಪುನಃ ತಿರುಗಿರಿ; ತಿರುಗಿದರೆ, ನಾನು ನಿಮ್ಮ ಕಡೆಗೆ ಪುನಃ ತಿರುಗುವೆನು” ಇದು ಸೇನಾಧೀಶ್ವರನಾದ ಯೆಹೋವನ ನುಡಿ. “ಯಾವ ವಿಷಯದಲ್ಲಿ ತಿರುಗೋಣ?” ಎನ್ನುತ್ತೀರಿ.
8 人豈可奪取上帝之物呢?你們竟奪取我的供物。你們卻說:『我們在何事上奪取你的供物呢?』就是你們在當納的十分之一和當獻的供物上。
೮“ನರಮನುಷ್ಯನು ದೇವರಿಂದ ಕದ್ದುಕೊಳ್ಳಬಹುದೇ? ನೀವೋ ನನ್ನಿಂದ ಕದ್ದುಕೊಳ್ಳುತ್ತಿದ್ದೀರಿ. ‘ನಿನ್ನಿಂದ ಏನು ಕದ್ದುಕೊಂಡಿದ್ದೇವೆ?’ ಎಂದು ಕೇಳುತ್ತೀರೋ. ದಶಮಾಂಶವನ್ನು, ನನಗೋಸ್ಕರ ಪ್ರತ್ಯೇಕಿಸಬೇಕಾದ ಪದಾರ್ಥ, ಇವುಗಳನ್ನೇ.
9 因你們通國的人都奪取我的供物,咒詛就臨到你們身上。
೯ನೀವು ಅಂದರೆ ಈ ಜನಾಂಗದವರೆಲ್ಲಾ ನನ್ನಿಂದ ಕದ್ದುಕೊಳ್ಳುವವರಾದ ಕಾರಣ ಶಾಪಗ್ರಸ್ತರಾಗಿದ್ದೀರಿ.
10 萬軍之耶和華說:你們要將當納的十分之一全然送入倉庫,使我家有糧,以此試試我,是否為你們敞開天上的窗戶,傾福與你們,甚至無處可容。
೧೦ನನ್ನ ಆಲಯವು ಆಹಾರದ ಕೊರತೆಯಿಲ್ಲದಂತೆ ನೀವು ದಶಮಾಂಶವನ್ನು ಯಾವಾಗಲೂ ಭಂಡಾರಕ್ಕೆ ತೆಗೆದುಕೊಂಡು ಬನ್ನಿರಿ; ನಾನು ಪರಲೋಕದ ದ್ವಾರಗಳನ್ನು ತೆರೆದು ನಿಮ್ಮಲ್ಲಿ ಸ್ಥಳಹಿಡಿಯಲಾಗದಷ್ಟು ಸುವರಗಳನ್ನು ಸುರಿಯುವೆನೋ ಇಲ್ಲವೋ ಎಂದು ಯೆಹೋವನಾದ ನನ್ನನ್ನು ಹೀಗೆ ಪರೀಕ್ಷಿಸಿರಿ.
11 萬軍之耶和華說:我必為你們斥責蝗蟲,不容牠毀壞你們的土產。你們田間的葡萄樹在未熟之先也不掉果子。
೧೧ನುಂಗುವ ಹುಳವನ್ನು ನಾನು ನಿಮಗಾಗಿ ತಡೆಯುವೆನು. ಅದು ನಿಮ್ಮ ಭೂಮಿಯ ಫಲವನ್ನು ನಾಶಮಾಡದು; ನಿಮ್ಮ ದ್ರಾಕ್ಷಿಯಹಣ್ಣು ತೋಟದಲ್ಲಿ ಉದುರಿಹೋಗದು” ಇದು ಸೇನಾಧೀಶ್ವರನಾದ ಯೆಹೋವನ ನುಡಿ.
12 萬軍之耶和華說:萬國必稱你們為有福的,因你們的地必成為喜樂之地。」
೧೨“ಆಗ ಸಕಲ ಜನಾಂಗಗಳವರು ನಿಮ್ಮನ್ನು ಧನ್ಯರೆಂದು ಕೊಂಡಾಡುವರು; ನಿಮ್ಮ ದೇಶವು ಆನಂದವಾಗಿರುವುದು” ಇದು ಸೇನಾಧೀಶ್ವರನಾದ ಯೆಹೋವನ ನುಡಿ.
