< 箴言 1 >
೧ಇಸ್ರಾಯೇಲರ ಅರಸನಾಗಿದ್ದ ದಾವೀದನ ಮಗನಾದ ಸೊಲೊಮೋನನ ಜ್ಞಾನೋಕ್ತಿಗಳು.
೨ಇವುಗಳಿಂದ ಜನರು ಜ್ಞಾನವನ್ನು ಮತ್ತು ಶಿಕ್ಷಣವನ್ನು ಪಡೆದು, ಬುದ್ಧಿವಾದಗಳನ್ನು ಗ್ರಹಿಸಿಕೊಳ್ಳುವರು.
೩ಅವರು ವಿವೇಕಮಾರ್ಗದಲ್ಲಿ ಅಂದರೆ ನೀತಿ, ನ್ಯಾಯ ಮತ್ತು ಧರ್ಮಮಾರ್ಗಗಳಲ್ಲಿ ಶಿಕ್ಷಿತರಾಗುವರು.
೪ಈ ನುಡಿಗಳು ಮೂಢರಿಗೆ ಜಾಣತನವನ್ನೂ, ಯೌವನಸ್ಥರಿಗೆ ತಿಳಿವಳಿಕೆಯನ್ನು ಮತ್ತು ಬುದ್ಧಿಯನ್ನು ಉಂಟುಮಾಡುವವು.
೫ಜ್ಞಾನಿಯು ಇವುಗಳನ್ನು ಕೇಳಿ ಹೆಚ್ಚಾದ ಪಾಡಿಂತ್ಯವನ್ನು ಹೊಂದುವನು, ವಿವೇಕಿಯು ಮತ್ತಷ್ಟು ಉಚಿತಾಲೋಚನೆಯನ್ನು ಹೊಂದುವನು.
6 使人明白箴言和譬喻, 懂得智慧人的言詞和謎語。
೬ಇವು ಗಾದೆ, ಸಾಮ್ಯ, ಜ್ಞಾನಿಗಳ ನುಡಿ ಮತ್ತು ಒಗಟುಗಳನ್ನು ತಿಳಿಯಲು ಸಾಧನವಾಗಿವೆ.
7 敬畏耶和華是知識的開端; 愚妄人藐視智慧和訓誨。
೭ಯೆಹೋವನ ಭಯವೇ ತಿಳಿವಳಿಕೆಗೆ ಮೂಲವು, ಮೂರ್ಖರಾದರೋ ಜ್ಞಾನವನ್ನು ಮತ್ತು ಶಿಕ್ಷಣವನ್ನು ತಿರಸ್ಕರಿಸುವರು.
8 我兒,要聽你父親的訓誨, 不可離棄你母親的法則;
೮ಮಗನೇ, ನಿನ್ನ ತಂದೆಯ ಉಪದೇಶವನ್ನು ಕೇಳು, ನಿನ್ನ ತಾಯಿಯ ಬೋಧನೆಯನ್ನು ತೊರೆಯಬೇಡ.
೯ಅವು ನಿನ್ನ ತಲೆಗೆ ಸುಂದರವಾದ ಪುಷ್ಪಕಿರೀಟ, ಕೊರಳಿಗೆ ಹಾರದಂತಿರುವುದು.
೧೦ಮಗನೇ, ಪಾಪಿಗಳು ದುಷ್ಪ್ರೇರಣೆಯನ್ನು ಮಾಡಿದರೆ ನೀನು ಒಪ್ಪಲೇ ಬೇಡ.
11 他們若說:你與我們同去, 我們要埋伏流人之血, 要蹲伏害無罪之人;
೧೧ಅವರು, “ನಮ್ಮೊಂದಿಗೆ ಬಾ, ರಕ್ತಕ್ಕಾಗಿ ಹೊಂಚುಹಾಕೋಣ, ನಿರಪರಾಧಿಯನ್ನು ಕಾರಣವಿಲ್ಲದೆಯೇ ಹಿಡಿಯುವುದಕ್ಕೆ ಕಾದಿರೋಣ.
