< Yohana 3 >
1 Jwapali chilongola jwa Chiyahudi liina lyakwe che Nikodemu juŵaliji mu mpingo wa Mafalisayo.
೧ಫರಿಸಾಯರಲ್ಲಿ ಯೆಹೂದ್ಯರ ಹಿರೀಸಭೆಯವನಾದ ನಿಕೊದೇಮನೆಂಬ ಒಬ್ಬ ಮನುಷ್ಯನಿದ್ದನು.
2 Chilo chimo che Nikodemu ŵanjaulile Che Yesu ni kunsalila, “Jwakwiganya, tukwimanyilila kuti mmwe ndi jwakwiganya jwalajiswe ni Akunnungu, pakuŵa ngapagwa mundu jwakukombola kupanganya imanyisyo inkwitendekanya mmwe akaŵe Akunnungu ali pamo najo.”
೨ಅವನು ರಾತ್ರಿಯಲ್ಲಿ ಯೇಸುವಿನ ಬಳಿಗೆ ಬಂದು ಆತನಿಗೆ, “ಗುರುವೇ, ನೀನು ದೇವರ ಬಳಿಯಿಂದ ಬಂದ ಬೋಧಕನೆಂದು ನಾವು ಬಲ್ಲೆವು. ನೀನು ಮಾಡುವಂಥ ಈ ಸೂಚಕ ಕಾರ್ಯಗಳನ್ನು ದೇವರ ಸಹಾಯವಿಲ್ಲದೆ ಮಾಡುವುದು ಯಾರಿಂದಲೂ ಆಗದು” ಎಂದು ಹೇಳಿದನು.
3 Che Yesu ŵanjanjile, “Isyene ngunsalila, iŵaga mundu ngakupagwa kaaŵili, ngaakombola kwinjila mu umwenye wa Akunnungu.”
೩ಯೇಸು ಅವನಿಗೆ, “ನಾನು ನಿಜನಿಜವಾಗಿ ಹೇಳುತ್ತೇನೆ, ಒಬ್ಬನುಹೊಸದಾಗಿ ಹುಟ್ಟದಿದ್ದರೆ ಅವನು ದೇವರ ರಾಜ್ಯವನ್ನು ಕಾಣಲಾರನು,” ಎಂದು ಉತ್ತರ ಕೊಟ್ಟನು.
4 Che Nikodemu ŵambusisye, “Ana mundu akukombola chinauli kupagwa kaaŵili ali akusile? Akukombola chinauli kwinjila mu lutumbo lwa achikulugwe ni kupagwa kaaŵili?”
೪ನಿಕೊದೇಮನು ಆತನನ್ನು, “ಮನುಷ್ಯನು ಮುದುಕನಾದ ಮೇಲೆ ತಿರುಗಿ ಹುಟ್ಟುವುದು ಹೇಗೆ? ಅವನು ತನ್ನ ತಾಯಿಯ ಗರ್ಭದಲ್ಲಿ ಎರಡನೆಯ ಸಾರಿ ಪ್ರವೇಶಿಸಿ ಹುಟ್ಟುವುದಕ್ಕಾದೀತೇ?” ಎಂದು ಕೇಳಿದನು.
5 Che Yesu ŵanjanjile, “Isyene ngunsalila, iŵaga mundu ngaapagwa kwa meesi ni kwa Mbumu jwa Akunnungu, ngaakombola kwinjila mu umwenye wa Akunnungu.
೫ಅದಕ್ಕೆ ಯೇಸು “ನಾನು ನಿನಗೆ ನಿಜನಿಜವಾಗಿ ಹೇಳುತ್ತೇನೆ, ಒಬ್ಬನು ನೀರಿನಿಂದಲೂ ಮತ್ತು ಆತ್ಮನಿಂದಲೂ ಹುಟ್ಟದಿದ್ದರೆ ಅವನು ದೇವರ ರಾಜ್ಯದಲ್ಲಿ ಪ್ರವೇಶಿಸಲಾರನು.
