< Ezekiel 22 >
1 I dođe mi riječ Jahvina:
೧ಯೆಹೋವನು ಇನ್ನೊಂದು ವಾಕ್ಯವನ್ನು ನನಗೆ ದಯಪಾಲಿಸಿದನು,
2 “Sine čovječji, hoćeš li suditi, hoćeš li suditi gradu krvničkom? Pokaži mu sve gnusobe njegove!
೨“ನರಪುತ್ರನೇ, ರಕ್ತಮಯವಾದ ಆ ಪಟ್ಟಣಕ್ಕೆ ನ್ಯಾಯತೀರಿಸಲು ನಿನ್ನ ಮನಸ್ಸು ಸ್ಥಿರವಾಗಿದೆಯೋ? ಅದರ ದುರಾಚಾರಗಳನ್ನೆಲ್ಲಾ ಅದಕ್ಕೆ ಹೀಗೆ ತಿಳಿಸು,
3 Reci: 'Ovako govori Jahve Gospod: Grade što u sebi krv toliku prolijevaš i što svuda sebi kumire praviš da se okaljaš, kucnu čas tvoj:
೩ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ನಿನ್ನ ಮಧ್ಯದಲ್ಲಿ ರಕ್ತವನ್ನು ಸುರಿಸಿ, ದಂಡನೆಯ ಕಾಲವನ್ನು ಹತ್ತಿರಕ್ಕೆ ತಂದುಕೊಂಡ ನಗರಿಯೇ! ನಿನ್ನ ಕೇಡಿಗಾಗಿ ವಿಗ್ರಹಗಳನ್ನು ಮಾಡಿಕೊಂಡು ನಿನ್ನನ್ನು ಹೊಲೆಗೆಡಿಸಿಕೊಂಡ ನಗರಿಯೇ!
4 krvlju što je proli ti sagriješi i kumirima koje napravi ti se okalja, skrativši tako dane svoje i ubrzavši svoje godine. I zato ću te sada učiniti sramotom među narodima, ruglom po svim zemljama.
೪ನೀನು ಸುರಿಸಿದ ರಕ್ತದಿಂದ ಅಪರಾಧಿಯಾಗಿರುವೆ; ಮಾಡಿಕೊಂಡ ವಿಗ್ರಹಗಳಿಂದ ಅಶುದ್ಧವಾಗಿ, ಶಿಕ್ಷೆಯ ಸಮಯವನ್ನು ಹತ್ತಿರಕ್ಕೆ ತಂದುಕೊಂಡು ದಂಡನೆಯ ಕಾಲಕ್ಕೆ ಬಂದಿರುವೆ. ಆದಕಾರಣ ನಿನ್ನನ್ನು ಜನಾಂಗಗಳ ದೂಷಣೆಗೂ, ಸಕಲ ದೇಶಗಳ ಹಾಸ್ಯಕ್ಕೂ ಗುರಿಮಾಡಿದ್ದೇನೆ.
5 I koji su ti blizu i koji su ti daleko, podrugivat će se tebi: 'O sramotno ime, grade pokvareni!'
೫ಅಶುದ್ಧವಾದ ನಗರವೇ, ಗದ್ದಲಕ್ಕೆ ಪ್ರಸಿದ್ಧವಾದ ನಗರಿಯೇ, ಹತ್ತಿರದವರೂ, ದೂರದವರೂ ನಿನ್ನನ್ನು ಹಾಸ್ಯಮಾಡುವರು.
6 Eto, knezovi izraelski - svaki na svoju ruku - u tebi krv prolijevaju.
೬“‘ಇಗೋ, ಇಸ್ರಾಯೇಲಿನ ಪ್ರಭುಗಳು ತಮ್ಮ ತಮ್ಮ ಶಕ್ತ್ಯಾನುಸಾರ ನಿನ್ನಲ್ಲಿ ರಕ್ತ ಸುರಿಸುತ್ತಲೇ ಇದ್ದಾರೆ.
