< Izlazak 35 >
1 Mojsije sazva svu zajednicu sinova Izraelovih pa im reče: “Ovo vam je Jahve naložio da činite:
೧ಮೋಶೆ ಇಸ್ರಾಯೇಲರ ಸಮೂಹವನ್ನೆಲ್ಲಾ ಸೇರಿಸಿ ಅವರಿಗೆ, “ನೀವು ಅನುಸರಿಸಬೇಕೆಂದು ಯೆಹೋವನು ನಿಮಗೆ ಹೀಗೆ ಅಪ್ಪಣೆ ಮಾಡಿದ್ದಾನೆ.
2 Neka se posao obavlja šest dana. Sedmi dan neka vam bude sveti dan, dan potpunog počinka u čast Jahvi. Tko bi radio u taj dan neka se kazni smrću.
೨ಆರು ದಿನಗಳು ನೀವು ಕೆಲಸ ಮಾಡಬೇಕು; ಏಳನೆಯ ದಿನವು ಪರಿಶುದ್ಧವಾದ ದಿನ; ಅದು ಯೆಹೋವನಿಗೆ ಮೀಸಲಾದ ಸಬ್ಬತ್ ದಿನವಾಗಿರುವುದರಿಂದ ಅಂದು ನೀವು ಸಂಪೂರ್ಣವಾಗಿ ಕೆಲಸವನ್ನು ನಿಲ್ಲಿಸಿಬಿಡಬೇಕು; ಆ ದಿನದಲ್ಲಿ ಕೆಲಸಮಾಡುವವನಿಗೆ ಮರಣದಂಡನೆಯಾಗಬೇಕು;
3 Na subotnji dan ni vatre ne ložite po svojim stanovima.”
೩ನೀವು ವಾಸಿಸುವ ಯಾವ ಸ್ಥಳದಲ್ಲಿಯಾದರೂ ಸಬ್ಬತ್ ದಿನದಲ್ಲಿ ಬೆಂಕಿಯನ್ನೂ ಹೊತ್ತಿಸಬಾರದು ಎಂದು” ಹೇಳಿದನು.
4 Nadalje Mojsije reče svoj zajednici izraelskoj: “Ovo je Jahve naredio:
೪ಮೋಶೆಯು ಇಸ್ರಾಯೇಲ್ಯರ ಸರ್ವಸಮೂಹಕ್ಕೆ ಹೀಗೆಂದನು: “ಯೆಹೋವನು ಆಜ್ಞಾಪಿಸಿದ್ದೇನೆಂದರೆ,
5 Među sobom pokupite prinos Jahvi! Tko god je plemenita srca neka Jahvi donese prinos: zlata, srebra i tuča;
೫ನೀವು ನಿಮ್ಮ ನಿಮ್ಮೊಳಗೆ ಯೆಹೋವನಿಗಾಗಿ ಕಾಣಿಕೆಯನ್ನು ತೆಗೆದುಕೊಡಬೇಕು; ಒಳ್ಳೆಯ ಮನಸ್ಸಿರುವವರೆಲ್ಲರೂ ಕಾಣಿಕೆಯನ್ನು ತಂದುಕೊಡಬೇಕು. ಯೆಹೋವನಿಗೆ ತರಬೇಕಾದ ಆ ಕಾಣಿಕೆಯು ಎಂಥದಾಗಿರಬೇಕೆಂದರೆ; ಚಿನ್ನ, ಬೆಳ್ಳಿ, ತಾಮ್ರ ಎಂಬ ಲೋಹಗಳು,
6 ljubičastog, crvenog i tamnocrvenog prediva i prepredenog lana;
೬ನೀಲಿ, ನೇರಳೆ, ಕಡುಗೆಂಪು ವರ್ಣಗಳುಳ್ಳ ದಾರಗಳು, ನಾರುಬಟ್ಟೆಗಳು, ಉಣ್ಣೆಯ ಬಟ್ಟೆಗಳು,
7 učinjenih ovnujskih koža, onda finih koža, bagremova drva,
೭ಹದಮಾಡಿರುವ ಕೆಂಪುಬಣ್ಣದ ಟಗರಿನ ತೊಗಲುಗಳು, ಕಡಲಪ್ರಾಣಿಯ ತೊಗಲುಗಳು, ಜಾಲೀಮರವು, ದೀಪಕ್ಕೆ ಬೇಕಾದ ಎಣ್ಣೆಯು,
8 ulja za svjetlo, mirodija za ulje pomazanja i miomirisni tamjan;
೮ಅಭಿಷೇಕತೈಲಕ್ಕೆ ಮತ್ತು ಪರಿಮಳಧೂಪಕ್ಕೆ ಬೇಕಾದ ಸುಗಂಧದ್ರವ್ಯಗಳು,
9 oniksa i drugoga dragog kamenja za umetanje u oplećak i naprsnik.