6 Kwa chiilu mundu akupagwa ni atati ni achikulugwe, nambo akupagwa kwa mbumu, akupagwa kwa Mbumu jwa Akunnungu.
೬ದೇಹದಿಂದ ಹುಟ್ಟಿದ್ದು ದೇಹವೇ, ಆತ್ಮನಿಂದ ಹುಟ್ಟಿದ್ದು ಆತ್ಮವೇ.
7 Nkasimonga pakuŵa ndite kuti nkusachilwa mpagwe kaaŵili.
೭‘ನೀವು ಹೊಸದಾಗಿ ಹುಟ್ಟಬೇಕು’ ಎಂದು ನಾನು ನಿನಗೆ ಹೇಳಿದ್ದರಿಂದ ಆಶ್ಚರ್ಯಪಡಬೇಡ
8 Mbungo jikupuga kujikusaka, nkujipikana pajikupuga, nambo ngankukumanyilila kujikukopochela atamuno kujikwaula. Ikuŵa yelei kwa jwalijose jwapagwilwe kwa Mbumu jwa Akunnungu.”
೮ಗಾಳಿಯು ಇಷ್ಟ ಬಂದ ಕಡೆ ಬೀಸುತ್ತದೆ. ನೀನು ಅದರ ಶಬ್ದವನ್ನು ಕೇಳುತ್ತೀ, ಆದರೆ ಅದು ಎಲ್ಲಿಂದ ಬರುತ್ತದೋ ಎಲ್ಲಿಗೆ ಹೋಗುತ್ತದೋ ನಿನಗೆ ತಿಳಿಯದು. ಆತ್ಮನಿಂದ ಹುಟ್ಟಿದವರೆಲ್ಲರೂ ಅದರಂತೆಯೇ” ಎಂದನು.
9 Che Nikodemu ŵausisye Che Yesu, “Ayi indu yi ana chiikomboleche chinauli?”
೯ಅದಕ್ಕೆ ನಿಕೊದೇಮನು “ಇದೆಲ್ಲಾ ಹೇಗೆ ಸಾಧ್ಯ?” ಎಂದಾಗ,
10 Che Yesu ŵanjanjile, “Mmwejo ndi jwakwiganya jwa Ŵaisilaeli ana iŵele uli ngankwimanyilila indu yi?
೧೦ಯೇಸು ಅವನಿಗೆ ಹೇಳಿದ್ದೇನಂದರೆ, “ಇಸ್ರಾಯೇಲರಿಗೆ ಬೋಧಕನಾಗಿರುವ ನಿನಗೆ ಈ ಸಂಗತಿಗಳು ತಿಳಿಯುವುದಿಲ್ಲವೋ?
11 Isyene ngunsalila, uweji tukuŵecheta itukwimanyilila ni kuŵalanga umboni wa itwiweni, nambo ŵanyamwe ngankusaka kuujitichisya utenga wetu.
೧೧ನಿನಗೆ ನಿಜನಿಜವಾಗಿ ಹೇಳುತ್ತೇನೆ, ನಾವು ತಿಳಿದಿರುವುದನ್ನು ಮಾತನಾಡುತ್ತೇವೆ ಮತ್ತು ನೋಡಿದ್ದಕ್ಕೆ ಸಾಕ್ಷಿ ಕೊಡುತ್ತೇವೆ. ಆದರೂ ನೀವು ನಮ್ಮ ಸಾಕ್ಷಿಯನ್ನು ಸ್ವೀಕರಿಸುವುದಿಲ್ಲ.
12 Iŵaga nantanjile indu ya pachilambo ni ŵanyamwe nganinjitichisya, ana nantanjilaga indu ya kwinani chinjitichisye chinauli?
೧೨ನಾನು ಭೂಲೋಕದ ಕಾರ್ಯಗಳನ್ನು ಕುರಿತು ನಿಮಗೆ ಹೇಳಿದರೆ ನೀವು ನಂಬುವುದಿಲ್ಲ, ಪರಲೋಕದ ಕಾರ್ಯಗಳನ್ನು ಕುರಿತು ನಿಮಗೆ ಹೇಳಿದರೆ ಹೇಗೆ ನಂಬುವಿರಿ?