7 I u tebi se više ne poštuje ni otac ni majka, došljake tlače, siročad i udovice u tebi zlostavljaju!
೭ನಿನ್ನವರು ತಾಯಿ ತಂದೆಗಳನ್ನು ತುಚ್ಛೀಕರಿಸಿದ್ದಾರೆ, ನಿನ್ನವರು ವಿದೇಶಿಗಳನ್ನು ಬಾಧಿಸಿದ್ದಾರೆ, ನಿನ್ನವರು ಅನಾಥರನ್ನೂ, ವಿಧವೆಯರನ್ನೂ ಹಿಂಸಿಸಿದ್ದಾರೆ.
8 Svetinje moje prezireš, subote oskvrnjuješ.
೮ನೀನು ನನ್ನ ಪವಿತ್ರ ವಸ್ತುಗಳನ್ನು ಅಲಕ್ಷ್ಯಮಾಡಿ ನಾನು ನೇಮಿಸಿದ ಸಬ್ಬತ್ ದಿನಗಳನ್ನು ಹೊಲೆಮಾಡಿದ್ದಿ.
9 U tebi su klevetnici zbog kojih se krv prolijeva; u tebi se po gorama blaguje, posred tebe čine sramote.
೯ನಿನ್ನಲ್ಲಿ ಚಾಡಿಕೋರರು ರಕ್ತ ಹರಿಸಿದ್ದಾರೆ; ನಿನ್ನವರು ಗುಡ್ಡಗಳ ಮೇಲೆ ಯಜ್ಞಶೇಷವನ್ನು ತಿಂದಿದ್ದಾರೆ; ನಿನ್ನ ಮಧ್ಯದಲ್ಲಿ ದುರಾಚಾರಗಳನ್ನು ನಡೆಸಿದ್ದಾರೆ.
10 U tebi se raskriva sramota očeva, u tebi siluju žene dok su nečiste.
೧೦ನಿನ್ನವರು ತಂದೆಗೆ ಮಾನಭಂಗ ಮಾಡಿದ್ದಾರೆ; ನಿನ್ನಲ್ಲಿ ಮುಟ್ಟಿನಿಂದ ಅಶುದ್ಧಳಾದವಳನ್ನು ಕೂಡಿದ್ದಾರೆ.
11 Jedan čini gadost sa ženom susjeda svoga, drugi djelom sramotnim oskvrnjuje snahu svoju, a treći u tebi siluje sestru, kćerku oca svoga.
೧೧ನಿನ್ನಲ್ಲಿ ಒಬ್ಬನು ನೆರೆಯವನ ಹೆಂಡತಿಯಲ್ಲಿ ದುರಾಚಾರ ನಡಿಸಿದ್ದಾನೆ; ಇನ್ನೊಬ್ಬನು ಅತ್ಯಾಚಾರ ಮಾಡಿ ಸೊಸೆಯನ್ನು ಕೆಡಿಸಿದ್ದಾನೆ; ಮತ್ತೊಬ್ಬನು ತನ್ನ ತಂದೆಯ ಮಗಳೇ ಆದ ತಂಗಿಯ ಮಾನಭಂಗಪಡಿಸಿದ್ದಾನೆ.
12 Ima ih koji i mito primaju da krv proliju. Uzimaš ujam i pridatak, od bližnjega silom otimaš, a mene zaboravljaš - riječ je Jahve Gospoda.
೧೨ನಿನ್ನವರು ರಕ್ತ ಸುರಿಸುವುದಕ್ಕೆ ಲಂಚ ತೆಗೆದುಕೊಂಡಿದ್ದಾರೆ; ನಿನ್ನವರು ಸಾಲಕ್ಕೆ ಬಡ್ಡಿ ತೆಗೆದುಕೊಂಡು ಲಾಭಕ್ಕೆ ಹಣಕೊಟ್ಟು ತಮ್ಮ ನೆರೆಯವರನ್ನು ಬಾಧಿಸಿ, ದೋಚಿಕೊಂಡು ನನ್ನನ್ನು ಮರೆತೇ ಬಿಟ್ಟಿದ್ದಾರೆ ಇದು ಕರ್ತನಾದ ಯೆಹೋವನ ನುಡಿ.
13 Zato, evo, ja rukama plješćem nad plijenom što ga ti napljačka i nad krvlju što se lije u tebi.
೧೩“‘ಇಗೋ, ನೀನು ದೋಚಿಕೊಂಡ ಲಾಭವನ್ನೂ, ನಿನ್ನಲ್ಲಿ ಸುರಿದ ರಕ್ತವನ್ನೂ ನಾನು ನೋಡಿ ಕೈ ಎತ್ತಿದ್ದೇನೆ.
