< 撒迦利亞書 11 >

1 黎巴嫩哪,開開你的門, 任火燒滅你的香柏樹。
ಲೆಬನೋನೇ, ನಿನ್ನ ಬಾಗಿಲುಗಳನ್ನು ತೆರೆ, ಬೆಂಕಿಯು ನಿನ್ನ ದೇವದಾರುಗಳನ್ನು ನುಂಗಲಿ!
2 松樹啊,應當哀號; 因為香柏樹傾倒,佳美的樹毀壞。 巴珊的橡樹啊,應當哀號, 因為茂盛的樹林已經倒了。
ತುರಾಯಿ ಮರವೇ, ಗೋಳಾಡು! ದೇವದಾರು ಬಿದ್ದಿದೆ, ಶ್ರೇಷ್ಠವೃಕ್ಷಗಳು ನಾಶವಾಗಿವೆ. ಬಾಷಾನಿನ ಅಲ್ಲೋನ್ ಮರಗಳೇ ಕಿರಿಚಿರಿ! ನುಗ್ಗಲಾಗದ ದಟ್ಟವಾದ ವನವು ಉರುಳಿದೆ.
3 聽啊,有牧人哀號的聲音, 因他們榮華的草場毀壞了。 有少壯獅子咆哮的聲音, 因約旦河旁的叢林荒廢了。
ಆಹಾ, ಕುರುಬರು ಗೋಳಾಡುತ್ತಾರೆ! ಅವರ ಅತಿಶಯದ ಕಾವಲು ಹಾಳಾಗಿದೆ. ಇಗೋ, ಪ್ರಾಯದ ಸಿಂಹಗಳು ಗರ್ಜಿಸುತ್ತವೆ! ಯೊರ್ದನಿನ ದಟ್ಟ ಅಡವಿಯು ಹಾಳಾಗಿದೆ.
4 耶和華-我的上帝如此說:「你-撒迦利亞要牧養這將宰的群羊。
ನನ್ನ ದೇವರಾದ ಯೆಹೋವನು ಹೀಗೆ ಅಪ್ಪಣೆಕೊಟ್ಟನು, “ಕೊಯ್ಗುರಿಗಳ ಮಂದೆಯನ್ನು ಕಾಯಿ;
5 買他們的宰了他們,以自己為無罪;賣他們的說:『耶和華是應當稱頌的,因我成為富足。』牧養他們的並不憐恤他們。
ಕೊಂಡುಕೊಳ್ಳುವವರು ಅವುಗಳನ್ನು ಕೊಯ್ದರೂ ದೋಷಿಗಳೆಂದು ಎಣಿಸುವುದಿಲ್ಲ; ಮಾರುವವರು ಯೆಹೋವನಿಗೆ ಸ್ತೋತ್ರವಾಗಲಿ, ಧನವಂತರಾದೆವು ಅಂದುಕೊಳ್ಳುವರು. ಆ ಮಂದೆಯ ಕುರುಬರಾದರೂ ಅವುಗಳನ್ನು ಕರುಣಿಸುವುದಿಲ್ಲ.”
6 耶和華說:『我不再憐恤這地的居民,必將這民交給各人的鄰舍和他們王的手中。他們必毀滅這地,我也不救這民脫離他們的手。』」
ಯೆಹೋವನು ಇಂತೆನ್ನುತ್ತಾನೆ, “ನಾನು ಲೋಕನಿವಾಸಿಗಳನ್ನು ಇನ್ನು ಕರುಣಿಸೆನು; ಇಗೋ, ಪ್ರತಿಯೊಬ್ಬನನ್ನು ಅವನವನ ನೆರೆಯವನ ಕೈಗೂ, ಅರಸನ ಕೈಗೂ ಒಪ್ಪಿಸುವೆನು; ಆ ಬಲಿಷ್ಠರು ಲೋಕವನ್ನು ಪುಡಿಪುಡಿಮಾಡುವರು; ಅವರ ಕೈಗೆ ಸಿಕ್ಕಿದವರನ್ನು ಉದ್ಧರಿಸೆನು.”