೯ಏಫೋದ್ ಕವಚಕ್ಕೆ ಬೇಕಾಗಿರುವ ರತ್ನಗಳು ಹಾಗು ಎದೆಪದಕದಲ್ಲಿ ಹಚ್ಚಬೇಕಾದ ನಾನಾ ರತ್ನಗಳು ಇವೇ.
10 A svi koji su među vama vješti neka dođu praviti što je Jahve naredio:
೧೦“ನಿಮ್ಮಲ್ಲಿರುವ ಜ್ಞಾನಿಗಳಾದ ಶಿಲ್ಪಿಗಳು ಬಂದು ಯೆಹೋವನು ಆಜ್ಞಾಪಿಸಿದವುಗಳನ್ನೆಲ್ಲಾ ಮಾಡಬೇಕು.
11 Prebivalište, njegov Šator i pokrov; njegove kuke i trenice, njegove priječnice i stupce; njegova podnožja;
೧೧ಅವರು ಮಾಡಬೇಕಾದವುಗಳು ಯಾವುವೆಂದರೆ; ದೇವದರ್ಶನದ ಗುಡಾರ, ಅದರ ಮೇಲ್ಹೊದಿಕೆಗಳು, ಕೊಂಡಿಗಳು, ಚೌಕಟ್ಟುಗಳು, ಅಗುಳಿಗಳು, ಕಂಬಗಳು, ಗದ್ದಿಗೆಕಲ್ಲುಗಳು,
12 njegov Kovčeg i motke; Pomirilište pa zavjesu za zaklon;
೧೨ಆಜ್ಞಾಶಾಸನಗಳ ಮಂಜೂಷ, ಅದನ್ನು ಹೊರುವ ಕಂಬಗಳು, ಕೃಪಾಸನ, ಅದನ್ನು ಮರೆಮಾಡುವ ಪರದೆ,
13 stol s njegovim motkama i sve njegove potrepštine; prinesene hljebove;
೧೩ಮೇಜು, ಅದರ ಕಂಬಗಳು, ಅದರ ಉಪಕರಣಗಳು, ಅದರ ಮೇಲೆ ಇಡತಕ್ಕ ನೈವೇದ್ಯದ ರೊಟ್ಟಿಗಳು,
14 svijećnjak za svjetlo, njegov pribor i njegove svijeće, onda ulje za svjetlo;
೧೪ದೀಪಸ್ತಂಭ, ಅದರ ಉಪಕರಣಗಳು, ಹಣತೆಗಳು, ದೀಪಕ್ಕೆ ಬೇಕಾದ ಎಣ್ಣೆ,
15 kadioni žrtvenik i njegove motke; ulje za pomazanje i miomirisni tamjan; zastorak na ulazu u Prebivalište;
೧೫ಧೂಪವೇದಿ, ಅದರ ಕಂಬಗಳು, ಅಭಿಷೇಕ ತೈಲ, ಪರಿಮಳಧೂಪದ್ರವ್ಯ, ಗುಡಾರದ ಬಾಗಿಲಿನ ಪರದೆ,
16 žrtvenik za žrtve paljenice s njegovom rešetkom od tuča; motke za nj i sav njegov pribor; umivaonik i njegov stalak;
೧೬ಯಜ್ಞವೇದಿ, ಅದರ ತಾಮ್ರದ ಜಾಳಿಗೆ, ಕಂಬಗಳು, ಉಪಕರಣಗಳು, ಬೋಗುಣಿ, ಅದರ ಪೀಠ,
17 zastore za dvorište; stupce i njihova podnožja, pa zastor na ulazu u dvorište;
೧೭ಅಂಗಳದ ತೆರೆಗಳು, ಕಂಬಗಳು, ಗದ್ದಿಗೆಕಲ್ಲುಗಳು, ಅಂಗಳದ ಬಾಗಿಲಿನ ಪರದೆ,
18 kočiće za Prebivalište i kočiće za dvorište s njihovim uzicama;
೧೮ಗುಡಾರದ ಗೂಟಗಳು, ಅಂಗಳದ ಗೂಟಗಳು, ಇವುಗಳ ಹಗ್ಗಗಳು,
19 svečano ruho za vršenje službe u Svetištu - posvećena odijela za svećenika Arona i odijela za svećeničku službu njegovih sinova.”