13 Ngapagwa jwalijose jwajawile kwinani ikaŵe Mwana jwa Mundu juŵatulwiche kutyochela kwinani.”
೧೩ಪರಲೋಕದಿಂದ ಇಳಿದು ಬಂದವನೇ, ಅಂದರೆ, ಮನುಷ್ಯಕುಮಾರನೇ ಹೊರತು ಮತ್ತಾರು ಪರಲೋಕಕ್ಕೆ ಏರಿ ಹೋದವರಿಲ್ಲ.
14 Mpela ila che Musa iŵatite pakulikoleka penani pa luchanamila lijoka lilyakolochekwe ni shaba mwipululu mula, iyoyo peyo Mwana jwa Mundu ikusachilwa anyakulikwe mwinani,
೧೪ಇದಲ್ಲದೆಮೋಶೆಯು ಅಡವಿಯಲ್ಲಿ ಕಂಚಿನ ಸರ್ಪವನ್ನು ಮೇಲೆ ಎತ್ತಿ ನಿಲ್ಲಿಸಿದ ಹಾಗೆಯೇ ಮನುಷ್ಯಕುಮಾರನು ಸಹ ಮೇಲಕ್ಕೆ ಎತ್ತಲ್ಪಡಬೇಕು.
15 kuti jwalijose juchankulupilile akole umi wa moŵa gose pangali mbesi. (aiōnios )
೧೫ಹೀಗೆ ಆತನನ್ನು ನಂಬುವವರೆಲ್ಲರೂ ನಿತ್ಯಜೀವವನ್ನು ಹೊಂದುವರು. (aiōnios )
16 Pakuŵa Akunnungu ŵaanonyele nnope ŵandu ŵa pachilambo, nipele ŵantyosisye Mwanagwe jwajikape, kuti jwalijose jwakunkulupilila akajonasika, nambo akole umi wa moŵa gose pangali mbesi. (aiōnios )
೧೬“ದೇವರು ಲೋಕದ ಮೇಲೆ ಎಷ್ಟೋ ಪ್ರೀತಿಯನ್ನಿಟ್ಟು ತನ್ನ ಒಬ್ಬನೇ ಮಗನನ್ನು ಕೊಟ್ಟನು ಆತನನ್ನು ನಂಬುವ ಒಬ್ಬನಾದರೂ ನಾಶವಾಗದೆ ಎಲ್ಲರೂ ನಿತ್ಯಜೀವವನ್ನು ಪಡೆಯಬೇಕೆಂದು ಆತನನ್ನು ಕೊಟ್ಟನು. (aiōnios )
17 Pakuŵa Akunnungu nganantuma Mwanagwe pachilambo kuti aiche kukwalamula ŵandu, nambo aiche kukwakulupusya.
೧೭ದೇವರು ತನ್ನ ಮಗನ ಮುಖಾಂತರ ಲೋಕಕ್ಕೆ ರಕ್ಷಣೆಯಾಗಬೇಕೆಂದು ಆತನನ್ನು ಕಳುಹಿಸಿಕೊಟ್ಟನೇ ಹೊರತು ಅಪರಾಧಿಯೆಂದು ಖಂಡಿಸಲಿಕ್ಕೆ ಕಳುಹಿಸಲಿಲ್ಲ.
18 Jwakunkulupilila Mwana jwa Akunnungu, jwelejo ngakulamulwa, nambo jwangankulupilila jwelejo amasile kulamulikwa, pakuŵa nganankulupilila Mwana jwajikape jwa Akunnungu.
೧೮ಆತನನ್ನು ನಂಬುವವನಿಗೆ ನ್ಯಾಯತೀರ್ಪು ಆಗುವುದಿಲ್ಲ, ಆದರೆ ನಂಬದವನಿಗೆ ಆಗಲೇ ತೀರ್ಪಾಯಿತು. ಏಕೆಂದರೆ, ಅವನು ದೇವರ ಒಬ್ಬನೇ ಮಗನ ಹೆಸರಿನ ಮೇಲೆ ನಂಬಿಕೆ ಇಡಲಿಲ್ಲ.