12 我們好像陰間,把他們活活吞下; 他們如同下坑的人, 被我們囫圇吞了; (Sheol )
೧೨ಪಾತಾಳವು ತನ್ನೊಳಗೆ ಇಳಿಯುವವರನ್ನು ಸಂಪೂರ್ಣವಾಗಿ ನುಂಗುವಂತೆ, ನಾವೂ ಇವರನ್ನು ಜೀವದೊಡನೆ ನುಂಗಿಬಿಡೋಣ. (Sheol )
೧೩ಸಕಲವಿಧವಾದ ಅಮೂಲ್ಯ ಸಂಪತ್ತನ್ನು ಕಂಡುಹಿಡಿದು, ಕೊಳ್ಳೆಮಾಡಿ ನಮ್ಮ ಮನೆಗಳಲ್ಲಿ ತುಂಬಿಕೊಳ್ಳೋಣ.
೧೪ನಮ್ಮ ಸಂಗಡ ಚೀಟು ಹಾಕು; ನಮ್ಮೆಲ್ಲರ ಹಣದ ಚೀಲ ಒಂದೇ ಆಗಿರಲಿ” ಎಂದು ಹೇಳಿದರೆ,
15 我兒,不要與他們同行一道, 禁止你腳走他們的路。
೧೫ಮಗನೇ, ಅವರೊಡನೆ ದಾರಿಯಲ್ಲಿ ನಡೆಯಬಾರದು, ಅವರ ಮಾರ್ಗದಲ್ಲಿ ನೀನು ಹೆಜ್ಜೆಯಿಡಬೇಡ.
16 因為,他們的腳奔跑行惡; 他們急速流人的血,
೧೬ಅವರ ಕಾಲುಗಳು ಕೇಡನ್ನು ಹಿಂಬಾಲಿಸಿ ಓಡುವವು, ಅವರು ರಕ್ತವನ್ನು ಸುರಿಸಲು ಆತುರಪಡುವರು.
೧೭ಪಕ್ಷಿಗಳ ಕಣ್ಣೆದುರಿಗೆ ಬಲೆಯನ್ನೊಡ್ಡುವುದು ವ್ಯರ್ಥ.
18 這些人埋伏,是為自流己血; 蹲伏,是為自害己命。
೧೮ಇವರಾದರೋ ಸ್ವರಕ್ತವನ್ನು ಸುರಿಸಿಕೊಳ್ಳುವುದಕ್ಕೆ ಹೊಂಚುಹಾಕುತ್ತಾರೆ, ಸ್ವಜೀವವನ್ನು ತೆಗೆದುಕೊಳ್ಳುವುದಕ್ಕೆ ಕಾದಿರುತ್ತಾರೆ.
19 凡貪戀財利的,所行之路都是如此; 這貪戀之心乃奪去得財者之命。
೧೯ಸೂರೆಮಾಡುವವರೆಲ್ಲರ ದಾರಿಯು ಹೀಗೆಯೇ ಸರಿ; ಕೊಳ್ಳೆಯು ಕೊಳ್ಳೆಗಾರರ ಜೀವವನ್ನೇ ಕೊಳ್ಳೆಮಾಡುವುದು.
೨೦ಜ್ಞಾನವೆಂಬಾಕೆಯು ಬೀದಿಗಳಲ್ಲಿ ಕೂಗುತ್ತಾಳೆ, ಚೌಕಗಳಲ್ಲಿ ಧ್ವನಿಮಾಡುತ್ತಾಳೆ.
21 在熱鬧街頭喊叫, 在城門口,在城中發出言語,
೨೧ಪೇಟೆಯ ಮುಖ್ಯಸ್ಥಾನದಲ್ಲಿ ಆಕೆ ಕೂಗುತ್ತಾಳೆ, ಊರ ಬಾಗಿಲಿನಲ್ಲಿ ಆಕೆಯು ನುಡಿಯುವುದೇನೆಂದರೆ,
22 說:你們愚昧人喜愛愚昧, 褻慢人喜歡褻慢, 愚頑人恨惡知識,要到幾時呢?
೨೨“ಮೂಢರೇ, ಮೂಢತನವನ್ನು ಎಂದಿನ ತನಕ ಪ್ರೀತಿಸುವಿರಿ? ಧರ್ಮನಿಂದಕರು ನಿಂದಿಸುವುದಕ್ಕೆ ಎಷ್ಟುಕಾಲ ಇಷ್ಟಪಡುವರು? ಜ್ಞಾನಹೀನರು ತಿಳಿವಳಿಕೆಯನ್ನು ಎಷ್ಟರವರೆಗೆ ಹಗೆಮಾಡುವರು?