7 於是,我牧養這將宰的群羊,就是群中最困苦的羊。我拿着兩根杖,一根我稱為「榮美」,一根我稱為「聯索」。這樣,我牧養了群羊。
ಆಗ ನಾನು ದೀನಾವಸ್ಥೆಯಲ್ಲಿದ್ದ ಆ ಕೊಯ್ಗುರಿಗಳ ಮಂದೆಯನ್ನು ಮೇಯಿಸಿದೆನು. ಎರಡು ಕೋಲುಗಳನ್ನು ತೆಗೆದುಕೊಂಡು ಒಂದಕ್ಕೆ “ಕೃಪೆ” ಎಂತಲೂ ಇನ್ನೊಂದಕ್ಕೆ, “ಒಗ್ಗಟ್ಟು” ಎಂತಲೂ ಹೆಸರಿಟ್ಟು ಅವುಗಳಿಂದ ಮಂದೆಯನ್ನು ಮೇಯಿಸಿದೆನು.
8 一月之內,我除滅三個牧人,因為我的心厭煩他們;他們的心也憎嫌我。
ಒಂದೇ ತಿಂಗಳೊಳಗೆ ಮೂವರು ಕುರುಬರನ್ನು ಅಡಗಿಸಿಬಿಟ್ಟೆನು; ಅನಂತರ ನನಗೆ ಕುರಿಗಳ ವಿಷಯವಾಗಿ ತಾಳ್ಮೆ ತಪ್ಪಿತು; ಅವುಗಳಿಂದ ನನಗೆ ಬೇಸರವಾಯಿತು.
9 我就說:「我不牧養你們。要死的,由他死;要喪亡的,由他喪亡;餘剩的,由他們彼此相食。」
ಆಗ, “ನಾನು ನಿಮ್ಮನ್ನು ಮೇಯಿಸೆನು; ಸಾಯುವುದು ಸಾಯಲಿ, ಹಾಳಾಗುವುದು ಹಾಳಾಗಲಿ, ಉಳಿದವುಗಳು ಒಂದರ ಮಾಂಸವೊಂದನ್ನು ತಿನ್ನಲಿ ಅಂದುಕೊಂಡೆನು.”
10 我折斷那稱為「榮美」的杖,表明我廢棄與萬民所立的約。
೧೦ಆಗ ನಾನು ಎಲ್ಲಾ ಜನಾಂಗಗಳೊಂದಿಗೆ ಮಾಡಿಕೊಂಡಿದ್ದ ಒಡಂಬಡಿಕೆಯನ್ನು ಭಂಗಪಡಿಸಬೇಕೆಂದು “ಕೃಪೆ” ಎಂಬ ನನ್ನ ಕೋಲನ್ನು ತೆಗೆದು ಕತ್ತರಿಸಿಬಿಟ್ಟೆನು. ಆಗಲೇ ಮುರಿದುಹೋಯಿತು;
11 當日就廢棄了。這樣,那些仰望我的困苦羊就知道所說的是耶和華的話。
೧೧ಇದರಿಂದ ಆ ದೀನವಾದ ಮಂದೆಯಲ್ಲಿ ನನ್ನನ್ನು ಲಕ್ಷಿಸುತ್ತಿದ್ದ ಕುರಿಗಳು, ಇದು ಯೆಹೋವನ ನುಡಿ ಎಂದು ತಿಳಿದುಕೊಂಡವು.
12 我對他們說:「你們若以為美,就給我工價。不然,就罷了!」於是他們給了三十塊錢作為我的工價。
೧೨ಅನಂತರ ನಾನು ನಿಮಗೆ, “ಸರಿಯಾಗಿ ತೋರಿದರೆ ನನಗೆ ಸಂಬಳವನ್ನು ಕೊಡಿರಿ ಇಲ್ಲವಾದರೆ ಬಿಡಿರಿ” ಅನ್ನಲು ಅವರು ಮೂವತ್ತು ತೊಲೆ ಬೆಳ್ಳಿಯನ್ನು ತೂಗಿ ನನ್ನ ಸಂಬಳಕ್ಕಾಗಿ ಕೊಟ್ಟರು.
