< 詩篇 128 >
1 上行之詩。 凡敬畏耶和華、 遵行他道的人便為有福!
೧ಯಾತ್ರಾಗೀತೆ. ಯೆಹೋವನಲ್ಲಿ ಭಯಭಕ್ತಿಯುಳ್ಳವನಾಗಿ, ಆತನ ಮಾರ್ಗಗಳಲ್ಲಿ ನಡೆಯುವವನು ಧನ್ಯನು.
೨ನಿನ್ನ ಕಷ್ಟಾರ್ಜಿತವನ್ನು ನೀನೇ ಅನುಭವಿಸುವಿ, ನೀನು ಧನ್ಯನು, ನಿನಗೆ ಶುಭವಿರುವುದು.
3 你妻子在你的內室,好像多結果子的葡萄樹; 你兒女圍繞你的桌子,好像橄欖栽子。
೩ಅಂತಃಪುರದಲ್ಲಿರುವ ನಿನ್ನ ಹೆಂಡತಿಯು, ಫಲಭರಿತವಾದ ದ್ರಾಕ್ಷಾಲತೆಯಂತೆ ಇರುವಳು; ನಿನ್ನ ಸಂಗಡ ಊಟದ ಮಣೆಯ ಸುತ್ತಲೂ ಕುಳಿತುಕೊಳ್ಳುವ ನಿನ್ನ ಮಕ್ಕಳು, ಎಣ್ಣೇಮರದ ಸಸಿಗಳ ಹಾಗೆ ಇರುವರು.
೪ಇಗೋ, ಯೆಹೋವನಲ್ಲಿ ಭಯಭಕ್ತಿಯುಳ್ಳ ಪುರುಷನು, ಈ ರೀತಿಯಾಗಿ ಆಶೀರ್ವಾದ ಹೊಂದುವನು.
5 願耶和華從錫安賜福給你! 願你一生一世看見耶路撒冷的好處!
೫ಚೀಯೋನಿನಲ್ಲಿರುವ ಯೆಹೋವನು ನಿನ್ನನ್ನು ಆಶೀರ್ವದಿಸಲಿ; ಜೀವಮಾನವೆಲ್ಲಾ ಯೆರೂಸಲೇಮಿನ ಸೌಭಾಗ್ಯವನ್ನು ನೋಡುವವನಾಗು.
೬ಮಕ್ಕಳ ಮಕ್ಕಳನ್ನು ಕಾಣುವವನಾಗು. ಇಸ್ರಾಯೇಲರಿಗೆ ಶುಭವಾಗಲಿ.