23 你們當因我的責備回轉; 我要將我的靈澆灌你們, 將我的話指示你們。
೨೩ನನ್ನ ಗದರಿಕೆಗೆ ಲಕ್ಷ್ಯಕೊಡಿರಿ; ಇಗೋ, ನಿಮ್ಮ ಮೇಲೆ ನನ್ನ ಆತ್ಮವನ್ನು ಸುರಿಸಿ, ನನ್ನ ಮಾತುಗಳನ್ನು ನಿಮಗೆ ತಿಳಿಯಪಡಿಸುವೆನು.
೨೪ನಾನು ಕರೆದಾಗ ನೀವು ತಿರಸ್ಕರಿಸಿದಿರಿ. ಕೈ ಚಾಚಿದರೂ ಯಾರೂ ನನ್ನನ್ನು ಗಮನಿಸಲಿಲ್ಲ;
೨೫ನನ್ನ ಬುದ್ಧಿವಾದವನ್ನು ಲಕ್ಷ್ಯಕ್ಕೆ ತಾರದೆ, ನನ್ನ ತಿದ್ದುಪಾಟನ್ನು ಬೇಡವೆಂದು ತಳ್ಳಿಬಿಟ್ಟಿದ್ದೀರಿ.
26 你們遭災難,我就發笑; 驚恐臨到你們,我必嗤笑。
೨೬ಆದಕಾರಣ ಬಿರುಗಾಳಿಯಂತೆ ಅಪಾಯವೂ, ತುಫಾನಿನಂತೆ ಆಪತ್ತೂ ಬಂದು, ನಿಮಗೆ ಶ್ರಮಸಂಕಟಗಳು ಸಂಭವಿಸುವಾಗ
27 驚恐臨到你們,好像狂風; 災難來到,如同暴風; 急難痛苦臨到你們身上。
೨೭ನಿಮ್ಮ ಅಪಾಯದಲ್ಲಿ ನಾನೂ ನಗುವೆನು; ನಿಮ್ಮ ಆಪತ್ತಿನಲ್ಲಿ ಪರಿಹಾಸ್ಯ ಮಾಡುವೆನು.
28 那時,你們必呼求我,我卻不答應, 懇切地尋找我,卻尋不見。
೨೮ಆಗ ಅವರು ನನಗೆ ಮೊರೆಯಿಟ್ಟರೂ ನಾನು ಉತ್ತರಕೊಡೆನು, ನನ್ನನ್ನು ಆತುರದಿಂದ ಹುಡುಕಿದರೂ ನಾನು ಕಾಣಿಸೆನು.
೨೯ಯಾಕೆಂದರೆ ಅವರು ಯೆಹೋವನ ಭಯಭಕ್ತಿಗೆ ಮನಸ್ಸು ಕೊಡದೆ ತಿಳಿವಳಿಕೆಯನ್ನು ಹಗೆಮಾಡಿದರು.
೩೦ನನ್ನ ಬೋಧನೆಯನ್ನು ಕೇಳಲೊಲ್ಲದೆ, ನನ್ನ ಗದರಿಕೆಯನ್ನೆಲ್ಲಾ ತಾತ್ಸಾರಮಾಡಿದರು.
೩೧ಆದುದರಿಂದ ಅವರು ತಮ್ಮ ನಡತೆಯ ಫಲವನ್ನು ಅನುಭವಿಸಿ, ಸ್ವಂತ ಕುಯುಕ್ತಿಗಳನ್ನೇ ಹೊಟ್ಟೆತುಂಬಾ ಉಣ್ಣಬೇಕಾಗುವುದು.
32 愚昧人背道,必殺己身; 愚頑人安逸,必害己命。
೩೨ಮೂಢರು ತಮ್ಮ ಉದಾಸೀನತೆಯಿಂದಲೇ ಹತರಾಗುವರು, ಜ್ಞಾನಹೀನರು ತಮ್ಮ ನಿಶ್ಚಿಂತೆಯಿಂದಲೇ ನಾಶವಾಗುವರು.
33 惟有聽從我的,必安然居住, 得享安靜,不怕災禍。
೩೩ನನ್ನ ಮಾತಿಗೆ ಕಿವಿಗೊಡುವವನಾದರೋ ಸುರಕ್ಷಿತನಾಗಿದ್ದು, ಯಾವ ಕೇಡಿಗೂ ಭಯಪಡದೆ ನೆಮ್ಮದಿಯಾಗಿ ಬಾಳುವನು” ಎಂಬುದೇ.