< 詩篇 129 >
1 上行之詩。 以色列當說:從我幼年以來, 敵人屢次苦害我,
೧ಯಾತ್ರಾಗೀತೆ. “ನಮ್ಮ ಯೌವನ ಕಾಲದಿಂದ ಶತ್ರುಗಳು ನಮ್ಮನ್ನು ಹಲವು ಸಾರಿ ಬಾಧಿಸಿದ್ದಾರೆ” ಎಂದು ಇಸ್ರಾಯೇಲರು ಹೇಳಲಿ.
2 從我幼年以來,敵人屢次苦害我, 卻沒有勝了我。
೨“ನಾವು ಯೌವನ ಕಾಲದಿಂದ ಎಷ್ಟೋ ಸಾರಿ ಬಾಧೆ ಹೊಂದಿದರೂ, ಅವರು ನಮ್ಮನ್ನು ಜಯಿಸಲಿಲ್ಲ.
೩ಉಳುವವರು ನಮ್ಮ ಬೆನ್ನಿನ ಮೇಲೆ ಉಳುತ್ತಾ, ಉದ್ದವಾದ ಗೆರೆಗಳನ್ನು ಹಾಕಿದರು.”
೪ಆದರೆ ನೀತಿಸ್ವರೂಪನಾದ ಯೆಹೋವನು, ದುಷ್ಟರು ಹಾಕಿದ ಬಂಧನಗಳನ್ನು ಛೇದಿಸಿಬಿಟ್ಟನು.
೫ಚೀಯೋನನ್ನು ದ್ವೇಷಿಸುವವರೆಲ್ಲರೂ ಅವಮಾನದಿಂದ ಹಿಂದಿರುಗಲಿ.
೬ಅವರು ಮಾಳಿಗೆಯ ಮೇಲಣ ಹುಲ್ಲಿನಂತಾಗಲಿ; ಅದು ಹೂವು ಬಿಡುವುದಕ್ಕೆ ಮೊದಲೇ ಒಣಗಿಹೋಗುತ್ತದೆ;
೭ಅದನ್ನು ಕೊಯ್ಯುವವನ ಹಿಡಿಯೂ, ಸಿವುಡು ಕಟ್ಟುವವನ ಉಡಿಲೂ ತುಂಬುವುದಿಲ್ಲ.
8 過路的也不說: 願耶和華所賜的福歸與你們! 我們奉耶和華的名給你們祝福!
೮ಹಾದುಹೋಗುವವರು, “ಯೆಹೋವನು ನಿಮ್ಮನ್ನು ಆಶೀರ್ವದಿಸಲಿ ಎಂದು, ಯೆಹೋವನ ನಾಮದಲ್ಲಿ ನಿಮ್ಮನ್ನು ಆಶೀರ್ವದಿಸುತ್ತೇವೆ” ಎಂದೂ ಹೇಳುವುದಿಲ್ಲ.