೧೯ಪವಿತ್ರಸ್ಥಾನದ ಸೇವೆಗೆ ಬೇಕಾದ ಸುಂದರವಾದ ದೀಕ್ಷಾವಸ್ತ್ರಗಳು ಅಂದರೆ ಮಹಾಯಾಜಕನಾದ ಆರೋನನಿಗೂ ಅವನ ಮಕ್ಕಳಿಗೂ ಬೇಕಾದ ಪವಿತ್ರ ಯಾಜಕವಸ್ತ್ರಗಳು ಇವೇ” ಅಂದನು.
20 Nato se sva izraelska zajednica povuče ispred Mojsija.
೨೦ಇಸ್ರಾಯೇಲರು ಮತ್ತು ಸಮೂಹದವರೆಲ್ಲರೂ ಮೋಶೆಯ ಎದುರಿನಿಂದ ಹೊರಟು ಹೋದರು.
21 A onda svatko koga je srce vuklo i duša poticala dođe noseći svoj prinos u čast Jahvi za gradnju Šatora sastanka, za svaku službu u njemu i za posvećena odijela.
೨೧ಯಾರನ್ನು ಹೃದಯವು ಪ್ರೇರೇಪಿಸಿತೋ, ಯಾರ ಮನಸ್ಸು ಸಿದ್ಧವಾಗಿತ್ತೋ ಅವರೆಲ್ಲರೂ ಬಂದು ದೇವದರ್ಶನದ ಗುಡಾರದ ಕೆಲಸಕ್ಕಾಗಿಯೂ ಅದರ ಸಮಸ್ತ ಸೇವೆಗಳಿಗಾಗಿಯೂ, ಪವಿತ್ರ ವಸ್ತ್ರಗಳಿಗಾಗಿಯೂ ಯೆಹೋವನಿಗೆ ಕಾಣಿಕೆಗಳನ್ನು ತಂದರು.
22 Strčaše se muževi i žene: svi koje je srce vuklo donesoše zapinjača, naušnica, prstenja, narukvica, ogrlica i svakovrsna zlatnog nakita; svi koji bijahu zavjetovali kakvu zlatninu u čast Jahvi.
೨೨ಸಿದ್ಧಚಿತ್ತರಾದ ಗಂಡಸರೂ, ಹೆಂಗಸರೂ ಬಂದು ಯೆಹೋವನಿಗೆ ಚಿನ್ನದ ಕಾಣಿಕೆಗಳನ್ನು ಅಂದರೆ ಕಡಗ, ಮೂಗುತಿ, ಮುದ್ರೆಯುಂಗರ, ಕಂಠಮಾಲೆ ಮೊದಲಾದ ಚಿನ್ನದ ಒಡವೆಗಳನ್ನು ಸಮರ್ಪಿಸಿದರು.
23 Svi kod kojih se našlo ljubičastog, crvenog i tamnocrvenog prediva i prepredenog lana, učinjenih ovnujskih koža ili finih koža donesoše svoje.
೨೩ಯಾರಲ್ಲಿ ನೀಲಿ, ನೇರಳೆ ಹಾಗು ಕಡುಗೆಂಪು ವರ್ಣಗಳುಳ್ಳ ದಾರಗಳು, ನಾರುಬಟ್ಟೆಯು, ಉಣ್ಣೆ ಬಟ್ಟೆಯು, ಹದಮಾಡಿದ ಕೆಂಪುಬಣ್ಣದ ಟಗರಿನ ತೊಗಲುಗಳು ಹಾಗು ಕಡಲಪ್ರಾಣಿಯ ತೊಗಲುಗಳು ಇದ್ದವೋ ಅವರು ಅವುಗಳನ್ನು ತಂದುಕೊಟ್ಟರು.