19 Lilamulo lili lyeleli, lilanguka liiche pachilambo nambo ŵandu achinonyele nnope chipi kupunda lilanguka, pakuŵa akupanganya ya chigongomalo.
೧೯ಆ ತೀರ್ಪು ಏನೆಂದರೆಬೆಳಕು ಲೋಕಕ್ಕೆ ಬಂದಿದ್ದರೂ ಮನುಷ್ಯರ ಕೃತ್ಯಗಳು ಕೆಟ್ಟವುಗಳಾಗಿರುವುದರಿಂದ ಅವರು ಬೆಳಕಿಗಿಂತ ಕತ್ತಲೆಯನ್ನೇ ಪ್ರೀತಿಸಿದರು.
20 Mundu jwalijose jwakupanganya ya chigongomalo akulichima lilanguka, ngakwika kulilanguka pakuŵa ngakusaka iwoneche indu yao ya chigongomalo.
೨೦ಕೆಟ್ಟದ್ದನ್ನು ಮಾಡುವವರು ತಮ್ಮ ದುಷ್ಕೃತ್ಯಗಳು ಬಹಿರಂಗವಾಗಬಾರದೆಂದು ಬೆಳಕಿಗೆ ಬರುವುದಿಲ್ಲ ಮತ್ತು ಬೆಳಕನ್ನು ದ್ವೇಷಿಸುತ್ತಾರೆ.
21 Nambo jwakuukamulisya usyene akwika kulilanguka kuti yakuipanganya iwoneche kuti ipanganyiche kwa kwajitichisya Akunnungu.
೨೧ಆದರೆ ಸತ್ಯವನ್ನು ಅನುಸರಿಸಿ ನಡೆಯುವವನು ತಾನು ದೇವರಿಂದ ನಡಿಸಿಕೊಂಡು ಬಂದವನಾಗಿ ತನ್ನ ಕೃತ್ಯಗಳನ್ನು ಪ್ರಕಟಪಡಿಸುವುದಕ್ಕಾಗಿ ಬೆಳಕಿಗೆ ಬರುತ್ತಾನೆ.”
22 Payamasile yeleyo Che Yesu pamo ni ŵakulijiganya ŵao ŵajawile ku chilambo cha Ŵayahudi. Ŵatemi pamo nawo kweleko, achibatisyaga ŵandu.
೨೨ಆ ಮೇಲೆ ಯೇಸು ತನ್ನ ಶಿಷ್ಯರೊಡನೆ ಯೂದಾಯ ದೇಶಕ್ಕೆ ಬಂದು ಅಲ್ಲಿ ಅವರ ಜೊತೆ ಇದ್ದು, ದೀಕ್ಷಾಸ್ನಾನ ಕೊಡುತ್ತಿದ್ದನು.
23 Che Yohana nombe ŵaliji ku Ainoni, pachiŵandi ku Salimu achibatisyaga ŵandu, pakuŵa kweleko kwaliji ni meesi gamajinji. Ŵandu ŵanjaulilaga, nombewo ŵabatisye.
೨೩ಇದಲ್ಲದೆ ಯೋಹಾನನೂ ಸಹ ಸಾಲಿಮ್ ಎಂಬ ಊರಿಗೆ ಹತ್ತಿರವಿರುವ ಐನೋನೆಂಬ ಸ್ಥಳದಲ್ಲಿದ್ದು ದೀಕ್ಷಾಸ್ನಾನ ಕೊಡುತ್ತಿದ್ದನು, ಏಕೆಂದರೆ, ಅಲ್ಲಿ ಬಹಳ ನೀರಿತ್ತು. ಜನರು ಬಂದು ದೀಕ್ಷಾಸ್ನಾನ ಮಾಡಿಸಿಕೊಳ್ಳುತ್ತಿದ್ದರು.
24 Yeleyo yakopochele katema che Yohana nganataŵikwe mu nyuumba jakutaŵilwa.
೨೪ಆಗ ಇನ್ನೂ ಯೋಹಾನನ್ನು ಸೆರೆಮನೆಯಲ್ಲಿ ಹಾಕಿರಲಿಲ್ಲ.
