< 箴言 9 >

1 智慧建造房屋, 鑿成七根柱子,
ಜ್ಞಾನವೆಂಬಾಕೆಯು ಏಳು ಕಂಬಗಳನ್ನು ಕಡಿದು, ತನ್ನ ಮನೆಯನ್ನು ಕಟ್ಟಿಕೊಂಡಿದ್ದಾಳೆ.
2 宰殺牲畜, 調和旨酒, 設擺筵席;
ಆಕೆ ಪಶುಗಳನ್ನು ಕೊಯಿಸಿ ಪಾನದ್ರವ್ಯಗಳೊಡನೆ ದ್ರಾಕ್ಷಾರಸವನ್ನು ಬೆರಸಿ, ಔತಣವನ್ನು ಸಿದ್ಧಪಡಿಸಿದ್ದಾಳೆ.
3 打發使女出去, 自己在城中至高處呼叫,
ಆಕೆಯು ತನ್ನ ದಾಸಿಯರನ್ನು ಕಳುಹಿಸಿ, ಪಟ್ಟಣದ ರಾಜಮಾರ್ಗಗಳ ಮುಖ್ಯಸ್ಥಾನಗಳಲ್ಲಿ ಪ್ರಕಟಿಸುತ್ತಾಳೆ.
4 說:誰是愚蒙人,可以轉到這裏來! 又對那無知的人說:
ಆಕೆಯು ಬುದ್ಧಿಹೀನರಿಗೆ, “ಮೂಢನಾಗಿರುವವನು ಈ ಕಡೆಗೆ ತಿರುಗಲಿ,
5 你們來,吃我的餅, 喝我調和的酒。
ಬನ್ನಿರಿ, ನಾನು ಬಡಿಸುವ ಆಹಾರವನ್ನು ಉಣ್ಣಿರಿ, ನಾನು ಬೆರೆಸಿರುವ ದ್ರಾಕ್ಷಾರಸವನ್ನು ಕುಡಿಯಿರಿ.
6 你們愚蒙人,要捨棄愚蒙, 就得存活,並要走光明的道。
ಮೂಢರೇ ಮೂಢತ್ವವನ್ನು ಬಿಟ್ಟು ಬಾಳಿರಿ, ವಿವೇಕಮಾರ್ಗದಲ್ಲಿ ನೆಟ್ಟಗೆ ನಡೆಯಿರಿ” ಎಂದು ಪ್ರಬೋಧಿಸುತ್ತಾಳೆ.
7 指斥褻慢人的,必受辱罵; 責備惡人的,必被玷污。
ಧರ್ಮನಿಂದಕನನ್ನು ಶಿಕ್ಷಿಸುವವನು ತನ್ನನ್ನು ಅವಮಾನಕ್ಕೆ ಗುರಿಮಾಡಿಕೊಳ್ಳುವನು, ಕೆಟ್ಟವನನ್ನು ಗದರಿಸುವವನಿಗೇ ಕಳಂಕವಾಗುವುದು.
8 不要責備褻慢人,恐怕他恨你; 要責備智慧人,他必愛你。
ಧರ್ಮನಿಂದಕನನ್ನು ಗದರಿಸಬೇಡ, ನಿನ್ನನ್ನು ಹಗೆಮಾಡುವನು. ಜ್ಞಾನವಂತನನ್ನು ಗದರಿಸಿದರೆ ನಿನ್ನನ್ನು ಪ್ರೀತಿಸುವನು.
9 教導智慧人,他就越發有智慧; 指示義人,他就增長學問。
ಜ್ಞಾನಿಗೆ ಉಪದೇಶಿಸಿದರೆ ಹೆಚ್ಚು ಜ್ಞಾನವನ್ನು ಹೊಂದುವನು, ನೀತಿವಂತನಿಗೆ ಬೋಧಿಸಿದರೆ ಹೆಚ್ಚು ತಿಳಿವಳಿಕೆಯನ್ನು ಪಡೆಯುವನು.
10 敬畏耶和華是智慧的開端; 認識至聖者便是聰明。
೧೦ಯೆಹೋವನ ಭಯವೇ ಜ್ಞಾನಕ್ಕೆ ಮೂಲವು, ಪರಿಶುದ್ಧ ದೇವರ ತಿಳಿವಳಿಕೆಯೇ ವಿವೇಕವು.
11 你藉着我,日子必增多, 年歲也必加添。
೧೧ನನ್ನಿಂದ ನಿನ್ನ ದಿನಗಳು ಹೆಚ್ಚುವವು, ನಿನ್ನ ಆಯುಷ್ಯದ ವರ್ಷಗಳು ವೃದ್ಧಿಯಾಗುವವು.
12 你若有智慧,是與自己有益; 你若褻慢,就必獨自擔當。
೧೨ನೀನು ಜ್ಞಾನವಂತನಾದರೆ ನಿನ್ನ ಜ್ಞಾನವು ನಿನಗೇ ಲಾಭಕರ, ಧರ್ಮನಿಂದಕನಾದರೆ ನೀನೇ ಅದರ ಫಲವನ್ನು ಅನುಭವಿಸುವಿ.
13 愚昧的婦人喧嚷; 她是愚蒙,一無所知。
೧೩ಅಜ್ಞಾನವೆಂಬವಳಾದರೋ ಕೂಗಾಟದವಳು, ಮೂಢಳು, ಏನೂ ತಿಳಿಯದವಳು.
14 她坐在自己的家門口, 坐在城中高處的座位上,
೧೪ಅವಳು ತನ್ನ ಮನೆಯ ಬಾಗಿಲಿನಲ್ಲಿ, ಪಟ್ಟಣದ ರಾಜಮಾರ್ಗಗಳಲ್ಲಿ ಪೀಠದ ಮೇಲೆ ಕುಳಿತುಕೊಂಡವಳಾಗಿ,
15 呼叫過路的, 就是直行其道的人,
೧೫ತಮ್ಮ ಮಾರ್ಗವನ್ನು ಹಿಡಿದು, ಹೋಗಿ ಬರುವವರನ್ನು ನೋಡಿ,
16 說:誰是愚蒙人,可以轉到這裏來! 又對那無知的人說:
೧೬“ಮೂಢನಾಗಿರುವವನು ಈ ಕಡೆಗೆ ತಿರುಗಲಿ” ಎಂದು ಕೂಗಿ,
17 偷來的水是甜的, 暗吃的餅是好的。
೧೭“ಕದ್ದ ನೀರು ಸಿಹಿಯಾಗಿದೆ, ಗುಟ್ಟಾಗಿ ತಿನ್ನುವ ತಿಂಡಿಯು ರುಚಿಯಾಗಿದೆ” ಎಂದು ಬುದ್ಧಿಹೀನನಿಗೆ ಹೇಳುತ್ತಾಳೆ.
18 人卻不知有陰魂在她那裏; 她的客在陰間的深處。 (Sheol h7585)
೧೮ಆ ಮನೆಯು ಪ್ರೇತ ನಿವಾಸವೆಂದೂ ಅವಳ ಅತಿಥಿಗಳು ಅಗಾಧಪಾತಾಳದಲ್ಲಿ ಬಿದ್ದಿರುವರೆಂದೂ ಅವನಿಗೆ ತಿಳಿಯದು. (Sheol h7585)

< 箴言 9 >