14 Jer, hoće li srce tvoje izdržati i hoće li ruke tvoje odoljeti u dane kad ja na te ustanem? Ja, Jahve, rekoh i učinit ću!
೧೪ನಾನು ನಿನ್ನನ್ನು ದಂಡಿಸುವ ಕಾಲದಲ್ಲಿ ಮನಸ್ಸನ್ನು ಗಟ್ಟಿ ಮಾಡಿಕೊಂಡಿರುವೆಯೋ? ಕೈಗಳನ್ನು ಬಲಪಡಿಸಿಕೊಂಡಿರುವೆಯೋ? ಯೆಹೋವನಾದ ನಾನೇ ಇದನ್ನು ನುಡಿದಿದ್ದೇನೆ, ಅದರಂತೆ ನಡೆಸುತ್ತೇನೆ.
15 Zato ću te raspršiti među narode, rasijat' te po zemljama, da uklonim iz tebe svu nečistoću!
೧೫ನಾನು ನಿನ್ನನ್ನು ಜನಾಂಗಗಳಲ್ಲಿ ಚದುರಿಸಿ, ದೇಶ ದೇಶಗಳಿಗೆ ಹರಡಿಸಿಬಿಟ್ಟು, ನಿನ್ನ ಹೊಲಸನ್ನು ನಿನ್ನೊಳಗಿಂದ ತೆಗೆದು ನಾಶಮಾಡುವೆನು.
16 I bit ćeš opet moja baština naočigled naroda. I znat ćeš da sam ja Jahve!'”
೧೬ಜನಾಂಗಗಳ ಕಣ್ಣೆದುರಿಗೆ ನಿನ್ನಷ್ಟಕ್ಕೆ ನೀನೇ ಅಪಕೀರ್ತಿಗೆ ಗುರಿಯಾಗುವಿ; ನಾನೇ ಯೆಹೋವನು ಎಂದು ನಿನಗೆ ಗೊತ್ತಾಗುವುದು.’”
17 Dođe mi riječ Jahvina:
೧೭ಆ ಮೇಲೆ ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು,
18 “Sine čovječji, dom Izraelov troska mi postade: bakar, srebro, kositar, željezo i olovo u peći - svi su oni troska!
೧೮“ನರಪುತ್ರನೇ, ಇಸ್ರಾಯೇಲ್ ವಂಶವೆಂಬ ಲೋಹವು ನನ್ನ ದೃಷ್ಟಿಯಲ್ಲಿ ಕಲ್ಮಷವಾಗಿದೆ; ಕುಲುಮೆಯಲ್ಲಿನ ತಾಮ್ರ, ತವರ, ಕಬ್ಬಿಣ, ಸೀಸ ಮತ್ತು ಕಂದು ಬೆಳ್ಳಿಯ ಹಾಗೆ ಇದ್ದಾರೆ.
19 Stoga ovako govori Jahve Gospod: 'Jer mi troska postadoste, skupit ću vas, evo, u Jeruzalemu.
೧೯ಹೀಗಿರಲು ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ನೀವೆಲ್ಲರು ಕಲ್ಮಷವಾಗಿರುವುದರಿಂದ ಇಗೋ, ನಿಮ್ಮನ್ನು ಯೆರೂಸಲೇಮಿನೊಳಕ್ಕೆ ಸೇರಿಸುವೆನು.
20 Kao što se skuplja srebro, bakar, željezo, olovo i kositar u peći te se okolo oganj potpiri da se sve rastali, tako ću i ja vas skupiti u svojem gnjevu i u svojoj jarosti, složiti vas i rastaliti.
೨೦ಬೆಳ್ಳಿ, ತಾಮ್ರ, ಕಬ್ಬಿಣ, ಸೀಸ, ತವರ ಇವುಗಳನ್ನು ಕುಲುಮೆಯೊಳಗೆ ಹಾಕಿ, ಊದಿ, ಉರಿಹತ್ತಿಸಿ, ಕರಗಿಸುವಂತೆ ನಾನು ನಿಮ್ಮನ್ನು ನನ್ನ ಉಗ್ರಕೋಪದಲ್ಲಿ ಇಟ್ಟು ಕರಗಿಸುವೆನು.
