< 箴言 3 >

1 我兒,不要忘記我的法則; 你心要謹守我的誡命;
ಮಗನೇ, ನನ್ನ ಉಪದೇಶವನ್ನು ಮರೆಯಬೇಡ; ನನ್ನ ಆಜ್ಞೆಗಳನ್ನು ನಿನ್ನ ಹೃದಯದಲ್ಲಿ ಇಟ್ಟುಕೋ.
2 因為它必將長久的日子, 生命的年數與平安,加給你。
ಏಕೆಂದರೆ ಅವು ನಿನ್ನ ದಿನಗಳನ್ನು ಹೆಚ್ಚಿಸಿ ದೀರ್ಘಾಯುಷ್ಯವನ್ನು ನೀಡುವುದು, ಸಮಾಧಾನವನ್ನೂ ಸಮೃದ್ಧಿಯನ್ನೂ ನಿನಗೆ ಕೊಡುವುದು.
3 不可使慈愛、誠實離開你, 要繫在你頸項上,刻在你心版上。
ಪ್ರೀತಿ, ನಂಬಿಗಸ್ತಿಕೆಗಳು ನಿನ್ನನ್ನು ಬಿಡದಿರಲಿ; ಅವು ನಿನ್ನ ಕೊರಳಿನ ಸುತ್ತಲೂ ಕಟ್ಟಿರಲಿ, ನಿನ್ನ ಹೃದಯದ ಹಲಗೆಯ ಮೇಲೆ ಅವು ಬರೆದಿರಲಿ.
4 這樣,你必在上帝和世人眼前 蒙恩寵,有聰明。
ಆಗ ದೇವರ ಮುಂದೆಯೂ ಮನುಷ್ಯರ ಮುಂದೆಯೂ ದಯೆಯನ್ನೂ, ಒಳ್ಳೆಯ ಹೆಸರನ್ನೂ ನೀನು ಪಡೆದುಕೊಳ್ಳುವೆ.
5 你要專心仰賴耶和華, 不可倚靠自己的聰明,
ಪೂರ್ಣಹೃದಯದಿಂದ ಯೆಹೋವ ದೇವರಲ್ಲಿ ಭರವಸೆ ಇಡು ನಿನ್ನ ಸ್ವಂತ ಬುದ್ಧಿಯ ಮೇಲೆಯೇ ಆಧಾರಗೊಳ್ಳಬೇಡ.
6 在你一切所行的事上都要認定他, 他必指引你的路。
ನಿನ್ನ ಎಲ್ಲಾ ಮಾರ್ಗಗಳಲ್ಲಿ ದೇವರಿಗೆ ಅಧೀನವಾಗಿರು. ಆಗ ದೇವರು ನಿನ್ನ ಮಾರ್ಗಗಳನ್ನು ಸರಾಗ ಮಾಡುವರು.
7 不要自以為有智慧; 要敬畏耶和華,遠離惡事。
ನಿನ್ನ ದೃಷ್ಟಿಯಲ್ಲಿ ನೀನೇ ಜ್ಞಾನಿ ಎಂದು ಇರಬೇಡ; ಯೆಹೋವ ದೇವರಿಗೆ ಭಯಪಟ್ಟು, ಕೆಟ್ಟದ್ದನ್ನು ತೊರೆದುಬಿಡು.
8 這便醫治你的肚臍, 滋潤你的百骨。
ನಿನ್ನ ದೇಹಕ್ಕೆ ಅದು ಆರೋಗ್ಯವನ್ನು ತರುವುದು; ನಿನ್ನ ಎಲುಬುಗಳಿಗೆ ಅದು ಪೋಷಣೆಯನ್ನೂ ತರುವುದು.
9 你要以財物 和一切初熟的土產尊榮耶和華。
ನಿನ್ನ ಆಸ್ತಿಯಿಂದಲೂ ನಿನ್ನ ಎಲ್ಲಾ ಬೆಳೆಯ ಪ್ರಥಮ ಫಲದಿಂದಲೂ ಯೆಹೋವ ದೇವರನ್ನು ಸನ್ಮಾನಿಸು.
10 這樣,你的倉房必充滿有餘; 你的酒醡有新酒盈溢。
ಆಗ ನಿನ್ನ ಕಣಜಗಳು ಸಮೃದ್ಧಿಯಿಂದ ತುಂಬುವವು; ಹೊಸ ದ್ರಾಕ್ಷಾರಸದಿಂದ ನಿನ್ನ ತೊಟ್ಟಿಗಳು ತುಂಬಿರುವುದು.
11 我兒,你不可輕看耶和華的管教, 也不可厭煩他的責備;
ಮಗನೇ, ಯೆಹೋವ ದೇವರ ಶಿಕ್ಷೆಯನ್ನು ತಾತ್ಸಾರ ಮಾಡಬೇಡ; ಅವರು ನಿನ್ನನ್ನು ಗದರಿಸುವಾಗ ಬೇಸರಗೊಳ್ಳಬೇಡ.