13 耶和華說:「你們用話頂撞我,你們還說:『我們用甚麼話頂撞了你呢?』
೧೩“ನೀವು ನನಗೆ ವಿರುದ್ಧವಾಗಿ ಆಡಿದ ಮಾತುಗಳು ಬಹಳ ಕಠಿಣ” ಎಂದು ಯೆಹೋವನು ಅನ್ನುತ್ತಾನೆ. “ನಿನಗೆ ವಿರುದ್ಧವಾಗಿ ಏನು ಮಾಡಿದ್ದೇವೆ?” ಅನ್ನುತ್ತೀರಾ?
14 你們說:『事奉上帝是徒然的,遵守上帝所吩咐的,在萬軍之耶和華面前苦苦齋戒,有甚麼益處呢?
೧೪ನೀವು “ದೇವರನ್ನು ಸೇವಿಸುವುದು ವ್ಯರ್ಥ; ನಾವು ಆತನ ನಿಯಮವನ್ನು ಅನುಸರಿಸಿ ಸೇನಾಧೀಶ್ವರನಾದ ಯೆಹೋವನ ಮುಂದೆ ದುಃಖದಿಂದ ವಿಕಾರಿಗಳಾಗಿ ನಡೆದುಕೊಂಡದ್ದರಿಂದ ಆದ ಲಾಭವೇನು?
15 如今我們稱狂傲的人為有福,並且行惡的人得建立;他們雖然試探上帝,卻得脫離災難。』」
೧೫ಈಗ ಅಹಂಕಾರಿಗಳನ್ನು ಭಾಗ್ಯವಂತರೆಂದು ಕೊಂಡಾಡಬೇಕಾಗಿ ಬಂತು; ಹೌದು, ದುಷ್ಕರ್ಮಿಗಳು ಏಳಿಗೆಗೆ ಬಂದಿದ್ದಾರೆ, ದೇವರನ್ನು ಪರೀಕ್ಷಿಸಿದರೂ ಸುರಕ್ಷಿತರಾಗಿದ್ದಾರೆ” ಅಂದುಕೊಂಡಿದ್ದೀರಲ್ಲಾ.
16 那時,敬畏耶和華的彼此談論,耶和華側耳而聽,且有紀念冊在他面前,記錄那敬畏耶和華、思念他名的人。
೧೬ಇಂಥಾ ಮಾತುಗಳನ್ನು ಕೇಳಿ ಯೆಹೋವನ ಭಕ್ತರು ಒಬ್ಬರಿಗೊಬ್ಬರು ಮಾತನಾಡಿಕೊಳ್ಳಲು, ಯೆಹೋವನು ಕಿವಿಗೊಟ್ಟು ಆಲಿಸಿ ಭಯಭಕ್ತಿಯಿಂದ ತನ್ನ ನಾಮ ಸ್ಮರಣೆ ಮಾಡುವವರ ಹೆಸರುಗಳನ್ನು ತನ್ನ ಮುಂದೆ ಜ್ಞಾಪಕದ ಪುಸ್ತಕದಲ್ಲಿ ಬರೆಯಿಸಿದನು.
17 萬軍之耶和華說:「在我所定的日子,他們必屬我,特特歸我。我必憐恤他們,如同人憐恤服事自己的兒子。
೧೭ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ನಾನು ಕಾರ್ಯಸಾಧಿಸುವ ದಿನದಲ್ಲಿ ಅವರು ನನಗೆ ಸ್ವಕೀಯ ಜನರಾಗಿರುವರು; ಒಬ್ಬನು ತನ್ನನ್ನು ಸೇವಿಸುವ ಸ್ವಂತ ಮಗನನ್ನು ಕರುಣಿಸುವಂತೆ ನಾನು ಅವರನ್ನು ಕರುಣಿಸುವೆನು” ಇದು ಸೇನಾಧೀಶ್ವರನಾದ ಯೆಹೋವನ ನುಡಿ.
18 那時你們必歸回,將善人和惡人,事奉上帝的和不事奉上帝的,分別出來。」
೧೮ಆಗ ಶಿಷ್ಟರಿಗೂ, ದುಷ್ಟರಿಗೂ, ದೇವರನ್ನು ಸೇವಿಸುವವರಿಗೂ, ಸೇವಿಸದೇ ಇರುವವರಿಗೂ ಇರುವ ವ್ಯತ್ಯಾಸವನ್ನು ಮತ್ತೆ ಕಾಣುವಿರಿ.