< 2 Ljetopisa 16 >
1 Trideset i šeste godine Asina kraljevanja navali izraelski kralj Baša na Judeju i stade utvrđivati Ramu da spriječi svako kretanje judejskom kralju Asi.
೧ಆಸನ ಆಳ್ವಿಕೆಯ ಮೂವತ್ತಾರನೆಯ ವರ್ಷದಲ್ಲಿ ಇಸ್ರಾಯೇಲರ ರಾಜನಾದ ಬಾಷನು ಯೆಹೂದ್ಯರಿಗೆ ವಿರುದ್ಧವಾಗಿ ಹೊರಟುಬಂದನು. ಯಾರೂ ಯೆಹೂದ್ಯರ, ಅರಸನಾದ ಆಸನ ಬಳಿಗೆ ಹೋಗಿ ಬರುವುದಕ್ಕಾಗದಂತೆ ರಾಮ ಕೋಟೆಯನ್ನು ಭದ್ರಪಡಿಸಿದನು.
2 Asa tada uze srebra i zlata iz riznice Doma Jahvina i kraljevskoga dvora i posla aramejskome kralju Ben-Hadadu, koji je stolovao u Damasku, i poruči mu:
೨ಆಗ ಆಸನು ಯೆಹೋವನ ಆಲಯದ ಮತ್ತು ಅರಮನೆಯ ಭಂಡಾರಗಳಿಂದ ಬೆಳ್ಳಿ ಬಂಗಾರವನ್ನು ತೆಗೆದುಕೊಂಡು ದಮಸ್ಕದಲ್ಲಿದ್ದ ಅರಾಮ್ಯರ ಅರಸನಾದ ಬೆನ್ಹದದನಿಗೆ ಕಳುಹಿಸಿ
3 “Neka bude savez između mene i tebe i između moga i tvoga oca; evo, šaljem ti na dar srebra i zlata, hajde, raskini savez s izraelskim kraljem Bašom da bi otišao od mene.”
೩ಅವನಿಗೆ, “ನನಗೂ ನಿನಗೂ, ನನ್ನ ತಂದೆಗೂ ನಿನ್ನ ತಂದೆಗೂ ಒಪ್ಪಂದ ಇದೆಯಲ್ಲಾ? ಇಗೋ, ನಿನಗೆ ಬೆಳ್ಳಿಬಂಗಾರವನ್ನು ಕಳುಹಿಸಿದ್ದೇನೆ: ಇಸ್ರಾಯೇಲರ ಅರಸನಾದ ಬಾಷನು ನನ್ನನ್ನು ಬಿಟ್ಟು ಹೋಗುವಂತೆ ಮಾಡು; ಅವನ ಸಂಗಡ ನೀನು ಮಾಡಿಕೊಂಡಿರುವ ಒಪ್ಪಂದವನ್ನು ಮುರಿದುಬಿಡು” ಎಂದು ಹೇಳಿ ಕಳುಹಿಸಿದನು.
4 Ben-Hadad posluša kralja Asu i posla svoje vojskovođe na izraelske gradove te oni pokoriše Ijon, Dan, Abel Majinu i sve Naftalijeve gradove-skladišta.
೪ಬೆನ್ಹದದನು ಅರಸನಾದ ಆಸನ ಮಾತನ್ನು ಕೇಳಿ, ತನ್ನ ಸೈನ್ಯಾಧಿಪತಿಗಳನ್ನು ಇಸ್ರಾಯೇಲ್ಯರ ಪಟ್ಟಣಗಳಿಗೆ ವಿರುದ್ಧವಾಗಿ ಕಳುಹಿಸಿದನು; ಅವರು ಇಯ್ಯೋನ್, ದಾನ್, ಆಬೇಲ್ಮಯಿಮ್, ಇವುಗಳನ್ನೂ ನಫ್ತಾಲ್ಯರ ಪಟ್ಟಣಗಳ ಎಲ್ಲಾ ಉಗ್ರಾಣಗಳನ್ನೂ ಹಾಳು ಮಾಡಿದರು.
