< Propovjednik 4 >
1 Opet stadoh promatrati sva nasilja koja se čine pod suncem, i gle, suze potlačenih, i nikog nema da ih utre; i nasilje iz tlačiteljske ruke, a zaštitnika niotkuda.
೧ಆ ಮೇಲೆ ಪುನಃ ದೃಷ್ಟಿಸಿ ಸೂರ್ಯನ ಕೆಳಗೆ ನಡೆಯುತ್ತಿರುವ ಹಿಂಸೆಗಳನ್ನೆಲ್ಲಾ ನೋಡಿದೆನು. ಆಹಾ! ಹಿಂಸೆಗೊಂಡವರ ಕಣ್ಣೀರನ್ನು ನೋಡು. ಅವರನ್ನು ಸಂತೈಸುವವರು ಯಾರೂ ಇಲ್ಲ. ಅವರನ್ನು ಹಿಂಸಿಸುವವರಿಗೆ ಬಹಳ ಬಲ ಇದೆ. ಹಿಂಸೆಗೊಂಡವರನ್ನು ಸಂತೈಸುವವರು ಒಬ್ಬರೂ ಇಲ್ಲ.
2 Zato sretnima smatram mrtve koji su već pomrli; sretniji su od živih što još žive.
೨ಇದನ್ನು ನೋಡಿ ಇನ್ನೂ ಜೀವದಿಂದಿದ್ದು ಬದುಕುವವರಿಗಿಂತ ಸತ್ತವರೇ ಮೇಲೆಂದು ಹೊಗಳಿದೆನು.
3 A od obojih je sretniji onaj koji još nije postao, koji nije vidio zlih djela što se čine pod suncem.
೩ಹೌದು, ಈ ಇಬ್ಬರಿಗಿಂತಲೂ ಇನ್ನೂ ಹುಟ್ಟದೇ, ಲೋಕದಲ್ಲಿ ನಡೆಯುತ್ತಿರುವ ಅಧರ್ಮವನ್ನು ನೋಡದೆ ಇರುವುದೇ ಒಳ್ಳೆಯದೆಂದು ತಿಳಿದುಕೊಂಡೆನು.
4 Nadalje iskusih da svaki napor i svaki uspjeh pribavlja čovjeku zavist njegova bližnjeg. I to je ispraznost i pusta tlapnja.
೪ಆಗ ಸಮಸ್ತ ಪ್ರಯಾಸವನ್ನು, ಕೈಗೂಡುವ ಸಕಲ ಕಾರ್ಯವನ್ನು ನೋಡಿ ಇವು ಪರಸ್ಪರ ಮತ್ಸರಕ್ಕೆ ಆಸ್ಪದವೆಂದು ಗ್ರಹಿಸಿಕೊಂಡೆನು. ಇದು ಗಾಳಿಯನ್ನು ಹಿಂದಟ್ಟಿದ ಹಾಗೆ ವ್ಯರ್ಥವೇ.
5 Bezumnik prekriži ruke i izjeda sebe.
೫ಮೂಢನು ತನ್ನ ಕೈಗಳನ್ನು ಮುಚ್ಚಿಕೊಂಡು ಯಾವ ಕೆಲಸವನ್ನು ಮಾಡದೆ, ತನ್ನನ್ನು ತಾನು ನಾಶಪಡಿಸಿಕೊಳ್ಳುವನು.
6 Bolja je puna šaka u miru nego obje pregršti mučna rada i puste tlapnje.
೬ಗಾಳಿಯನ್ನು ಹಿಂದಟ್ಟುವ ಹಾಗೆಯೇ ಪ್ರಯಾಸದಿಂದ ತುಂಬಿದ ಎರಡು ಕೈಗಳಿಂದ ಮಾಡಿದ ಕೆಲಸಕ್ಕಿಂತ ನೆಮ್ಮದಿಯಾಗಿ ಒಂದು ಕೈಯಿಂದ ಮಾಡಿದ ಕೆಲಸವೇ ಲೇಸು.
7 I još jednu opazih ispraznost pod suncem:
೭ಆಗ ನಾನು ಲೋಕದಲ್ಲಿ ಮತ್ತೊಂದು ವ್ಯರ್ಥ ವಿಷಯವನ್ನು ಕಂಡೆನು.
8 Čovjek potpun samac - bez sina, bez brata, i opet nema kraja njegovu trudu; oči mu se ne mogu nasititi blaga; a ne misli: za koga se mučim i uskraćujem dobro sebi? I to je ispraznost i zla briga.
೮ಒಬ್ಬಂಟಿಗನಾದ ಒಬ್ಬ ಮನುಷ್ಯನಿದ್ದಾನೆ. ಅವನಿಗೆ ಅಣ್ಣತಮ್ಮಂದಿರು ಇಲ್ಲ, ಮಕ್ಕಳೂ ಇಲ್ಲ. ಆದರೂ ಅವನ ಪ್ರಯಾಸಕ್ಕೆ ಅಂತ್ಯವಿಲ್ಲ, ಐಶ್ವರ್ಯದಿಂದ ಅವನ ಕಣ್ಣಿಗೆ ತೃಪ್ತಿಯಿಲ್ಲ. ಅವನು, “ನಾನು ಸುಖವನ್ನು ತೊರೆದು ಯಾರಿಗೋಸ್ಕರ ಪ್ರಯಾಸಪಡುತ್ತಾ ಇದ್ದೇನೆ?” ಅಂದುಕೊಳ್ಳುವನು. ಇದೂ ಸಹ ವ್ಯರ್ಥವೇ. ಕೇವಲ ಪ್ರಯಾಸದ ಕೆಲಸವೇ ಸರಿ.
