< 詩篇 34 >

1 大衛在亞比米勒面前裝瘋,被他趕出去,就作這詩。 我要時時稱頌耶和華; 讚美他的話必常在我口中。
ದಾವೀದನು ಅಬೀಮೆಲೆಕನ ಎದುರಿನಲ್ಲಿ ಹುಚ್ಚನಂತೆ ತೋರ್ಪಡಿಸಿಕೊಂಡು ಅವನ ಬಳಿಯಿಂದ ಹೊರಟಾಗ ರಚಿಸಿದ ಕೀರ್ತನೆ. ನಾನು ಯೆಹೋವನನ್ನು ಎಡೆಬಿಡದೆ ಕೊಂಡಾಡುವೆನು; ಆತನ ಸ್ತೋತ್ರವು ಯಾವಾಗಲೂ ನನ್ನ ಬಾಯಲ್ಲಿ ಇರುವುದು.
2 我的心必因耶和華誇耀; 謙卑人聽見就要喜樂。
ನನ್ನ ಮನಸ್ಸು ಯೆಹೋವನಲ್ಲಿ ಹಿಗ್ಗುತ್ತಿರುವುದು; ಇದನ್ನು ದೀನರು ಕೇಳಿ ಸಂತೋಷಿಸುವರು.
3 你們和我當稱耶和華為大, 一同高舉他的名。
ನನ್ನೊಡನೆ ಯೆಹೋವನನ್ನು ಕೊಂಡಾಡಿರಿ; ನಾವು ಒಟ್ಟಾಗಿ ಆತನ ಹೆಸರನ್ನು ಘನಪಡಿಸೋಣ.
4 我曾尋求耶和華,他就應允我, 救我脫離了一切的恐懼。
ನಾನು ಯೆಹೋವನ ಸನ್ನಿಧಿಯಲ್ಲಿ ಬೇಡಿಕೊಳ್ಳಲು, ಆತನು ಸದುತ್ತರವನ್ನು ಕೊಟ್ಟು ಎಲ್ಲಾ ಭೀತಿಯಿಂದ ನನ್ನನ್ನು ತಪ್ಪಿಸಿದನು.
5 凡仰望他的,便有光榮; 他們的臉必不蒙羞。
ಆತನನ್ನೇ ದೃಷ್ಟಿಸಿದವರು ಪ್ರಕಾಶವನ್ನು ಹೊಂದಿದರು; ಅವರ ಮುಖವು ಅವಮಾನಕ್ಕೆ ಈಡಾಗುವುದೇ ಇಲ್ಲ.
6 我這困苦人呼求,耶和華便垂聽, 救我脫離一切患難。
ಕಷ್ಟದಲ್ಲಿದ್ದ ಈ ಮನುಷ್ಯನು ಮೊರೆಯಿಡಲು, ಯೆಹೋವನು ಕೇಳಿ ಎಲ್ಲಾ ಬಾಧೆಗಳಿಂದ ಬಿಡಿಸಿದನು.
7 耶和華的使者在敬畏他的人四圍安營, 搭救他們。
ಯೆಹೋವನ ಭಯಭಕ್ತಿಯುಳ್ಳವರ ಸುತ್ತಲು, ಆತನ ದೂತನು ದಂಡಿಳಿಸಿ, ಕಾವಲಾಗಿದ್ದು ಕಾಪಾಡುತ್ತಾನೆ.
8 你們要嘗嘗主恩的滋味,便知道他是美善; 投靠他的人有福了!
ಯೆಹೋವನು ಸರ್ವೋತ್ತಮನೆಂದು ಅನುಭವದಿಂದ ತಿಳಿದುಕೊಳ್ಳಿರಿ; ಆತನನ್ನು ಆಶ್ರಯಿಸಿಕೊಂಡವರು ಎಷ್ಟೋ ಧನ್ಯರು.
9 耶和華的聖民哪,你們當敬畏他, 因敬畏他的一無所缺。
ಯೆಹೋವನ ಜನರೇ, ಆತನಲ್ಲಿ ಭಯಭಕ್ತಿಯುಳ್ಳವರಾಗಿರಿ; ಆತನಲ್ಲಿ ಭಯಭಕ್ತಿಯುಳ್ಳವರಿಗೆ ಯಾವ ಕೊರತೆಯೂ ಇರುವುದಿಲ್ಲ.
10 少壯獅子還缺食忍餓, 但尋求耶和華的甚麼好處都不缺。
೧೦ಪ್ರಾಯದ ಸಿಂಹಗಳಾದರೋ ಹೊಟ್ಟೆಗಿಲ್ಲದೆ ಹಸಿದಾವು; ಯೆಹೋವನ ಸನ್ನಿಧಿಯಲ್ಲಿ ಬೇಡಿಕೊಳ್ಳುವವರಿಗೆ ಯಾವ ಒಳಿತಿಗೆ ಕೊರತೆಯಿಲ್ಲ.