5 A kada to Baša dozna, presta utvrđivati Ramu i obustavi posao.
೫ಬಾಷನು ಈ ಸುದ್ದಿಯನ್ನು ಕೇಳಿದಾಗ ರಾಮಕೋಟೆ ಕಟ್ಟಿಸುವ ಕೆಲಸವನ್ನು ನಿಲ್ಲಿಸಿಬಿಟ್ಟನು.
6 Tada kralj Asa sazva sve Judejce i oni odnesoše kamenje i drvo kojima je Baša utvrđivao Ramu, pa time utvrdiše Gebu i Mispu.
೬ಅನಂತರ ಅರಸನಾದ ಆಸನು ಎಲ್ಲಾ ಯೆಹೂದ್ಯರನ್ನು ಕರೆಯಿಸಿ ರಾಮ ಕೋಟೆಗಾಗಿ ಬಾಷನು ತರಿಸಿದ್ದ ಕಲ್ಲುಮರಗಳನ್ನು ಅವರ ಮುಖಾಂತರವಾಗಿ ತೆಗೆದುಕೊಂಡು ಹೋಗಿ ಗೆಬ, ಮಿಚ್ಪ ಎಂಬ ಪಟ್ಟಣಗಳನ್ನು ಭದ್ರಪಡಿಸಿದನು.
7 U to vrijeme dođe vidjelac Hanani k judejskom kralju Asi i reče mu: “Budući da si se oslonio na aramejskoga kralja, a nisi se oslonio na Jahvu, Boga svoga, vojska aramejskoga kralja izmakla ti je iz ruke.
೭ಆ ಕಾಲದಲ್ಲಿ ದರ್ಶಕನಾದ ಹನಾನಿಯು ಯೆಹೂದ್ಯರ ಅರಸನಾದ ಆಸನ ಬಳಿಗೆ ಬಂದು ಅವನಿಗೆ, “ನೀನು ನಿನ್ನ ದೇವರಾದ ಯೆಹೋವನನ್ನು ಆಶ್ರಯಿಸಿಕೊಳ್ಳದೆ ಅರಾಮ್ಯರ ಅರಸನನ್ನು ಆಶ್ರಯಿಸಿಕೊಂಡದ್ದರಿಂದ ಅರಾಮ್ ರಾಜನ ಸೈನ್ಯವು ನಿನ್ನ ಕೈಗೆ ಬೀಳದಂತೆ ತಪ್ಪಿಸಿಕೊಂಡಿತು.
8 Nisu li Etiopljani i Libijci imali silne čete sa vrlo mnogo bojnih kola i konjanika? Pa kad si se oslonio na Jahvu, predao ti ih je u ruke.
೮ಕೂಷ್ಯ ಹಾಗೂ ಲೂಬ್ಯರ ಸೈನ್ಯವು ಅಪರಿಮಿತ ರಥಾಶ್ವಬಲಗಳುಳ್ಳ ಮಹಾಸೈನ್ಯವಲ್ಲವೇ? ನೀನು ಯೆಹೋವನನ್ನು ಆಶ್ರಯಿಸಿಕೊಂಡದ್ದರಿಂದ ಆತನು ಅದನ್ನು ನಿನ್ನ ಕೈಗೆ ಒಪ್ಪಿಸಿಕೊಟ್ಟನು.
9 Jer Jahve svojim očima gleda po svoj zemlji da bi se ohrabrili oni kojima je srce iskreno prema njemu. Ludo si u tome radio, zato će se od sada dizati ratovi na te.”
೯ಯೆಹೋವನು ಭೂಲೋಕದ ಎಲ್ಲಾ ಕಡೆಗಳಲ್ಲಿಯೂ ದೃಷ್ಠಿಯನ್ನು ಹರಿಸುತ್ತಾ ತನ್ನ ಕಡೆಗೆ ಯಥಾರ್ಥಮನಸ್ಸುಳ್ಳವರ ರಕ್ಷಣೆಗಾಗಿ ತನ್ನ ಪ್ರತಾಪವನ್ನು ತೋರ್ಪಡಿಸುತ್ತಾನೆ. ನೀನು ಈ ಕಾರ್ಯದಲ್ಲಿ ಬುದ್ಧಿಹೀನನಾಗಿ ನಡೆದುಕೊಂಡಿರುವೆ; ಇನ್ನು ಮುಂದೆ ನಿನಗೆ ಯುದ್ಧಗಳು ಇದ್ದೇ ಇರುತ್ತವೆ” ಎಂದು ಹೇಳಿದನು.