9 Bolje je dvojici nego jednome, jer imaju bolju plaću za svoj trud.
೯ಒಬ್ಬನಿಗಿಂತ ಇಬ್ಬರು ಕೆಲಸ ಮಾಡುವುದು ಒಳ್ಳೆಯದು. ಅವರ ಪ್ರಯಾಸಕ್ಕೆ ಒಳ್ಳೆಯ ಲಾಭವನ್ನು ಸಂಪಾದಿಸಬಹುದು.
10 Padne li jedan, drugi će ga podići; a teško jednomu! Ako padne, nema nikoga da ga podigne.
೧೦ಒಬ್ಬನು ಬಿದ್ದರೆ, ಇನ್ನೊಬ್ಬನು ತನ್ನ ಸ್ನೇಹಿತನನ್ನು ಮೇಲಕ್ಕೆ ಎಬ್ಬಿಸುವನು. ಒಬ್ಬನು ಒಬ್ಬಂಟ್ಟಿಗನಾಗಿ ಬಿದ್ದರೆ, ಅವನನ್ನು ಮೇಲಕ್ಕೆ ಎಬ್ಬಿಸುವವನು ಯಾರೂ ಇಲ್ಲ, ಅವನ ಗತಿ ದುರ್ಗತಿಯೇ.
11 Pa ako se i spava udvoje, toplije je; a kako će se samac zagrijati?
೧೧ಮತ್ತು ಇಬ್ಬರು ಜೊತೆಯಲ್ಲಿ ಮಲಗಿಕೊಂಡರೆ ಅವರಿಗೆ ಬೆಚ್ಚಗಾಗುತ್ತದೆ, ಆದರೆ ಒಬ್ಬನು ಹೇಗೆ ಬೆಚ್ಚಗಿರುತ್ತಾನೆ?
12 I ako tko udari na jednoga, dvojica će mu se oprijeti; i trostruko se uže ne kida brzo.
೧೨ಒಬ್ಬನನ್ನು ಮತ್ತೊಬ್ಬನು ಜಯಿಸಬಹುದು, ಆದರೆ ಗೆದ್ದವನನ್ನು ಇಬ್ಬರು ಎದುರಿಸಿ ನಿಲ್ಲಿಸಬಹುದು. ಮೂರು ಹುರಿಯ ಹಗ್ಗ ಬೇಗನೆ ಕಿತ್ತುಹೋಗುವುದಿಲ್ಲ.
13 Bolji je mladić siromašan a mudar nego kralj star a lud, koji više ne zna za savjet.
೧೩ಎಚ್ಚರಿಕೆಯ ಮಾತಿಗೆ ಕಿವಿಗೊಡದ ಮುದಕನೂ, ಮೂಢನೂ ಆದ ಅರಸನಿಗಿಂತ ಜ್ಞಾನಿಯಾದ ಬಡ ಯುವಕನೇ ಮೇಲು.
14 Jer mladić može izići iz tamnice i postati kraljem, iako se rodio kao prosjak u svom kraljevstvu.
೧೪ಇಂಥ ಯುವಕನೊಬ್ಬನು ರಾಜನಾಗಲು ಸೆರೆಮನೆಯಿಂದ ಬಂದಿರಬಹುದು ಅಥವಾ ತನ್ನ ರಾಜ್ಯದಲ್ಲಿ ಬಡ ಪ್ರಜೆಯಾಗಿ ಹುಟ್ಟಿರಬಹುದು.
15 Opazih kako svi koji žive i hode pod suncem pristaju uz mladića, uz nastupnika koji ga naslijedi.
೧೫ಸೂರ್ಯನ ಕೆಳಗೆ ಜೀವಿಸಿ ಮತ್ತು ನಡೆದಾಡಿದವರೆಲ್ಲರೂ ಅರಸನ ಉತ್ತರಾಧಿಕಾರಿಯಾದ ಯುವಕನ ಪಕ್ಷವಹಿಸುವುದನ್ನು ನಾನು ನೋಡಿದೆನು.
16 On stupa na čelo bezbrojnih podanika i kasniji se naraštaji ne mogahu zbog njega radovati. I to je zacijelo ispraznost i pusta tlapnja.
೧೬ಇವನ ಅಧಿಪತ್ಯಕ್ಕೆ ಒಳಪಟ್ಟ ಎಲ್ಲಾ ಜನರ ಸಂಖ್ಯೆಯು ಅಪಾರ. ಅವನ ಆಳ್ವಿಕೆಯ ನಂತರ ಇವನಲ್ಲಿ ಆನಂದಿಸುವುದಿಲ್ಲ. ಇದೂ ಸಹ ಗಾಳಿಯನ್ನು ಹಿಂದಟ್ಟಿದ ಹಾಗೆ ವ್ಯರ್ಥವಾಗಿದೆ.