21 Jest, skupit ću vas i potpiriti oko vas oganj svoje jarosti da se usred grada rastalite.
೨೧ಹೌದು, ನಾನು ನಿಮ್ಮನ್ನು ನನ್ನ ರೋಷಾಗ್ನಿಯಲ್ಲಿ ಹಾಕಿ, ಊದಲು ನೀವು ಅದರೊಳಗೆ ಕರಗಿ ಹೋಗುವಿರಿ.
22 Kao što se srebro u peći topi, tako ćete se i vi u njemu rastopiti. I znat ćete da ja, Jahve, gnjev svoj na vas izlijevam!'”
೨೨ಬೆಳ್ಳಿಯು ಕುಲುಮೆಯೊಳಗೆ ಕರಗುವಂತೆ ನೀವು ನನ್ನ ರೋಷಾಗ್ನಿಯಲ್ಲಿ ಕರಗುವಿರಿ; ನಿಮ್ಮ ಮೇಲೆ ರೋಷಾಗ್ನಿಯನ್ನು ಸುರಿಸಿದಾತನು ಯೆಹೋವನಾದ ನಾನೇ ಎಂದು ನಿಮಗೆ ಗೊತ್ತಾಗುವುದು.’”
23 Dođe mi riječ Jahvina:
೨೩ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು,
24 “Sine čovječji, reci još: 'Ti si zemlja još neočišćena, koju još ne opra kiša dana jarosnoga!
೨೪“ನರಪುತ್ರನೇ, ಆ ನಾಡಿಗೆ ಹೀಗೆ ಹೇಳು, ‘ದೇವರ ಕೋಪದ ಈ ದಿನದಲ್ಲಿ ನೀನು ಶುದ್ಧಿಯಾಗದ ದೇಶ, ಮಳೆಯಿಲ್ಲದ ದೇಶ.’
25 Knezovi njezini, poput lavova što riču i plijen razdiru, ljude proždiru, otimlju im blago i dragocjenosti, množeći udovice usred nje.
೨೫ಆ ನಾಡಿನೊಳಗೆ ಪ್ರವಾದಿಗಳು ಒಳಸಂಚು ಮಾಡಿಕೊಂಡಿದ್ದಾರೆ, ಬೇಟೆಯನ್ನು ಸೀಳುತ್ತಾ ಗರ್ಜಿಸುವ ಸಿಂಹದಂತಿದ್ದಾರೆ, ನರಪ್ರಾಣಿಗಳನ್ನು ನುಂಗಿದ್ದಾರೆ. ಆಸ್ತಿಯನ್ನೂ, ಅಮೂಲ್ಯ ವಸ್ತುಗಳನ್ನೂ ದೋಚಿಕೊಂಡಿದ್ದಾರೆ; ದೇಶದಲ್ಲಿ ಬಹಳ ಮಂದಿಯನ್ನು ವಿಧವೆಯರನ್ನಾಗಿ ಮಾಡಿದ್ದಾರೆ.
26 Svećenici njezini ne poštuju mog Zakona i oskvrnjuju moje svetinje, ne razlikujući sveto od nesvetoga, ne učeći se lučiti nečisto od čistoga. Zanemarili su subote moje, bez časti sam u njihovoj sredini.
೨೬ಅಲ್ಲಿನ ಯಾಜಕರು ನನ್ನ ವಿಧಿಗಳನ್ನು ಭಂಗಮಾಡಿದ್ದಾರೆ, ನನ್ನ ಪರಿಶುದ್ಧ ವಸ್ತುಗಳನ್ನು ಅಪವಿತ್ರ ಮಾಡಿದ್ದಾರೆ; ಮೀಸಲಾದದ್ದಕ್ಕೂ, ಮೀಸಲಿಲ್ಲದ್ದಕ್ಕೂ ಭೇದವೆಣಿಸಲಿಲ್ಲ, ಶುದ್ಧವಾದ ವಿವೇಚನೆಯನ್ನು ಬೋಧಿಸಲಿಲ್ಲ; ನಾನು ನೇಮಿಸಿದ ಸಬ್ಬತ್ ದಿನಗಳನ್ನು ಕಡೆಗಣಿಸಿದ್ದಾರೆ. ಇದರಿಂದ ನಾನು ಅವರ ಮಧ್ಯದಲ್ಲಿ ಅಪಕೀರ್ತಿಗೆ ಗುರಿಯಾಗಿದ್ದೇನೆ.