10 Tada se Asa razgnjevi na vidioca i baci ga u tamnicu, jer se razjario na nj. U to je vrijeme Asa potlačio i neke iz naroda.
೧೦ಆಸನು ಈ ಮಾತುಗಳಿಂದ ಬೇಸರಗೊಂಡು, ದರ್ಶಕನ ಮೇಲೆ ಕೋಪಗೊಂಡು, ಅವನನ್ನು ಸೆರೆಮನೆಯಲ್ಲಿಡಿಸಿ ಕೋಳ ಹಾಕಿಸಿದನು. ಇದಲ್ಲದೆ, ಜನರಲ್ಲಿ ಕೆಲವರನ್ನು ಪೀಡಿಸಿದನು.
11 I eto, Asina djela, od prvoga do posljednjeg, zapisana su u Knjizi o judejskim i izraelskim kraljevima.
೧೧ಆಸನ ಪೂರ್ವೋತ್ತರಚರಿತ್ರೆಗಳನ್ನು ಯೆಹೂದ ಮತ್ತು ಇಸ್ರಾಯೇಲ್ ರಾಜರ ಇತಿಹಾಸ ಗ್ರಂಥಗಳಲ್ಲಿ ಬರೆದಿರುತ್ತದೆ.
12 Razbolio se trideset i devete godine kraljevanja, od nogu, te mu se bolest veoma pogoršala, ali ni u bolesti nije tražio Jahvu nego liječnike.
೧೨ಆಸನ ಆಳ್ವಿಕೆಯ ಮೂವತ್ತೊಂಬತ್ತನೆಯ ವರ್ಷದಲ್ಲಿ ಅವನ ಕಾಲುಗಳಿಗೆ ಬಹು ಕಠಿಣವಾದ ರೋಗ ತಗಲಿತು. ಈ ರೋಗದಲ್ಲೂ ಅವನು ಯೆಹೋವನ ಸಹಾಯವನ್ನು ಕೋರದೆ ವೈದ್ಯರ ಸಹಾಯವನ್ನೇ ಕೋರಿದನು.
13 Tako Asa počinu sa svojim ocima i umrije četrdeset i prve godine svoga kraljevanja.
೧೩ಆಸನು ತನ್ನ ಆಳ್ವಿಕೆಯ ನಲ್ವತ್ತೊಂದನೆಯ ವರ್ಷದಲ್ಲಿ ತೀರಿಕೊಂಡು ಪೂರ್ವಿಕರ ಬಳಿಗೆ ಸೇರಿದನು.
14 Sahranili su ga u grobnici koju bijaše iskopao sebi u Davidovu gradu i položili ga na odar što ga bijaše napunio miomirisima i mastima, zgotovljenima mastilačkom vještinom, i spalili mu ih vrlo mnogo.
೧೪ಅವನ ಶರೀರವನ್ನು ವೈದ್ಯರ ಆಲೋಚನೆ ಮೇರೆಗೆ ಮಿಶ್ರಣ ಮಾಡಲ್ಪಟ್ಟ ತರತರಹದ ಸುಗಂಧದ್ರವ್ಯಗಳಿಂದ ತುಂಬಿರುವ ಹಾಸಿಗೆಯ ಮೇಲಿಟ್ಟು, ಅವನು ತನಗೋಸ್ಕರ ದಾವೀದನಗರದಲ್ಲಿ ತೆಗೆಸಿದ್ದ ಸಮಾಧಿಯಲ್ಲಿ ಇಟ್ಟರು. ಹೇರಳವಾಗಿ ಅವನಿಗೋಸ್ಕರ ಬಹಳಷ್ಟು ಧೂಪ ಹಾಕಿ ಸಂತಾಪ ಸೂಚಿಸಿದರು.