13 耶和華吩咐我說:「要把眾人所估定美好的價值丟給窯戶。」我便將這三十塊錢,在耶和華的殿中丟給窯戶了。
೧೩ಅವರು ಇವನ ಯೋಗ್ಯತೆ ಇಷ್ಟೇ ಎಂದುಕೊಂಡು ನನಗೆ ಕೊಟ್ಟ ಆ ಭಾರೀ ಸಂಬಳವನ್ನು ಯೆಹೋವನು ನೋಡಿ, “ಅದನ್ನು ಡಬ್ಬಿಗೆ ಹಾಕು” ಎಂದು ಅಪ್ಪಣೆ ಮಾಡಿದಾಗ ನಾನು ಆ ಮೂವತ್ತು ಶೆಕೆಲ್ ಬೆಳ್ಳಿ ನಾಣ್ಯವನ್ನು ತೆಗೆದು ಯೆಹೋವನ ಆಲಯದ ಡಬ್ಬಿಗೆ ಹಾಕಿದೆನು.
14 我又折斷稱為「聯索」的那根杖,表明我廢棄猶大與以色列弟兄的情誼。
೧೪ಕೂಡಲೆ ಯೆಹೂದಕ್ಕೂ, ಇಸ್ರಾಯೇಲಿಗೂ ಇದ್ದ ಸಹೋದರಭಾವವನ್ನು ಭಂಗಪಡಿಸಬೇಕೆಂದು “ಒಗ್ಗಟ್ಟು” ಎಂಬ ನನ್ನ ಎರಡನೆಯ ಕೋಲನ್ನು ಮುರಿದುಬಿಟ್ಟೆನು.
15 耶和華又吩咐我說:「你再取愚昧牧人所用的器具,
೧೫ಆ ಮೇಲೆ ಯೆಹೋವನು ನನಗೆ ಹೀಗೆ ಅಪ್ಪಣೆ ಮಾಡಿದನು, “ನೀನು ಮತ್ತೊಮ್ಮೆ ತಕ್ಕ ಸಲಕರಣೆಗಳನ್ನು ತೆಗೆದುಕೊಂಡು ಮೂರ್ಖ ಕುರುಬನಂತೆ ನಟಿಸು.
16 因我要在這地興起一個牧人。他不看顧喪亡的,不尋找分散的,不醫治受傷的,也不牧養強壯的;卻要吃肥羊的肉,撕裂牠的蹄子。
೧೬ಇಗೋ, ದೇಶದಲ್ಲಿ ನಾನು ಒಬ್ಬ ಕುರುಬನನ್ನು ನೇಮಿಸುವೆನು; ಅವನು ಹಾಳಾಗುತ್ತಿರುವ ಕುರಿಗಳನ್ನು ನೋಡಿಕೊಳ್ಳನು, ಚದುರಿದವುಗಳನ್ನು ಹುಡುಕನು, ಊನವಾದವುಗಳನ್ನು ಗುಣಪಡಿಸನು, ನೆಟ್ಟಗಿರುವವುಗಳನ್ನು ಸಾಕನು; ಕೊಬ್ಬಿದವುಗಳ ಮಾಂಸವನ್ನು ತಿನ್ನುವನು, ಕುರಿಗಳ ಗೊರಸುಗಳನ್ನು ಚೂರುಚೂರು ಮಾಡುವನು.
17 無用的牧人丟棄羊群有禍了! 刀必臨到他的膀臂和右眼上。 他的膀臂必全然枯乾; 他的右眼也必昏暗失明。」
೧೭ಮಂದೆಯನ್ನು ಕಾಯದೆ ಬಿಟ್ಟು ಬಿಟ್ಟ ಕುರುಬನ ಗತಿಯನ್ನು ಏನು ಹೇಳಲಿ? ಖಡ್ಗವು ಅವನ ತೋಳಿಗೂ, ಬಲಗಣ್ಣಿಗೂ ತಾಗುವುದು; ಅವನ ತೋಳು ತೀರಾ ಒಣಗಿಹೋಗುವುದು. ಅವನ ಬಲಗಣ್ಣು ಪೂರಾ ಮೊಬ್ಬಾಗುವುದು.”

< 撒迦利亞書 11 >