25 Gakopochele makani pasikati ja Myahudi jumo ni ŵakulijiganya ŵampepe ŵa che Yohana nkati masyoŵelelo ga kuliswejesya kwaligongo lya kwapopelela Akunnungu.
೨೫ಹೀಗಿರಲಾಗಿ ಯೋಹಾನನ ಶಿಷ್ಯರಲ್ಲಿ ಕೆಲವರಿಗೂ ಒಬ್ಬ ಯೆಹೂದ್ಯನಿಗೂ ಶುದ್ಧಾಚಾರವನ್ನು ಕುರಿತು ವಾದ ಉಂಟಾಯಿತು.
26 Nipele, ŵakulijiganya wo ŵanjaulile che Yohana ni kunsalila, “Jwakwiganya, ajula mundu juŵaliji pamo nomwe peesi Yolodani, jumwaŵalasile ngani syakwe, nombejo sambano akubatisya, ni ŵandu wose akwajaulila.”
೨೬ಆಗ ಅವರು ಯೋಹಾನನ ಬಳಿಗೆ ಬಂದು ಅವನಿಗೆ “ಗುರುವೇ, ಯೊರ್ದನ್ ನದಿಯ ಆಚೆ ನಿನ್ನ ಬಳಿಯಲ್ಲಿದ್ದ ಒಬ್ಬನ ವಿಷಯದಲ್ಲಿ ನೀನು ಸಾಕ್ಷಿ ಕೊಟ್ಟೆಯಲ್ಲಾ, ಇಗೋ, ಆತನು ದೀಕ್ಷಾಸ್ನಾನ ಕೊಡುತ್ತಿದ್ದಾನೆ, ಆತನ ಬಳಿಗೆ ಎಲ್ಲರೂ ಹೋಗುತ್ತಿದ್ದಾರೆ.” ಎಂದು ಹೇಳಲು
27 Che Yohana ŵajanjile, “Mundu ngakukombola kukola chachilichose ikaŵe apegwilwe ni Akunnungu ŵa kwinani.
೨೭ಯೋಹಾನನು “ಪರಲೋಕದಿಂದ ಅನುಗ್ರಹಿಸದ ಹೊರತು ಮನುಷ್ಯನು ಏನ್ನನ್ನೂ ಹೊಂದಲಾರನು.
28 Ni ŵanyamwe mwachinsyene nkumanyilila kuti nasasile, ‘Uneji nguniŵa Kilisito Jwakuwombola, nambo nalajiswe kuti naalongolele!’
೨೮‘ನಾನು ಕ್ರಿಸ್ತನಲ್ಲ,’ ಆದರೆ ‘ಆತನಿಗೆ ಮುಂದಾಗಿ ಕಳುಹಿಸಲ್ಪಟ್ಟವನಾಗಿದ್ದೇನೆ’ ಎಂದು ನಾನು ಹೇಳಿದ್ದಕ್ಕೆ ನೀವೇ ಸಾಕ್ಷಿಗಳಾಗಿದ್ದೀರಿ.
29 Jwakulombekwa ali jwakwe nnombela, nambo nkamusi jwa nnombela akwima kuntumichila nnombela, nkamusi jo akusangalala nnope pakupilikana liloŵe lya nnombela ali nkukunguluka. Iyoyo peyo ni uneji ngusangalala nnope.
೨೯ಮದಲಗಿತ್ತಿಯುಳ್ಳವನೇ ಮದಲಿಂಗನು. ಆದರೂ ಮದಲಿಂಗನ ಗೆಳೆಯನು ಅವನ ಹತ್ತಿರ ನಿಂತುಕೊಂಡು ಅವನ ಮಾತುಗಳನ್ನು ಕೇಳಿ ಮದಲಿಂಗನ ಧ್ವನಿಗೆ ಬಹು ಸಂತೋಷಪಡುತ್ತಾನಲ್ಲವೇ. ಆದಕಾರಣ ಈ ನನ್ನ ಸಂತೋಷವು ಪರಿಪೂರ್ಣವಾಯಿತು.