12 因為耶和華所愛的,他必責備, 正如父親責備所喜愛的兒子。
ಏಕೆಂದರೆ ತಂದೆಯು ತನ್ನ ಮುದ್ದುಮಗನನ್ನು ಶಿಕ್ಷಿಸುವಂತೆ, ಯೆಹೋವ ದೇವರು ಯಾರನ್ನು ಪ್ರೀತಿಸುತ್ತಾರೋ, ಅವರನ್ನು ಶಿಸ್ತುಗೊಳಿಸುವರು.
13 得智慧,得聰明的, 這人便為有福。
ಜ್ಞಾನವನ್ನು ಕಂಡುಕೊಳ್ಳುವವನು ಧನ್ಯನು, ವಿವೇಕವನ್ನು ಸಂಪಾದಿಸಿಕೊಳ್ಳುವವನೂ ಧನ್ಯನು.
14 因為得智慧勝過得銀子, 其利益強如精金,
ಏಕೆಂದರೆ ಜ್ಞಾನವು ಬೆಳ್ಳಿಗಿಂತ ಹೆಚ್ಚು ಲಾಭವೂ; ಬಂಗಾರಕ್ಕಿಂತ ಹೆಚ್ಚು ಆದಾಯವನ್ನು ಕೊಡುವುದು.
15 比珍珠寶貴; 你一切所喜愛的,都不足與比較。
ಜ್ಞಾನವು ಮಾಣಿಕ್ಯಗಳಿಗಿಂತಲೂ ಬಹು ಅಮೂಲ್ಯ; ನಿನ್ನ ಇಷ್ಟ ವಸ್ತುಗಳೆಲ್ಲವೂ ಅದಕ್ಕೆ ಸಮವಾಗುವುದಿಲ್ಲ.
16 她右手有長壽, 左手有富貴。
ಜ್ಞಾನದ ಬಲಗೈಯಲ್ಲಿ ದೀರ್ಘಾಯುಷ್ಯವಿದೆ; ಎಡಗೈಯಲ್ಲಿ ಐಶ್ವರ್ಯವೂ ಘನತೆಯೂ ಇವೆ.
17 她的道是安樂; 她的路全是平安。
ಜ್ಞಾನದ ಮಾರ್ಗಗಳು ಸಂತೋಷಕರ; ಅದರ ದಾರಿಗಳೆಲ್ಲಾ ಶಾಂತಿಯ ದಾರಿಗಳೇ.
18 她與持守她的作生命樹; 持定她的,俱各有福。
ಜ್ಞಾನವನ್ನು ಹಿಡಿದುಕೊಳ್ಳುವವರಿಗೆ ಜ್ಞಾನವು ಜೀವವೃಕ್ಷವಾಗಿದೆ; ಅದನ್ನು ಭದ್ರವಾಗಿ ಇಟ್ಟುಕೊಳ್ಳುವವರು ಧನ್ಯರು.
19 耶和華以智慧立地, 以聰明定天,
ಯೆಹೋವ ದೇವರು ಜ್ಞಾನದಿಂದ ಭೂಮಿಯನ್ನು ಸ್ಥಾಪಿಸಿದರು, ತಮ್ಮ ತಿಳುವಳಿಕೆಯ ಮೂಲಕ ಅವರು ಆಕಾಶಗಳನ್ನು ಸ್ಥಿರಪಡಿಸಿದರು.
20 以知識使深淵裂開, 使天空滴下甘露。
ದೇವರು ತಮ್ಮ ಅರಿವಿನಿಂದಲೇ ಸೆಲೆಗಳು ಒಡೆದು, ಮೇಘಗಳು ಇಬ್ಬನಿಯನ್ನು ಸುರಿಸುತ್ತವೆ.
21 我兒,要謹守真智慧和謀略, 不可使她離開你的眼目。
ಮಗನೇ, ಜ್ಞಾನವನ್ನೂ ತಿಳುವಳಿಕೆಯನ್ನೂ ಕಾಪಾಡಿಕೋ, ನಿನ್ನ ಕಣ್ಣುಗಳಿಂದ ಅವು ತಪ್ಪಿಹೋಗದೆ ಇರಲಿ.
22 這樣,她必作你的生命, 頸項的美飾。
ಅವು ನಿನಗೆ ಜೀವವಾಗಿರಲಿ. ನಿನ್ನ ಕೊರಳಿಗೆ ಆಭರಣವೂ ಆಗಿರುವುವು.
23 你就坦然行路, 不致碰腳。
ಆಗ ನಿನ್ನ ಮಾರ್ಗದಲ್ಲಿ ಸುರಕ್ಷಿತವಾಗಿರುವೆ; ನೀನು ಎಡವದೆ ನಡೆಯುವೆ.
24 你躺下,必不懼怕; 你躺臥,睡得香甜。
ನೀನು ಮಲಗುವಾಗ ನಿನಗೆ ಹೆದರಿಕೆ ಇರುವುದಿಲ್ಲ; ನೀನು ಮಲಗಿದಾಗ ನಿದ್ರೆಯು ಸುಖವಾಗಿರುವುದು.