11 眾弟子啊,你們當來聽我的話! 我要將敬畏耶和華的道教訓你們。
೧೧ಮಕ್ಕಳಿರಾ, ಬನ್ನಿರಿ, ನನ್ನ ಮಾತನ್ನು ಕೇಳಿರಿ; ನಾನು ಯೆಹೋವನ ಭಯವನ್ನು ನಿಮಗೆ ಕಲಿಸುವೆನು.
12 有何人喜好存活, 愛慕長壽,得享美福,
೧೨ದೀರ್ಘಾಯುಷ್ಯವು ಬೇಕೋ? ಬಹುದಿನ ಬದುಕಿ ಸುಖವನ್ನು ಅನುಭವಿಸಬೇಕೋ?
13 就要禁止舌頭不出惡言, 嘴唇不說詭詐的話。
೧೩ಹಾಗಾದರೆ ಕೆಟ್ಟದ್ದಕ್ಕೆ ಹೋಗದಂತೆ ನಾಲಿಗೆಯನ್ನು ಕಾದುಕೋ; ವಂಚನೆಯ ಮಾತುಗಳಿಗೆ ಬಿಡದೆ ತುಟಿಗಳನ್ನು ಇಟ್ಟುಕೋ.
14 要離惡行善, 尋求和睦,一心追趕。
೧೪ಕೆಟ್ಟದ್ದನ್ನು ಬಿಟ್ಟು ಒಳ್ಳೆಯದನ್ನೇ ಮಾಡು; ಸಮಾಧಾನವನ್ನು ಹಾರೈಸಿ ಅದಕ್ಕಾಗಿ ಪ್ರಯತ್ನಪಡು.
15 耶和華的眼目看顧義人; 他的耳朵聽他們的呼求。
೧೫ಯೆಹೋವನು ನೀತಿವಂತರನ್ನು ಕಟಾಕ್ಷಿಸುತ್ತಾನೆ; ಅವರು ಮೊರೆಯಿಡುವಾಗ ಕಿವಿಗೊಡುತ್ತಾನೆ.
16 耶和華向行惡的人變臉, 要從世上除滅他們的名號。
೧೬ಕೆಡುಕರಿಗೋ ಯೆಹೋವನು ಕೋಪದ ಮುಖವುಳ್ಳವನಾಗಿರುವನು; ಲೋಕದಲ್ಲಿ ಅವರ ನೆನಪೇ ಉಳಿಯದಂತೆ ತೆಗೆದುಹಾಕುವನು.
17 義人呼求,耶和華聽見了, 便救他們脫離一切患難。
೧೭ಯೆಹೋವನು ನೀತಿವಂತರ ಕೂಗನ್ನು ಕೇಳಿ, ಎಲ್ಲಾ ಕಷ್ಟಗಳಿಂದ ಅವರನ್ನು ಬಿಡಿಸುತ್ತಾನೆ.
18 耶和華靠近傷心的人, 拯救靈性痛悔的人。
೧೮ಮುರಿದ ಮನಸ್ಸುಳ್ಳವರಿಗೆ ಯೆಹೋವನು ನೆರವಾಗುತ್ತಾನೆ; ಕುಗ್ಗಿಹೋದವರನ್ನು ಉದ್ಧಾರಮಾಡುತ್ತಾನೆ.
19 義人多有苦難, 但耶和華救他脫離這一切,
೧೯ನೀತಿವಂತನಿಗೆ ಸಂಭವಿಸುವ ಕಷ್ಟಗಳು ಅನೇಕವಿದ್ದರೂ, ಯೆಹೋವನು ಅವೆಲ್ಲವುಗಳಿಂದ ಅವನನ್ನು ಬಿಡಿಸುತ್ತಾನೆ.
20 又保全他一身的骨頭, 連一根也不折斷。
೨೦ಆತನು ಅವನ ಎಲುಬುಗಳನ್ನೆಲ್ಲಾ ಕಾಪಾಡುತ್ತಾನೆ; ಅವುಗಳಲ್ಲಿ ಒಂದಾದರೂ ಮುರಿದುಹೋಗುವುದಿಲ್ಲ.
21 惡必害死惡人; 恨惡義人的,必被定罪。
೨೧ದುಷ್ಟನ ಕೆಡುಕು ಅವನನ್ನೇ ಕೊಲ್ಲುವುದು; ನೀತಿವಂತನನ್ನು ದ್ವೇಷಿಸುವವರು ಅಪರಾಧಿಗಳೆಂದು ಎಣಿಸಲ್ಪಡುವರು.
22 耶和華救贖他僕人的靈魂; 凡投靠他的,必不致定罪。
೨೨ಯೆಹೋವನು ತನ್ನ ಸೇವಕರ ಪ್ರಾಣವನ್ನು ವಿಮೋಚಿಸುತ್ತಾನೆ. ಆತನ ಆಶ್ರಿತರಲ್ಲಿ ಒಬ್ಬರಾದರೂ ಅಪರಾಧಿಯೆಂದು ಎಣಿಸಲ್ಪಡುವುದಿಲ್ಲ.

< 詩篇 34 >