27 Starješine njezine, poput vukova što plijen razdiru i krv prolijevaju, upropašćuju ljude, lakomi na dobitak.
೨೭ಅಲ್ಲಿನ ಪ್ರಧಾನರು ಸುಲಿಗೆಗಾಗಿ ರಕ್ತ ಸುರಿಸಿ, ನರಪ್ರಾಣಿಗಳನ್ನು ನುಂಗುವವರಾಗಿ ಬೇಟೆಯನ್ನು ಸೀಳುವ ತೋಳಗಳಂತಿದ್ದಾರೆ.
28 A proroci njezini sve to premazuju bjelilom i prekrivaju ispraznim viđenjima i lažnim proricanjima zboreći: 'Ovako govori Jahve Gospod!' - a Jahve to ne reče.
೨೮ಅಲ್ಲಿನ ಸುಳ್ಳು ಪ್ರವಾದಿಗಳು ಇವರಿಗಾಗಿ ವ್ಯರ್ಥ ದರ್ಶನವನ್ನೂ, ಸುಳ್ಳು ಕಣಿಯನ್ನೂ ಕಂಡು ಯೆಹೋವನು ಅವರೊಂದಿಗೆ ಮಾತನಾಡದಿದ್ದರೂ, ‘ಕರ್ತನಾದ ಯೆಹೋವನು ಇಂತೆನ್ನುತ್ತಾನೆ’ ಎಂದು ನುಡಿಯುತ್ತಾ ಮೇಲೆ ಸುಣ್ಣ ಹಚ್ಚುತ್ತಾರೆ.
29 Imućnici pak čine svakojaka nasilja i otimačine, siromaha i bijednika ugnjetavaju, a došljaka bespravno tlače.
೨೯ಸಾಮಾನ್ಯ ಜನರನ್ನು ಹಿಂಸಿಸಿ ಸೂರೆಮಾಡಿದ್ದಾರೆ, ದೀನದರಿದ್ರರನ್ನು ಬಾಧಿಸಿ, ವಿದೇಶಿಗಳನ್ನು ಅನ್ಯಾಯಕ್ಕೆ ಒಳಪಡಿಸಿದ್ದಾರೆ.
30 Tražio sam među njima nekoga da podigne zidine i stane na proboje preda me u obranu zemlje, da je ne zatrem, i ne nađoh nikoga.
೩೦“‘ನಾನು ದೇಶವನ್ನು ಹಾಳು ಮಾಡದಂತೆ ನನ್ನೆದುರಿಗೆ ದೇಶ ರಕ್ಷಣೆಗಾಗಿ ಪೌಳಿ ಗೋಡೆಯ ಬಿರುಕಿನಲ್ಲಿ ನಿಲ್ಲುವುದಕ್ಕೂ, ಗೋಡೆಯನ್ನು ಗಟ್ಟಿಮಾಡುವುದಕ್ಕೂ ತಕ್ಕವನನ್ನು ನಾನು ಹುಡುಕಲು ಯಾರೂ ಸಿಕ್ಕಲಿಲ್ಲ.
31 I zato izlih na njih gnjev svoj pa ih zatrijeh ognjem svoje jarosti; putove im njihove na glavu oborih' - riječ je Jahve Gospoda.”
೩೧ಆದಕಾರಣ ನಾನು ನನ್ನ ಕೋಪವನ್ನು ಅವರ ಮೇಲೆ ಸುರಿಸಿ, ನನ್ನ ರೋಷಾಗ್ನಿಯಿಂದ ಅವರನ್ನು ಧ್ವಂಸ ಮಾಡಿ ಅವರ ದುರ್ನಡತೆಯನ್ನು ಅವರ ತಲೆಗೇ ಕಟ್ಟಿದ್ದೇನೆ.’ ಇದು ಕರ್ತನಾದ ಯೆಹೋವನ ನುಡಿ.”