30 Che Yesu ikusachilwa aŵe jwankulu, ni uneji mme jwannondi.
೩೦ಆತನು ವೃದ್ಧಿಯಾಗಬೇಕು ನಾನು ಕಡಿಮೆಯಾಗಬೇಕು, ಅಂದನು.
31 “Jwakwika kutyochela kwinani ali jwankulu kwapunda wose. Jwakutyochela pachilambo ali jwa pachilambo nombe akuŵecheta mpela mundu jwa pachilambo. Nambo jwakwika kutyochela kwinani akuilongosya indu yose.
೩೧ಮೇಲಿನಿಂದ ಬರುವವನು ಎಲ್ಲರಿಗಿಂತಲೂ ಮೇಲಾದವನು, ಭೂಲೋಕದಿಂದ ಹುಟ್ಟಿದವನು ಭೂಲೋಕದವನಾಗಿದ್ದು ಭೂಲೋಕಕ್ಕೆ ಸಂಬಂಧಿಸಿದ ಮಾತುಗಳನ್ನು ಆಡುತ್ತಾನೆ. ಪರಲೋಕದಿಂದ ಬರುವವನು ಎಲ್ಲವುಗಳಿಗಿಂತಲೂ ಮೇಲಾದವನು.
32 Jwelejo akutyosya umboni wa indu yaiweni ni kuilipikana, nambo ngapagwa mundu jwakukunda indu yakuisala.
೩೨ತಾನು ಕಂಡು ಕೇಳಿದ್ದಕ್ಕೆ ಸಾಕ್ಷಿ ಕೊಡುತ್ತಾನೆ. ಆದರೆ ಆತನ ಸಾಕ್ಷಿಯನ್ನು ಯಾರೂ ಸ್ವೀಕರಿಸುವುದಿಲ್ಲ.
33 Nambo mundu jwalijose jwakukunda umboni wakuusala jwelejo, akwitichisya kuti Akunnungu ali usyene.
೩೩ಆತನ ಸಾಕ್ಷಿಯನ್ನು ಸ್ವೀಕರಿಸಿದವನು ದೇವರು ಸತ್ಯವಂತನೆಂದು ದೃಢಪಡಿಸುವವನಾಗಿದ್ದಾನೆ.
34 Ajula jwatumikwe ni Akunnungu akusala maloŵe ga Akunnungu, pakuŵa Akunnungu akwapa Mbumu jwa Akunnungu kwa winji.
೩೪ಹೇಗೆಂದರೆ ದೇವರು ಯಾರನ್ನು ಕಳುಹಿಸಿದ್ದಾನೋ ಆತನಿಗೆ ಆತ್ಮ ವರವನ್ನು ಅಳತೆಮಾಡದೆ ಧಾರಾಳವಾಗಿ ಅನುಗ್ರಹಿಸುವುದರಿಂದ ಆತನು ದೇವರ ಮಾತುಗಳನ್ನೇ ಆಡುತ್ತಾನೆ.
35 Akunnungu akunnonyela Mwana ni indu yose aŵisile mu ulamusi wao.
೩೫ತಂದೆಯಾದ ದೇವರು ತನ್ನ ಮಗನನ್ನು ಪ್ರೀತಿಸಿ ಎಲ್ಲವನ್ನೂ ಆತನ ಕೈಯಲ್ಲಿ ಕೊಟ್ಟಿದ್ದಾನೆ.
36 Jwakunkulupilila Mwana akwete umi wa moŵa gose pangali mbesi, jwangakunkulupilila Mwana ngakola umi, ni uchimwa wa Akunnungu uli pa jwelejo.” (aiōnios )
೩೬ಆತನ ಮಗನನ್ನು ನಂಬುವವನಿಗೆ ನಿತ್ಯಜೀವ ಉಂಟು. ಮಗನಿಗೆ ಅವಿಧೇಯನಾಗುವವನು ಜೀವವನ್ನು ಕಾಣುವುದೇ ಇಲ್ಲ. ಆದರೆ ದೇವರ ಕೋಪವು ಅವನ ಮೇಲೆ ನೆಲೆಗೊಂಡಿರುವುದು.” (aiōnios )