25 忽然來的驚恐,不要害怕; 惡人遭毀滅,也不要恐懼。
ಆಕಸ್ಮಿಕ ವಿಪತ್ತಿಗೆ ನೀನು ಅಂಜುವುದಿಲ್ಲ; ದುಷ್ಟರ ಮೇಲೆ ಬರುವ ನಾಶನಕ್ಕೂ ನೀನು ಭಯಪಡದಿರುವೆ.
26 因為耶和華是你所倚靠的; 他必保守你的腳不陷入網羅。
ಏಕೆಂದರೆ ಯೆಹೋವ ದೇವರೇ ನಿನಗೆ ಭರವಸೆ ಆಗಿದ್ದಾರೆ, ನಿನ್ನ ಪಾದವು ಉರುಲಿಗೆ ಸಿಕ್ಕದಂತೆ ಅವರು ಕಾಪಾಡುವರು.
27 你手若有行善的力量,不可推辭, 就當向那應得的人施行。
ನಿನಗೆ ಶಕ್ತಿಯಿರುವಾಗಲೇ ಇತರರಿಗೆ ಉಪಕಾರಮಾಡು ಒಳಿತು ಮಾಡುವುದನ್ನು ನಿನ್ನಲ್ಲಿಯೇ ಇಟ್ಟುಕೊಳ್ಳಬೇಡ.
28 你那裏若有現成的,不可對鄰舍說: 去吧,明天再來,我必給你。
ಕೊಡತಕ್ಕದ್ದು ಈಗಾಗಲೇ ನಿನ್ನಲ್ಲಿರುವಾಗ, “ಹೋಗಿ ಬಾ, ನಾಳೆ ನಿನಗೆ ಕೊಡುತ್ತೇನೆ,” ಎಂದು ನಿನ್ನ ನೆರೆಯವನಿಗೆ ಹೇಳಬೇಡ.
29 你的鄰舍既在你附近安居, 你不可設計害他。
ನಿನ್ನ ನೆರೆಯವನು ಭರವಸೆಯಿಂದ ನಿನ್ನ ಪಕ್ಕದಲ್ಲಿ ವಾಸಮಾಡುತ್ತಿರುವಾಗ, ಅವನಿಗೆ ವಿರೋಧವಾಗಿ ಕೇಡನ್ನು ಕಲ್ಪಿಸಬೇಡ.
30 人未曾加害與你, 不可無故與他相爭。
ಒಬ್ಬನು ನಿನಗೆ ಯಾವ ತೊಂದರೆ ಮಾಡದಿದ್ದರೆ, ಅವನೊಂದಿಗೆ ಕಾರಣವಿಲ್ಲದೆ ದೂರು ನುಡಿಯಬೇಡ.
31 不可嫉妒強暴的人, 也不可選擇他所行的路。
ಬಲಾತ್ಕಾರಿಯ ವಿಷಯದಲ್ಲಿ ನೀನು ಹೊಟ್ಟೆಕಿಚ್ಚುಪಡಬೇಡ; ಅವನ ಮಾರ್ಗಗಳಲ್ಲಿ ಯಾವುದನ್ನೂ ನೀನು ಆರಿಸಿಕೊಳ್ಳಬೇಡ.
32 因為,乖僻人為耶和華所憎惡; 正直人為他所親密。
ಏಕೆಂದರೆ ವಕ್ರಬುದ್ಧಿ ಯೆಹೋವ ದೇವರಿಗೆ ಅಸಹ್ಯ; ಆದರೆ ದೇವರ ನಂಬಿಗಸ್ತಿಕೆ ನೀತಿವಂತರೊಂದಿಗೆ ಇದೆ.
33 耶和華咒詛惡人的家庭, 賜福與義人的居所。
ದುಷ್ಟರ ಮನೆಯ ಮೇಲೆ ದೈವಶಾಪವಿದೆ. ಆದರೆ ನೀತಿವಂತರ ನಿವಾಸದ ಮೇಲೆ ದೈವಾಶೀರ್ವಾದವಿರುವುದು.
34 他譏誚那好譏誚的人, 賜恩給謙卑的人。
ದೇವರು ಗರ್ವಿಷ್ಠ ಪರಿಹಾಸ್ಯಗಾರರನ್ನು ಪರಿಹಾಸ್ಯ ಮಾಡುತ್ತಾರೆ; ದೀನರಿಗಾದರೋ ದೇವರು ಕೃಪೆಯನ್ನು ಕೊಡುತ್ತಾರೆ.
35 智慧人必承受尊榮; 愚昧人高升也成為羞辱。
ಜ್ಞಾನಿಗಳು ಸನ್ಮಾನಕ್ಕೆ ಬಾಧ್ಯನಾಗುವರು; ಆದರೆ ಜ್ಞಾನಹೀನರ ಪ್ರತಿಫಲವು ಅವಮಾನವೆ.

< 箴言 3 >