24 Nadalje, svatko tko je mogao dati kakav dar u srebru ili tuču donese to kao prinos u čast Jahvi. Svatko u koga se našlo bagremova drva za upotrebu u bilo kojem poslu, donese ga.
೨೪ಯಾರಲ್ಲಿ ಬೆಳ್ಳಿ ಇಲ್ಲವೇ ತಾಮ್ರ ಇತ್ತೋ ಅವರು ಅವುಗಳನ್ನೇ ತಂದು ಯೆಹೋವನಿಗೆ ಸಮರ್ಪಿಸಿದರು. ಯಾರ ಬಳಿಯಲ್ಲಿ ಗುಡಾರದ ಕೆಲಸಕ್ಕೆ ಬೇಕಾದ ಜಾಲೀಮರವಿತ್ತೋ ಅವರು ಅದನ್ನು ತಂದುಕೊಟ್ಟರು.
25 Sve žene koje su bile vješte prele su svojim rukama i donosile što bijahu oprele: ljubičastog, crvenog i tamnocrvenog prediva i prepredenog lana.
೨೫ನಿಪುಣೆಯರಾದ ಸ್ತ್ರೀಯರು ತಮ್ಮ ಕೈಗಳಿಂದ ನೀಲಿ, ನೇರಳೆ, ಕಡುಗೆಂಪು ವರ್ಣಗಳುಳ್ಳ ನೂಲನ್ನೂ, ಹತ್ತಿಯ ನೂಲನ್ನೂ ನೇಯ್ದು ಆ ನೂಲನ್ನು ತಂದುಕೊಟ್ಟರು.
26 Sve opet žene koje je njihovo srce poticalo zbog njihove vještine prele su kostrijet.
೨೬ಬುದ್ಧಿವಂತೆಯರಾದ ಬೇರೆ ಸ್ತ್ರೀಯರು ಆಡಿನ ಕೂದಲುಗಳನ್ನು ನೇಯ್ದು ತಂದುಕೊಟ್ಟರು.
27 Glavari su donosili oniksa i drugoga dragog kamenja za umetanje u oplećak i naprsnik;
೨೭ಅಧಿಪತಿಗಳು ಏಫೋದ್ ಕವಚಕ್ಕೆ ಬೇಕಾದ ಗೋಮೇಧಕ ರತ್ನಗಳನ್ನು, ಎದೆಪದಕದಲ್ಲಿ ಇಡಬೇಕಾದ ರತ್ನಗಳನ್ನು,
28 pa mirodije i ulje za svjetlo, ulje za pomazanje i miomirisni tamjan.
೨೮ದೀಪಕ್ಕೆ ಬೇಕಾದ ಎಣ್ಣೆಯನ್ನು ಹಾಗು ಅಭಿಷೇಕತೈಲಕ್ಕೆ ಮತ್ತು ಪರಿಮಳಧೂಪಕ್ಕೆ ಬೇಕಾದ ಸುಗಂಧದ್ರವ್ಯಗಳನ್ನು ತಂದುಕೊಟ್ಟರು.
29 I tako Izraelci - svi ljudi i sve žene koje je srce poticalo da pridonesu bilo što poslu koji je Jahve po Mojsiju naredio da se izvrši - donesoše to kao dragovoljan prinos u čast Jahvi.
೨೯ಮೋಶೆಯ ಮೂಲಕ ಯೆಹೋವನು ಆಜ್ಞಾಪಿಸಿದ ಎಲ್ಲಾ ಕೆಲಸಕಾರ್ಯಗಳಿಗಾಗಿ ಆತನಿಗೆ ಕಾಣಿಕೆಗಳನ್ನು ತಂದುಕೊಡುವುದಕ್ಕೆ ಹೃದಯದಿಂದ ಪ್ರೇರೇಪಿತರಾಗಿ ಇಸ್ರಾಯೇಲ್ಯರ ಸ್ತ್ರೀಪುರುಷರೆಲ್ಲರೂ ಮನಃಪೂರ್ವಕವಾಗಿಯೇ ತಂದುಕೊಟ್ಟರು.
30 Potom reče Mojsije Izraelcima: “Vidite! Jahve je po imenu pozvao Besalela, sina Urijeva, od koljena Hurova a iz plemena Judina.
೩೦ಮೋಶೆಯು ಇಸ್ರಾಯೇಲ್ಯರಿಗೆ ಹೀಗೆಂದನು, “ನೋಡಿರಿ, ಯೆಹೋವನು ಯೆಹೂದ ಕುಲದವನಾದ ಹೂರನ ಮೊಮ್ಮಗನೂ, ಊರಿಯ ಮಗನೂ ಆಗಿರುವ ಬೆಚಲೇಲನೆಂಬವನನ್ನು ಹೆಸರು ಹಿಡಿದು ಕರೆದಿದ್ದಾನೆ.
31 Njega je napunio duhom Božjim, dao mu umješnost, sposobnost i razumijevanje u svim poslovima:
೩೧ಕಲಾತ್ಮಕವಾದ ವಿನ್ಯಾಸಗಳನ್ನು ಕಲ್ಪಿಸುವುದಕ್ಕೂ, ಚಿನ್ನ, ಬೆಳ್ಳಿ ಹಾಗು ತಾಮ್ರಗಳಿಂದ ಕೆಲಸ ಮಾಡುವುದಕ್ಕೂ,
32 da zamišlja nacrte i da radove izvodi od zlata, srebra i tuča;
೩೨ರತ್ನಗಳನ್ನು ಕೆತ್ತುವುದಕ್ಕೂ, ಮರದಲ್ಲಿ ಕೆತ್ತನೇ ಕೆಲಸವನ್ನು ಮಾಡುವುದಕ್ಕೂ,
33 da reže dragulje za umetanje; da urezuje u drvetu i da umješno radi svaki posao.
೩೩ಅವನಿಗೆ ದೇವರಾತ್ಮವನ್ನು ಕೊಟ್ಟು ಅವನಿಗೆ ಬೇಕಾದ ಜ್ಞಾನ, ವಿದ್ಯೆ, ವಿವೇಕಗಳನ್ನೂ ಸಕಲ ಶಿಲ್ಪಕಲಾಜ್ಞಾನವನ್ನೂ ಅನುಗ್ರಹಿಸಿದ್ದೇನೆ.
34 Njemu i Oholiabu, sinu Ahisamakovu, od plemena Danova, udijeli i sposobnost da poučavaju druge.
೩೪ಅದಲ್ಲದೆ ಮತ್ತೊಬ್ಬರಿಗೆ ಕಲಿಸಿಕೊಡುವುದಕ್ಕೆ ಸಹ ಅವನಿಗೂ ಮತ್ತು ದಾನ್ ಕುಲದ ಅಹೀಸಾಮಾಕನ ಮಗನಾದ ಒಹೋಲೀಯಾಬನಿಗೂ ವರಕೊಟ್ಟಿದ್ದೇನೆ.
35 Obdari ih umještvom u svakom poslu rezbarskom, krojačkom, veziljskom i tkalačkom; oni tkaju tkanine od ljubičastog, crvenog i tamnocrvenog prediva i prepredenog lana, sposobni su u svakom poslu i vješti u nacrtima.
೩೫ಕಸೂತಿ ಕೆಲಸ ಕಲ್ಪಿಸುವವರು, ನೀಲಿ, ನೇರಳೆ ಕಡುಗೆಂಪು ವರ್ಣದ ದಾರದಿಂದಲೂ, ಹತ್ತಿಬಟ್ಟೆಯಿಂದಲೂ ಕಸೂತಿ ಕೆಲಸ ಮಾಡುವವರು, ನೇಯುವವರು, ಅಂತೂ ಎಲ್ಲಾ ಕಸಬುದಾರರು ಮಾಡುವ ಕೆಲಸಗಳನ್ನು ಕಸಿಮಾಡುವುದಕ್ಕೂ ಯೆಹೋವನು ಅವರಿಗೆ ಜ್ಞಾನವನ್ನು ಪರಿಪೂರ್ಣವಾಗಿ ಅನುಗ್ರಹಿಸಿದ್ದಾನೆ.”